Homeಮುಖಪುಟಉತ್ತರ ಪ್ರದೇಶ SIR : ಮತದಾರರ ಪಟ್ಟಿಯಿಂದ 2.89 ಕೋಟಿ ಹೆಸರು ಡಿಲೀಟ್

ಉತ್ತರ ಪ್ರದೇಶ SIR : ಮತದಾರರ ಪಟ್ಟಿಯಿಂದ 2.89 ಕೋಟಿ ಹೆಸರು ಡಿಲೀಟ್

- Advertisement -
- Advertisement -

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐರ್‌) ಬಳಿಕ ಸುಮಾರು 2.89 ಕೋಟಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ನವದೀಪ್ ರಿನ್ವಾ ಮಂಗಳವಾರ (ಜ.6) ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಿನ್ವಾ, ಚುನಾವಣಾ ಆಯೋಗವು ಸುಮಾರು 12.5 ಕೋಟಿ ಎಸ್‌ಐಆರ್‌ ಅರ್ಜಿಗಳನ್ನು ಜನರಿಂದ ಸ್ವೀಕರಿಸಿದೆ ಎಂದು ಹೇಳಿದ್ದಾರೆ.

ವರದಿಗಳ ಪ್ರಕಾರ, ಎಸ್‌ಐಆರ್‌ಗೂ ಮೊದಲು ಉತ್ತರ ಪ್ರದೇಶದ ಮತದಾರರ ಒಟ್ಟು ಸಂಖ್ಯೆ 15.44 ಕೋಟಿ ಇತ್ತು. ಎಸ್‌ಐಆರ್ ವೇಳೆ 46.23 ಲಕ್ಷ ಜನರು ಮೃತಪಟ್ಟಿದ್ದಾರೆ, 1.27 ಕೋಟಿ ಜನರು ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ, 25.47 ಲಕ್ಷ ಮಂದಿಯ ಹೆಸರು ಒಂದಕ್ಕಿಂತ ಹೆಚ್ಚು ಬಾರಿ ಇದೆ ಮತ್ತು ಪತ್ತೆಯಾಗದವರು ಹಾಗೂ ಇತರೆ ಕಾರಣಗಳನ್ನು ನೀಡಿ 2.89 ಕೋಟಿ ಹೆಸರುಗಳನ್ನು ಕೈ ಬಿಡಲಾಗಿದೆ. ಇದರಿಂದ ಎಸ್‌ಐಆರ್‌ ಬಳಿಕ ಪ್ರಕಟಿಸಿ ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು ಮತದಾರರ ಸಂಖ್ಯೆ 12.5 ಕೋಟಿಗೆ ಕುಸಿತಗೊಂಡಿದೆ.

ಸಿಇಒ ಪ್ರಕಾರ, 15.44 ಕೋಟಿ ಮತದಾರರಲ್ಲಿ, 12.55 ಕೋಟಿ ಮತದಾರರ (ಶೇಕಡ 81.30) ಹೆಸರುಗಳನ್ನು ಎಸ್‌ಐಆರ್ ನಂತರ ಕರಡು ಮತದಾರರ ಪಟ್ಟಿಯಲ್ಲಿ ಉಳಿಸಿಕೊಳ್ಳಲಾಗಿದೆ.

ಎಸ್‌ಐಆರ್‌ ಪೂರ್ಣಗೊಂಡ ಬಳಿಕ ಅಂತಿಮ ಮತದಾರರ ಪಟ್ಟಿಯನ್ನು ಮಾರ್ಚ್ 6,2026 ರಂದು ಬಿಡುಗಡೆ ಮಾಡಲಾಗುವುದು ಎಂದು ರಿನ್ವಾ ಹೇಳಿದ್ದಾರೆ. ಈಗ ಕರಡು ಪಟ್ಟಿ ಬಿಡುಗಡೆಯಾಗಿರುವುದರಿಂದ ಮತದಾರರು ತಮ್ಮ ಎಪಿಕ್ ( EPIC)ಸಂಖ್ಯೆಯನ್ನು ವೆಬ್‌ಸೈಟ್‌ನಲ್ಲಿ ನಮೂದಿಸುವ ಮೂಲಕ ತಮ್ಮ ವಿವರಗಳನ್ನು ಪರಿಶೀಲಿಸಬೇಕು. ಒಂದು ವೇಳೆ ನಿಮ್ಮ ಹೆಸರು ಪಟ್ಟಿಯಲ್ಲಿ ಇಲ್ಲದಿದ್ದರೆ ಫಾರ್ಮ್ 6 ಭರ್ತಿ ಮಾಡುವ ಮೂಲಕ ಸೇರ್ಪಡೆಗೆ ಕೋರಬಹುದು ಎಂದಿದ್ದಾರೆ.

ಚುನಾವಣಾ ಆಯೋಗವು ಕರಡು ಮತದಾರರ ಪಟ್ಟಿಯ ಪ್ರಕಟಣೆಯನ್ನು ಒಂದು ವಾರ ವಿಸ್ತರಿಸಿ, ಎಸ್‌ಐಆರ್‌ನ ವೇಳಾಪಟ್ಟಿಯನ್ನು ಪರಿಷ್ಕರಿಸಿತ್ತು. ಹಾಗಾಗಿ, ಡಿಸೆಂಬರ್ 31ರ ಹಿಂದಿನ ಗಡುವಿನ ಬದಲು ಜನವರಿ 6ರಂದು ಕರಡು ಪಟ್ಟಿಯನ್ನು ಪ್ರಕಟಿಸಿದೆ.

ಪರಿಷ್ಕೃತ ಅವಧಿಯ ಪ್ರಕಾರ, ಜನರು ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸುವ ಅವಧಿಯು ಜನವರಿ 6 ರಿಂದ ಫೆಬ್ರವರಿ 6, 2026 ರವರೆಗೆ ಇರುತ್ತದೆ. ಯುಪಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಗೆ ಹಲವು ಗಡುವುಗಳು ವಿಸ್ತರಣೆಯಾಗಿವೆ. ಆರಂಭದಲ್ಲಿ ಡಿಸೆಂಬರ್ 4 ಕ್ಕೆ ಗಣತಿ ಗಡುವನ್ನು ನಿಗದಿಪಡಿಸಲಾಗಿತ್ತು, ನಂತರ ಎರಡು ಬಾರಿ ವಿಸ್ತರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...