Homeಕರ್ನಾಟಕಕಾಂಗ್ರೆಸ್‌ ಮುಖಂಡನ ಗೂಂಡಾವರ್ತನೆ : ಫ್ಲೆಕ್ಸ್‌ ತೆರವುಗೊಳಿಸಿದ್ದಕ್ಕೆ ಪೌರಾಯುಕ್ತೆಗೆ ಧಮ್ಕಿ, ಅವಾಚ್ಯ ಶಬ್ದಗಳಿಂದ ನಿಂದನೆ

ಕಾಂಗ್ರೆಸ್‌ ಮುಖಂಡನ ಗೂಂಡಾವರ್ತನೆ : ಫ್ಲೆಕ್ಸ್‌ ತೆರವುಗೊಳಿಸಿದ್ದಕ್ಕೆ ಪೌರಾಯುಕ್ತೆಗೆ ಧಮ್ಕಿ, ಅವಾಚ್ಯ ಶಬ್ದಗಳಿಂದ ನಿಂದನೆ

- Advertisement -
- Advertisement -

ಸಚಿವ ಝಮೀರ್ ಅಹ್ಮದ್ ಅವರ ಮಗ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾದ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ ವಿಚಾರವಾಗಿ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಜಿ. ಅಮೃತಗೌಡ ಅವರೊಂದಿಗೆ ಗೂಂಡಾವರ್ತನೆ ಮಾಡಿ ಧಮ್ಕಿ ಹಾಕಿರುವ ಘಟನೆ ನಡೆದಿದೆ.

ರಾಜೀವ್ ಗೌಡ ಅವರು ಅಧಿಕಾರಿ ಅಮೃತಗೌಡ ಅವರಿಗೆ ಕರೆ ಮಾಡಿ ಅವಾಚ್ಯವಾಗಿ ನಿಂದಿಸಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಮಂಗಳವಾರ ಸಂಜೆ ಶಿಡ್ಲಘಟ್ಟದ ನೆಹರೂ ಮೈದಾನದಲ್ಲಿ ‘ಕಲ್ಟ್’ ಸಿನಿಮಾದ ಪ್ರಚಾರ ಸಭೆ ಆಯೋಜಿಸಲಾಗಿತ್ತು. ಈ ಹಿನ್ನೆಲೆ ಕೋಟೆ ವೃತ್ತದಲ್ಲಿ ರಸ್ತೆಗೆ ಅಡ್ಡವಾಗಿ ಸಿನಿಮಾ ಪ್ರಚಾರದ ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿತ್ತು. ಇದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು. ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆ ನಗರಸಭೆ ಸಿಬ್ಬಂದಿ ಫ್ಲೆಕ್‌ಗಳನ್ನು ಕಚೇರಿಗೆ ತಂದಿಟ್ಟಿದ್ದರು. ಈ ಬಗ್ಗೆ ನಗರಸಭೆ ಮಾಜಿ ಅಧ್ಯಕ್ಷ ಹಾಗೂ ರಾಜೀವ್ ಗೌಡ ಬೆಂಬಲಿಗ ಅಪ್ಸರ್‌ಗೆ ಪೌರಾಯುಕ್ತರು ಮಾಹಿತಿ ಕೂಡ ನೀಡಿದ್ದರು ಎಂದು ವರದಿಯಾಗಿದೆ.

ಫ್ಲೆಕ್ಸ್ ಬಿಚ್ಚಿದ್ದಕ್ಕೆ ತೀವ್ರ ಆಕ್ರೋಶಗೊಂಡ ರಾಜೀವ್‌ಗೌಡ ಪೌರಾಯುಕ್ತೆಗೆ ಕರೆಮಾಡಿ ಅವಾಚ್ಯವಾಗಿ ಬೈದಿದ್ದಾರೆ. ಗೂಂಡಾವರ್ತನೆ ಮಾಡಿ ಧಮ್ಕಿ ಹಾಕಿದ್ದಾರೆ ಎಂದು ವರದಿಗಳು ವಿವರಿಸಿವೆ.

