Homeಕರ್ನಾಟಕವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಅನೈತಿಕ ಪೊಲೀಸ್‌ಗಿರಿ : ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಬಂಧನ

ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಅನೈತಿಕ ಪೊಲೀಸ್‌ಗಿರಿ : ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಬಂಧನ

- Advertisement -
- Advertisement -

ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಅವರ ಗೌಪ್ಯ ದಾಖಲೆಗಳನ್ನು ಪಡೆದು ಪೌರತ್ವ ಪರಿಶೀಲಿಸುವ ಮೂಲಕ ಅನೈತಿಕ ಪೊಲೀಸ್‌ಗಿರಿ ಮಾಡುತ್ತಿದ್ದ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಬನ್ನೇರುಘಟ್ಟ ಪೊಲೀಸರು ಶುಕ್ರವಾರ (ಜ.16) ತಡರಾತ್ರಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಬೆಂಗಳೂರು ಗ್ರಾಮಾಂತರ ಎಸ್ಪಿಯ ಮಾರ್ಗದರ್ಶನದಲ್ಲಿ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂಧನ ನಡೆದಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿತ್ತು ಎಂದು ವರದಿಗಳು ಹೇಳಿವೆ.

ಬಂಧನ ವಿಷಯ ತಿಳಿದು ಪುನೀತ್ ಕೆರೆಹಳ್ಳಿಯ ಬೆಂಬಲಿಗರು ಠಾಣೆ ಮುಂದೆ ಜಮಾಯಿಸಿದ್ದರು. ಆದರೆ, ಅವರನ್ನು ನಿಯಂತ್ರಿಸಿದ ಪೊಲೀಸರು, ಆರೋಪಿಯ ವಿಚಾರಣೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ಕೆಲ ದಿನಗಳಿಂದ ಕೊಲೆ ಆರೋಪಿ ಪುನೀತ್ ಬೆಂಗಳೂರಿನ ವಿವಿಧ ಭಾಗಗಳಲ್ಲಿ ವಲಸೆ ಕಾರ್ಮಿಕರು, ಬಡ ಕೂಲಿಕಾರರು, ನಿರಾಶ್ರಿತರ ಶೆಡ್‌ಗಳಿಗೆ ತೆರಳಿ ಅವರ ಗೌಪ್ಯ ದಾಖಲೆಗಳನ್ನು ಪಡೆದು ಪೌರತ್ವ ಪರಿಶೀಲಿಸುತ್ತಿದ್ದ. ತನ್ನ ಅನೈತಿಕ ಪೊಲೀಸ್‌ಗಿರಿಯ ವಿಡಿಯೋವನ್ನು ರಾಜಾರೋಷವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದ.

ಈತನ ವರ್ತನೆಯ ವಿರುದ್ದ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಜನರು ಕ್ರಮಕ್ಕೆ ಆಗ್ರಹಿಸಿದ್ದರು. ರಾಜ್ಯ ಸರ್ಕಾರ ಈತನಿಗೆ ಪೌರತ್ವ ಪರಿಶೀಲನೆಯ ಕೆಲಸ ಕೊಟ್ಟಿದೆಯೇ? ಎಂಬ ಪ್ರಶ್ನೆಗಳನ್ನು ಮುಂದಿಟ್ಟಿದ್ದರು.

ಶುಕ್ರವಾರ ದ್ವೇಷ ಭಾಷಣ ವಿರೋಧಿ ಅಭಿಯಾನ ತಂಡದ ನಿಯೋಗ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ ಮತ್ತು ಐಜಿಪಿ) ಎಂ.ಎ ಸಲೀಂ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಆರ್. ಹಿತೇಂದ್ರ ಅವರನ್ನು ಭೇಟಿ ಮಾಡಿ ಪುನೀತ್ ವಿರುದ್ದ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದೆ ಎಂದು ವರದಿಯಾಗಿದೆ. ಈ ಬೆನ್ನಲ್ಲೇ ಬಂಧನದ ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಸುವೇಂದು ಅಧಿಕಾರಿ

ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಶುಕ್ರವಾರ (ಜ.16) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ 100 ಕೋಟಿ ರೂ.ಗಳ ಪರಿಹಾರ ಕೋರಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮಮತಾ...

