Homeಮುಖಪುಟ‘ವೆನೆಜುವೆಲಾಗೆ ಅನಗತ್ಯ ಪ್ರಯಾಣ ತಪ್ಪಿಸಿ’: ಅಮೆರಿಕಾ ದಾಳಿ ನಂತರ ಭಾರತ ಪ್ರಜೆಗಳಿಗೆ ವಿದೇಶಾಂಗ ಸಚಿವಾಲಯ ಸೂಚನೆ

‘ವೆನೆಜುವೆಲಾಗೆ ಅನಗತ್ಯ ಪ್ರಯಾಣ ತಪ್ಪಿಸಿ’: ಅಮೆರಿಕಾ ದಾಳಿ ನಂತರ ಭಾರತ ಪ್ರಜೆಗಳಿಗೆ ವಿದೇಶಾಂಗ ಸಚಿವಾಲಯ ಸೂಚನೆ

- Advertisement -
- Advertisement -

ನವದೆಹಲಿ: ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿಯನ್ನು ಅಮೆರಿಕ ಮಿಲಿಟರಿ ಕಾರ್ಯಾಚರಣೆಯಲ್ಲಿ ಸೆರೆಹಿಡಿದ ನಂತರ ಭಾರತ ಶನಿವಾರ ರಾತ್ರಿ ವೆನೆಜುವೆಲಾಗೆ ಅನಗತ್ಯ ಪ್ರಯಾಣವನ್ನು ತಪ್ಪಿಸುವಂತೆ ತನ್ನ ಪ್ರಜೆಗಳಿಗೆ ಸಲಹೆ ನೀಡಿದೆ.

ಜೊತೆಗೆ ವೆನೆಜುವೆಲಾದಲ್ಲಿರುವ ಎಲ್ಲಾ ಭಾರತೀಯರು ತೀವ್ರ ಜಾಗರೂಕರಾಗಿರಿ ಮತ್ತು ಅವರ ಚಲನವಲನಗಳನ್ನು ನಿರ್ಬಂಧಿಸುವಂತೆ ಎಚ್ಚರಿಕೆ ನೀಡಿದೆ.  

ಮಡುರೊ ಮಾದಕವಸ್ತು ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದಾರೆಂದು ನಿರಂತರವಾಗಿ ಆರೋಪಿಸಿದ ನಂತರ ಅಮೆರಿಕ ವೆನೆಜುವೆಲಾದ ರಾಜಧಾನಿ ಕ್ಯಾರಕಾಸ್ ಮೇಲೆ ಮಿಲಿಟರಿ ದಾಳಿ ನಡೆಸಿದೆ. ತೈಲ ಸಮೃದ್ಧ ದೇಶದ ಅಧ್ಯಕ್ಷರು ಈ ಆರೋಪವನ್ನು ಕಟುವಾಗಿ ನಿರಾಕರಿಸಿದ್ದರು.

ಅಮೆರಿಕದ ಪಡೆಗಳು ಮಡುರೊ ಮತ್ತು ಅವರ ಪತ್ನಿಯನ್ನು ಅಮೆರಿಕಕ್ಕೆ ಕರೆದೊಯ್ದಿವೆ. ಅಮೆರಿಕದ ಕ್ರಮದ ನಂತರ ವೆನೆಜುವೆಲಾ ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ.

“ವೆನೆಜುವೆಲಾದಲ್ಲಿನ ಇತ್ತೀಚಿನ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು, ಭಾರತೀಯ ಪ್ರಜೆಗಳು ವೆನೆಜುವೆಲಾಗೆ ಅನಗತ್ಯ ಪ್ರಯಾಣವನ್ನು ತಪ್ಪಿಸಲು ಬಲವಾಗಿ ಸೂಚಿಸಲಾಗಿದೆ” ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

“ಯಾವುದೇ ಕಾರಣಕ್ಕಾಗಿ ವೆನೆಜುವೆಲಾದಲ್ಲಿರುವ ಎಲ್ಲಾ ಭಾರತೀಯರು ತೀವ್ರ ಜಾಗರೂಕರಾಗಿರಲು, ತಮ್ಮ ಚಲನವಲನಗಳನ್ನು ನಿರ್ಬಂಧಿಸಲು ಮತ್ತು ಕ್ಯಾರಕಾಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಲು ಸೂಚಿಸಲಾಗಿದೆ” ಎಂದು ಹೇಳಿದೆ.

ಭಾರತೀಯರು ರಾಯಭಾರ ಕಚೇರಿಯನ್ನು +58-412-9584288 ದೂರವಾಣಿ ಸಂಖ್ಯೆ (ವಾಟ್ಸಾಪ್ ಕರೆಗಳಿಗೂ ಸಹ) ಮತ್ತು [email protected] ಇಮೇಲ್ ಐಡಿ ಮೂಲಕ ಸಂಪರ್ಕಿಸಲು ಸಚಿವಾಲಯ ಕೇಳಿದೆ.

ಕ್ಯಾರಕಾಸ್‌ನಲ್ಲಿರುವ ರಾಯಭಾರ ಕಚೇರಿಯ ಪ್ರಕಾರ, ವೆನೆಜುವೆಲಾದಲ್ಲಿ ಸುಮಾರು 50 ಅನಿವಾಸಿ ಭಾರತೀಯರು ಮತ್ತು 30 ಭಾರತೀಯ ಮೂಲದ ವ್ಯಕ್ತಿಗಳು ಇದ್ದಾರೆ.

ಅಮೆರಿಕದ ಈ ಕ್ರಮವು ದಕ್ಷಿಣ ಅಮೆರಿಕಾದ ದೇಶದಲ್ಲಿ ರಾಜಕೀಯ ಅನಿಶ್ಚಿತತೆಯನ್ನು ಹುಟ್ಟುಹಾಕಿದೆ, ರಷ್ಯಾ ಮತ್ತು ಚೀನಾ ಸೇರಿದಂತೆ ಅನೇಕ ಪ್ರಮುಖ ಶಕ್ತಿಗಳು ಮಡುರೊ ಮತ್ತು ಅವರ ಪತ್ನಿಯ ಕಾರ್ಯಾಚರಣೆ ಮತ್ತು ಸೆರೆಹಿಡಿಯುವಿಕೆಗಾಗಿ ವಾಷಿಂಗ್ಟನ್ ಅನ್ನು ಟೀಕಿಸಿವೆ.

ಕ್ಯಾರಕಾಸ್‌ನಲ್ಲಿ ಕಾರ್ಯಾಚರಣೆ ನಡೆದ ಕೆಲವೇ ಗಂಟೆಗಳ ನಂತರ, ಟ್ರಂಪ್ ಅಮೆರಿಕದ ಯುದ್ಧನೌಕೆ ಯುಎಸ್‌ಎಸ್ ಐವೊ ಜಿಮಾದಲ್ಲಿ ಮಡುರೊ ಅವರ ಫೋಟೋವನ್ನು ಪೋಸ್ಟ್ ಮಾಡಿದರು.

ಅಮೆರಿಕದ ಅಧಿಕಾರಿಗಳ ಪ್ರಕಾರ, ಮಡುರೊ ಅವರನ್ನು ನ್ಯೂಯಾರ್ಕ್‌ಗೆ ಕರೆತರಲಾಗಿದ್ದು, ಅಲ್ಲಿ ಅವರು ಡ್ರಗ್ ಕಾರ್ಟೆಲ್‌ಗಳನ್ನು ಬೆಂಬಲಿಸುವ ಆರೋಪಗಳನ್ನು ಎದುರಿಸಬೇಕಾಗುತ್ತದೆ.

ಅಧಿಕಾರ ವರ್ಗಾವಣೆ ನಡೆಯುವವರೆಗೆ ಅಮೆರಿಕ ವೆನೆಜುವೆಲಾವನ್ನು ನಡೆಸಲಿದೆ ಎಂದು ಟ್ರಂಪ್ ಸುದ್ದಿಗೋಷ್ಠಿಯಲ್ಲಿ ಹೇಳಿದರು. “ಸುರಕ್ಷಿತ, ಸರಿಯಾದ ಮತ್ತು ವಿವೇಚನಾಯುಕ್ತ ಪರಿವರ್ತನೆ ಮಾಡುವವರೆಗೆ ನಾವು ದೇಶವನ್ನು ನಡೆಸುತ್ತೇವೆ” ಎಂದು ಅವರು ಹೇಳಿದ್ದಾರೆ. 

ಅಮೆರಿಕದ ಕ್ರಮಕ್ಕೆ ಭಾರತ ಇನ್ನೂ ಪ್ರತಿಕ್ರಿಯಿಸಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...