“ಬ್ಯಾನರ್ ಬಿಚ್ಚಿಸಿದರೆ ಬೆಂಕಿ ಹಚ್ಚಿಸುವೆ. ನನ್ನ ಒಳ್ಳೆಯತನ ನೋಡಿದ್ದೀರಿ ಕೆಟ್ಟತನ ನೋಡಿಲ್ಲ” ಎಂದು ರಾಜೀವ್‌ಗೌಡ ಪೌರಾಯುಕ್ತೆಗೆ ಧಮ್ಕಿ ಹಾಕಿರುವುದು ವೈರಲ್ ಆಡಿಯೋದಲ್ಲಿದೆ. ಇದಕ್ಕೆ ಪ್ರತಿಕ್ರಿಯಸಿದ ಪೌರಾಯುಕ್ತೆ ಅಮೃತಗೌಡ ಅವರು, “ರಸ್ತೆಯಲ್ಲಿ ಕಟ್ಟಿದ್ದಾರೆ. ಸಾರ್ವಜನಿಕರಿಂದ ದೂರು ಬಂದಿದೆ. ಅನುಮತಿ ಪಡೆಯದೆ ಬ್ಯಾನರ್ ಕಟ್ಟಿದ್ದಾರೆ. ಅಪಘಾತ ಆದರೆ ನಾವು ಹೊಣೆ..” ಎಂದು ಹೇಳಿದ್ದಾರೆ.

ಈ ವೇಳೆ ಮತಷ್ಟು ಕುಪಿತರಾದ ರಾಜೀವ್‌ಗೌಡ, “ಬೆಂಕಿ ಹಚ್ಚುತ್ತೇನೆ, ಚಪ್ಪಲಿಯಲ್ಲಿ ಹೊಡೆಸುತ್ತೇನೆ, ಜನರನ್ನು ದಂಗೆ ಏಳಿಸುತ್ತೇನೆ” ಎಂದಿದ್ದಾರೆ. ಮುಂದುವರಿದು, ಅವಾಚ್ಯ ಶಬ್ದಗಳಿಂದ ಮಹಿಳಾ ಸರ್ಕಾರಿ ಅಧಿಕಾರಿಗೆ ನಿಂದಿಸಿದ್ದಾರೆ.

ರಾಜೀವ್ ಗೌಡ ವಿರುದ್ದ ಪ್ರತಿಭಟನೆ

ಪೌರಾಯುಕ್ತೆ ಅಮೃತಾಗೌಡ ಅವರಿಗೆ ರಾಜೀವ್‌ಗೌಡ ಧಮ್ಕಿ ಹಾಕಿರುವುದನ್ನು ಖಂಡಿಸಿ ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ನಗರಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಬುಧವಾರ (ಜ.14) ಆಯಾ ನಗರ ಸ್ಥಳೀಯ ಸಂಸ್ಥೆಗಳ ಆವರಣದಲ್ಲಿ ಪ್ರತಿಭಟಿಸಿದ್ದಾರೆ ಎಂದು ವರದಿಯಾಗಿದೆ.

ರಾಜೀವ್ ಗೌಡ ಧಮ್ಕಿ ಹಾಕಿರುವ ಆಡಿಯೋವನ್ನು ಜೆಡಿಎಸ್‌ ಪಕ್ಷ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, “ಕಾಂಗ್ರೆಸ್‌ ದುರಾಡಳಿತದಲ್ಲಿ ಕಾಂಗ್ರೆಸ್‌ ಮುಖಂಡರ ಗೂಂಡಾಗಿರಿ ಜೋರಾಗಿದೆ. ಸಚಿವ ಝಮೀರ್ ಅಹ್ಮದ್ ಅವರ ಮಗ ಝೈದ್ ಖಾನ್ ಸಿನಿಮಾದ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್‌ ಮುಖಂಡ ರಾಜೀವ್ ಗೌಡ ಅವಾಚ್ಯವಾಗಿ, ಅಶ್ಲೀಲ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾನೆ” ಎಂದಿದೆ.

