Homeಕರ್ನಾಟಕಕೋಗಿಲು ಬಡಾವಣೆ ಮನೆಗಳ ತೆರವು : ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ಕೋಗಿಲು ಬಡಾವಣೆ ಮನೆಗಳ ತೆರವು : ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

- Advertisement -
- Advertisement -

ಬೆಂಗಳೂರಿನ ಕೋಗಿಲು ಬಡಾವಣೆಯ ವಾಸಿಂ ಹಾಗೂ ಫಕೀರ್ ಕಾಲೊನಿಗಳ ಸುಮಾರು ‌300 ಮನೆಗಳನ್ನು ನೆಲಸಮ ಮಾಡಿ, ಮೂರು ಸಾವಿರಕ್ಕೂ ಹೆಚ್ಚು ಜನರನ್ನು ಬೀದಿಗೆ ತಳ್ಳಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಲಾಗಿದೆ.

ಕೋಗಿಲು ಬಡಾವಣೆ ನಿವಾಸಿಗಳಾದ ಝೈಬಾ ತಬಸ್ಸುಮ್, ರೆಹನಾ ಮತ್ತು ಆರೀಫ್ ಬೇಗಂ ಅರ್ಜಿ ಸಲ್ಲಿಸಿದ್ದು, ರಾಜ್ಯ ಸರ್ಕಾರ, ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ಪೊಲೀಸ್​ ಆಯುಕ್ತರು ಮತ್ತು ಬೆಂಗಳೂರು ಉತ್ತರ ತಾಲ್ಲೂಕು ತಹಸೀಲ್ದಾರ್ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ ಎಂದು ಬಾರ್‌ & ಬೆಂಚ್ ವರದಿ ಮಾಡಿದೆ.

ಮನೆಗಳನ್ನು ಕೆಡವುದಕ್ಕೂ ಮುನ್ನ ನೋಟಿಸ್ ನೀಡಿಲ್ಲ. ನಮ್ಮ ಅಹವಾಲು ಆಲಿಸಿಲ್ಲ. ನಿರಾಶ್ರಿತರಾದ ಬಹುತೇಕರು ತಮ್ಮ ಮನೆಗಳಿಗೆ ಸಂಬಂಧಿಸಿದಂತೆ ದಾಖಲೆ ಇಟ್ಟುಕೊಂಡಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಸರ್ಕಾರದ ಅಧಿಕಾರಿಗಳು ಸುಪ್ರೀಂ ಕೋರ್ಟ್​ನ ನಿರ್ದೇಶನಗಳನ್ನು ಉಲ್ಲಂಘಿಸಿ ಮನೆಗಳನ್ನು ನೆಲಸಮಗೊಳಿಸಿದ್ದಾರೆ. ಇದರಿಂದ ನೂರಾರು ಬಡ ವಿದ್ಯಾರ್ಥಿಗಳ ಸಮವಸ್ತ್ರ, ಪುಸ್ತಕಗಳು ಮತ್ತು ಹಾಲ್​ ಟಿಕೆಟ್​ಗಳು ನಾಶವಾಗಿದ್ದು, ಅವರ ಶೈಕ್ಷಣಿಕ ಭವಿಷ್ಯಕ್ಕೆ ತೊಂದರೆಯಾಗಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಫಕೀರ್​ ಮತ್ತು ವಾಸಿಂ ಕಾಲೊನಿಯ ಎಲ್ಲಾ ನಿರಾಶ್ರಿತರಿಗೆ ಅಲ್ಲಿಂದ 5 ಕಿಲೋ ಮೀಟರ್​ ವ್ಯಾಪ್ತಿಯಲ್ಲಿ ಪುನರ್ವಸತಿ ಅಥವಾ ಪರ್ಯಾಯ ವಸತಿ ಒದಗಿಸಬೇಕು. ಅದಕ್ಕಾಗಿ ಸಮೀಕ್ಷೆ ನಡೆಸಬೇಕು. ಹಲವು ವರ್ಷಗಳ ಕಾಲ ಶ್ರಮಿಸಿ ನಿರ್ಮಿಸಿರುವ ಮನೆಗಳನ್ನು ಕೆಡವಿರುವುದರಿಂದ ಪರಿಹಾರ ಒದಗಿಸಬೇಕು. ಗಾಯಗೊಂಡಿರುವವರಿಗೆ ಸೂಕ್ತ ಚಿಕಿತ್ಸೆ ಕೊಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಸುಪ್ರೀಂ ಕೋರ್ಟ್​ ಮಾರ್ಗಸೂಚಿ ಉಲ್ಲಂಘಿಸಿ, ಮನೆ ಕೆಡವಿರುವ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿ, ನಷ್ಟ ಮತ್ತು ಹಾನಿಗೆ ಅವರನ್ನು ವೈಯಕ್ತಿಕವಾಗಿ ಹೊಣೆಗಾರರನ್ನಾಗಿ ಮಾಡಬೇಕು. ಸಂತ್ರಸ್ತರಾಗಿರುವ ಅಂಗವಿಕಲರು, ಮಹಿಳೆಯರು ಮತ್ತು ವೃದ್ಧರಿಗೆ ಶುದ್ದ ಕುಡಿಯುವ ನೀರು ಮತ್ತು ಪೌಷ್ಠಿಕ ಆಹಾರ ತಕ್ಷಣದಿಂದಲೇ ಪೂರೈಸಬೇಕು. ಪುರುಷರು ಮತ್ತು ಮಹಿಳೆಯರಿಗೆ ತಾತ್ಕಾಲಿಕವಾಗಿ ಪ್ರತ್ಯೇಕ ಶೌಚಾಲಯ ನಿರ್ಮಿಸಬೇಕು. ನ್ಯಾಪ್ಕಿನ್​ ಸೇರಿದಂತೆ ಅಗತ್ಯ ನೈರ್ಮಲ್ಯ ಸಾಮಗ್ರಿಗಳನ್ನು ಒದಗಿಸಬೇಕು. ಮಹಿಳೆಯರು ಮತ್ತು ಮಕ್ಕಳಿಗೆ ಭದ್ರತೆ ಒದಗಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಲಾಗಿದೆ.

