Homeಮುಖಪುಟಪತ್ರಕರ್ತನ ಪ್ರಶ್ನೆಗೆ ಬೇಜವಬ್ದಾರಿ ಉತ್ತರ ಕೊಟ್ಟ ಬಿಜೆಪಿ ಸಚಿವ : ತೀವ್ರ ಆಕ್ರೋಶದ ಬಳಿಕ ಕ್ಷಮೆಯಾಚನೆ

ಪತ್ರಕರ್ತನ ಪ್ರಶ್ನೆಗೆ ಬೇಜವಬ್ದಾರಿ ಉತ್ತರ ಕೊಟ್ಟ ಬಿಜೆಪಿ ಸಚಿವ : ತೀವ್ರ ಆಕ್ರೋಶದ ಬಳಿಕ ಕ್ಷಮೆಯಾಚನೆ

- Advertisement -
- Advertisement -

ಕಲುಷಿತ ನೀರು ಕುಡಿದು ಜನರು ಸಾವನ್ನಪ್ಪಿದ್ದಕ್ಕೆ ಸಂಬಂಧಿಸಿದಂತೆ ಪ್ರಶ್ನೆ ಕೇಳಿದ ಎನ್‌ಡಿಟಿವಿಯ ವರದಿಗಾರನನ್ನು ನಿಂದಿಸಿದ ಮತ್ತು ಬೇಜವಬ್ದಾರಿ ಹೇಳಿಕೆ ನೀಡಿದ ಮಧ್ಯಪ್ರದೇಶ ನಗರಾಭಿವೃದ್ದಿ ಮತ್ತು ವಸತಿ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಕೈಲಾಶ್ ವಿಜಯವರ್ಗೀಯ ವಿರುದ್ದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ವಿಜಯವರ್ಗೀಯ ಅವರ ಸ್ವಕ್ಷೇತ್ರ ಇಂದೋರ್‌-1ರ ವ್ಯಾಪ್ತಿಯಲ್ಲಿ ಬರುವ ಭಾಗೀರಥಪುರ ಪ್ರದೇಶದಲ್ಲಿ ಕಲುಷಿತ ನೀರು ಕುಡಿದು ಏಳೆಂಟು ಜನರು ಸಾವನ್ನಪ್ಪಿದ ಮತ್ತು ಸಾವಿರಕ್ಕೂ ಹೆಚ್ಚು ಜನರು ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆ ಸೇರಿದ ಬಗ್ಗೆ ಬುಧವಾರ (ಡಿ.31) ವರದಿಯಾಗಿದೆ.

ಈ ಕುರಿತು ವಿಜಯವರ್ಗೀಯ ಅವರನ್ನು ಎನ್‌ಡಿಟಿವಿ ವರದಿಗಾರ ಅನುರಾಗ್ ದ್ವಾರಿ ಪ್ರಶ್ನಿಸಿದ್ದರು. ಘಟನೆಗೆ ಕಿರಿಯ ಮತ್ತು ತಳಮಟ್ಟದ ಅಧಿಕಾರಿಗಳನ್ನು ಮಾತ್ರ ಏಕೆ ಹೊಣೆಗಾರರನ್ನಾಗಿ ಮಾಡಲಾಗುತ್ತಿದೆ? ನಗರಾಭಿವೃದ್ದಿ ಸಚಿವರಾದ ನೀವು ಮತ್ತು ಜಲಸಂಪನ್ಮೂಲ ಸಚಿವೆ ತುಳಸಿ ಸೇರಿದಂತೆ ಸಚಿವರು, ಹಿರಿಯ ನಾಯಕರು ಮತ್ತು ಅಧಿಕಾರಿಗಳನ್ನು ಏಕೆ ಹೊಣೆ ಮಾಡಲಾಗುತ್ತಿಲ್ಲ ಎಂದು ಕೇಳಿದ್ದರು.

ತಮ್ಮ ಸಂಬಂಧಿಕರನ್ನು ಕಳೆದುಕೊಂಡ ಹಾಗೂ ಸಂಬಂಧಿಕರು ಅನಾರೋಗ್ಯಕ್ಕೆ ತುತ್ತಾಗಿರುವ ಕುಟುಂಬಗಳಿಗೆ ಪರಿಹಾರ ಒದಗಿಸುವಲ್ಲಿ ವಿಳಂಬವಾಗಿದೆ ಎಂದಿದ್ದರು.

