ನೈಋತ್ಯ ಸ್ವಿಟ್ಜರ್‌ಲ್ಯಾಂಡ್‌ನ ಕ್ರಾನ್ಸ್-ಮೊಂಟಾನಾದ ಸ್ಕೀ ರೆಸಾರ್ಟ್‌ನಲ್ಲಿರುವ “ಲೆ ಕಾನ್ಸ್ಟೆಲೇಷನ್” ಎಂಬ ಬಾರ್‌ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಹಲವಾರು ಜನರು ಸಾವನ್ನಪ್ಪಿದ್ದಾರೆ ಮತ್ತು ಇತರರು ಗಾಯಗೊಂಡಿದ್ದಾರೆ ಎಂದು ಸ್ವಿಸ್ ಪೊಲೀಸರು ಗುರುವಾರ ತಿಳಿಸಿರುವುದಾಗಿ ಡೆಕನ್ ಹೆರಾಲ್ಡ್ ವರದಿ ಮಾಡಿದೆ.
ಸ್ವಿಸ್‌ನ ರೆಸಾರ್ಟ್ ಪಟ್ಟಣದಲ್ಲಿ ಹೊಸ ವರ್ಷದ ಮುನ್ನಾದಿನದ ಪಾರ್ಟಿಯಲ್ಲಿ ಈ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಸುಮಾರು 40 ಜನರು ಸಾವನ್ನಪ್ಪಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದ್ದು, 100 ಜನರು ಗಾಯಗೊಂಡಿದ್ದಾರೆ ಎಂದು ಸ್ವಿಸ್ ಪೊಲೀಸರು ತಿಳಿಸಿದ್ದಾರೆ ಎಂದು ಇಟಾಲಿಯನ್ ವಿದೇಶಾಂಗ ಸಚಿವಾಲಯ ಗುರುವಾರ ಹೇಳಿಕೆಯಲ್ಲಿ ತಿಳಿಸಿದೆ. ಉದ್ದೇಶಪೂರ್ವಕವಾಗಿ ಇಲ್ಲಿ ಬೆಂಕಿ ಹಚ್ಚಲಾಗಿದೆ ಎಂದು ಭಾವಿಸಬೇಕಿಲ್ಲ ಎಂದು ತಮ್ಮ ಹೇಳಿಕೆಯಲ್ಲಿ ಸ್ಪಷ್ಟ ಪಡಿಸಿದೆ.
ಸ್ವಿಟ್ಜರ್ಲೆಂಡ್‌ನ ಬಾರ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದ ನಂತರ “100 ಕ್ಕೂ ಹೆಚ್ಚು” ಜನರು ಗಾಯಗೊಂಡಿದ್ದಾರೆ, ಅವರಲ್ಲಿ ಹೆಚ್ಚಿನವರು “ಗಂಭೀರವಾಗಿ ಗಾಯಗೊಂಡಿದ್ದಾರೆ” ಎಂದು ವಲೈಸ್ ಕ್ಯಾಂಟೋನಲ್ ಪೊಲೀಸ್ ಕಮಾಂಡರ್ ಫ್ರೆಡೆರಿಕ್ ಗಿಸ್ಲರ್ ಹೇಳಿರುವುದಾಗಿ ವರದಿಯಾಗಿದೆ.
ಸ್ಕೈ ನ್ಯೂಸ್ ಪ್ರಕಾರ, ನಿರ್ದಿಷ್ಟ ಅಂಕಿಅಂಶಗಳನ್ನು ಒದಗಿಸದೆ “ಹಲವಾರು ಡಜನ್” ಜನರು ಸತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
“ಪೊಲೀಸರು, ಅಗ್ನಿಶಾಮಕ ದಳ ಮತ್ತು ರಕ್ಷಣಾ ಕಾರ್ಯಕರ್ತರ ದೊಡ್ಡ ತಂಡವು ತಕ್ಷಣವೇ ಸ್ಥಳಕ್ಕೆ ಧಾವಿಸಿ ಹಲವಾರು ಸಂತ್ರಸ್ತರಿಗೆ ಸಹಾಯ ಮಾಡಿತು” ಎಂದು ಅದು ವರದಿಯಲ್ಲಿ ಹೇಳಲಾಗಿದೆ.
ಕಾರ್ಯಾಚರಣೆ ಮುಂದುವರೆದಿದ್ದು, ಸ್ವಿಸ್ ದಿನಪತ್ರಿಕೆ ಬ್ಲಿಕ್, ಘಟನಾ ಸ್ಥಳದಲ್ಲಿದ್ದ ವೈದ್ಯರನ್ನು ಉಲ್ಲೇಖಿಸಿ, ಸಾವಿನ ಸಂಖ್ಯೆ “ಡಜನ್‌ಗಟ್ಟಲೆ” ಇರಬಹುದು ಎಂದು ಸೂಚಿಸಿದೆ.