ಕೋಮುವಾದ ಕಾರಣಕ್ಕೆ ಬಾಲಿವುಡ್‌ನಲ್ಲಿ ಅವಕಾಶ ಕಡಿಮೆ; ರೆಹಮಾನ್ ಹೇಳಿಕೆ ತಳ್ಳಿಹಾಕಿದ ಜಾವೇದ್ ಅಖ್ತರ್

ಯಶಸ್ವೀ ಸಂಗೀತಗಾರನಾಗಿ ಹಲವು ಕೊಡುಗೆ ನೀಡಿದ್ದರೂ ಕೆಲವರಿಗೆ ಹೊರಗಿನವನು ಎಂಬ ಭಾವನೆ ಹೋಗಿಲ್ಲ. ಕಳೆದ ಎಂಟು ವರ್ಷಗಳಲ್ಲಿ ಬಾಲಿವುಡ್‌ನ ಕದ ಮುಚ್ಚಿದೆ ಎಂಬ ಬಗ್ಗೆ ಎ.ಆರ್. ರೆಹಮಾನ್ ಹೇಳಿಕೆಯನ್ನು ಹಿರಿಯ ಗೀತೆ ರಚನೆಕಾರ...

14 ವರ್ಷದ ದಲಿತ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ : 16 ವರ್ಷದ ಬಾಲಕನನ್ನು ವಶಕ್ಕೆ ಪಡೆದ ಪೊಲೀಸರು

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ 14 ವರ್ಷದ ದಲಿತ ಬಾಲಕಿಯ ಭೀಕರ ಅತ್ಯಾಚಾರ, ಕೊಲೆ ನಡೆದಿದ್ದು, ಈ ಸಂಬಂಧ 16 ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ (ಜ.15) ಬೆಳಿಗ್ಗೆ ಶಾಲೆಗೆ ಹೋದ...

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರಿಕರಂತೆ ನಡೆಸಿಕೊಳ್ಳುತ್ತದೆ: ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬಿಜೆಪಿ ಆಡಳಿತದ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ವಾಗ್ದಾಳಿ ನಡೆಸಿದ್ದಾರೆ. ಪೌರತ್ವ ಕಾಯ್ದೆ ಮತ್ತು ಹೊಸ ವಕ್ಫ್ ಕಾಯ್ದೆಯಂತಹ ಅದರ ವಿವಿಧ ಕಾನೂನುಗಳು ಮತ್ತು ನೀತಿಗಳು...

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: 114 ಸ್ಥಾನಗಳೊಂದಿಗೆ ಪ್ರಮುಖ ಪಕ್ಷವಾಗಿ ಹೊರಹೊಮ್ಮಿದ ಎಐಎಂಐಎಂ

ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಖಿಲ ಭಾರತ ಮಜ್ಲಿಸ್ ಇ ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷವು (ಎಐಎಂಐಎಂ) 114 ಸ್ಥಾನಗಳನ್ನು ಗೆದ್ದು, 2017 ರ ಸ್ಥಳೀಯ ಸಂಸ್ಥೆ ಚುನಾವಣೆಗಳಿಗಿಂತ ತನ್ನ ಸಂಖ್ಯೆಯನ್ನು ತೀವ್ರವಾಗಿ ಹೆಚ್ಚಿಸಿಕೊಂಡಿದೆ....

ಬಳ್ಳಾರಿ| ಬಂಡಿಹಟ್ಟಿ-ದಾನಪ್ಪ ಬೀದಿ ಬಡರೈತರ ಮೇಲೆ ದೌರ್ಜನ್ಯ; ಪ್ರತಾಪರೆಡ್ಡಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಬಳ್ಳಾರಿ ಜಿಲ್ಲೆಯ ಬಂಡಿಹಟ್ಟಿ-ದಾನಪ್ಪ ಬೀದಿಯ ಬಡರೈತರ ಮೇಲೆ ದೌರ್ಜನ್ಯ ಎಸಗುತ್ತಿರುವ ಎನ್‌.ಪ್ರತಾಪ ರೆಡ್ಡಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು 'ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ' ಮುಖಂಡರು ಆಗ್ರಹಿಸಿದರು....

