Homeಮುಖಪುಟಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

- Advertisement -
- Advertisement -

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು ರೂಪಿಸಿದೆ ಎಂದು ಆರೋಪಿಸಿದೆ.

ಕಾಂಗ್ರೆಸ್, ರೈಜೋರ್ ದಳ, ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕಿಸ್ಟ್), ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕಿಸ್ಟ್-ಲೆನಿನಿಸ್ಟ್) ಮತ್ತು ಅಸ್ಸಾಂ ರಾಷ್ಟ್ರೀಯ ಪರಿಷತ್ ಪಕ್ಷಗಳು ಗುವಾಹಟಿಯ ದಿಸ್ಪುರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿವೆ ಎಂದು ದಿ ಹಿಂದೂ ವರದಿ ಮಾಡಿದೆ.

ಅಸ್ಸಾಂ ಬಿಜೆಪಿ ಅಧ್ಯಕ್ಷ ಹಾಗೂ ಸಂಸದ ದಿಲೀಪ್ ಸೈಕಿಯಾ ಈ ಪಿತೂರಿಯಲ್ಲಿ ಭಾಗಿಯಾಗಿದ್ದಾರೆ ಎಂದು ಪಕ್ಷಗಳು ಹೇಳಿಕೊಂಡಿವೆ ಮತ್ತು ರಾಜ್ಯದ 126 ವಿಧಾನಸಭಾ ಕ್ಷೇತ್ರಗಳ ಪೈಕಿ ಕನಿಷ್ಠ 60 ಕ್ಷೇತ್ರಗಳಲ್ಲಿ ‘ಬಿಜೆಪಿ ವಿರೋಧಿ ಮತದಾರರ’ ಹೆಸರುಗಳನ್ನು ಅಳಿಸುವುದನ್ನು ಖಚಿತಪಡಿಸಿಕೊಳ್ಳಲು ಪಕ್ಷದ ಶಾಸಕರಿಗೆ ನಿರ್ದೇಶನ ನೀಡಲಾಗಿದೆ ಎಂದು ಆರೋಪಿಸಿವೆ.

ಮಾರ್ಚ್-ಏಪ್ರಿಲ್‌ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಅಸ್ಸಾಂನಲ್ಲಿ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (ಎಸ್‌ಐಆರ್)ಯ ಮಧ್ಯೆ ಈ ಆರೋಪಗಳು ಕೇಳಿ ಬಂದಿವೆ.

ಡಿಸೆಂಬರ್ 27ರಂದು, ‘ವಿಶೇಷ ಪರಿಷ್ಕರಣೆ’ ಪ್ರಕ್ರಿಯೆ ಅಡಿಯಲ್ಲಿ ಮನೆ-ಮನೆ ಪರಿಶೀಲನೆಯ ನಂತರ ಅಸ್ಸಾಂನಲ್ಲಿ 10 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಅಳಿಸಲು ಗುರುತಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಅಂತಿಮ ಪಟ್ಟಿಯನ್ನು ಫೆಬ್ರವರಿ 10ರಂದು ಪ್ರಕಟಿಸಲಾಗುವುದು ಎಂದು ಹೇಳಿದೆ.

12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಂತೆ, ಚುನಾವಣಾ ಆಯೋಗವು ಅಸ್ಸಾಂನಲ್ಲಿ ಎಸ್‌ಐಆರ್ ನಡೆಸುತ್ತಿಲ್ಲ. ಬದಲಾಗಿ, ನವೆಂಬರ್ 17ರಂದು, ಮತದಾರರ ಪಟ್ಟಿಯ ‘ವಿಶೇಷ ಪರಿಷ್ಕರಣೆ’ ನಡೆಸುವಂತೆ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ನಿರ್ದೇಶನ ನೀಡಿತ್ತು.

ನವೆಂಬರ್ 22 ಮತ್ತು ಡಿಸೆಂಬರ್ 20ರ ನಡುವೆ ರಾಜ್ಯದಲ್ಲಿ ಮನೆ ಮನೆ ಪರಿಶೀಲನೆ ನಡೆದಿದೆ. ವಿಶೇಷ ತೀವ್ರ ಪರಿಷ್ಕರಣೆಯಂತೆ ಈ ಪ್ರಕ್ರಿಯೆಯು ದಾಖಲೆ ಪರಿಶೀಲನೆಯನ್ನು ಒಳಗೊಂಡಿರಲಿಲ್ಲ.

ಜನವರಿ 4ರಂದು ನಡೆದ ಆನ್‌ಲೈನ್ ಸಭೆಯಲ್ಲಿ ಆರೋಗ್ಯ ಸಚಿವ ಅಶೋಕ್ ಸಿಂಘಾಲ್ ಅವರೊಂದಿಗೆ ಸೈಕಿಯಾ ಅವರು ಅಳಿಸುವಿಕೆ ಪ್ರಕ್ರಿಯೆಯ ಬಗ್ಗೆ ಚರ್ಚಿಸಿದ್ದಾರೆ ಎಂದು ವಿರೋಧ ಪಕ್ಷಗಳು ಶುಕ್ರವಾರ ತಮ್ಮ ದೂರಿನಲ್ಲಿ ಆರೋಪಿಸಿವೆ.

ರಾಜ್ಯದಲ್ಲಿ ಮುಕ್ತ, ನ್ಯಾಯಯುತ ಮತ್ತು ಪಾರದರ್ಶಕ ವಿಶೇಷ ಪರಿಷ್ಕರಣೆಗಾಗಿ ಸಭೆಯ ದೃಶ್ಯಗಳನ್ನು ಪಡೆದುಕೊಳ್ಳಲು ಮತ್ತು ‘ಅಪರಾಧಿಗಳು ಹಾಗೂ ಪಿತೂರಿಗಾರರ’ ವಿರುದ್ಧ ಪ್ರಕರಣ ದಾಖಲಿಸುವಂತೆ ಪಕ್ಷಗಳು ಪೊಲೀಸರನ್ನು ಒತ್ತಾಯಿಸಿವೆ.

ಪ್ರತ್ಯೇಕವಾಗಿ, ರೈಜೋರ್ ದಳದ ಮುಖ್ಯಸ್ಥ ಮತ್ತು ಶಿವಸಾಗರ್ ಶಾಸಕ ಅಖಿಲ್ ಗೊಗೊಯ್ ಅವರು ಶುಕ್ರವಾರ ಚುನಾವಣಾ ಆಯೋಗಕ್ಕೆ ಪತ್ರ ಬರೆದು ‘ಮತದಾರರ ಪಟ್ಟಿ ನಿರ್ವಹಣೆ’ ಉದ್ದೇಶಕ್ಕಾಗಿ ಜನವರಿ 4 ರಂದು ನಡೆದ ಆನ್‌ಲೈನ್ ಸಭೆಯ ಬಗ್ಗೆ ಉನ್ನತ ಮಟ್ಟದ, ಸ್ವತಂತ್ರ ತನಿಖೆ ನಡೆಸಬೇಕೆಂದು ಕೋರಿದ್ದಾರೆ.

‘ಪ್ರತಿ ಕ್ಷೇತ್ರದ 10,000 ಮತಗಳನ್ನು ಅಳಿಸುವ’ ನಿರ್ದೇಶನಕ್ಕೆ ಸಂಬಂಧಿಸಿದ ಬಿಜೆಪಿ ನಾಯಕತ್ವದ ಎಲ್ಲಾ ಡಿಜಿಟಲ್ ದಾಖಲೆಗಳು ಮತ್ತು ಸಂವಹನ ದಾಖಲೆಗಳನ್ನು ಪಡೆದುಕೊಳ್ಳುವಂತೆ ಗೊಗೊಯ್ ಚುನಾವಣಾ ಸಮಿತಿಯನ್ನು ಕೇಳಿದ್ದಾರೆ.

ರಾಜ್ಯದಲ್ಲಿ ಕಳೆದ ಮೂರು ತಿಂಗಳುಗಳಲ್ಲಿ ಸಲ್ಲಿಸಲಾದ ಫಾರ್ಮ್ 7 ಅರ್ಜಿಗಳ ಲೆಕ್ಕವನ್ನು ಅವರು ಕೋರಿದ್ದು, ಈ ವಿಷಯ ಬಗೆಹರಿಯುವವರೆಗೆ ‘ವಿಶೇಷ ಪರಿಷ್ಕರಣೆ’ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

ಬಿಜೆಪಿ ವಿಪಕ್ಷಗಳ ಎಲ್ಲಾ ಆರೋಪಗಳನ್ನು ನಿರಾಕರಿಸಿದೆ. ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಹೆಸರುಗಳ ಅಳಿಸುವಿಕೆಯನ್ನು ಗೊಗೊಯ್ ತಪ್ಪಾಗಿ ನಿರೂಪಿಸಿದ್ದಾರೆ ಎಂದು ಪಕ್ಷದ ವಕ್ತಾರ ಜಯಂತ ಕುಮಾರ್ ಗೋಸ್ವಾಮಿ ಹೇಳಿದ್ದಾರೆ.

ಗೋಲಾಘಾಟ್ ಜಿಲ್ಲೆಯ ಸರುಪಥರ್ ವಿಧಾನಸಭಾ ಕ್ಷೇತ್ರದ ಉರಿಯಮ್‌ಘಾಟ್‌ನಲ್ಲಿ ನಡೆಸಲಾದ ತೆರವು ಕಾರ್ಯಾಚರಣೆಯ ನಂತರ 11,000 ಕ್ಕೂ ಹೆಚ್ಚು ಮುಸ್ಲಿಮರನ್ನು ಹೊರಹಾಕಲಾಗಿದೆ. ಹಾಗಾಗಿ, ಈಗ ನಡೆಯುತ್ತಿರುವ ಎಸ್‌ಐಆರ್‌ನಲ್ಲಿ ಕ್ಷೇತ್ರದ ಮತದಾರರ ಪಟ್ಟಿಯಿಂದ 11,000 ಸಾವಿರ ಹೆಸರುಗಳನ್ನು ತೆಗೆದು ಹಾಕಲಾಗಿದೆ ಎಂದಿದ್ದಾರೆ.

ಮಿಯಾಗಳನ್ನು ಓಲೈಸಲು ವಿರೋಧ ಪಕ್ಷಗಳು ಪೊಲೀಸ್ ದೂರು ದಾಖಲಿಸಿವೆ ಎಂದು ಗೋಸ್ವಾಮಿ ಹೇಳಿದ್ದಾರೆ. ‘ಮಿಯಾ’ ಎಂಬುದು ಬಂಗಾಳಿ ಮಾತನಾಡುವ ಮುಸ್ಲಿಮರನ್ನು ಅವಹೇಳನಕಾರಿಯಾಗಿ ಸಂಬೋಧಿಸಲು ಬಳಸುವ ಪದವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...