Homeಅಂತರಾಷ್ಟ್ರೀಯಅಮೆರಿಕದ ಎಚ್ಚರಿಕೆ ಬೆನ್ನಲ್ಲೇ ವೆನೆಜುವೆಲಾ ರಾಜಧಾನಿಯಲ್ಲಿ ವಿಮಾನಗಳ ಅಬ್ಬರ; ಸರಣಿ ಸ್ಫೋಟ

ಅಮೆರಿಕದ ಎಚ್ಚರಿಕೆ ಬೆನ್ನಲ್ಲೇ ವೆನೆಜುವೆಲಾ ರಾಜಧಾನಿಯಲ್ಲಿ ವಿಮಾನಗಳ ಅಬ್ಬರ; ಸರಣಿ ಸ್ಫೋಟ

- Advertisement -
- Advertisement -

ಶನಿವಾರ ಮುಂಜಾನೆ ಸಮೀಪದಲ್ಲೇ ವಿಮಾನಗಳು ಘರ್ಜಿಸಿದವು, ಬೀದಿಗಳಲ್ಲಿ ಸರಣಿ ಸ್ಫೋಟಗಳು ಸಂಭವಿಸಿದ್ದು, ವೆನೆಜುವೆಲಾದ ರಾಜಧಾನಿ ಕ್ಯಾರಕಾಸ್ ಮೇಲೆ ಹೊಗೆ ಬುಗ್ಗೆ ಆವರಿಸಿತು ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ವರದಿಗಳ ಪ್ರೆಸ್ ಪ್ರಕಾರ, ಕನಿಷ್ಠ ಏಳು ಕಡೆ ಸರಣಿ ಸ್ಫೋಟದ ಶಬ್ದಗಳು ಕೇಳಿಬಂದವು. ನಿವಾಸಿಗಳು ಬೀದಿಗಳಿಗೆ ಧಾವಿಸಿದಾಗ ಸಮೀಪದಲ್ಲೇ ವಿಮಾನ ಹಾರಾಟ ಕಂಡುಬಂದಿದೆ. ನಗರದಾದ್ಯಂತ ಸ್ಫೋಟ ಸಂಭವಿಸಿದ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾಗಿದೆ.

ವೆನೆಜುವೆಲಾದ ಪ್ರಮುಖ ಮಿಲಿಟರಿ ಕೋಟೆ, ಕ್ಯಾರಕಾಸ್ ನಗರದ ಪಶ್ಚಿಮಕ್ಕೆ ಫೋರ್ಟ್ ಟಿಯುನಾ ಮತ್ತು ಲಾ ಕಾರ್ಲೋಟಾ ಮಿಲಿಟರಿ ನೆಲೆಯಲ್ಲಿ ವಿಮಾನಗಳು ಹತ್ತಿರದಲ್ಲೇ ಹಾರುತ್ತಿರುವಾಗ ಸ್ಫೋಟಗಳು ವರದಿಯಾಗಿವೆ ಎಂದು ಸ್ಪ್ಯಾನಿಷ್ ರಾಷ್ಟ್ರೀಯ ಸುದ್ದಿ ಸಂಸ್ಥೆ ಎಎಫ್‌ಇ ವರದಿ ಮಾಡಿದೆ.

“ಇಡೀ ನೆಲ ನಡುಗಿ ಭಯಾನಕವಾಗಿದೆ. ದೂರದಲ್ಲಿ ಸ್ಫೋಟ ಮತ್ತು ವಿಮಾನ ಹಾರಾಟದ ಶಬ್ಧ ನಮಗೆ ಕೇಳಿಬಂದವು. ಗಾಳಿಯು ನಮ್ಮನ್ನು ಹೊಡೆದಂತೆ ನಮಗೆ ಭಾಸವಾಯಿತು” ಎಂದು 21 ವರ್ಷದ ಕಚೇರಿ ಕೆಲಸಗಾರ ಕಾರ್ಮೆನ್ ಹಿಡಾಲ್ಗೊ ಮಾಧ್ಯಮಗಳಿಗೆ ತಿಳಿಸಿದರು.

