Homeಮುಖಪುಟಐಎಎಸ್ ಅಧಿಕಾರಿ ಮಾನನಷ್ಟ ಮೊಕದ್ದಮೆ ಪ್ರಕರಣ: ಎನ್‌ಟಿವಿ ಸಂಪಾದಕ, ಇಬ್ಬರು ಪತ್ರಕರ್ತರ ಬಂಧನ

ಐಎಎಸ್ ಅಧಿಕಾರಿ ಮಾನನಷ್ಟ ಮೊಕದ್ದಮೆ ಪ್ರಕರಣ: ಎನ್‌ಟಿವಿ ಸಂಪಾದಕ, ಇಬ್ಬರು ಪತ್ರಕರ್ತರ ಬಂಧನ

- Advertisement -
- Advertisement -

ತೆಲಂಗಾಣ ಸರ್ಕಾರದ ರಸ್ತೆ ಮತ್ತು ಕಟ್ಟಡಗಳ ಸಚಿವ ಕೋಮತಿರೆಡ್ಡಿ ವೆಂಕಟ್ ರೆಡ್ಡಿ ಹಾಗೂ ಮಹಿಳಾ ಐಎಎಸ್ ಅಧಿಕಾರಿ ಅವರ ಕುರಿತು ವಿವಾದಾತ್ಮಕ ಸುದ್ದಿ ವರದಿಗೆ ಸಂಬಂಧಿಸಿದಂತೆ, ಹೈದರಾಬಾದ್ ಕೇಂದ್ರ ಅಪರಾಧ ಠಾಣೆ (ಸಿಸಿಎಸ್) ಜನವರಿ 13 ರ ಮಂಗಳವಾರ ರಾತ್ರಿ ಎನ್‌ಟಿವಿ ಇನ್‌ಪುಟ್ ಸಂಪಾದಕ ಮತ್ತು ಹಿರಿಯ ಪತ್ರಕರ್ತ ಡೊಂತು ರಮೇಶ್, ವರದಿಗಾರರಾದ ಪರಿಪೂರ್ಣಾ ಚಾರಿ ಮತ್ತು ಸುಧೀರ್ ಅವರನ್ನು ಬಂಧಿಸಿದೆ.

ತಮ್ಮ ಕುಟುಂಬದೊಂದಿಗೆ ರಜೆಗೆ ತೆರಳುತ್ತಿದ್ದ ರಮೇಶ್ ಅವರನ್ನು ವಿಮಾನ ಹತ್ತುವಾಗ ಹೈದರಾಬಾದ್ ವಿಮಾನ ನಿಲ್ದಾಣದಿಂದ ಕರೆದೊಯ್ಯಲಾಯಿತು. ವರದಿಗಳ ಪ್ರಕಾರ, ಮೂವರನ್ನು ಜನವರಿ 14 ರ ಗುರುವಾರ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ.

ಇತ್ತೀಚೆಗೆ, ಸ್ಥಳೀಯ ಚಾನೆಲ್‌ಗಳು ಕೋಮತಿರೆಡ್ಡಿ ಮಹಿಳಾ ಐಎಎಸ್ ಅಧಿಕಾರಿಯೊಂದಿಗೆ ‘ವ್ಯವಹಾರ’ದಲ್ಲಿ ಭಾಗಿಯಾಗಿದ್ದಾರೆ ಎಂಬ ವರದಿಗಳನ್ನು ಪ್ರಸಾರ ಮಾಡಿದ್ದವು, ಇದರಿಂದಾಗಿ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ.

ಜನವರಿ 8 ರಂದು ವಿಶೇಷ ಮುಖ್ಯ ಕಾರ್ಯದರ್ಶಿ ಜಯೇಶ್ ರಂಜನ್ ಅವರು ಸಲ್ಲಿಸಿದ ದೂರಿನ ನಂತರ ಈ ಬಂಧನವಾಗಿದೆ. ವರದಿಯು ಸಂಪೂರ್ಣವಾಗಿ ಸುಳ್ಳು, ಕಟ್ಟುಕಥೆ ಮತ್ತು ಆಧಾರರಹಿತ ಎಂದು ಆರೋಪಿಸಿದ್ದಾರೆ. ತೆಲಂಗಾಣ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಸಂಘವು ಎನ್‌ಟಿವಿ, ತೆಲುಗು ಸ್ಕ್ರೈಬ್, ಎಂಆರ್ ಮೀಡಿಯಾ ತೆಲಂಗಾಣ, ಪ್ರೈಮ್ 9 ತೆಲಂಗಾಣ, ಪಿವಿನ್ಯೂಸ್, ಸಿಗ್ನಲ್ ಟಿವಿ, ವೋಲ್ಗಾ ಟೈಮ್ಸ್, ಮಿರರ್‌ಟೈಆಫೀಶಿಯಲ್ ಮತ್ತು ಟಿನ್ಯೂಸ್ ತೆಲುಗು ಸೇರಿದಂತೆ ಹಲವಾರು ಖಾಸಗಿ ಸುದ್ದಿ ವಾಹಿನಿಗಳ ವಿರುದ್ಧ ದೂರು ದಾಖಲಿಸಿದೆ.

