Homeಮುಖಪುಟಛತ್ತೀಸ್‌ಗಢ : ಎಂಟು ಮಂದಿ ಬಂಗಾಳಿ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ;...

ಛತ್ತೀಸ್‌ಗಢ : ಎಂಟು ಮಂದಿ ಬಂಗಾಳಿ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ; ವರದಿ

- Advertisement -
- Advertisement -

ಛತ್ತೀಸ್‌ಗಢದ ರಾಯ್‌ಪುರದಲ್ಲಿ ಭಾನುವಾರ (ಜ.4) ಬಜರಂಗದಳ ಕಾರ್ಯಕರ್ತರು ಎಂಟು ಮಂದಿ ಬಂಗಾಳಿ ಮಾತನಾಡುವ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದು, ಒಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ರಾಯ್‌ಪುರ ಜಿಲ್ಲೆಯ ಕಟೋವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಸೂರಜ್‌ಪುರದಲ್ಲಿ ಈ ಘಟನೆ ನಡೆದಿದೆ. ಪಶ್ಚಿಮ ಬಂಗಾಳದ ಪುರುಲಿಯಾದ ಚೆಪ್ರಿ ಗ್ರಾಮದ ವಲಸೆ ಕಾರ್ಮಿಕರು ಸೂರಜ್‌ಪುರದ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕಾರ್ಮಿಕರು ತಮ್ಮ ವೇತನದ ಬಗ್ಗೆ ಬೇಕರಿಯ ಮಾಲೀಕರೊಂದಿಗೆ ತೀವ್ರ ವಾಗ್ವಾದ ನಡೆಸಿದ್ದರು. ಈ ವೇಳೆ ಭಜರಂಗದಳದ ಕಾರ್ಯಕರ್ತರ ಗುಂಪು ಬಂದು ಕೋಲುಗಳಿಂದ ಹಲ್ಲೆ ನಡೆಸಲು ಪ್ರಾರಂಭಿಸಿದ್ದಾರೆ. ಪರಿಣಾಮ, ವಲಸೆ ಕಾರ್ಮಿಕರಲ್ಲಿ ಒಬ್ಬರ ಬಲಗೈಯಲ್ಲಿ ಮೂಳೆ ಮುರಿತವಾಗಿದೆ ಎಂದು ವರದಿ ಹೇಳಿದೆ.

ಹಲ್ಲೆ ಬಳಿಕ ದುಷ್ಕರ್ಮಿಗಳು ಪುರುಲಿಯಾ ಜಿಲ್ಲಾ ಪೊಲೀಸರಿಗೆ ಕರೆ ಮಾಡಿ ಕಾರ್ಮಿಕರ ದಾಖಲೆಗಳನ್ನು ಪರಿಶೀಲಿಸಲು ಹೇಳಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದು ಹಲ್ಲೆಗೊಳಗಾದವರನ್ನು ರಕ್ಷಿಸಿದ್ದಾರೆ ಎಂದು ವರದಿ ಹೇಳಿದೆ.

“ಸೂರಜ್‌ಪುರದ ಕಟೋವಾಲಿ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿಯೊಬ್ಬರು ಘಟನೆಯ ಬಗ್ಗೆ ನನಗೆ ಮಾಹಿತಿ ನೀಡಿ ಎಂಟು ಕಾರ್ಮಿಕರ ಬಗ್ಗೆ ವಿವರಗಳನ್ನು ಕೇಳಿದ್ದು, ನಾವು ಎಂಟು ಮಂದಿ ಅಸಹಾಯಕ ಬಲಿಪಶುಗಳ ಕುಟುಂಬಗಳಿಂದ ಎಲ್ಲಾ ದಾಖಲೆಗಳನ್ನು ಸಂಗ್ರಹಿಸಿ ಪೊಲೀಸರಿಗೆ ಸಲ್ಲಿಸಿದ್ದೇವೆ” ಎಂದು ಪಶ್ಚಿಮ ಬಂಗಾಳದ ಚೆಪ್ರಿಯ ಟಿಎಂಸಿ ನಾಯಕ ಶೇಖ್ ಇಕ್ಬಾಲ್ ಹೇಳಿದ್ದಾರೆ.

ಭಾನುವಾರ ಒಡಿಶಾದ ಸಂಬಲ್ಪುರದಲ್ಲಿ ಮತ್ತೊಬ್ಬ ಬಂಗಾಳಿ ಮಾತನಾಡುವ ಮುಸ್ಲಿಂ ವಲಸೆ ಕಾರ್ಮಿಕನ ಮೇಲೆ ಹಲ್ಲೆ ನಡೆದಿದ್ದು, ಅವರ ತೋಳಿನ ಮೂಳೆ ಮುರಿತವಾಗಿದೆ ಎಂದು ವರದಿ ಹೇಳಿದೆ.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರ ಮೇಲೆ ಹೆಚ್ಚುತ್ತಿರುವ ದಾಳಿಯ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ಹಿಂದೆ ಕಳವಳ ವ್ಯಕ್ತಪಡಿಸಿದ್ದರು. ಇದನ್ನು ‘ಕ್ರೂರ ದಬ್ಬಾಳಿಕೆ’ ಎಂದು ಅವರು ಹೇಳಿದ್ದಾರೆ. ಕಳೆದ ವರ್ಷದ ಆಗಸ್ಟ್‌ನಲ್ಲಿ, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಕೆಲಸ ಮಾಡುತ್ತಿರುವ ಬಂಗಾಳಿ ವಲಸಿಗರು ಪಶ್ಚಿಮ ಬಂಗಾಳಕ್ಕೆ ಹಿಂತಿರುಗಿ ತಮ್ಮದೇ ಆದ ವ್ಯವಹಾರಗಳನ್ನು ಪ್ರಾರಂಭಿಸುವಂತೆ ಮುಖ್ಯಮಂತ್ರಿ ಕರೆ ನೀಡಿದ್ದರು.

ಒಡಿಶಾದಲ್ಲಿ ಬಾಂಗ್ಲಾದೇಶಿ ಪ್ರಜೆ ಎಂಬ ‘ಸಂಶಯ’ದ ಮೇಲೆ ಬಂಗಾಳದ 30 ವರ್ಷದ ಮುಸ್ಲಿಂ ವಲಸೆ ಕಾರ್ಮಿಕ ಜುಯೆಲ್ ಶೇಖ್ ಅವರನ್ನು ಗುಂಪೊಂದು ಹೊಡೆದು ಕೊಂದ ಎರಡು ವಾರಗಳೊಳಗೆ ಇತ್ತೀಚಿನ ದಾಳಿ ನಡೆದಿದೆ.

ಶೇಖ್ ಅವರನ್ನು ತೀವ್ರವಾಗಿ ಥಳಿಸಲಾಗಿತ್ತು, ನಂತರ ಸಂಬಲ್ಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಆರು ಜನರನ್ನು ಬಂಧಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...