Homeಕರ್ನಾಟಕಅಮಾನತುಗೊಂಡ ಮಹೇಶ್ ಜೋಶಿ ನೇತೃತ್ವದಲ್ಲಿ ಅಖಿಲ ಭಾರತ ಚುಟುಕು ಸಾಹಿತ್ಯ ಸಮ್ಮೇಳನ: ನಿಯಮ ಉಲ್ಲಂಘನೆ ಆರೋಪ

ಅಮಾನತುಗೊಂಡ ಮಹೇಶ್ ಜೋಶಿ ನೇತೃತ್ವದಲ್ಲಿ ಅಖಿಲ ಭಾರತ ಚುಟುಕು ಸಾಹಿತ್ಯ ಸಮ್ಮೇಳನ: ನಿಯಮ ಉಲ್ಲಂಘನೆ ಆರೋಪ

- Advertisement -
- Advertisement -

ಶೃಂಗೇರಿಯಲ್ಲಿ 2025 ಜನವರಿ 4ರಂದು ನಡೆಯಲಿರುವ ಅಖಿಲ ಭಾರತ ಕನ್ನಡ ಚುಟುಕು ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿದಂತೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಸಮ್ಮೇಳನವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಒಂದು ಸ್ವಹಿತಾಸಕ್ತಿ ಗುಂಪು ಆಯೋಜಿಸುತ್ತಿದ್ದು, ಪರಿಷತ್ತಿನ ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

ಸಮ್ಮೇಳನದ ಆಹ್ವಾನ ಪತ್ರಿಕೆಗಳು ಹಾಗೂ ಬ್ಯಾನರ್ಗಳಲ್ಲಿ, ಅವ್ಯವಹಾರಗಳ ಆರೋಪದ ಹಿನ್ನೆಲೆಯಲ್ಲಿ ಅಮಾನತುಗೊಂಡಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಮಹೇಶ್ ಜೋಷಿ ಅವರ ಹೆಸರು ಹಾಗೂ ಭಾವಚಿತ್ರವನ್ನು ಬಳಸಿ, ಅವರನ್ನು ಇನ್ನೂ“ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರು” ಎಂದು ಪ್ರಚುರಪಡಿಸಲಾಗಿದೆ. ಇದು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸರ್ಕಾರದ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ಸಾಹಿತ್ಯಾಭಿಮಾನಿಗಳು ವಿರೋಧ ವ್ಯಕ್ತ ಪಡಿಸಿದ್ದಾರೆ. 

ಈ ಸಮ್ಮೇಳನವು ಸಮಗ್ರ ಸಾಹಿತ್ಯ ವಲಯವನ್ನು ಒಳಗೊಂಡಿಲ್ಲದೆ, ಕೆಲವೇ ಮಂದಿ ಸ್ವಾರ್ಥಪರ ವ್ಯಕ್ತಿಗಳ ವೈಯಕ್ತಿಕ ಲಾಭಕ್ಕಾಗಿ ಆಯೋಜಿಸಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದ್ದು, ಇದೇ ಗುಂಪಿನವರು ಹಿಂದೆ ಶೃಂಗೇರಿಯಲ್ಲಿ ನಡೆದ 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಡ್ಡಿಪಡಿಸಿ, ಬಾಂಬ್ ಬೆದರಿಕೆ ಹಾಕುವ ಮೂಲಕ ಸಮ್ಮೇಳನವನ್ನು ಹಾಳುಗೆಡವಲು ಯತ್ನಿಸಿದ್ದರು ಎಂಬುದನ್ನು ನೆನಪಿಸಿದ್ದಾರೆ. 

