Homeಮುಖಪುಟಮಮತಾ ಬ್ಯಾನರ್ಜಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಸುವೇಂದು ಅಧಿಕಾರಿ

ಮಮತಾ ಬ್ಯಾನರ್ಜಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಸುವೇಂದು ಅಧಿಕಾರಿ

- Advertisement -
- Advertisement -

ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಶುಕ್ರವಾರ (ಜ.16) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ 100 ಕೋಟಿ ರೂ.ಗಳ ಪರಿಹಾರ ಕೋರಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಮಮತಾ ಬ್ಯಾನರ್ಜಿಗೆ ಕಳುಹಿಸಲಾದ ಮಾನನಷ್ಟ ಮೊಕದ್ದಮೆ ನೋಟಿಸ್‌ಗೆ ಉತ್ತರ ಸಿಗದ ಕಾರಣ, ಅಲಿಪೋರ್ ನ್ಯಾಯಾಲಯದಲ್ಲಿರುವ ಸಿವಿಲ್ ನ್ಯಾಯಾಧೀಶರ, ಹಿರಿಯ ವಿಭಾಗದ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದೇನೆ ಎಂದು ಅಧಿಕಾರಿ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

“ಮಮತಾ ಬ್ಯಾನರ್ಜಿ, ನಾನು ನನ್ನ ಮಾತಿಗೆ ನಿಲ್ಲುತ್ತೇನೆ. ನಾನು ಹೇಳಿದ್ದನ್ನು ಮಾಡುತ್ತೇನೆ. ಆದರೆ ನೀವು ವಿಷಯವನ್ನು ಮರೆಮಾಚುತ್ತಿದ್ದೀರಿ. ಜನರನ್ನು ಗೊಂದಲಕ್ಕೆ ಎಳೆಯುತ್ತಿದ್ದೀರಿ. ನೀವು ನನ್ನ ಮೇಲೆ ಒಂದು ಕೊಳಕು ಆರೋಪ ಹಾಕಿದ್ದೀರಿ..ನಾನು ಕಲ್ಲಿದ್ದಲು ಹಗರಣದಲ್ಲಿ ಭಾಗಿಯಾಗಿದ್ದೇನೆ ಅಂತ. ಆದರೆ ಅದು ನಿಮ್ಮ ಕಲ್ಪನೆ ಮಾತ್ರ, ನಿಜವಲ್ಲ. ನಾನು ನಿಮಗೆ ಒಂದು ನೋಟಿಸ್ ಕಳುಹಿಸಿದ್ದೆ. ಅದರಲ್ಲಿ, ನಿಮ್ಮ ಬಳಿ ಪುರಾವೆ ಇದ್ದರೆ ತೋರಿಸಿ, ಇಲ್ಲದಿದ್ದರೆ ನಾನು ಕೋರ್ಟ್‌ಗೆ ಹೋಗುತ್ತೇನೆ ಎಂದಿದ್ದೆ. ಆದರೆ ನೀವು ಏನೂ ಉತ್ತರ ಕೊಟ್ಟಿಲ್ಲ, ಮೌನವಾಗಿದ್ದೀರಿ. ಆ ಮೌನವು ನಿಮಗೆ ಯಾವುದೇ ಸಹಾಯ ಮಾಡುವುದಿಲ್ಲ. ನಿಮ್ಮ ಆರೋಪ ಸುಳ್ಳು ಎಂದು ಇದರಿಂದ ಗೊತ್ತಾಗುತ್ತದೆ. ನಾನು ನನ್ನ ಮಾತು ಪಾಲಿಸುತ್ತೇನೆ..ನಾನು ಕೋರ್ಟ್‌ನಲ್ಲಿ ನಿಮ್ಮನ್ನು ಭೇಟಿ ಮಾಡುತ್ತೇನೆ” ಎಂದಿದ್ದಾರೆ.

2021ರ ವಿಧಾನಸಭಾ ಚುನಾವಣೆಗೆ ಮುನ್ನ ಅಧಿಕಾರಿ ತೃಣಮೂಲ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದರು.

“ನಿಮ್ಮ ಮೋಸದ ದುಸ್ಸಾಹಸಕ್ಕಾಗಿ ನಿಮ್ಮನ್ನು ನ್ಯಾಯಾಲಯಕ್ಕೆ ಎಳೆಯುವ ನನ್ನ ಮಾತನ್ನು ನಾನು ಉಳಿಸಿಕೊಂಡಿದ್ದೇನೆ ಮತ್ತು ಇಂದು ನಿಮ್ಮ ವಿರುದ್ಧ ಮೊಕದ್ದಮೆ ಹೂಡಿದ್ದೇನೆ” ಎಂದು ಅಧಿಕಾರಿ ಬರೆದಿದ್ದಾರೆ, ಅವರು ಮೊಕದ್ದಮೆ ದಾಖಲಿಸಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.

“ದಯವಿಟ್ಟು ನಿಮ್ಮ ಪ್ರಬುದ್ಧ ವಕೀಲರನ್ನು ಬೇಗನೆ ಸಂಪರ್ಕಿಸಿ, ಇಲ್ಲದಿದ್ದರೆ ನೀವು ಶೀಘ್ರದಲ್ಲೇ ನನಗೆ 100 ಕೋಟಿ ರೂಪಾಯಿಗಳನ್ನು ಪರಿಹಾರವಾಗಿ ಪಾವತಿಸಬೇಕಾಗುತ್ತದೆ, ಅದನ್ನು ನಾನು ದತ್ತಿ ಸಂಸ್ಥೆಗೆ ದೇಣಿಗೆ ನೀಡುತ್ತೇನೆ” ಎಂದು ಮಮತಾ ಬ್ಯಾನರ್ಜಿಯ ಕಾಲೆಳೆದಿದ್ದಾರೆ.

ಈ ಹಿಂದೆ ತಮ್ಮ ವಕೀಲರ ಮೂಲಕ ಮಮತಾ ಬ್ಯಾನರ್ಜಿಗೆ ಲೀಗಲ್ ನೋಟಿಸ್ ಕಳುಹಿಸಿದ್ದ ಅಧಿಕಾರಿ, ಜನವರಿ 8 ಮತ್ತು 9 ರಂದು ಬ್ಯಾನರ್ಜಿ ಅವರು ಕಲ್ಲಿದ್ದಲು ಹಗರಣಕ್ಕೆ ತಮ್ಮನ್ನು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಾರ್ವಜನಿಕವಾಗಿ ಲಿಂಕ್ ಮಾಡಿದ್ದಾರೆ ಎಂದು ಹೇಳಿಕೊಂಡಿದ್ದರು,

ಲೀಗಲ್ ನೋಟಿಸ್‌ನಲ್ಲಿ, ಅಧಿಕಾರಿ ಬ್ಯಾನರ್ಜಿ ಅವರ ಮೇಲೆ 72 ಗಂಟೆಗಳ ಒಳಗೆ ಆರೋಪಗಳನ್ನು ಸಾಬೀತುಪಡಿಸುವಂತೆ ಮತ್ತು ಅವರು ಹಾಗೆ ಮಾಡಲು ವಿಫಲವಾದರೆ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...