ಮುಂದುವರಿದು, “ಶಿಡ್ಲಘಟ್ಟದ ಕೋಟೆ ಸರ್ಕಲ್‌ ರಸ್ತೆಗಳಲ್ಲಿ ಅನುಮತಿ ಪಡೆಯದೆ, ಅಕ್ರಮವಾಗಿ ಫ್ಲೆಕ್ಸ್‌ ಬ್ಯಾನರ್‌ ಅಳವಡಿಸಿದ್ದಕ್ಕೆ, ಪೌರಾಯುಕ್ತೆ ಅಮೃತಗೌಡ ಅವರು, ರಸ್ತೆಯಲ್ಲಿ ಅಪಘಾತ ಹೆಚ್ಚಿದ್ದು, ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಬ್ಯಾನರ್‌ಗಳನ್ನು ತೆರವುಗೊಳಿಸಿದ್ದಾರೆ.
ಇದಕ್ಕೆ ಕಾಂಗ್ರೆಸ್‌ ಮುಖಂಡ ದೂರವಾಣಿ ಕರೆ ಮಾಡಿ, ಬ್ಯಾನರ್‌ ತೆಗೆಸಿದವರನ್ನು ‘ಬೆಂಕಿ ಹಾಕಿ ಸುಟ್ಟು ಹಾಕುತ್ತೇನೆ, ಚಪ್ಪಲಿಯಲ್ಲಿ ಹೊಡೆಸುತ್ತೇನೆ, ಕಾರ್ಯಕರ್ತರನ್ನು ಕರೆಸಿ ದಂಗೆ ಎಬ್ಬಿಸುತ್ತೇನೆ ಎಂದು ಮಹಿಳಾಧಿಕಾರಿಗೆ ಅಶ್ಲೀಲವಾಗಿ ನಿಂದಿಸಿ ಬೆದರಿಕೆಯೊಡ್ಡಿದ್ದಾನೆ” ಎಂದು ಹೇಳಿದೆ.

“ಸಿಎಂ ಸಿದ್ದರಾಮಯ್ಯ , ಗೃಹ ಸಚಿವರ ಪಮೇಶ್ವರ್ ಅವರೇ ಪೌರಾಯುಕ್ತೆಗೆ ಧಮ್ಕಿ ಹಾಗೂ ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್‌ ಗೂಂಡಾ ರಾಜೀವ್‌ ಗೌಡನನ್ನು ತಕ್ಷಣವೇ ಬಂಧಿಸಿ, ಕಾನೂನು ಕ್ರಮ ಜರುಗಿಸಿ. ಕಾಂಗ್ರೆಸ್‌ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರೇ ಕೆಪಿಸಿಸಿ ರಾಜ್ಯ ಸಂಯೋಜಕನಾಗಿರುವ ಬೀದಿ ರೌಡಿ ರಾಜೀವ್‌ ಗೌಡನನ್ನು ಮೊದಲು ಪಕ್ಷದಿಂದ ವಜಾ ಮಾಡಿ” ಎಂದು ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ| ಪಂಚಾಯತ್ ಚುನಾವಣೆಯ ನಂತರ 500 ಬೀದಿ ನಾಯಿಗಳ ಸಾಮೂಹಿಕ ಕೊಲೆ; ‘ನಾಯಿ ಮುಕ್ತ ಗ್ರಾಮ’ದ ಭರವಸೆ ನೀಡಿದ್ದ ಅಭ್ಯರ್ಥಿಗಳು

ತೆಲಂಗಾಣದ ಹನಮಕೊಂಡ ಮತ್ತು ಕಾಮರೆಡ್ಡಿ ಜಿಲ್ಲೆಗಳಿಂದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಜನವರಿಯ ಮೊದಲ ಎರಡು ವಾರಗಳಲ್ಲಿ ಸುಮಾರು 500 ನಾಯಿಗಳನ್ನು ವಿಷ ಹಾಕಿ ಕೊಂದಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ....

ಕಾನ್ಪುರ ದೇಹತ್‌ನಲ್ಲಿ ನೆರೆಯವರ ಹಲ್ಲೆಯಿಂದ ದಲಿತ ರೈತ ಸಾವು; ಆರು ಮಂದಿ ಬಂಧನ

ಉತ್ತರ ಪ್ರದೇಶದ ಕಾನ್ಪುರ ದೇಹತ್ ಜಿಲ್ಲೆಯಲ್ಲಿ 50 ವರ್ಷದ ದಲಿತ ರೈತನೊಬ್ಬ ತನ್ನ ನೆರೆಹೊರೆಯವರು ಮತ್ತು ಅವರ ಸಂಬಂಧಿಕರಿಂದ ಥಳಿತಕ್ಕೊಳಗಾಗಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮತ್ತು ಆತನ...