ಮನೆ ಕಳೆದು ಬೀದಿ ಪಾಲಾಗಿರುವವರಿಗೆ ಸಾಂಕ್ರಾಮಿಕ ರೋಗ ತಗುಲುವ ಸಾಧ್ಯತೆಯಿದ್ದು, ಸ್ಥಳದಲ್ಲಿ ತಾತ್ಕಾಲಿಕ ವೈದ್ಯಕೀಯ ಶಿಬಿರ ಪ್ರಾರಂಭಿಸಿ ತಕ್ಷಣ ಚಿಕಿತ್ಸೆ ಲಭ್ಯವಾಗುವಂತೆ ಮಾಡಬೇಕು. ತೆರವು ಕಾರ್ಯಚರಣೆ ವೇಳೆ ಮೂಲ ಹಾಲ್​ ಟಿಕೆಟ್​ ನಾಶವಾಗಿದ್ದು, ಪರೀಕ್ಷೆ ಬರೆಯುವುದಕ್ಕೆ ಸಾಧ್ಯವಾಗದಂತಹ ವಿದ್ಯಾರ್ಥಿಗಳಿಗೆ ನಕಲು ಹಾಲ್ ಟಿಕೆಟ್​ ಪ್ರತಿ ಕಲ್ಪಿಸಿ ಪರೀಕ್ಷೆಗೆ ಅವಕಾಶ ಕಲ್ಪಿಸುವಂತೆ ಮಾಡಬೇಕು. ತೊಂದರೆಗೊಳಗಾದ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಶೈಕ್ಷಣಿಕ ಸಾಮಗ್ರಿ (ಪುಸ್ತಕ, ನೋಟ್​ ಬುಕ್​, ಅಧ್ಯಯನ ಸಾಮಗ್ರಿ ಮತ್ತು ಸಮವಸ್ತ್ರ) ಒದಗಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...