ಹಿಗುರೋಟ್ ವಿಮಾನ ನಿಲ್ದಾಣದಲ್ಲಿಯೂ ದೊಡ್ಡ ಸ್ಫೋಟ

ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಅಧಿಕಾರದಿಂದ ಹೊರಗಿಡುವ ಪ್ರಯತ್ನಗಳ ಭಾಗವಾಗಿ, ನಿರ್ಬಂಧಗಳನ್ನು ಹೆಚ್ಚಿಸುವುದು, ಈ ಪ್ರದೇಶದಲ್ಲಿ ಮಿಲಿಟರಿ ಕಾರ್ಯಚರಣೆ ಹೆಚ್ಚಿಸುವ ಜೊತೆಗೆ ಕೆರಿಬಿಯನ್ ಮತ್ತು ಪೆಸಿಫಿಕ್‌ನಲ್ಲಿ ಮಾದಕವಸ್ತು ಕಳ್ಳಸಾಗಣೆ ಆರೋಪ ಹೊತ್ತಿರುವ ಎರಡು ಡಜನ್‌ಗೂ ಹೆಚ್ಚು ಹಡಗುಗಳನ್ನು ಗುರಿಯಾಗಿಸಿಕೊಂಡು ವೆನೆಜುವೆಲಾದಲ್ಲಿ ಕಾರ್ಯಾಚರಣೆಗಳನ್ನು ನಡೆಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದೇ ಪದೇ ಬೆದರಿಕೆ ಹಾಕಿದ್ದಾರೆ.

ಪೆಂಟಗನ್ ಅಥವಾ ವೆನೆಜುವೆಲಾ ಸರ್ಕಾರವು ಊವರೆಗೆ ಯಾವುದೇ ತಕ್ಷಣ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಟ್ರಂಪ್ ಆಡಳಿತದ ಅಧಿಕಾರಿಗಳಿಗೆ ವೆನೆಜುವೆಲಾದಲ್ಲಿ ಬಾಂಬ್ ದಾಳಿಗಳ ಬಗ್ಗೆ ತಿಳಿದಿರಲಿಲ್ಲ ಎಂದು ಸಿಬಿಎಸ್ ನ್ಯೂಸ್ ವರದಿ ಮಾಡಿದೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ, ಅಧ್ಯಕ್ಷ ಟ್ರಂಪ್ ಅವರು ವೆನೆಜುವೆಲಾದಲ್ಲಿ ದೇಶದ ಅಕ್ರಮ ಮಾದಕವಸ್ತು ವ್ಯಾಪಾರವನ್ನು ತಡೆಯಲು ಮತ್ತು ವಲಸಿಗರ ಹರಿವನ್ನು ತಡೆಯಲು ಕಾರ್ಯನಿರ್ವಹಿಸಲು ಸಿಐಎಗೆ ಅಧಿಕಾರ ನೀಡಿದ್ದಾರೆ ಎಂದು ಬಹಿರಂಗಪಡಿಸಿದರು.

ಮಡುರೊ, ಯುನೈಟೆಡ್ ಸ್ಟೇಟ್ಸ್‌ನಲ್ಲಿ ಮಾದಕವಸ್ತು-ಭಯೋತ್ಪಾದನಾ ಆರೋಪಗಳನ್ನು ಎದುರಿಸುತ್ತಿದ್ದಾರೆ. ಕಳೆದ ವಾರ, ಸಿಐಎ ವೆನೆಜುವೆಲಾದ ಡ್ರಗ್ ಕಾರ್ಟೆಲ್‌ಗಳು ಬಳಸುತ್ತಿದ್ದಾರೆ ಎಂದು ಹೇಳಲಾದ ಡಾಕಿಂಗ್ ಸೈಟ್ ಮೇಲೆ ಡ್ರೋನ್ ದಾಳಿ ನಡೆಸಿತು, ಇದು ಸೆಪ್ಟೆಂಬರ್‌ನಲ್ಲಿ ಹಡಗುಗಳ ಮೇಲೆ ದಾಳಿಗಳು ಪ್ರಾರಂಭವಾದ ನಂತರ ವೆನೆಜುವೆಲಾ ನೆಲದಲ್ಲಿ ಮೊದಲ ಅಧಿಕೃತ ಯುಎಸ್ ಕಾರ್ಯಾಚರಣೆಯಾಗಿದೆ.

ವೆನೆಜುವೆಲಾದ ಕರಾವಳಿಯಲ್ಲಿ ಯುನೈಟೆಡ್ ಸ್ಟೇಟ್ಸ್ ಅನುಮೋದಿತ ತೈಲ ಟ್ಯಾಂಕರ್‌ಗಳನ್ನು ಸಹ ವಶಪಡಿಸಿಕೊಂಡಿದೆ. ಕೂಡಲೇ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇತರ ಹಡಗುಗಳನ್ನು ದಿಗ್ಬಂಧನ ಮಾಡಲು ಆದೇಶಿಸಿದರು. ವೆನೆಜುವೆಲಾ ದೇಶದ ಮೇಲೆ ಆರ್ಥಿಕ ಒತ್ತಡವನ್ನು ಬಿಗಿಗೊಳಿಸಿದರು. ಶುಕ್ರವಾರದ ವೇಳೆಗೆ, ಅಮೆರಿಕದ ದಾಳಿಗಳು 35 ದೋಣಿಗಳನ್ನು ಹೊಡೆದುರುಳಿಸಿವೆ ಎಂದು ಟ್ರಂಪ್ ಆಡಳಿತ ಹೇಳಿದೆ, ಇದರಲ್ಲಿ ಕನಿಷ್ಠ 115 ಜನರು ಸಾವನ್ನಪ್ಪಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಹಿಂದೂ ಅಲ್ಲ, ಮನುಷ್ಯ’: ಎಸ್‌ಪಿ ನಾಯಕ ಶಿವರಾಜ್ ಸಿಂಗ್ ಯಾದವ್ ಹೇಳಿಕೆ ತಿರುಚಿ ವಿವಾದ ಸೃಷ್ಟಿಸಿದ ಬಿಜೆಪಿ ಬೆಂಬಲಿಗರು

