Homeಕರ್ನಾಟಕಮರ್ಯಾದೆಗೇಡು ಹತ್ಯೆ | ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆಗೆ ಚಿಂತನೆ : ಸಚಿವ ಹೆಚ್‌.ಸಿ ಮಹದೇವಪ್ಪ

ಮರ್ಯಾದೆಗೇಡು ಹತ್ಯೆ | ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆಗೆ ಚಿಂತನೆ : ಸಚಿವ ಹೆಚ್‌.ಸಿ ಮಹದೇವಪ್ಪ

- Advertisement -
- Advertisement -

ಮರ್ಯಾದೆಗೇಡು ಹತ್ಯೆ ತಡೆಗೆ ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ ತರುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಹೆಚ್‌.ಸಿ ಮಹದೇವಪ್ಪ ಹೇಳಿದರು.

ಮರ್ಯಾದೆಗೇಡು ಹತ್ಯೆ ನಡೆದ ಹುಬ್ಬಳ್ಳಿಯ ಇನಾಂ ವೀರಾಪುರ ಗ್ರಾಮಕ್ಕೆ ಗುರುವಾರ (ಜ.1) ಭೇಟಿ ಸಂತ್ರಸ್ತರಿಗೆ ಸಾಂತ್ವನ ಹೇಳಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಏಳು ತಿಂಗಳ ಗರ್ಭಿಣಿ ಹೆಣ್ಣು ಮಗಳನ್ನು ಅವರ ಕುಟುಂಬಸ್ಥರೇ ಕೊಲೆ ಮಾಡಿರುವುದು ಮನುಷ್ಯತ್ವ ವಿರೋಧಿ. ಯಾವುದೇ ಧರ್ಮ, ಜಾತಿ ಇರಲಿ ಇದು ನೊಂದು ತಲೆ ತಗ್ಗಿಸುವಂತಹ ಘಟನೆ ಎಂದು ಸಚಿವರು ಹೇಳಿದರು.

ಕೊಲೆಯಾದ ಮಾನ್ಯಾ ಮತ್ತು ಆಕೆಯ ಗಂಡ ಇಬ್ಬರೂ ವಯಸ್ಕರು. ಅವರಿಗೆ ಕಾನೂನು ಬದ್ದವಾಗಿ ಮದುವೆಯಾಗುವ ಸ್ವಾತಂತ್ರ್ಯ ಇತ್ತು. ಅದರು ಅವರ ಮೂಲಭೂತ ಹಕ್ಕು. ಇಲ್ಲಿ ಆ ಹಕ್ಕನ್ನು ಕಸಿದುಕೊಳ್ಳಲಾಗಿದೆ. ಅಂಬೇಡ್ಕರ್ ಅವರು ಮದುವೆ ಹೆಣ್ಣಿನ ಇಚ್ಚೆಗೆ ಅನುಗುಣವಾಗಿ ನಡೆಯಬೇಕು, ಬಲವಂತವಾಗಿ ನಡೆಯಬಾರದು ಎಂದಿದ್ದಾರೆ. ಒಂದು ಹೆಣ್ಣು ತನ್ನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದು ಅವಳ ವಿವೇಕ, ಅದು ಅವಳ ಇಷ್ಟಕ್ಕೆ ಬಿಟ್ಟಿದ್ದು ಎಂದರು.

ಈ ಕೊಲೆಗೆ ಕಾರಣರಾದವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಹಾಗೂ ನಾವೆಲ್ಲ ಸಚಿವರು ಸೂಚಿಸಿದ್ದೇವೆ. ಇದು ದಲಿತ ದೌರ್ಜನ್ಯದ ಪ್ರಕರಣವೂ ಹೌದು. ನಾವು ಇತ್ತೀಚೆಗಷ್ಟೇ ಚಳಿಗಾಲದ ಅಧಿವೇಶನದಲ್ಲಿ ಸಾಮಾಜಿಕ ಬಹಿಷ್ಕಾರದ ವಿರುದ್ದ ಕಾನೂನು ರೂಪಿಸಿದ್ದೇವೆ ಎಂದರು ಹೇಳಿದರು.