ಭಾರತೀಯ ನ್ಯಾಯ ಸಂಹಿತ (ಬಿಎನ್‌ಎಸ್) ನ ಸೆಕ್ಷನ್ 75 (ಲೈಂಗಿಕ ಕಿರುಕುಳ), 78 (ಹಿಂಬಾಲಿಸುವುದು), 79 (ಪದ, ಸನ್ನೆ, ಧ್ವನಿ ಅಥವಾ ನಮ್ರತೆಯನ್ನು ಅವಮಾನಿಸುವ ಅಥವಾ ಗೌಪ್ಯತೆಗೆ ಒಳನುಗ್ಗುವ ಉದ್ದೇಶದ ಕೃತ್ಯ), 351(1) (ಕ್ರಿಮಿನಲ್ ಬೆದರಿಕೆ) ಮತ್ತು 352 (2) (ಶಾಂತಿ ಉಲ್ಲಂಘನೆ ಅಥವಾ ಇನ್ನೊಂದು ಅಪರಾಧವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗಿದೆ.

ಶೀಘ್ರದಲ್ಲೇ, ತೆಲಂಗಾಣ ಪೊಲೀಸರು ಹೈದರಾಬಾದ್ ನಗರ ಪೊಲೀಸ್ ಆಯುಕ್ತ ವಿಸಿ ಸಜ್ಜನರ್ ನೇತೃತ್ವದಲ್ಲಿ ಎಂಟು ಸದಸ್ಯರ ವಿಶೇಷ ತನಿಖಾ ತಂಡ (ಎಸ್‌ಐಟಿ) ಅನ್ನು ರಚಿಸಿದರು.

ಎರಡು ದಿನಗಳ ಹಿಂದೆ, ತೆಲಂಗಾಣ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಸಂಘವು ಈ ಪ್ರಸಾರವನ್ನು ‘ಪತ್ರಿಕೋದ್ಯಮದ ಹೆಸರಿನಲ್ಲಿ ವ್ಯಕ್ತಿತ್ವ ಹರಣ’ ಎಂದು ಬಣ್ಣಿಸಿದೆ. ಮಹಿಳಾ ಐಎಎಸ್ ಅಧಿಕಾರಿಗಳು ಮತ್ತು ಸಚಿವರನ್ನು ಗುರಿಯಾಗಿಸಿಕೊಂಡು ಪ್ರಕಟಿಸಿದ ಮಾನಹಾನಿ ಸುದ್ದಿಗೆ ಸಾರ್ವಜನಿಕ ಕ್ಷಮೆಯಾಚಿಸುವಂತೆ ಒತ್ತಾಯಿಸಿತು. “ಈ ವಿಷಯವು ಗೌಪ್ಯತೆಯನ್ನು ಉಲ್ಲಂಘಿಸಿದೆ, ಸಾರ್ವಜನಿಕ ಸೇವೆಯಲ್ಲಿರುವ ಮಹಿಳೆಯರ ವಿರುದ್ಧ ಕೆಡ್ಡ ನಿರೂಪಣೆಯನ್ನು ಉತ್ತೇಜಿಸಿದೆ, ವ್ಯಕ್ತಿತ್ವ ವಿನಾಶಕ್ಕೆ ಸಮಾನವಾಗಿದೆ. ನಾವು ಅದನ್ನು ತಕ್ಷಣ ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸುತ್ತೇವೆ” ಎಂದು ಅವರ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಪತ್ರಕರ್ತರ ಬಂಧ ಖಂಡಿಸಿದ ಕೆಟಿಆರ್

ಈ ಮಧ್ಯೆ, ಬಂಧನಗಳು ವಿರೋಧ ಪಕ್ಷದ ನಾಯಕರಾದ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಕಾರ್ಯಾಧ್ಯಕ್ಷ ಕೆಟಿ ರಾಮರಾವ್ (ಕೆಟಿಆರ್) ಮತ್ತು ಸಿದ್ದಿಪೇಟೆ ಶಾಸಕ ಹರೀಶ್ ರಾವ್ ಅವರಿಂದ ತೀವ್ರ ಖಂಡನೆಗೆ ಕಾರಣವಾಯಿತು.