ಸಮಾಜವಾದಿ ಪಕ್ಷದ ನಾಯಕ, ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಆಪ್ತ ಸಹಾಯಕ ಹಾಗೂ ಉತ್ತರ ಪ್ರದೇಶದ ಫಿರೋಜಾಬಾದ್‌ನ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ಶಿವರಾಜ್ ಸಿಂಗ್ ಯಾದವ್ ‘ನಾನು ಹಿಂದೂ ಅಲ್ಲ, ನಾನು...

ಛತ್ತೀಸ್‌ಗಢ : ಎಂಟು ಮಂದಿ ಬಂಗಾಳಿ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ; ವರದಿ

ಛತ್ತೀಸ್‌ಗಢದ ರಾಯ್‌ಪುರದಲ್ಲಿ ಭಾನುವಾರ (ಜ.4) ಬಜರಂಗದಳ ಕಾರ್ಯಕರ್ತರು ಎಂಟು ಮಂದಿ ಬಂಗಾಳಿ ಮಾತನಾಡುವ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದು, ಒಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರಾಯ್‌ಪುರ ಜಿಲ್ಲೆಯ ಕಟೋವಾಲಿ...

‘ಉಮರ್ ಮತ್ತು ಶಾರ್ಜಿಲ್ ಜಾಮೀನು ನಿರಾಕರಣೆ’: ಶಾಸಕಾಂಗ, ನ್ಯಾಯಾಂಗದ ಕಾರ್ಯವೈಖರಿಯಲ್ಲಿನ ವೈರುಧ್ಯಗಳಿಗೆ ಉದಾಹರಣೆ: ಶ್ರೀಪಾದ್ ಭಟ್

ಇಂಡಿಯನ್ ಎಕ್ಸ್ಪ್ರೆಸ್ ನಲ್ಲಿನ ವರದಿಯ ಪ್ರಕಾರ ಈ ಪ್ರಕರಣದ ವಿಚಾರಣೆಯಲ್ಲಿರುವ ಮುಖ್ಯ ಪ್ರಶ್ನೆ: ಬಂಧನವಾಗಿ ಐದು ವರ್ಷಗಳಾದರೂ ಸಹ ಇನ್ನೂ ವಿಚಾರಣೆ ಆರಂಭವಾಗಿಲ್ಲ. ದೀರ್ಘಕಾಲದ ಜೈಲುವಾಸವನ್ನು ಭಯೋತ್ಪಾದಕ ವಿರೋಧಿ ಕಾನೂನಿನ ಅಡಿಯಲ್ಲಿ ಸಮರ್ಥಿಸಬಹುದೇ?...

ಉತ್ತರ ಪ್ರದೇಶ SIR : ಮತದಾರರ ಪಟ್ಟಿಯಿಂದ 2.89 ಕೋಟಿ ಹೆಸರು ಡಿಲೀಟ್

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐರ್‌) ಬಳಿಕ ಸುಮಾರು 2.89 ಕೋಟಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ನವದೀಪ್ ರಿನ್ವಾ...

ಕರೂರ್ ಕಾಲ್ತುಳಿತ ಪ್ರಕರಣ: ಟಿವಿಕೆ ನಾಯಕ ವಿಜಯ್‌ಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟಿಸ್

ಕರೂರ್ ಕಾಲ್ತುಳಿತ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಟಿವಿಕೆ ನಾಯಕ ವಿಜಯ್ ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ ಎಂದು ಪಿಟಿಐ ಮಂಗಳವಾರ ವರದಿ ಮಾಡಿದೆ. ಸೆಪ್ಟೆಂಬರ್ 27 ರಂದು ನಟ-ರಾಜಕಾರಣಿ ವಿಜಯ್ ಅವರ ತಮಿಳಗ...