ಸರ್ಕಾರದ ಅಧಿಕೃತ ದಾಖಲೆಗಳಲ್ಲಿ ‘ಹರಿಜನ-ಗಿರಿಜನ’ ಪದಗಳನ್ನು ನಿಷೇಧಿಸಿದ ಹರಿಯಾಣ ಸರ್ಕಾರ

ಹರಿಯಾಣ ಸರ್ಕಾರವು ತನ್ನ ಎಲ್ಲಾ ಅಧಿಕೃತ ಸಂವಹನಗಳಲ್ಲಿ 'ಹರಿಜನ' ಮತ್ತು 'ಗಿರಿಜನ' ಪದಗಳ ಬಳಕೆಯನ್ನು ನಿಷೇಧಿಸಿದೆ. ಇಲಾಖೆಗಳು 'ಪರಿಶಿಷ್ಟ ಜಾತಿ (ಎಸ್‌ಸಿ)' ಮತ್ತು 'ಪರಿಶಿಷ್ಟ ಪಂಗಡ (ಎಸ್‌ಟಿ)' ಅಥವಾ ಅವುಗಳ ಸಮಾನ ಪದಗಳನ್ನು...

ಐಎಎಸ್ ಅಧಿಕಾರಿ ಮಾನನಷ್ಟ ಮೊಕದ್ದಮೆ ಪ್ರಕರಣ: ಎನ್‌ಟಿವಿ ಸಂಪಾದಕ, ಇಬ್ಬರು ಪತ್ರಕರ್ತರ ಬಂಧನ

ತೆಲಂಗಾಣ ಸರ್ಕಾರದ ರಸ್ತೆ ಮತ್ತು ಕಟ್ಟಡಗಳ ಸಚಿವ ಕೋಮತಿರೆಡ್ಡಿ ವೆಂಕಟ್ ರೆಡ್ಡಿ ಹಾಗೂ ಮಹಿಳಾ ಐಎಎಸ್ ಅಧಿಕಾರಿ ಅವರ ಕುರಿತು ವಿವಾದಾತ್ಮಕ ಸುದ್ದಿ ವರದಿಗೆ ಸಂಬಂಧಿಸಿದಂತೆ, ಹೈದರಾಬಾದ್ ಕೇಂದ್ರ ಅಪರಾಧ ಠಾಣೆ...

ಇರಾನ್: ಪ್ರತಿಭಟನಾಕಾರರ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವಿನ ಸಂಖ್ಯೆ 2571ಕ್ಕೆ ಏರಿಕೆ 

ಇರಾನ್‌ನಲ್ಲಿ ಪ್ರತಿಭಟನೆಗಳ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಕನಿಷ್ಠ 2,571 ಕ್ಕೆ ಏರಿದೆ ಎಂದು ಮಾನವ ಹಕ್ಕುಗಳ ಕಾರ್ಯಕರ್ತರು ಬುಧವಾರ ತಿಳಿಸಿದ್ದಾರೆ. ಈ ಅಂಕಿ ಅಂಶವು ಅಮೆರಿಕ ಮೂಲದ ಮಾನವ ಹಕ್ಕುಗಳ...

ಹಿಂದಿ ಶೈಕ್ಷಣಿಕ ಪದ್ಧತಿ ಹೇರಿಕೆಯಿಂದ ಉತ್ತರದ ಜನರಿಂದ ದಕ್ಷಿಣಕ್ಕೆ ವಲಸೆ: ಮಾರನ್

ಇಂಗ್ಲಿಷ್ ಶಿಕ್ಷಣವನ್ನು ನಿರುತ್ಸಾಹಗೊಳಿಸುತ್ತಾ, ವಿದ್ಯಾರ್ಥಿಗಳು ಹಿಂದಿ ಮಾತ್ರ ಕಲಿಯಲು ಪ್ರೋತ್ಸಾಹಿಸುತ್ತಿದ್ದಾರೆ. ಉತ್ತರ ರಾಜ್ಯಗಳ ಈ ನೀತಿಗಳಿಂದ ಉದ್ಯೋಗ ಸಿಗದೆ ದಕ್ಷಿಣದ ರಾಜ್ಯಗಳಿಗೆ ವಲಸೆ ಬರುತ್ತಿದ್ದಾರೆ ಎಂದು ಡಿಎಂಕೆ ಸಂಸದ ದಯಾನಿಧಿ ಮಾರನ್ ಉತ್ತರ...