ಇಷ್ಟಕ್ಕೆ ಕೋಪಗೊಂಡ ವಿಜಯವರ್ಗೀಯ, ವರದಿಗಾರನ ಪ್ರಶ್ನೆ ‘ಅಸಂಬಂಧ; (nonsense)ಎಂದು ಹೇಳಿದ್ದಾರೆ. ಇದು ‘ಅನುಪಯುಕ್ತ’ ಎಂದಿದ್ದಾರೆ. “ತು ಕ್ಯಾ ಘಂಟಾ ಹೋಕೆ ಆಯಾ ಹೈ?” ಎಂದು ಅವಹೇಳನಕಾರಿ ಭಾಷೆಯಲ್ಲಿ ಪ್ರತಿಕ್ರಿಯಿಸಿದ್ದಾರೆ.
ಸಚಿವರ ಪ್ರತಿಕ್ರಿಯೆ ವರದಿಗಾರ ಕೂಡ ಖಾರವಾಗಿ ಪ್ರತಿಕ್ರಿಯಿಸಿದ್ದು, “ಕೈಲಾಶ್ ಜಿ, ಬಾತ್ ಟೀಕ್ ಸೆ ಕಿಜಿಯೇ… ಯೇ ಕ್ಯಾ ಶಬ್ದ್ ಹೋತಾ ಹೈ?” (ಕೈಲಾಶ್ ಅವರೇ ಸರಿಯಾಗಿ ಮಾತನಾಡಿ, ಇದು ಯಾವ ರೀತಿಯ ಭಾಷೆ ಬಳಸುತ್ತಿದ್ದಾರಾ?) ಎಂದು ಕೇಳಿದ್ದಾರೆ.

ಸಚಿವರು ಮತ್ತು ವರದಿಗಾರನ ನಡುವಿನ ಈ ವಾಗ್ವಾದದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವ, ಜನರ ಸಾವಿಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಯನ್ನು ‘ಅಸಂಬದ್ಧ’ ಎಂದು ಹೇಳಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ತನ್ನ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಸಚಿವ ವಿಜಯವರ್ಗೀಯ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿ ಕ್ಷಮೆಯಾಚಿಸಿದ್ದಾರೆ.

“ಕಳೆದ ಎರಡು ದಿನಗಳಿಂದ ನಾನು ಮತ್ತು ನನ್ನ ತಂಡ ಕಲುಷಿತ ನೀರಿನಿಂದ ಉಂಟಾದ ಸಮಸ್ಯೆಯನ್ನು ಪರಿಹರಿಸಲು ಅವಿಶ್ರಾಂತವಾಗಿ ಶ್ರಮಿಸುತ್ತಿದ್ದೇವೆ. ನನ್ನ ಜನರು ಕಲುಷಿತ ನೀರಿನಿಂದ ಬಳಲುತ್ತಿದ್ದಾರೆ ಮತ್ತು ಕೆಲವರು ನಮ್ಮನ್ನು ಅಗಲಿದ್ದಾರೆ. ಈ ಆಳವಾದ ದುಃಖದ ಸ್ಥಿತಿಯಲ್ಲಿ, ಮಾಧ್ಯಮದ ಪ್ರಶ್ನೆಗೆ ಉತ್ತರಿಸುವಲ್ಲಿ ನಾನು ತಪ್ಪು ಮಾಡಿದ್ದೇನೆ. ಇದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ” ಎಂದು ವಿಜಯವರ್ಗೀಯ ಬರೆದುಕೊಂಡಿದ್ದಾರೆ.

ವಿಜಯವರ್ಗೀಯ ಕ್ಷಮೆ ಯಾಚಿಸಿದರೂ, ಅವರ ಹೇಳಿಕೆಗೆ ಈಗಲೂ ಜನರಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ರಾಜಕೀಯ ಬಣ್ಣವೂ ಪಡೆದುಕೊಂಡಿದೆ. ಮಧ್ಯಪ್ರದೇಶದ ವಿರೋಧ ಪಕ್ಷವಾದ ಕಾಂಗ್ರೆಸ್‌ನ ನಾಯಕ ಜಿತು ಪಟ್ವಾರಿ ಇದು “ನಾಚಿಕೆಗೇಡಿನ ಸಂಗತಿ” ಎಂದು ಟೀಕಿಸಿದ್ದಾರೆ, ವಿಜಯವರ್ಗೀಯ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR : ಭಾಲ್ಕಿ, ಬೆಳಗಾವಿ ಉತ್ತರ-ದಕ್ಷಿಣ ವಿಧಾನಸಭಾ ಕ್ಷೇತ್ರಗಳಲ್ಲಿ ಸಾವಿರಾರು ಅರ್ಹ ಮತಗಳ ಡಿಲೀಟ್‌ಗೆ ಯತ್ನ; ಅನ್ಯರು ಫಾರಂ-7 ಸಲ್ಲಿಸಿರುವುದು ಬಯಲು!