ಸರ್ಕಾರ ಪತ್ರಕರ್ತರನ್ನು ಅಪರಾಧಿಗಳಂತೆ ನಡೆಸಿಕೊಳ್ಳುತ್ತಿದೆ ಎಂದು ಹೇಳಿದ ಕೆಟಿಆರ್, ಪರಿಸ್ಥಿತಿಯನ್ನು 1975-1977ರ ಭಾರತದಲ್ಲಿ ತುರ್ತು ಪರಿಸ್ಥಿತಿಗೆ ಹೋಲಿಸಿದರು.

“ನೀವು ಅವರಿಗೆ ನೋಟಿಸ್ ನೀಡಿ ತನಿಖೆಗೆ ಕರೆಯಬಹುದಿತ್ತು. ಮಧ್ಯರಾತ್ರಿ ಪತ್ರಕರ್ತರ ಮನೆಗಳಿಗೆ ಹೋಗುವುದು ಖಂಡಿತವಾಗಿಯೂ ಕಷ್ಟ! ಬಂಧಿತ ಪತ್ರಕರ್ತರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ನಾನು ಒತ್ತಾಯಿಸುತ್ತೇನೆ. ಯಾವುದೇ ಸೆಕ್ಷನ್‌ಗಳು ಜಾಮೀನು ರಹಿತವಾಗಿಲ್ಲ, ಹಾಗಾದರೆ ತೆಲಂಗಾಣ ಪೊಲೀಸರು ಈ ಮಧ್ಯರಾತ್ರಿ ಬಂಧನಗಳ ಮೂಲಕ ಪತ್ರಕರ್ತರು ಮತ್ತು ಅವರ ಕುಟುಂಬಗಳನ್ನು ಭಯಭೀತಗೊಳಿಸಲು ಏಕೆ ನಿರ್ಧರಿಸಿದರು? ತೆಲಂಗಾಣ ಡಿಜಿಪಿ ಸೂಕ್ತ ಕಾನೂನು ಪ್ರಕ್ರಿಯೆಯನ್ನು ಅನುಸರಿಸಬೇಕೆಂದು ಮತ್ತು ಕಾಂಗ್ರೆಸ್ ಪಕ್ಷ ಮತ್ತು ಅದರ ನೀಚ ನಾಯಕತ್ವದ ಕೊಳಕು ರಾಜಕೀಯದಲ್ಲಿ ಭಾಗಿಯಾಗದಂತೆ ನಾನು ವಿನಂತಿಸುತ್ತೇನೆ” ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪ್ರಜಾಪ್ರಭುತ್ವದ ಕೊಲೆ ಎಂದು ಕರೆದ ಹರೀಶ್ ರಾವ್

“ಮನೆಗಳಿಗೆ ನುಗ್ಗಿ ಮಧ್ಯರಾತ್ರಿ ಬಂಧನಗಳನ್ನು ಮಾಡುತ್ತಾರೆ ಎಂಬ ಕಾರಣಕ್ಕಾಗಿ ಅವರು ಕಟ್ಟಾ ಭಯೋತ್ಪಾದಕರೇ? ಪತ್ರಕರ್ತರ ಬಂಧನವನ್ನು ನಾವು ಬಲವಾಗಿ ಖಂಡಿಸುತ್ತೇವೆ. ಇದು ರೇವಂತ್ ರೆಡ್ಡಿ ಸರ್ಕಾರದಿಂದ ಪ್ರಜಾಪ್ರಭುತ್ವದ ಮೇಲೆ ನಡೆದ ದಾಳಿಯಾಗಿದೆ” ಎಂದು ಅವರು ತಮ್ಮ ಸಾಮಾಜಿಕ ಮಾಧ್ಯಮ ಪುಟದಲ್ಲಿ ಹಂಚಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್: ಗಾಳಿಪಟದ ದಾರ ಕುತ್ತಿಗೆ ಸೀಳಿ ಸ್ಥಳದಲ್ಲಿ ಪ್ರಾಣ ಬಿಟ್ಟ 48 ವರ್ಷದ ಬೈಕ್ ಸವಾರ

ಬೀದರ್ ಜಿಲ್ಲೆಯ ತಲಮಡಗಿ ಸೇತುವೆ ಬಳಿಯ ರಸ್ತೆಯಲ್ಲಿ ಮಗಳನ್ನು ಕರೆತರಲು ಬೈಕ್ ನಲ್ಲಿ ತೆರಳುತ್ತಿದ್ದ 48 ವರ್ಷದ ವ್ಯಕ್ತಿ ಕೊರಳಿಗೆ ಗಾಳಿ ಪಟದ ದಾರ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ನಡೆದಿದೆ.  ಮೃತ...

