Homeಮುಖಪುಟವಿಧಾನಸಭೆ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

ವಿಧಾನಸಭೆ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

- Advertisement -
- Advertisement -

2027 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸೇರಿದಂತೆ ದೇಶಾದ್ಯಂತ ಎಲ್ಲಾ ಚುನಾವಣೆಗಳಲ್ಲಿ ತಮ್ಮ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ. ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಅಧ್ಯಕ್ಷೆ ಮಾಯಾವತಿ ಗುರುವಾರ ಹೇಳಿದ್ದಾರೆ.

ತಮ್ಮ 70 ನೇ ಹುಟ್ಟುಹಬ್ಬದಂದು ಲಕ್ನೋದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಾಯಾವತಿ, ಎಲ್ಲಾ ಸಣ್ಣ ಮತ್ತು ದೊಡ್ಡ ಚುನಾವಣೆಗಳನ್ನು ಸ್ವತಂತ್ರವಾಗಿ ಎದುರಿಸುವುದು ಹೆಚ್ಚು ಸೂಕ್ತ. ಯಾವುದೇ ಪಕ್ಷದೊಂದಿಗೆ ಯಾವುದೇ ರೀತಿಯ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಪಕ್ಷ ನಿರ್ಧರಿಸಿದೆ ಎಂದು ಹೇಳಿದರು.

“ಈ ಬಗ್ಗೆ ಯಾವುದೇ ಗೊಂದಲ ಇರಬಾರದು. ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಉತ್ತರ ಪ್ರದೇಶದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ” ಎಂದು ಅವರು ಹೇಳಿದರು.

ಆದರೆ, ಭವಿಷ್ಯದಲ್ಲಿ, ಮೈತ್ರಿಕೂಟದ ಪಾಲುದಾರ ತನ್ನ ಮತಗಳನ್ನು; ವಿಶೇಷವಾಗಿ ಮೇಲ್ಜಾತಿಗಳ ಮತಗಳನ್ನು ಬಿಎಸ್‌ಪಿಗೆ ಪರಿಣಾಮಕಾರಿಯಾಗಿ ವರ್ಗಾಯಿಸಬಹುದು ಎಂದು ಪಕ್ಷಕ್ಕೆ ಸಂಪೂರ್ಣವಾಗಿ ಮನವರಿಕೆಯಾದರೆ, ಮೈತ್ರಿಕೂಟದಲ್ಲಿ ಚುನಾವಣೆಗಳಲ್ಲಿ ಸ್ಪರ್ಧಿಸುವ ಬಗ್ಗೆ ಸಕಾರಾತ್ಮಕ ನಿರ್ಧಾರ ತೆಗೆದುಕೊಳ್ಳಬಹುದು. ಆದರೂ ಅಂತಹ ಪರಿಸ್ಥಿತಿ ಕಾರ್ಯರೂಪಕ್ಕೆ ಬರಲು ವರ್ಷಗಳು ಬೇಕಾಗುತ್ತದೆ ಎಂದು ಅವರು ಹೇಳಿದರು.

ಉತ್ತರ ಪ್ರದೇಶದ ಜನರು 2027 ರಲ್ಲಿ ಬಿಎಸ್‌ಪಿಯನ್ನು ಮತ್ತೆ ಅಧಿಕಾರಕ್ಕೆ ತರುವತ್ತ ಒಲವು ತೋರಿದ್ದಾರೆ. ಎಂದು ಮಾಯಾವತಿ ಹೇಳಿದ್ದಾರೆ. ಪಕ್ಷದ ಹಿಂದಿನ ನಾಲ್ಕು ಅವಧಿಗಳನ್ನು ನೆನಪಿಸಿಕೊಂಡ ಅವರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪೂರ್ಣ ಬಹುಮತದೊಂದಿಗೆ ಬಿಎಸ್‌ಪಿ ಸರ್ಕಾರ ರಚನೆಯಾಗುವುದನ್ನು ಖಚಿತಪಡಿಸಿಕೊಳ್ಳಲು ಪಕ್ಷದ ಕಾರ್ಯಕರ್ತರು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ ಎಂದು ಅವರು ಹೇಳಿದರು.