ಹಿರಿಯ ಸಾಹಿತಿಗಳಾದ ಕಲ್ಕುಳಿ ವಿಠಲ ಹೆಗ್ಡೆಯವರು ಸಮ್ಮೇಳನದ ಅಧ್ಯಕ್ಷರಾಗಿದ್ದರು. ಅಂದಿನ ಎರಡು ದಿನಗಳ ಸಾಹಿತ್ಯ ಸಮ್ಮೇಳನದಲ್ಲಿ ಮೊದಲ ದಿನ ರಾಜ್ಯದ ಅನೇಕ ಸಾಹಿತ್ಯಾಸಕ್ತರ ನೆರವಿನಿಂದ ಸಮ್ಮೇಳನ ಯಶಸ್ವಿಯಾಗಿ ನೆರವೇರಿದ ನಂತರ, ಎರಡನೆಯ ದಿನ ಇದೇ ಚುಟುಕು ಸಾಹಿತ್ಯ ಸಮ್ಮೇಳನದ ರೂವಾರಿಗಳು ಸಮ್ಮೇಳನಕ್ಕೆ ಪೆಟ್ರೋಲ್ ಬಾಂಬ್ ಹಾಕುವ ಬೆದರಿಕೆ ಹಾಕಿ ಸಾಹಿತ್ಯ ಕಾರ್ಯಕ್ರಮವನ್ನೇ ಅರ್ಧಕ್ಕೆ ನಿಲ್ಲಿಸಿದ್ದರು. ಇಂತಹ ಸಾಹಿತ್ಯ ವಿರೋಧಿಗಳ ಗುಂಪು ಈಗ ಎಲ್ಲಾ ಸರ್ಕಾರಿ ನಿಯಮಗಳನ್ನು ಉಲ್ಲಂಘಿಸುವ ಮೂಲಕ ಮತ್ತೊಮ್ಮೆ ಕಾನೂನು ಬಾಹಿರವಾಗಿ ತಮ್ಮ ನಡೆ ಇಟ್ಟಿದ್ದಾರೆ ಎಂದು ಸಾಹಿತ್ಯಾಸಕ್ತರ ವಲಯ ಗಂಭೀರವಾಗಿ ಆರೋಪಿಸಿದೆ.

ಅಷ್ಟೇ ಅಲ್ಲದೆ, ಹಲವಾರು ಸಾಹಿತ್ಯಾಭಿಮಾನಿಗಳ ಮೇಲೆ ಅಸಂಬದ್ಧ ಆರೋಪಗಳನ್ನು ಹೊರಿಸಿ ಪ್ರಕರಣಗಳನ್ನು ದಾಖಲಿಸುವ ಮೂಲಕ ಮಾನಸಿಕ ಒತ್ತಡ ಸೃಷ್ಟಿಸಲಾಗುತ್ತಿದೆ ಎಂದು ದೂರಲಾಗಿದೆ. ಇಂತಹ ನಡೆಗಳು ಸಾಹಿತ್ಯ ವಾತಾವರಣಕ್ಕೆ ಧಕ್ಕೆ ತರುತ್ತವೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.

ಸಾಹಿತ್ಯ ಮೌಲ್ಯಗಳು ಮತ್ತು ಶಿಷ್ಟಾಚಾರಗಳನ್ನು ಮೀರಿ, ರಾಜಕೀಯ ಉದ್ದೇಶದಿಂದ ಸಮ್ಮೇಳನ ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ವಿರೋಧ ವ್ಯಕ್ತಪಡಿಸಿದವರು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಈ ಕುರಿತು ಶ್ರೀ ಮಂದಾರ, ಜಗದೀಶ್ ಕಣದಮನೆ, ಭರತ್ ಗಿಣಿಕಲ್, ವೆಂಕಟೇಶ್ ಹಾಗಲಗಂಜಿ, ಚಂದ್ರಶೇಖರ್ ಹೆಗ್ಡೆ ಕಲ್ಕುಳಿ, ಸಂತೋಷ್ ಕಾಳ್ಯ, ರಾಜಕುಮಾರ್ ಹೆಗ್ಡೆ, ತ್ರಿಮೂರ್ತಿ ಹೊಸ್ತೋಟ, ಕಳಸಪ್ಪ ಕೆಲವಳ್ಳಿ, ನವಿನ್ ಕರುವಾನೆ ಮತ್ತು ಅಶೋಕ್ ಕುಂದೂರ್ ಸೇರಿದಂತೆ ಹಲವು ಸಾಹಿತ್ಯಾಭಿಮಾನಿಗಳು ಒಕ್ಕೊರಲಿನಿಂದ ವಿರೋಧ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...