ಭಾರತೀಯ ಚುನಾವಣಾ ಆಯೋಗದಲ್ಲಿ (ಇಸಿಐ) ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ಸರ್ವಾಧಿಕಾರಿ ಧೋರಣೆ ಬಟಾಬಯಲಾಗಿ ದೇಶದಾದ್ಯಂತ ಭಾರೀ ಚರ್ಚೆಯಾಗುತ್ತಿರುವ ನಡುವೆಯೇ, ಕರ್ನಾಟಕದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌)...

‘ದಿಮಾಗಿ ನಕ್ಸಲರು ಚುನಾವಣಾ ಆಯುಕ್ತರನ್ನು ಗುರಿಯಾಗಿಸಿಕೊಂಡಿದ್ದಾರೆ..’; ಗ್ಯಾನೇಶ್‌ ಕುಮಾರ್ ಬೆಂಬಲಕ್ಕೆ ನಿಂತ ಅಸ್ಸಾಂ ಸಿಎಂ

ಮುಖ್ಯ ಚುನಾವಣಾ ಆಯುಕ್ತರು ಇತರ ಚುನಾವಣಾ ಆಯುಕ್ತರನ್ನು ಸಂಪರ್ಕಿಸದೆ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ. ಮುಖ್ಯ ಚುನಾವಣಾ ಆಯುಕ್ತರನ್ನು (ಸಿಇಸಿ) ಗುರಿಯಾಗಿಸಿಕೊಂಡು ನಡೆಸಲಾಗುತ್ತಿರುವ ದಾಳಿಯು ಇದು ರಾಜಕೀಯ ಪ್ರಚಾರ ಹಾಗೂ ವಿರೋಧ ಪಕ್ಷಗಳ...

ಚುನಾವಣಾ ಆಯೋಗದ ಆಂತರಿಕ ಭಿನ್ನಾಭಿಪ್ರಾಯ: ಸಂಕಷ್ಟದಲ್ಲಿ ಲಕ್ಷಾಂತರ ‘Gen Z’ ಯುವಕರ ಮತದಾನದ ಹಕ್ಕು!

ಭಾರತೀಯ ಚುನಾವಣಾ ಆಯೋಗದಲ್ಲಿ ಮುಖ್ಯ ಚುನಾವಣಾ ಆಯುಕ್ತರು ಹಾಗೂ ಇತರ ಇಬ್ಬರು ಆಯುಕ್ತರ ನಡುವೆ ಉಂಟಾಗಿದೆ ಎನ್ನಲಾದ ಆಂತರಿಕ ಭಿನ್ನಾಭಿಪ್ರಾಯದಿಂದಾಗಿ, ದೇಶದ ನೂತನ ಯುವ ಮತದಾರರ ಸೇರ್ಪಡೆ ಪ್ರಕ್ರಿಯೆ ಮಂದಗತಿಯಲ್ಲಿದೆ ಎಂಬ ವರದಿ...

‘ಅನ್ಯಾಯಯುತ’ ಚುನಾವಣೆಗಳಿಗೆ ಅವಕಾಶ ನೀಡಿದ್ದಕ್ಕಾಗಿ ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು: ಪ್ರಿಯಾಂಕಾ ಗಾಂಧಿ

ವಯನಾಡ್: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತ್ತು ಕೋಟ್ಯಂತರ ಮತದಾರರ ಹೆಸರುಗಳು ಪಟ್ಟಿಯಿಂದ ಹೊರಗುಳಿದಿರುವ ವಿಚಾರದ ನಡುವೆಯೇ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್‌ನ ವಾಗ್ದಾಳಿ ಮತ್ತಷ್ಟು ತೀವ್ರಗೊಂಡಿದೆ. ಮತದಾರರ...

48 ಗಂಟೆಯೊಳಗೆ ರಾಜೀನಾಮೆ ನೀಡದಿದ್ದರೆ ರಾಷ್ಟ್ರವ್ಯಾಪಿ ಪ್ರತಿಭಟನೆ; ಗ್ಯಾನೇಶ್ ಕುಮಾರ್‌ಗೆ ಸಿಜೆಪಿ ಎಚ್ಚರಿಕೆ

ದೇಶದ ಅತ್ಯಂತ ದೊಡ್ಡ ರಾಷ್ಟ್ರದ್ರೋಹಿ ಎಂದು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ), "ಮತದಾರರ ಹಕ್ಕುಗಳನ್ನು ದುರ್ಬಲಗೊಳಿಸುತ್ತಿದ್ದಾರೆ" ಎಂದು ಆರೋಪಿಸಿ ಅವರ...

