Homeಮುಖಪುಟಭೋಪಾಲ್‌| ಪುರಸಭೆಯ ಕಸಾಯಿಖಾನೆಯಲ್ಲಿ ಗೋಮಾಂಸ ಪತ್ತೆ; ಕಾಂಗ್ರೆಸ್‌-ಬಿಜೆಪಿ ಪ್ರತಿಭಟನೆ

ಭೋಪಾಲ್‌| ಪುರಸಭೆಯ ಕಸಾಯಿಖಾನೆಯಲ್ಲಿ ಗೋಮಾಂಸ ಪತ್ತೆ; ಕಾಂಗ್ರೆಸ್‌-ಬಿಜೆಪಿ ಪ್ರತಿಭಟನೆ

- Advertisement -
- Advertisement -

ಪುರಸಭೆಯ ಕಸಾಯಿಖಾನೆಯಲ್ಲಿ ಗೋಹತ್ಯೆ ನಡೆದಿದೆ ಎಂಬುದನ್ನು ಅಧಿಕಾರಿಗಳು ಮತ್ತೆಹಚ್ಚಿದ ನಂತರ ದೊಡ್ಡ ವಿವಾದ ಭುಗಿಲೆದ್ದಿರುವ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ. ಹಿಂದೂ ಬಲಪಂಥೀಯ ಸಂಘಟನೆಗಳು ಮತ್ತು ವಿರೋಧ ಪಕ್ಷದ ಕಾಂಗ್ರೆಸ್ ಕಾರ್ಯಕರ್ತರಿಂದ ವ್ಯಾಪಕ ಪ್ರತಿಭಟನೆ ನಡೆಸಿವೆ.

ಡಿಸೆಂಬರ್ 17, 2025 ರಂದು, ಸಂಸ್ಕೃತಿ ಬಚಾವೊ ಮಂಚ್ ಮತ್ತು ಹಿಂದೂ ಉತ್ಸವ ಸಮಿತಿ ಸೇರಿದಂತೆ ಕೇಸರಿ ಸಂಘಟನೆಗಳ ಕಾರ್ಯಕರ್ತರು ಜಹಾಂಗೀರಾಬಾದ್‌ನ ರಾಜ್ಯ ಪೊಲೀಸ್ ಪ್ರಧಾನ ಕಚೇರಿಯ ಬಳಿ 25 ಟನ್‌ಗಳಿಗೂ ಹೆಚ್ಚು ಮಾಂಸವನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ತಡೆದಿದ್ದಾರೆ. ಆರಂಭದಲ್ಲಿ, ಭೋಪಾಲ್ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ವೈದ್ಯ ಬೇನಿ ಪ್ರಸಾದ್ ಗೌರ್ ಈ ಮಾಂಸವನ್ನು ಎಮ್ಮೆ ಎಂದು ಪ್ರಮಾಣೀಕರಿಸಿದರು. ಆದರೆ, ನಂತರ ಮಥುರಾದ ಪಶುವೈದ್ಯಕೀಯ ಕಾಲೇಜು ಪ್ರಯೋಗಾಲಯದಲ್ಲಿ ನಡೆದ ವಿಧಿವಿಜ್ಞಾನ ಪರೀಕ್ಷೆಯು ಇದು ಹಸು ಅಥವಾ ಸಂತತಿಯ ಮಾಂಸ ಎಂದು ದೃಢಪಡಿಸಿತು. ಮಧ್ಯಪ್ರದೇಶದಲ್ಲಿ ಗೋಹತ್ಯೆಯನ್ನು ನಿಷೇಧಿಸಲಾಗಿದ್ದು, ಕಠಿಣ ದಂಡವನ್ನು ವಿಧಿಸಲಾಗುತ್ತದೆ.

ಮಾಂಸವು ಜಿನ್ಸಿಯಲ್ಲಿರುವ ಬಿಎಂಸಿ ನಿರ್ವಹಿಸುವ ಕಸಾಯಿಖಾನೆಯಿಂದ ತರಲಾಗಿದೆ ಎಂದು ಪೊಲೀಸ್ ತನಿಖೆಯಿಂದ ಬಹಿರಂಗವಾಗಿದೆ. ಇಲ್ಲಿ ಎಮ್ಮೆಗಳನ್ನು ಮಾತ್ರ ಕತ್ತರಿಸುವ ಅನುಮತಿ ಇದೆ. ಮಾಂಸ ವಿವಾದದ ಬಳಿಕ, ಬಿಎಂಸಿಯು ಜನವರಿ 9 ರಂದು ಕಸಾಯಿಖಾನೆಯನ್ನು ಮುಚ್ಚಿತು.