ಮೃತ ಮಾನ್ಯಾಳ ಹೆಸರಿನಲ್ಲಿ ಮರ್ಯಾದೆಗೇಡು ಹತ್ಯೆ ವಿರುದ್ದ ಪ್ರತ್ಯೇಕ ಕಾನೂನು ತರುತ್ತೀರಾ? ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಲಾಗುವುದು ಎಂದರು.

ಪ್ರಕರಣದಲ್ಲಿ ಎಂಟು ಜನ ಸಂತ್ರಸ್ತರಿಗೆ ತಲಾ ರೂ. 2 ಲಕ್ಷದಂತೆ 16 ಲಕ್ಷ ರೂಪಾಯಿಯ ಪರಿಹಾರದ ಚೆಕ್‌ ಅನ್ನು ಕುಟುಂಬಸ್ಥರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ನೀಡಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಪ್ರತಿಭಟನಾ ನಿರತ ಶಿಕ್ಷಕರು, ನೈರ್ಮಲ್ಯ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದ ಪ್ರೇಮಲತಾ ವಿಜಯಕಾಂತ್

ತಮಿಳುನಾಡು ಸರ್ಕಾರವು ಪ್ರತಿಭಟನಾ ನಿರತ ಮಾಧ್ಯಮಿಕ ದರ್ಜೆಯ ಶಿಕ್ಷಕರು ಮತ್ತು ನೈರ್ಮಲ್ಯ ಕಾರ್ಮಿಕರ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ತುರ್ತಾಗಿ ಪರಿಹರಿಸಬೇಕು ಎಂದು ಡಿಎಂಡಿಕೆ ಪ್ರಧಾನ ಕಾರ್ಯದರ್ಶಿ ಪ್ರೇಮಲತಾ ವಿಜಯಕಾಂತ್ ಗುರುವಾರ ಹೇಳಿದ್ದಾರೆ.  ತಮ್ಮ...

ಸ್ವಿಟ್ಜರ್‌ಲ್ಯಾಂಡ್‌ನ ಸ್ಕೀ ರೆಸಾರ್ಟ್‌ನಲ್ಲಿ ಬೆಂಕಿ ಅವಘಡ: ಕನಿಷ್ಠ 40 ಮಂದಿ ಸಾವನ್ನಪ್ಪಿರುವ ಶಂಕೆ, ಹಲವರಿಗೆ ಗಾಯ

ನೈಋತ್ಯ ಸ್ವಿಟ್ಜರ್‌ಲ್ಯಾಂಡ್‌ನ ಕ್ರಾನ್ಸ್-ಮೊಂಟಾನಾದ ಸ್ಕೀ ರೆಸಾರ್ಟ್‌ನಲ್ಲಿರುವ "ಲೆ ಕಾನ್ಸ್ಟೆಲೇಷನ್" ಎಂಬ ಬಾರ್‌ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಹಲವಾರು ಜನರು ಸಾವನ್ನಪ್ಪಿದ್ದಾರೆ ಮತ್ತು ಇತರರು ಗಾಯಗೊಂಡಿದ್ದಾರೆ ಎಂದು ಸ್ವಿಸ್ ಪೊಲೀಸರು ಗುರುವಾರ ತಿಳಿಸಿರುವುದಾಗಿ...

ಭಾರತದ ನಾಲ್ವರು ಸೇರಿ 2025ರಲ್ಲಿ ಜಾಗತಿಕವಾಗಿ 128 ಪತ್ರಕರ್ತರ ಹತ್ಯೆ : ವರದಿ

ಜಾಗತಿಕವಾಗಿ 2025ರಲ್ಲಿ ನೂರಾ ಇಪ್ಪತ್ತೆಂಟು ಪತ್ರಕರ್ತರು ಕೊಲ್ಲಲ್ಪಟ್ಟಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ಒಕ್ಕೂಟ ಬುಧವಾರ (ಡಿ.31) ತಿಳಿಸಿದೆ. ಪತ್ರಕರ್ತರ ಹತ್ಯೆಗಳಲ್ಲಿ ಅರ್ಧಕ್ಕಿಂತ ಹೆಚ್ಚು (74) ಪಶ್ಚಿಮ ಏಷ್ಯಾದಲ್ಲಿ ಸಂಭವಿಸಿವೆ ಎಂದು ಬೆಲ್ಜಿಯಂ ಮೂಲದ ಒಕ್ಕೂಟ...

ಸನಾತನ ರಾಷ್ಟ್ರ ಮಹೋತ್ಸವ : ಕೇಂದ್ರ ಸಂಸ್ಕೃತಿ ಸಚಿವಾಲಯ, ದೆಹಲಿ ಸರ್ಕಾರದ ಪ್ರಾಯೋಜಕತ್ವದಲ್ಲಿ ನಡೆದ ಇಸ್ಲಾಮೋಫೋಬಿಯಾ ಕಾರ್ಯಕ್ರಮ

ಹಿಂದುತ್ವ ಗುಂಪುಗಳು ಹಿಂದೂ ರಾಷ್ಟ್ರ ರಚನೆಗೆ ಕರೆ ನೀಡುವ ಮತ್ತು ಅಲ್ಪಸಂಖ್ಯಾತರಿಗೆ ನೇರ ಅಥವಾ ಪರೋಕ್ಷ ಬೆದರಿಕೆಗಳನ್ನು ಹಾಕುವ ಕಾರ್ಯಕ್ರಮಗಳನ್ನು ಆಯೋಜಿಸುವುದು ಭಾರತದಲ್ಲಿ ಸಾಮಾನ್ಯವಾಗಿದೆ. ಆದರೆ, ದೆಹಲಿಯ ಭಾರತ್ ಮಂಟಪದಲ್ಲಿ ಆಯೋಜಿಸಲಾಗಿದ್ದ 'ಸನಾತನ...

ಜಮ್ಮು-ಕಾಶ್ಮೀರ| 17 ಹಳ್ಳಿಗಳ 150 ಜನರಿಗೆ ‘ರಕ್ಷಣಾ ತರಬೇತಿ’ ನೀಡುತ್ತಿರುವ ಸೇನಾ ಪಡೆ

ಜಮ್ಮು ಕಾಶ್ಮೀರದ ದೋಡಾ ಜಿಲ್ಲೆಯ ಚೆನಾಬ್ ಕಣಿವೆಯ ಎತ್ತರದ ಪ್ರದೇಶಗಳಲ್ಲಿ ನಡೆಯುತ್ತಿರುವ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳ ಭಾಗವಾಗಿ, ಗ್ರಾಮ ಮಟ್ಟದ ಭದ್ರತೆಯನ್ನು ಬಲಪಡಿಸಲು ಸೇನೆಯು ತನ್ನ ಪ್ರಯತ್ನಗಳನ್ನು ಹೆಚ್ಚಿಸಿದೆ. ದೋಡಾ-ಚಂಬಾ ಗಡಿಯುದ್ದಕ್ಕೂ 17...

ಬೆಸ್ಕಾಂ ವ್ಯಾಪ್ತಿಯಲ್ಲಿ ಟ್ರಾನ್ಸ್‌ಫಾರ್ಮರ್‌ಗಳ ಸ್ಥಿತಿ ಮೇಲ್ವಿಚಾರಣೆಗೆ ಹೊಸ ಮೊಬೈಲ್ ಆ್ಯಪ್ 

ಬೆಂಗಳೂರು: ಬೆಸ್ಕಾಂ ತನ್ನ ವ್ಯಾಪ್ತಿಯಲ್ಲಿ ಬರುವ ಟ್ರಾನ್ಸ್‌ಫಾರ್ಮರ್‌ಗಳ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು 'ಡಿಸ್ಟ್ರಿಬ್ಯೂಷನ್ ಟ್ರಾನ್ಸ್‌ಫಾರ್ಮರ್ ಲೈಫ್ ಸೈಕಲ್ ಮ್ಯಾನೇಜ್‌ಮೆಂಟ್ ಸಿಸ್ಟಮ್' (DTLMS) ಎಂಬ ಹೊಸ ಮೊಬೈಲ್ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಿದೆ. ಈ ಕ್ರಮವು...