11 ವರ್ಷದ ಅತ್ಯಾಚಾರ ಸಂತ್ರಸ್ತೆಗೆ ಗರ್ಭಧಾರಣೆ ಮುಂದುವರಿಸಲು ಒತ್ತಾಯಿಸಲಾಗದು: 24 ವಾರ ಮೀರಿದರೂ ಗರ್ಭಪಾತಕ್ಕೆ ಜಮ್ಮು-ಕಾಶ್ಮೀರ ಹೈಕೋರ್ಟ್ ಅನುಮತಿ

ಶ್ರೀನಗರ: ಲೈಂಗಿಕ ದೌರ್ಜನ್ಯದಿಂದ ಗರ್ಭಿಣಿಯಾಗಿರುವ 11 ವರ್ಷದ ಬಾಲಕಿಯನ್ನು ಕಾನೂನಿನಲ್ಲಿರುವ ನಿಗದಿತ ಅವಧಿಯನ್ನು ಮೀರಿದೆ ಎಂಬ ಕಾರಣಕ್ಕೆ ಗರ್ಭಧಾರಣೆಯನ್ನು ಪೂರ್ಣ ಅವಧಿಯವರೆಗೆ ಮುಂದುವರಿಸುವಂತೆ ಒತ್ತಾಯಿಸಲಾಗುವುದಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್...

6 ವರ್ಷದ ಮಲಮಗಳ ಅತ್ಯಾಚಾರ, ಹತ್ಯೆ ಪ್ರಕರಣ : ಅಪರಾಧಿಯ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಬದಲಾಯಿಸಿದ ಸುಪ್ರೀಂ ಕೋರ್ಟ್

ಮಧ್ಯಪ್ರದೇಶದಲ್ಲಿ ತನ್ನ ಆರು ವರ್ಷದ ಮಲಮಗಳನ್ನು ಅತ್ಯಾಚಾರ ಮಾಡಿ ಹತ್ಯೆಗೈದ ಪ್ರಕರಣದಲ್ಲಿ ಅಪರಾಧಿಯೆಂದು ಸಾಬೀತಾದ ವ್ಯಕ್ತಿಗೆ ವಿಧಿಸಲಾಗಿದ್ದ ಮರಣದಂಡನೆಯನ್ನು ಸುಪ್ರೀಂ ಕೋರ್ಟ್ ಇಂದು (ಸೆ.24) ಬದಲಾಯಿಸಿದೆ. livelaw.in ನ್ಯಾಯಮೂರ್ತಿ ವಿಕ್ರಮ್ ನಾಥ್, ನ್ಯಾಯಮೂರ್ತಿ ಸಂದೀಪ್...

ಬಾಂಬೆ ಐಐಟಿಯಲ್ಲಿ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ; ತನಿಖೆಗೆ ಸಮಿತಿ ರಚನೆ

ಬಿ.ಟೆಕ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ಶಂಕಿತ ಆತ್ಮಹತ್ಯೆಯ ಸುತ್ತಲಿನ ಪರಿಸ್ಥಿತಿಗಳ ಬಗ್ಗೆ ತನಿಖೆ ನಡೆಸಲು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಬಾಂಬೆ ಬುಧವಾರ (ಸೆ.23) 10 ಸದಸ್ಯರ...

ಉತ್ತರ ಪ್ರದೇಶ| ಗೋಮಾಂಸ ಸಾಗಿಸುತ್ತಿರುವ ಶಂಕೆ; ಬಿರಿಯಾನಿ ಹೋಟೆಲ್ ಮಾಲೀಕನ ಮೇಲೆ ಗುಂಪು ಹಲ್ಲೆ

ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಮೂವರು ಯುವಕರು ಮುಸ್ಲಿಂ ಬಿರಿಯಾನಿ ಹೋಟೆಲ್ ಮಾಲೀಕನೊಬ್ಬ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಶಂಕೆಯಿಂದ ಆತನ ಮೇಲೆ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿದ್ದಾರೆ. ಭಾನುವಾರ (ಸೆ. 20) ಈ...

ಟಿಎಂಸಿ ಹೆಸರು, ಚಿಹ್ನೆ ತಡೆ: ಅಂತಿಮ ನಿರ್ಧಾರದ ಕಾಲಮಿತಿ ಕೇಳಿದ ಸುಪ್ರೀಂ ಕೋರ್ಟ್; ಸೆ. 28ಕ್ಕೆ ವಿಚಾರಣೆ

ತೃಣಮೂಲ ಕಾಂಗ್ರೆಸ್‌ (TMC) ಪಕ್ಷದ ಮೂಲ ಹೆಸರು ಹಾಗೂ ‘ಜೋಡಾ ಘಾಸ್‌ಫುಲ್‌’ (Flowers & Grass) ಚುನಾವಣಾ ಚಿಹ್ನೆಯ ಬಳಕೆಯನ್ನು ತಾತ್ಕಾಲಿಕವಾಗಿ ತಡೆಹಿಡಿದಿರುವ ಚುನಾವಣಾ ಆಯೋಗದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು...