- Advertisement -
- Advertisement -
ಬಾಂಗ್ಲಾದೇಶಿ ಎಂದು ಆರೋಪಿಸಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ, ಕೊಲೆ ಯತ್ನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರಿನ ಕಾವೂರು ಪೊಲೀಸರು ಸೋಮವಾರ (ಜ.12) ಬಂಧಿಸಿದ್ದಾರೆ.
ಮಂಗಳೂರು ತಾಲೂಕಿನ ಕೂಳೂರು ಗ್ರಾಮದ ನಿವಾಸಿಗಳಾದ ರತೀಶ್ ದಾಸ್ ಯಾನೆ ಲಾಲು (32), ಧನುಷ್ (24) ಮತ್ತು ಸಾಗರ್ (24) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.
ಜನವರಿ 11ರಂದು ಸಂಜೆ ಸುಮಾರು 6 ಗಂಟೆಯ ವೇಳೆಗೆ ನಾಲ್ವರು ಆರೋಪಿಗಳು ಜಾರ್ಖಂಡ್ ಮೂಲದ ದಿಲ್ಜಾನ್ ಅನ್ಸಾರಿ ಎಂಬವರನ್ನು ತಡೆದು ನಿಲ್ಲಿಸಿ, ನೀನು ಹಿಂದೂನಾ? ಮುಸ್ಲಿಮ್? ಎಂದು ಪ್ರಶ್ನಿಸಿ ಜನಾಂಗೀಯ ನಿಂದನೆ ಮಾಡಿದ್ದಲ್ಲದೆ, ಬಾಂಗ್ಲಾದೇಶದ ಪ್ರಜೆ ಎಂದು ಆಪಾದಿಸಿ ಹಲ್ಲೆ ನಡೆಸಿದ್ದಾರೆ, ಕೊಲೆಯತ್ನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಆರೋಪಿಗಳ ವಿರುದ್ದ ಕಾವೂರು ಪೊಲೀಸರು ಬಿಎನ್‌ಎಸ್ ಸೆಕ್ಷನ್ 126(2), 352, 351(3), 353, 109, 118(1) ಹಾಗೂ 3(5)ರ ಅಡಿ ಪ್ರಕರಣ ದಾಖಲಿಸಿದ್ದಾರೆ.