ಐ-ಪ್ಯಾಕ್ ಮೇಲಿನ ದಾಳಿ: ಟಿಎಂಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕಲ್ಕತ್ತಾ ಹೈಕೋರ್ಟ್

ಐ-ಪಿಎಸಿಗೆ ಸಂಬಂಧಿಸಿದ ಇತ್ತೀಚಿನ ದಾಳಿಗಳ ಸಂದರ್ಭದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಪಕ್ಷದ ಫೈಲ್‌ಗಳು ಮತ್ತು ಚುನಾವಣಾ ಸಂಬಂಧಿತ ಡೇಟಾವನ್ನು ವಶಪಡಿಸಿಕೊಂಡಿದೆ ಎಂದು ಆರೋಪಿಸಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಲ್ಲಿಸಿದ್ದ ಅರ್ಜಿಯನ್ನು ಕಲ್ಕತ್ತಾ ಹೈಕೋರ್ಟ್...

ತೆಲಂಗಾಣ| ಪಂಚಾಯತ್ ಚುನಾವಣೆಯ ನಂತರ 500 ಬೀದಿ ನಾಯಿಗಳ ಸಾಮೂಹಿಕ ಕೊಲೆ; ‘ನಾಯಿ ಮುಕ್ತ ಗ್ರಾಮ’ದ ಭರವಸೆ ನೀಡಿದ್ದ ಅಭ್ಯರ್ಥಿಗಳು

ತೆಲಂಗಾಣದ ಹನಮಕೊಂಡ ಮತ್ತು ಕಾಮರೆಡ್ಡಿ ಜಿಲ್ಲೆಗಳಿಂದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಜನವರಿಯ ಮೊದಲ ಎರಡು ವಾರಗಳಲ್ಲಿ ಸುಮಾರು 500 ನಾಯಿಗಳನ್ನು ವಿಷ ಹಾಕಿ ಕೊಂದಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ....

ಕಾನ್ಪುರ ದೇಹತ್‌ನಲ್ಲಿ ನೆರೆಯವರ ಹಲ್ಲೆಯಿಂದ ದಲಿತ ರೈತ ಸಾವು; ಆರು ಮಂದಿ ಬಂಧನ

ಉತ್ತರ ಪ್ರದೇಶದ ಕಾನ್ಪುರ ದೇಹತ್ ಜಿಲ್ಲೆಯಲ್ಲಿ 50 ವರ್ಷದ ದಲಿತ ರೈತನೊಬ್ಬ ತನ್ನ ನೆರೆಹೊರೆಯವರು ಮತ್ತು ಅವರ ಸಂಬಂಧಿಕರಿಂದ ಥಳಿತಕ್ಕೊಳಗಾಗಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮತ್ತು ಆತನ...

ಸರ್ಕಾರದ ಅಧಿಕೃತ ದಾಖಲೆಗಳಲ್ಲಿ ‘ಹರಿಜನ-ಗಿರಿಜನ’ ಪದಗಳನ್ನು ನಿಷೇಧಿಸಿದ ಹರಿಯಾಣ ಸರ್ಕಾರ

ಹರಿಯಾಣ ಸರ್ಕಾರವು ತನ್ನ ಎಲ್ಲಾ ಅಧಿಕೃತ ಸಂವಹನಗಳಲ್ಲಿ 'ಹರಿಜನ' ಮತ್ತು 'ಗಿರಿಜನ' ಪದಗಳ ಬಳಕೆಯನ್ನು ನಿಷೇಧಿಸಿದೆ. ಇಲಾಖೆಗಳು 'ಪರಿಶಿಷ್ಟ ಜಾತಿ (ಎಸ್‌ಸಿ)' ಮತ್ತು 'ಪರಿಶಿಷ್ಟ ಪಂಗಡ (ಎಸ್‌ಟಿ)' ಅಥವಾ ಅವುಗಳ ಸಮಾನ ಪದಗಳನ್ನು...