ಮಂಗಳವಾರ, ಮಧ್ಯಪ್ರದೇಶ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಕೈಲಾಶ್ ವಿಜಯವರ್ಗಿಯ ಅವರು ಡಾ. ಬೇಣಿ ಪ್ರಸಾದ್ ಗೌರ್ ಅವರನ್ನು ತಕ್ಷಣ ಅಮಾನತುಗೊಳಿಸುವಂತೆ ಆದೇಶಿಸಿದರು. ನಾಗರಿಕ ಸಂಸ್ಥೆಯಿಂದ ಆಳವಾದ ತನಿಖೆಗೆ ಆದೇಶಿಸಿದರು. ಪುರಸಭೆಯ ಸಿಬ್ಬಂದಿಯ ಸಂಭಾವ್ಯ ಪಿತೂರಿಯನ್ನು ಪರಿಶೀಲಿಸುವುದು ಸೇರಿದಂತೆ ಪೊಲೀಸ್ ತನಿಖೆಗಳು ನಡೆಯುತ್ತಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಮೊದಲೇ ಬಂಧಿಸಲಾಗಿತ್ತು.

ಈ ಪ್ರಕರಣವು ಭೋಪಾಲ್‌ನಾದ್ಯಂತ ಭಾರಿ ಪ್ರತಿಭಟನೆಗೆ ಕಾರಣವಾಗಿದೆ. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಗೋಹತ್ಯೆ ಮತ್ತು ಅಕ್ರಮ ಮಾಂಸ ಸಾಗಣೆಯಲ್ಲಿ ತೊಡಗಿರುವವರನ್ನು ರಕ್ಷಿಸುತ್ತಿದೆ ಎಂದು ಆರೋಪಿಸಿ ಬಜರಂಗ ದಳ, ಕರ್ಣಿ ಸೇನಾ ಮತ್ತು ಇತರ ಕೇಸರಿ ಗುಂಪುಗಳ ಕಾರ್ಯಕರ್ತರು ಸೋಮವಾರ ಮತ್ತು ಮಂಗಳವಾರ ಪ್ರತಿಭಟನೆ ನಡೆಸಿದರು. ಡಿಸೆಂಬರ್‌ನಿಂದ ಪದೇ ಪದೇ ಎಚ್ಚರಿಕೆಗಳನ್ನು ನಿರ್ಲಕ್ಷಿಸುತ್ತಿರುವ ಬಿಎಂಸಿ ಮತ್ತು ನಗರ ಅಧಿಕಾರಿಗಳನ್ನು ವಿರೋಧಿಸಿ ಕಾಂಗ್ರೆಸ್ ನಾಯಕರು ಸಹ ಬಲಪಂಥೀಯ ಗುಂಪುಗಳ ಪ್ರತಿಭನೆಗೆ ಕೈಜೋಡಿದ್ದಾರೆ.

“ನಮ್ಮ ಭಾವನೆಗಳಿಗೆ ನೋವುಂಟು ಮಾಡಲಾಗಿದೆ; ಇದನ್ನು ಸಹಿಸುವುದಿಲ್ಲ. ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮುಖ್ಯಮಂತ್ರಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಲಾಗುತ್ತಿದೆ” ಎಂದು ಜೈ ಮಾ ಭವಾನಿ ಹಿಂದೂ ಸಂಘಟನೆಯ ಭಾನು ಹೇಳಿದರು. ಅಕ್ಟೋಬರ್ 2025 ರಲ್ಲಿ ಕಾರ್ಯಾಚರಣೆ ಆರಂಭಿಸಿದ ಕಸಾಯಿಖಾನೆಯನ್ನು ಕೆಡವಲು ಮತ್ತು ಪ್ರಮುಖ ಆರೋಪಿ ಅಸ್ಲಾಂ ‘ಚಮ್ದಾ’ ಖುರೇಷಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸುತ್ತಿದ್ದಾರೆ.