ಚಿಕ್ಕಮಗಳೂರು| ದಲಿತರ ಜಮೀನಿಗೆ ನುಗ್ಗಿ ಬೆಳೆ ನಾಶ; ಪ್ರಬಲ ಜಾತಿ ಜನರಿಂದ ವಿನಾಕಾರಣ ತೊಂದರೆ

ಚಿಕ್ಕಮಗಳೂರು ತಾಲೂಕಿನ ಆಲ್ದೂರು ಹೋಬಳಿಯ ಸತ್ತಿಹಳ್ಳಿ ಗ್ರಾಮದ ದಲಿತ ಸಮುದಾಯದ ರೈತರಿಗೆ ಅದೇ ಊರಿನ ಪ್ರಬಲ ಜಾತಿಗೆ ಸೇರಿದ ಜನರು ವಿನಾಕಾರಣ ತೊಂದರೆ ನಿಡುತ್ತಿದ್ದು, ಜಮೀನಿಗೆ ನುಗ್ಗಿ ಬೆಳೆ ನಾಶ ಮಾಡಿದ್ದಾರೆ ಎಂಬ...

ಎಲ್‌ಡಿಎಫ್‌ನ ‘ಕೇರಳಂ’ ಮರುನಾಮಕರಣ ಕ್ರಮ ಬೆಂಬಲಿಸಿದ ರಾಜ್ಯ ಬಿಜೆಪಿ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಮನವಿ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೇರಳ ಘಟಕವು, ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್‌) ಸರ್ಕಾರದ 'ಕೇರಳಂ' ಮರುನಾಕರಣ ಪ್ರಸ್ತಾವನೆಯನ್ನು ಬೆಂಬಲಿಸಿದೆ. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಮಧ್ಯಸ್ಥಿಕೆ ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಲ್ಲಿ...

ರಾಯಚೂರು ಕೃಷಿ ವಿವಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ತಡೆಗೆ ಸಂಚು ಆರೋಪ: ನಿಗದಿತ ದಿನಾಂಕದಂದು ಪರೀಕ್ಷೆ ನಡೆಸಲು ಒತ್ತಾಯ 

ಬೆಂಗಳೂರು: ರಾಯಚೂರು ಕೃಷಿ ವಿವಿಯಲ್ಲಿನ 75 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ನಿಗದಿತ ದಿನಾಂಕಗಳಾದ ಜನವರಿ.17 ಮತ್ತು ಜನವರಿ.18ರಂದೇ ನಡೆಸಬೇಕು. ಪಟ್ಟಭದ್ರ ಹಿತಾಸಕ್ತಿಗಳ ಒತ್ತಾಯಕ್ಕೆ ಮಣಿದು ಪರೀಕ್ಷೆಯನ್ನು ಮುಂದೂಡಬಾರದು ಎಂದು ಅಭ್ಯರ್ಥಿಗಳು...

ಸಂಭಾಲ್ ಹಿಂಸಾಚಾರ ಪ್ರಕರಣ : ಹಿರಿಯ ಅಧಿಕಾರಿಗಳು ಸೇರಿ 12 ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

2024ರ ನವೆಂಬರ್‌ನಲ್ಲಿ ಶಾಹಿ ಜಾಮಾ ಮಸೀದಿ ಬಳಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಪಾತ್ರವಿದೆ ಎಂಬ ಆರೋಪದ ಮೇಲೆ ಹಿರಿಯ ಅಧಿಕಾರಿಗಳು ಸೇರಿದಂತೆ 12 ಪೊಲೀಸ್ ಸಿಬ್ಬಂದಿಯ ವಿರುದ್ಧ ಕ್ರಿಮಿನಲ್...