Homeಮುಖಪುಟಐ-ಪ್ಯಾಕ್ ದಾಳಿ | ಇಡಿ ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ತಡೆ : ಮಮತಾ...

ಐ-ಪ್ಯಾಕ್ ದಾಳಿ | ಇಡಿ ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ತಡೆ : ಮಮತಾ ಬ್ಯಾನರ್ಜಿ, ಪ.ಬಂಗಾಳ ಸರ್ಕಾರಕ್ಕೆ ನೋಟಿಸ್

- Advertisement -
- Advertisement -

ಐ-ಪ್ಯಾಕ್ ಕಚೇರಿ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಡಿ ಅಧಿಕಾರಿಗಳ ವಿರುದ್ದ ಕೋಲ್ಕತ್ತಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ಗುರುವಾರ (ಜ.15) ತಡೆ ನೀಡಿದೆ. ಇದರಿಂದ ಇಡಿ ವಿರುದ್ದ ಸಮರ ಸಾರಿದ್ದ ಟಿಎಂಸಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಹಿನ್ನೆಡೆಯಾಗಿದೆ.

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥನ ಮನೆ ಮೇಲಿನ ದಾಳಿಯ ಸಂದರ್ಭದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ಇಡಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ವಿಪುಲ್ ಪಾಂಚೋಲಿ ಅವರಿದ್ದ ಪೀಠ, “ಪ್ರಸ್ತುತ ಇಡಿ ಅಥವಾ ಇತರ ಕೇಂದ್ರ ಸಂಸ್ಥೆಗಳ ತನಿಖೆ ಮತ್ತು ರಾಜ್ಯ ಸಂಸ್ಥೆಗಳ ಹಸ್ತಕ್ಷೇಪಕ್ಕೆ ಸಂಬಂಧಿಸಿದ ಗಂಭೀರ ಸಮಸ್ಯೆಯನ್ನು ಎತ್ತಿದೆ ಎಂದು ನಾವು ಮೇಲ್ನೋಟಕ್ಕೆ ಭಾವಿಸುತ್ತೇವೆ. ಇಡಿ ಎತ್ತಿರುವ ಸಮಸ್ಯೆಗಳನ್ನು ಪರಿಶೀಲಿಸದಿದ್ದರೆ ದೇಶದಲ್ಲಿ ಕಾನೂನುಬಾಹಿರತೆ ಉಂಟಾಗುತ್ತದೆ” ಎಂದು ಹೇಳಿದೆ.

“ನಮ್ಮ ಅಭಿಪ್ರಾಯದ ಪ್ರಕಾರ, ದೇಶದಲ್ಲಿ ಕಾನೂನಿನ ಆಳ್ವಿಕೆಯನ್ನು ಕಾಪಾಡಲು ಮತ್ತು ಪ್ರತಿ ಸಂಸ್ಥೆ/ಅಂಗ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಅನುಮತಿಸಲು, ಈ ವಿಷಯವನ್ನು ಪರಿಶೀಲಿಸುವುದು ಅಗತ್ಯವಾಗಿದೆ. ಇದರಿಂದ ಅಪರಾಧಿಗಳು ಒಂದು ನಿರ್ದಿಷ್ಟ ರಾಜ್ಯದ ಕಾನೂನು ಜಾರಿ ಮಾಡುವ ಏಜೆನ್ಸಿಗಳ ರಕ್ಷಣೆಯ ಕವಚದಡಿ ಸಂರಕ್ಷಣೆ ಪಡೆಯದಂತೆ ಮಾಡಬೇಕು” ಎಂದು ಕೋರ್ಟ್ ತಿಳಿಸಿದೆ.