ಈ ವಿವಾದವು ಬಿಎಂಸಿಯಲ್ಲಿಯೂ ಕೋಲಾಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಕಾರ್ಪೊರೇಟರ್‌ಗಳು ಸಹ ಆಕ್ಷೇಪಿಸಿದ್ದಾರೆ. ವಿರೋಧ ಪಕ್ಷದ ನಾಯಕ ಎಸ್. ಝಾಕಿ, “ನಾವು ಡಿಸೆಂಬರ್‌ನಿಂದ ಈ ವಿಷಯವನ್ನು ಎಲ್ಲರ ಗಮನಕ್ಕೆ ತರಲು ಪ್ರಯತ್ನಿಸುತ್ತಿದ್ದೇವೆ, ಆದರೆ ಅವರು ಕಿವುಡಾಗಿದೆ. ಈಗಲೂ ಯಾವುದೇ ಕ್ರಮ ಕೈಗೊಳ್ಳದಿದ್ದರೆ, ನಾವು ಬಲವಾದ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ” ಎಂದು ಹೇಳಿದರು.

ಯಾವುದೇ ಕಠಿಣ ಕ್ರಮ ಕೈಗೊಳ್ಳದಿದ್ದರೆ ರಾಜೀನಾಮೆ ನೀಡುವುದಾಗಿ ಬಿಜೆಪಿ ಕಾರ್ಪೊರೇಟರ್ ದೇವೇಂದ್ರ ಭಾರ್ಗವ ಬೆದರಿಕೆ ಹಾಕಿದರು. “ನಮ್ಮ ನಗರದಲ್ಲಿ ಘಟನೆ ಸಂಭವಿಸಿದ್ದು ಗಮನಕ್ಕೆ ಬಾರದೆ ಇರುವುದು ನಾಚಿಕೆಗೇಡಿನ ಸಂಗತಿ. ನಾನು ನಿಗಮಕ್ಕೆ ಗಡುವು ನೀಡಿದ್ದೇನೆ. ಯಾವುದೇ ಕ್ರಮ ಕೈಗೊಳ್ಳದಿದ್ದರೆ, ನಾನು ರಾಜೀನಾಮೆ ನೀಡುತ್ತೇನೆ” ಎಂದು ಹೇಳಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಬಿಎಂಸಿ ಅಧ್ಯಕ್ಷ ಕಿಶನ್ ಸೂರ್ಯವಂಶಿ, ಮೇಯರ್ ಮಾಲ್ತಿ ರೈ ಮತ್ತು ಸ್ಥಳೀಯ ಶಾಸಕ ಮತ್ತು ಕ್ಯಾಬಿನೆಟ್ ಸಚಿವ ವಿಶ್ವಾಸ್ ಸಾರಂಗ್ ಸಾರ್ವಜನಿಕರಿಗೆ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. “ಗೋಹತ್ಯೆ ಅಥವಾ ಗೋಮಾಂಸ ವ್ಯಾಪಾರಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಯಾರನ್ನೂ ಬಿಡಲಾಗುವುದಿಲ್ಲ. ವ್ಯಾಪಾರಿಯಾಗಲಿ ಅಥವಾ ಅಧಿಕಾರಿಯಾಗಲಿ, ತಪ್ಪಿತಸ್ಥರೆಂದು ಕಂಡುಬಂದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಸ್ಪಷ್ಟ ಮತ್ತು ದೃಢವಾದ ಸೂಚನೆಗಳನ್ನು ನೀಡಿದ್ದಾರೆ” ಎಂದು ಅವರು ಹೇಳಿದರು.

ಈ ಮಧ್ಯೆ, ಕಸಾಯಿಖಾನೆಯಿಂದ ಕೆಲವು ಮಾಂಸವನ್ನು ಮಹಾರಾಷ್ಟ್ರ ಮತ್ತು ಚೆನ್ನೈ ಮೂಲಕ ಯುಎಇ ಸೇರಿದಂತೆ ಗಲ್ಫ್ ರಾಷ್ಟ್ರಗಳಿಗೆ ರಫ್ತು ಮಾಡಿರಬಹುದು ಎಂದು ದೃಢೀಕರಿಸದ ವರದಿಗಳು ಸೂಚಿಸುತ್ತವೆ. ನಗರದಾದ್ಯಂತ ಪ್ರತಿಭಟನೆ ಮತ್ತು ಸಾರ್ವಜನಿಕ ಆಕ್ರೋಶ ಮುಂದುವರಿದಂತೆ ಈ ಆರೋಪಗಳ ಕುರಿತು ತನಿಖೆ ನಡೆಯುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....