ರೋಹಿತ್ ವೇಮುಲಾ 10ನೇ ಶಹಾದತ್ ದಿನ: ಜ.17ರಂದು ಹೈದರಾಬಾದ್ ವಿವಿಯಲ್ಲಿ ರೋಹಿತ್ ಕಾಯ್ದೆಯ ‘ಜನತಾ ಕರಡು’ ಅನಾವರಣ

ಹೈದರಾಬಾದ್ ಕೇಂದ್ರ ವಿಶ್ವವಿದ್ಯಾಲಯದಲ್ಲಿ ದಲಿತ ಸಂಶೋಧನಾ ವಿದ್ವಾಂಸ ಮತ್ತು ಅಂಬೇಡ್ಕರ್ ವಿದ್ಯಾರ್ಥಿ ಸಂಘದ (ASA) ನಾಯಕ ರೋಹಿತ್ ವೇಮುಲ ಅವರ ಮರಣದ ಹತ್ತು ವರ್ಷಗಳ ನಂತರ, ವಿದ್ಯಾರ್ಥಿ ಗುಂಪುಗಳು ಮತ್ತು ಸಾಮಾಜಿಕ ನ್ಯಾಯ...

ಮಹಾರಾಷ್ಟ್ರವು ಪ್ರಧಾನಿ ಮೋದಿಯನ್ನು ಹೆಚ್ಚು ಅವಲಂಬಿಸಿದೆ: ಸಿಎಂ ಫಡ್ನವೀಸ್

ನಗರ ಪಾಲಿಕೆ ಚುನಾವಣೆಯಲ್ಲಿ ಮಹಾಯುತಿ ಭರ್ಜರಿ ಜಯ ಸಾಧಿಸಿದ ನಂತರ ಮಹಾರಾಷ್ಟ್ರದ ಜನರಿಗೆ ಧನ್ಯವಾದ ಅರ್ಪಿಸಿದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ವಿಜಯವನ್ನು ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರಿಗೆ ಅರ್ಪಿಸಿದರು. ರಾಜ್ಯವು ಪ್ರಧಾನಿ...

ಮೆಹುಲ್ ಚೋಕ್ಸಿ ಪುತ್ರ ಕೂಡ ಹಣ ವರ್ಗಾವಣೆಯಲ್ಲಿ ಭಾಗಿಯಾಗಿದ್ದಾರೆ: ಜಾರಿ ನಿರ್ದೇಶನಾಲಯ

ಪರಾರಿಯಾಗಿರುವ ಉದ್ಯಮಿ ಮೆಹುಲ್ ಚೋಕ್ಸಿ ವಿರುದ್ಧದ ಹಣ ವರ್ಗಾವಣೆ ಪ್ರಕರಣದಲ್ಲಿ, ಅವರ ಮಗ ರೋಹನ್ ಚೋಕ್ಸಿ ಕೂಡ ಈ ಅಪರಾಧದಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಮೊದಲ ಬಾರಿಗೆ ಹೇಳಿಕೊಂಡಿದೆ....

‘ವೋಟ್ ಚೋರಿ ಒಂದು ರಾಷ್ಟ್ರವಿರೋಧಿ ಕೃತ್ಯ..’; ಬಿಎಂಸಿ ಫಲಿತಾಂಶದ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಹಾರಾಷ್ಟ್ರ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಯಲ್ಲಿ ಎಣಿಕೆ ವೇಗ ಪಡೆಯುತ್ತಿದ್ದಂತೆ, ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗವನ್ನು ಗುರಿಯಾಗಿಸಿಕೊಂಡು ತಮ್ಮ ಮೊದಲ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ....