Homeಕರ್ನಾಟಕಕರ್ನಾಟಕದ ದೀರ್ಘಾವಧಿಯ ಮುಖ್ಯಮಂತ್ರಿಯಾಗಿ ದಾಖಲೆ ಸೃಷ್ಟಿಸಿದ ಸಿದ್ದರಾಮಯ್ಯ

ಕರ್ನಾಟಕದ ದೀರ್ಘಾವಧಿಯ ಮುಖ್ಯಮಂತ್ರಿಯಾಗಿ ದಾಖಲೆ ಸೃಷ್ಟಿಸಿದ ಸಿದ್ದರಾಮಯ್ಯ

- Advertisement -
- Advertisement -

ಬೆಂಗಳೂರು: ಕರ್ನಾಟಕದ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ದಿವಂಗತ ಡಿ.ದೇವರಾಜ್ ಅರಸ್ ಅವರ ದಾಖಲೆಯನ್ನು (7 ವರ್ಷ 239 ದಿನಗಳು) ಸಿದ್ದರಾಮಯ್ಯ ಮುರಿದಿದ್ದಾರೆ. 

ದೇವರಾಜು ಅರಸು ಮತ್ತು ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯದ ಎರಡು ವಿಭಿನ್ನ ಯುಗಗಳನ್ನು ಪ್ರತಿನಿಧಿಸುತ್ತಾರೆ. ಅರಸು ನಂತರ ಪೂರ್ಣ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿದ ಏಕೈಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ದಾಖಲೆ ನಿರ್ಮಿಸಿದ್ದಾರೆ.

ಅರಸು ಅವರು ತಮ್ಮ ಬಲಿಷ್ಠ ಶಾಸನಗಳಾದ ಭೂಸುಧಾರಣಾ ಕಾಯ್ದೆ ಮತ್ತು ಹಿಂದುಳಿದ ವರ್ಗಗಳಿಗೆ ಮೀಸಲಾತಿ ಮೂಲಕ ಹಿಂದುಳಿದ ವರ್ಗಗಳು ಮತ್ತು ದಲಿತರ ಹೊಸ ರಾಜಕೀಯ ನೆಲೆಯನ್ನು ಸೃಷ್ಟಿಸಿದರೆ, ಸಿದ್ದರಾಮಯ್ಯ ಅವರು ಜನಪ್ರಿಯ ಯೋಜನೆಗಳು ಮತ್ತು ಉಚಿತ ಕೊಡುಗೆಗಳನ್ನು ಮುಂದಿಟ್ಟುಕೊಂಡು ‘ಅಹಿಂದ’ ಒಕ್ಕೂಟದ (ಅಲ್ಪಸಂಖ್ಯಾತರು, ದಲಿತರು ಮತ್ತು ಹಿಂದುಳಿದ ವರ್ಗಗಳು) ಮೇಲೆ ತಮ್ಮ ರಾಜಕೀಯವನ್ನು ರೂಪಿಸಿದ್ದಾರೆ ಎಂದು ಡೆಕನ್ ಹೆರಾಲ್ಡ್ ಸುದ್ದಿ ಮಾಡಿದೆ. 

ಇನ್ನು ಈ ಕುರಿತು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ‘ನಾನು ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ’, ಸಮಾಜದಲ್ಲಿ ಅಸಮಾನತೆ ಇನ್ನೂ ಜೀವಂತವಾಗಿದ್ದು, ಅಸಮಾನತೆ ಹೋಗುವವರೆಗೂ, ಎಲ್ಲರಿಗೂ ನ್ಯಾಯ ಸಿಗುವವರೆಗೂ ಹೋರಾಟ ಹಾಗೂ  ಜನರ ಕೆಲಸ ಮಾಡುತ್ತಲೇ ಇರುತ್ತೇನೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 

ಇದೇ ವೇಳೆ ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ. ಈ ದಾಖಲೆ  ಕಾಕತಾಳೀಯವಾಗಿ ಆಗಿದೆ. ದೇವರಾಜ ಅರಸು ಅವರು ಎಷ್ಟು ವರ್ಷ ಆಡಳಿತ ಮಾಡಿದ್ದಾರೆಂದು ತಿಳಿದಿರಲಿಲ್ಲ. ಜನರ ಆಶೀರ್ವಾದದಿಂದ ದೇವರಾಜ ಅರಸು ಅವರ ದಾಖಲೆಯನ್ನು ಮುರಿಯಲು ಸಾಧ್ಯವಾಗಿದೆ ಎಂದಿದ್ದಾರೆ.  

ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುವ ವಿಶ್ವಾಸವಿದೆ: 

ಮುಖ್ಯಮಂತ್ರಿಯಾಗಿ ಅವಧಿಯನ್ನು ಪರಿಪೂರ್ಣ ಮಾಡುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು ಈ ಕುರಿತು ಪಕ್ಷದ ವರಿಷ್ಠರು ತೀರ್ಮಾನಿಸಬೇಕಿದೆ ಎಂದಿದ್ದಾರೆ. ಇದೇ ವೇಳೆ ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುವ ವಿಶ್ವಾಸವಿದೆ ಎಂದಿದ್ದಾರೆ.  

ಮುಖ್ಯಮಂತ್ರಿಗಳ ಅಭಿಮಾನಿಗಳು ನಾಟಿ ಕೋಳಿ ಪಲಾವ್ ಹಂಚಿರುವ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿ ನನಗೆ ಈ ಬಗ್ಗೆ  ತಿಳಿದಿಲ್ಲ ಎಂದ ಮುಖ್ಯಮಂತ್ರಿಗಳು, ಸಾಮಾನ್ಯವಾಗಿ ಹಳ್ಳಿಗಳಲ್ಲಿ ನೆಂಟರು ಬಂದಾಗ ಮಾತ್ರ ನಾಟಿ ಕೋಳಿ ಅಡುಗೆ ಮಾಡುತ್ತಾರೆ. ನಾನೂ ಹಳ್ಳಿಯವನಾಗಿರುವುದರಿಂದ ಸಹಜವಾಗಿ ನಾಟಿ ಕೋಳಿ, ರಾಗಿ ಮುದ್ದೆ ತಿನ್ನುತ್ತಿದ್ದೆ. ಹಳ್ಳಿಯವರ ಊಟದ ಕ್ರಮ ಇದಾಗಿದ್ದು, ನಾನು ಮುಖ್ಯಮಂತ್ರಿಯಾಗಿರುವುದರಿಂದ   ಸ್ವಲ್ಪ ಪ್ರಚಾರ ಸಿಗುತ್ತಿದೆ ಎಂದರು. 

ರಾಜಕಾರಣ ತೃಪ್ತಿ ತಂದಿದೆ

ಇಷ್ಟು ವರ್ಷಗಳ ರಾಜಕಾರಣ ತೃಪ್ತಿ ತಂದಿದೆ ಎಂದ ಮುಖ್ಯಮಂತ್ರಿಗಳು ಜನರ ಕೆಲಸ ಮಾಡುವುದು ಖುಷಿಯ ಸಂಗತಿ ಎಂದಿದ್ದಾರೆ. ರಾಜಕಾರಣ ಎಂದರೆ ಬಡವರು, ದಲಿತರು, ಹಿಂದುಳಿದವರ ಕೆಲಸ ಮಾಡಿಕೊಡುವುದು. 

ಹೆಚ್ಚೆಂದರೆ ಶಾಸಕನಾಗಬೇಕೆಂದು ಅಂದುಕೊಂಡಿದ್ದೆ. ಶಾಸಕನಾದೆ, ಮಂತ್ರಿ, ಉಪಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಹಾಗೂ ಮುಖ್ಯಮಂತ್ರಿಯೂ ಆದೆ. ಅವಕಾಶಗಳು ಸಿಕ್ಕಿದ್ದರಿಂದ ಇವೆಲ್ಲ ಆಗಲು ಸಾಧ್ಯವಾಯಿತು ಎಂದಿದ್ದಾರೆ. 

ದೇವರಾಜ ಅರಸು ಹಾಗೂ ನಾನು ಇಬ್ಬರೂ ಮೈಸೂರಿನವರೇ ಆಗಿದ್ದು, ಇಬ್ಬರೂ ದೀರ್ಘಾವಧಿಯ ಮುಖ್ಯಮಂತ್ರಿಗಳಾಗಿದ್ದು ಕಾಲಘಟ್ಟ ಬೇರೆ ಬೇರೆ. 1972ರಿಂದ 80ವರೆಗೆ ಮುಖ್ಯಮಂತ್ರಿಯಾಗಿದ್ದರು. ನಾನು ಎರಡು ಅವಧಿಗೆ ಮುಖ್ಯಮಂತ್ರಿ ಆಗಿದ್ದೇನೆ ಎಂದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...