ಪಶ್ಚಿಮ ಬಂಗಾಳದ ಡಿಜಿಪಿ ರಾಜೀವ್ ಕುಮಾರ್ ಮತ್ತು ಕೋಲ್ಕತ್ತಾ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ವರ್ಮಾ ಸೇರಿದಂತೆ ಇತರರನ್ನು ಅಮಾನತುಗೊಳಿಸುವಂತೆ ಕೋರಿ ಇಡಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಪಟ್ಟಂತೆ ಗೃಹ ಸಚಿವಾಲಯ, ಸಿಬ್ಬಂದಿ ಮತ್ತು ತರಬೇತಿ ಇಲಾಖೆ, ಮಮತಾ ಬ್ಯಾನರ್ಜಿ ಮತ್ತು ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ತನಿಖೆಗೆ ಅಡ್ಡಿಪಡಿಸಲು ಮತ್ತು ಸಾಕ್ಷ್ಯ ಕಳ್ಳತನಕ್ಕೆ ಅಧಿಕಾರಿಗಳು ಸಹಾಯ ಮಾಡಿದ್ದಾರೆ ಎಂದು ಆರೋಪಿಸಿ, ಡಿಜಿಪಿ ಕುಮಾರ್ ಸೇರಿದಂತೆ ಪಶ್ಚಿಮ ಬಂಗಾಳದ ಉನ್ನತ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಕೋರಿ ಇಡಿ ಸುಪ್ರೀಂ ಕೋರ್ಟ್‌ನಲ್ಲಿ ಹೊಸ ಅರ್ಜಿ ಸಲ್ಲಿಸಿದೆ.

“ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ದಾಳಿ (ಇಡಿ ಶೋಧ ಅಥವಾ ಪರಿಶೀಲನೆ) ನಡೆಯುತ್ತಿದ್ದ ಸ್ಥಳಕ್ಕೆ ಬಂದು ನಿಂತಿದ್ದರು. ಅವರು ದಾಖಲೆಗಳನ್ನು ತೆಗೆದುಕೊಂಡಿದ್ದಾರೆ. ಈ ಮೂಲಕ ನಮ್ಮ ಅಧಿಕಾರಿಗಳನ್ನು ಭಯಭೀತಗೊಳಿಸುವ ಪ್ರಯತ್ನ ಮಾಡಿದ್ದಾರೆ. ಅಂದರೆ, ಅಧಿಕಾರಿಗಳು ಭಯಪಟ್ಟು ಅಥವಾ ಒತ್ತಡಕ್ಕೆ ಒಳಗಾಗಿ ಸ್ವತಂತ್ರವಾಗಿ ಕೆಲಸ ಮಾಡಲು ಸಾಧ್ಯವಾಗಿಲ್ಲ. ಇದು ನಮ್ಮ ಕಾನೂನುಬದ್ಧ ಕರ್ತವ್ಯಗಳನ್ನು ಸ್ವತಂತ್ರವಾಗಿ ನಿರ್ವಹಿಸುವ ಸಾಮರ್ಥ್ಯವನ್ನು ಗಂಭೀರವಾಗಿ ಹಾನಿಗೊಳಿಸಿದೆ” ಇಡಿ ತನ್ನ ಅರ್ಜಿಯಲ್ಲಿ ಹೇಳಿದೆ.

ಈ ಪ್ರಕರಣದ ತನಿಖೆಯನ್ನು ಕೇಂದ್ರದ ಸ್ವತಂತ್ರ ತನಿಖೆಯಾದ ಸಿಬಿಐನಿಂದ ಮಾಡಿಸಬೇಕು. ಕೋಲ್ಕತ್ತಾ ಪೊಲೀಸರು ಮಮತಾ ಬ್ಯಾನರ್ಜಿ ಸರ್ಕಾರದ ಅಧೀನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಇಡಿ ಮನವಿ ಮಾಡಿದೆ.

ದಾಳಿಯ ವೇಳೆ ದಾಖಲೆಗಳನ್ನು ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಡಿ ಅಧಿಕಾರಿಗಳ ವಿರುದ್ದ ಪಶ್ಚಿಮ ಬಂಗಾಳದಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ. ಇಡಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯ ಸಂಬಂಧ ಪಶ್ಚಿಮ ಬಂಗಾಳ ಸರ್ಕಾರ ಕೇವಿಯಟ್ ಸಲ್ಲಿಸಿದೆ. ತನ್ನ ವಾದವನ್ನು ಆಲಿಸಿದೆ ಆದೇಶಗಳನ್ನು ನೀಡದಂತೆ ಕೋರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...