ಇರಾನ್: ಪ್ರತಿಭಟನಾಕಾರರ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವಿನ ಸಂಖ್ಯೆ 2571ಕ್ಕೆ ಏರಿಕೆ 

ಇರಾನ್‌ನಲ್ಲಿ ಪ್ರತಿಭಟನೆಗಳ ಮೇಲೆ ನಡೆದ ದಮನ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಕನಿಷ್ಠ 2,571 ಕ್ಕೆ ಏರಿದೆ ಎಂದು ಮಾನವ ಹಕ್ಕುಗಳ ಕಾರ್ಯಕರ್ತರು ಬುಧವಾರ ತಿಳಿಸಿದ್ದಾರೆ. ಈ ಅಂಕಿ ಅಂಶವು ಅಮೆರಿಕ ಮೂಲದ ಮಾನವ ಹಕ್ಕುಗಳ...

ಕಾಂಗ್ರೆಸ್‌ ಮುಖಂಡನ ಗೂಂಡಾವರ್ತನೆ : ಫ್ಲೆಕ್ಸ್‌ ತೆರವುಗೊಳಿಸಿದ್ದಕ್ಕೆ ಪೌರಾಯುಕ್ತೆಗೆ ಧಮ್ಕಿ, ಅವಾಚ್ಯ ಶಬ್ದಗಳಿಂದ ನಿಂದನೆ

ಸಚಿವ ಝಮೀರ್ ಅಹ್ಮದ್ ಅವರ ಮಗ ಝೈದ್ ಖಾನ್ ನಟನೆಯ 'ಕಲ್ಟ್' ಸಿನಿಮಾದ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ ವಿಚಾರವಾಗಿ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಜಿ. ಅಮೃತಗೌಡ ಅವರೊಂದಿಗೆ ಗೂಂಡಾವರ್ತನೆ...

ಹಿಂದಿ ಶೈಕ್ಷಣಿಕ ಪದ್ಧತಿ ಹೇರಿಕೆಯಿಂದ ಉತ್ತರದ ಜನರಿಂದ ದಕ್ಷಿಣಕ್ಕೆ ವಲಸೆ: ಮಾರನ್

ಇಂಗ್ಲಿಷ್ ಶಿಕ್ಷಣವನ್ನು ನಿರುತ್ಸಾಹಗೊಳಿಸುತ್ತಾ, ವಿದ್ಯಾರ್ಥಿಗಳು ಹಿಂದಿ ಮಾತ್ರ ಕಲಿಯಲು ಪ್ರೋತ್ಸಾಹಿಸುತ್ತಿದ್ದಾರೆ. ಉತ್ತರ ರಾಜ್ಯಗಳ ಈ ನೀತಿಗಳಿಂದ ಉದ್ಯೋಗ ಸಿಗದೆ ದಕ್ಷಿಣದ ರಾಜ್ಯಗಳಿಗೆ ವಲಸೆ ಬರುತ್ತಿದ್ದಾರೆ ಎಂದು ಡಿಎಂಕೆ ಸಂಸದ ದಯಾನಿಧಿ ಮಾರನ್ ಉತ್ತರ...

ಚಿಕ್ಕಮಗಳೂರು| ದಲಿತರ ಜಮೀನಿಗೆ ನುಗ್ಗಿ ಬೆಳೆ ನಾಶ; ಪ್ರಬಲ ಜಾತಿ ಜನರಿಂದ ವಿನಾಕಾರಣ ತೊಂದರೆ

ಚಿಕ್ಕಮಗಳೂರು ತಾಲೂಕಿನ ಆಲ್ದೂರು ಹೋಬಳಿಯ ಸತ್ತಿಹಳ್ಳಿ ಗ್ರಾಮದ ದಲಿತ ಸಮುದಾಯದ ರೈತರಿಗೆ ಅದೇ ಊರಿನ ಪ್ರಬಲ ಜಾತಿಗೆ ಸೇರಿದ ಜನರು ವಿನಾಕಾರಣ ತೊಂದರೆ ನಿಡುತ್ತಿದ್ದು, ಜಮೀನಿಗೆ ನುಗ್ಗಿ ಬೆಳೆ ನಾಶ ಮಾಡಿದ್ದಾರೆ ಎಂಬ...

ಎಲ್‌ಡಿಎಫ್‌ನ ‘ಕೇರಳಂ’ ಮರುನಾಮಕರಣ ಕ್ರಮ ಬೆಂಬಲಿಸಿದ ರಾಜ್ಯ ಬಿಜೆಪಿ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಮನವಿ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೇರಳ ಘಟಕವು, ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್‌) ಸರ್ಕಾರದ 'ಕೇರಳಂ' ಮರುನಾಕರಣ ಪ್ರಸ್ತಾವನೆಯನ್ನು ಬೆಂಬಲಿಸಿದೆ. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಮಧ್ಯಸ್ಥಿಕೆ ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಲ್ಲಿ...