ಇಂದೋರ್‌ ಕಲುಷಿತ ನೀರು ಸೇವನೆ ಪ್ರಕರಣ: ಹತ್ತಕ್ಕೇರಿದ ಸಾವಿನ ಸಂಖ್ಯೆ; ಇಬ್ಬರು ಅಧಿಕಾರಿಗಳು ಅಮಾನತು

ಮಧ್ಯಪ್ರದೇಶದ ಇಂದೋರ್‌ನಲ್ಲಿ ಕಲುಷಿತ ನೀರು ಸೇವನೆಯಿಂದ ಕನಿಷ್ಠ 10 ಮಂದಿ ಸಾವನ್ನಪ್ಪಿದ ಕಾರಣ ಓರ್ವ ಅಧಿಕಾರಿಯನ್ನು ವಜಾಗೊಳಿಸಲಾಗಿದ್ದು, ಇತರ ಇಬ್ಬರನ್ನು ಅಮಾನತುಗೊಳಿಸಲಾಗಿದೆ. ಪುರಸಭೆಯಿಂದ ಸರಬರಾಜು ಮಾಡಲಾದ ಕಲುಷಿತ ಕುಡಿಯುವ ನೀರನ್ನು ಸೇವಿಸಿ 2,000...

ಪತ್ರಕರ್ತನ ಪ್ರಶ್ನೆಗೆ ಬೇಜವಬ್ದಾರಿ ಉತ್ತರ ಕೊಟ್ಟ ಬಿಜೆಪಿ ಸಚಿವ : ತೀವ್ರ ಆಕ್ರೋಶದ ಬಳಿಕ ಕ್ಷಮೆಯಾಚನೆ

ಕಲುಷಿತ ನೀರು ಕುಡಿದು ಜನರು ಸಾವನ್ನಪ್ಪಿದ್ದಕ್ಕೆ ಸಂಬಂಧಿಸಿದಂತೆ ಪ್ರಶ್ನೆ ಕೇಳಿದ ಎನ್‌ಡಿಟಿವಿಯ ವರದಿಗಾರನನ್ನು ನಿಂದಿಸಿದ ಮತ್ತು ಬೇಜವಬ್ದಾರಿ ಹೇಳಿಕೆ ನೀಡಿದ ಮಧ್ಯಪ್ರದೇಶ ನಗರಾಭಿವೃದ್ದಿ ಮತ್ತು ವಸತಿ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ...

‘ಚೀನೀ-ಮೋಮೋ ಎಂದು ನಿಂದಿಸುತ್ತಾರೆ..’; ನೋವು ತೋಡಿಕೊಂಡ ಈಶಾನ್ಯ ಭಾರತದ ವಿದ್ಯಾರ್ಥಿಗಳು

ತ್ರಿಪುರಾ ವಿದ್ಯಾರ್ಥಿ ಅಂಜೆಲ್ ಚಕ್ಮಾ ಅವರ ಜನಾಂಗೀಯ ದ್ವೇಷದ ಹತ್ಯೆ ಖಂಡಿಸಿ ನಡೆದ ಪ್ರತಿಭಟನೆ ಮತ್ತು ಈಶಾನ್ಯ ಭಾರತದ ವಿದ್ಯಾರ್ಥಿಗಳಿಗೆ ಸುರಕ್ಷತೆಗೆ ಒತ್ತಾಯಿಸಲು ಬುಧವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ನೂರಾರು ಜನರು ಮೇಣದಬತ್ತಿ...

ನ್ಯೂಯಾರ್ಕ್ ಮೇಯರ್ ಆಗಿ ಪ್ರಮಾಣವಚನ ಸ್ವೀಕರಿಸಿದ ಜೋಹ್ರಾನ್ ಮಮ್ದಾನಿ

ಗುರುವಾರ ಮಧ್ಯರಾತ್ರಿಯ ನಂತರ ನ್ಯೂಯಾರ್ಕ್ ನಗರದ ಮೇಯರ್ ಆಗಿ ಜೋಹ್ರಾನ್ ಮಮ್ದಾನಿ ಪ್ರಮಾಣವಚನ ಸ್ವೀಕರಿಸಿದರು. ಮ್ಯಾನ್‌ಹ್ಯಾಟನ್‌ನಲ್ಲಿರುವ ಐತಿಹಾಸಿಕ, ನಿಷ್ಕ್ರಿಯ ಸುರಂಗಮಾರ್ಗ ನಿಲ್ದಾಣದಲ್ಲಿ ಪ್ರಮಾಣವಚನ ಸ್ವೀಕರಿಸಿ ಗಮನ ಸೆಳೆದರು. ಡೆಮೋಕ್ರಾಟ್ ಆಗಿರುವ ಮಮ್ದಾನಿ ಅಮೆರಿಕದ ಅತಿದೊಡ್ಡ...