ಬಿಜೆಪಿ, ಕಾಂಗ್ರೆಸ್ ಮತ್ತು ಇತರ ಜಾತಿ ಆಧಾರಿತ ಪಕ್ಷಗಳ ಮೇಲೆ ವಾಗ್ದಾಳಿ ಮಾಡಿದ ಅವರು, ಬಿಎಸ್‌ಪಿ ಅವರಿಗೆ ಸೂಕ್ತ ಉತ್ತರವನ್ನು ನೀಡುತ್ತದೆ, ಉತ್ತರ ಪ್ರದೇಶದಲ್ಲಿ ಪಕ್ಷದ ಐದನೇ ಸರ್ಕಾರವನ್ನು ರಚಿಸುತ್ತದೆ ಎಂದು ಹೇಳಿದರು.

ಎಲೆಕ್ಟ್ರಾನಿಕ್ ಮತದಾನ ಯಂತ್ರಗಳ (ಇವಿಎಂ) ಬಗ್ಗೆಯೂ ಬಿಎಸ್‌ಪಿ ಮುಖ್ಯಸ್ಥೆ ಕಳವಳ ವ್ಯಕ್ತಪಡಿಸಿದರು. ಹಿಂದಿನ ಚುನಾವಣೆಗಳಲ್ಲಿ ಮೋಸ ಮತ್ತು ಅಪ್ರಾಮಾಣಿಕತೆ ಸಂಭವಿಸಿದೆ ಎಂದು ಆರೋಪಿಸಿದರು. ಆದರೆ ತಮ್ಮ ಪಕ್ಷವು ದೇಶಾದ್ಯಂತ ಚುನಾವಣೆಗಳಲ್ಲಿ ಪೂರ್ಣ ಬಲದಿಂದ ಸ್ಪರ್ಧಿಸುವುದನ್ನು ಮುಂದುವರಿಸುತ್ತದೆ ಎಂದು ಪ್ರತಿಪಾದಿಸಿದರು. ಇವಿಎಂಗಳಿಗೆ ದೇಶಾದ್ಯಂತ ವಿರೋಧ ಬೆಳೆಯುತ್ತಿದೆ ಎಂದು ಅವರು ಹೇಳಿದರು.

ಬಿಎಸ್‌ಪಿ ಸಂಸ್ಥಾಪಕ ಕಾನ್ಶಿ ರಾಮ್ ಅವರನ್ನು ಹಿಂದಿನ ಸರ್ಕಾರಗಳು ನಿರ್ಲಕ್ಷಿಸಿವೆ ಎಂದು ಮಾಯಾವತಿ ಆರೋಪಿಸಿದರು. ಅವರ ಮರಣದ ನಂತರ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಲಾಗಿಲ್ಲ ಎಂದು ಆರೋಪಿಸಿದರು.

ಬಿಎಸ್‌ಪಿ ಆಳ್ವಿಕೆಯಲ್ಲಿ ಯಾವುದೇ ಕೋಮು ಗಲಭೆಗಳು ಸಂಭವಿಸಿಲ್ಲ. ಯಾದವರು ಸೇರಿದಂತೆ ಎಲ್ಲಾ ವರ್ಗಗಳನ್ನು ನೋಡಿಕೊಳ್ಳಲಾಗಿದೆ ಎಂದು ಪ್ರತಿಪಾದಿಸುತ್ತಾ ಅವರು, ಮುಸ್ಲಿಮರು ಮತ್ತು ಇತರ ಸಮುದಾಯಗಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದರು.

ಇದಕ್ಕೂ ಮುನ್ನ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಮಾಯಾವತಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು. ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಆದಿತ್ಯನಾಥ್, ಮಾಯಾವತಿ ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ಹಾರೈಸಿದರು. ಅಖಿಲೇಶ್ ಯಾದವ್ ಅವರು, ದಮನಿತರು ಮತ್ತು ಅಂಚಿನಲ್ಲಿರುವವರ ಹಕ್ಕುಗಳು ಮತ್ತು ಘನತೆಗಾಗಿ ಮಾಯಾವತಿ ಅವರ ಜೀವಮಾನದ ಹೋರಾಟವನ್ನು ಶ್ಲಾಘಿಸಿದರು.

ಮಾಯಾವತಿ ಗುರುವಾರ 70 ನೇ ವರ್ಷಕ್ಕೆ ಕಾಲಿಟ್ಟರು, ಬಿಎಸ್‌ಪಿ ಉತ್ತರ ಪ್ರದೇಶದಾದ್ಯಂತ ‘ಜನ ಕಲ್ಯಾಣಕಾರಿ ದಿವಸ್’ ಎಂದು ಆಚರಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...