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ರಾಯಭಾರ ಕಚೇರಿ ಉದ್ಘಾಟನೆ : ‘ಐತಿಹಾಸಿಕ ಕ್ಷಣ’ ಎಂದ ರಾಯಭಾರಿ ಹುಸಾಮ್ ಝೊಮ್ಲೋಟ್

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ದೇಶದ ರಾಯಭಾರಿ ಕಚೇರಿ ಅಧಿಕೃತವಾಗಿ ಉದ್ಘಾಟನೆಯಾಗಿದ್ದು, ಯುಕೆಯ ಪ್ಯಾಲೆಸ್ತೀನ್‌ ರಾಯಭಾರಿ ಇದನ್ನು 'ಐತಿಹಾಸಿಕ ಕ್ಷಣ' ಎಂದು ಬಣ್ಣಿಸಿದ್ದಾರೆ. ಸೋಮವಾರ (ಜ.5) ಪಶ್ಚಿಮ ಲಂಡನ್‌ನ ಹ್ಯಾಮರ್‌ಸ್ಮಿತ್‌ನಲ್ಲಿ ನಡೆದ ರಾಯಭಾರ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ...

ಬಾಂಗ್ಲಾದೇಶದಲ್ಲಿ ಹಿಂದೂ ಉದ್ಯಮಿ ಮತ್ತು ಪತ್ರಕರ್ತನಾಗಿದ್ದ ರಾಣಾ ಪ್ರತಾಪ್ ಬೈರಾಗಿ ತಲೆಗೆ ಗುಂಡಿಕ್ಕಿ ಹತ್ಯೆ 

ಬಾಂಗ್ಲಾದೇಶದ ಜೆಸ್ಸೋರ್ ಜಿಲ್ಲೆಯಲ್ಲಿ ಸೋಮವಾರ 38 ವರ್ಷದ ರಾಣಾ ಪ್ರತಾಪ್ ಬೈರಾಗಿ ಅವರ ತಲೆಗೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ ಎಂದು ಹಲವು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ.  ಬೈರಾಗಿ ಒಬ್ಬ ಹಿಂದೂ ಉದ್ಯಮಿ ಮತ್ತು...

ತಿರುಪರನ್‌ಕುಂದ್ರಂ ಬೆಟ್ಟದ ಮೇಲೆ ದೀಪ ಬೆಳಗಿಸುವ ಆದೇಶ ಎತ್ತಿ ಹಿಡಿದ ಮದ್ರಾಸ್ ಹೈಕೋರ್ಟ್

ಮಧುರೈನ ತಿರುಪರನ್‌ಕುಂದ್ರಂ ಬೆಟ್ಟದ ಮೇಲಿರುವ ಕಲ್ಲಿನ ಕಂಬದಲ್ಲಿ ದೀಪ ಬೆಳಗಿಸಲು ಅನುಮತಿ ನೀಡಿ ಮದ್ರಾಸ್‌ ಹೈಕೋರ್ಟ್‌ನ ಮಧುರೈ ಪೀಠದ ಏಕ ಸದಸ್ಯ ನ್ಯಾಯಾಧೀಶರು ನೀಡಿದ ಆದೇಶವನ್ನು ವಿಭಾಗೀಯ ಪೀಠ ಎತ್ತಿಹಿಡಿದಿದೆ. ನ್ಯಾಯಮೂರ್ತಿ ಜಿ. ಜಯಚಂದ್ರನ್...

ಕರ್ನಾಟಕದ ದೀರ್ಘಾವಧಿಯ ಮುಖ್ಯಮಂತ್ರಿಯಾಗಿ ದಾಖಲೆ ಸೃಷ್ಟಿಸಿದ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ದಿವಂಗತ ಡಿ.ದೇವರಾಜ್ ಅರಸ್ ಅವರ ದಾಖಲೆಯನ್ನು (7 ವರ್ಷ 239 ದಿನಗಳು) ಸಿದ್ದರಾಮಯ್ಯ ಮುರಿದಿದ್ದಾರೆ.  ದೇವರಾಜು ಅರಸು ಮತ್ತು ಸಿದ್ದರಾಮಯ್ಯ ಅವರು ಸಾಮಾಜಿಕ...

ಅಜ್ಮೀರ್ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ತಡೆಯುವಂತೆ ಅರ್ಜಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಉರೂಸ್ ಪ್ರಯುಕ್ತ ಅಜ್ಮೀರ್‌ನ ಸೂಫಿ ಸಂತ ಖ್ವಾಜಾ ಮುಯೀನುದ್ದೀನ್ ಹಸನ್ ಚಿಸ್ತಿ ಅವರ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ಮತ್ತು ದರ್ಗಾಕ್ಕೆ ಸರ್ಕಾರದ ವತಿಯಿಂದ ನೀಡಲಾಗುವ ಗೌರವಗಳನ್ನು ತಡೆಯುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು...