Homeಮುಖಪುಟಮಹಿಳೆಯರ ಜೊತೆ ಪುರುಷರಿಗೂ ಉಚಿತ ಬಸ್‌ ಪ್ರಯಾಣ, ಗ್ರಾಮೀಣರಿಗೆ 150 ಕೂಲಿ ದಿನ : ಎಐಎಡಿಎಂಕೆ...

ಮಹಿಳೆಯರ ಜೊತೆ ಪುರುಷರಿಗೂ ಉಚಿತ ಬಸ್‌ ಪ್ರಯಾಣ, ಗ್ರಾಮೀಣರಿಗೆ 150 ಕೂಲಿ ದಿನ : ಎಐಎಡಿಎಂಕೆ ಚುನಾವಣಾ ಭರವಸೆ

- Advertisement -
- Advertisement -

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಶನಿವಾರ (ಜ.17) ಪಕ್ಷದ ಮೊದಲ ಹಂತದ ಪ್ರಣಾಳಿಕೆ (ಚುನಾವಣಾ ಭರವಸೆ) ಬಿಡುಗಡೆ ಮಾಡಿದ್ದಾರೆ.

ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯಂತೆ ಎಲ್ಲಾ ಪಡಿತರ ಚೀಟಿ ಹೊಂದಿರುವ ಎಲ್ಲಾ ಕುಟುಂಬಗಳ ಮಹಿಳೆಯರ ಬ್ಯಾಂಕ್ ಖಾತೆಗೆ ಮಾಸಿಕ 2000 ರೂಪಾಯಿ ನೇರವಾಗಿ ಜಮೆ ಮಾಡುವ ‘ಕುಲವಿಳಕ್ಕು ಯೋಜನೆ’ ಪ್ರಣಾಳಿಕೆಯ ಪ್ರಮುಖ ಭರವಸೆಯಾಗಿದೆ.

ಗಮನಾರ್ಹವಾಗಿ, ನಗರ ಬಸ್‌ಗಳಲ್ಲಿ ಪುರುಷರಿಗೆ ಉಚಿತ ಬಸ್ ಪ್ರಯಾಣ ಯೋಜನೆಯನ್ನು ಜಾರಿಗೆ ತರಲಾಗುವುದು, ಮಹಿಳೆಯರಿಗೆ ಅಸ್ತಿತ್ವದಲ್ಲಿರುವ ಉಚಿತ ಪ್ರಯಾಣ ಯೋಜನೆ ಮುಂದುವರಿಯಲಿದೆ ಎಂದು ಎಐಎಡಿಎಂಕೆ ಹೇಳಿದೆ.

ಗ್ರಾಮೀಣ ಪ್ರದೇಶಗಳಲ್ಲಿ ‘ಅಮ್ಮ ಇಲ್ಲಮ್’ ಯೋಜನೆಯಡಿಯಲ್ಲಿ, ಸರ್ಕಾರವು ಭೂಮಿಯನ್ನು ಖರೀದಿಸಿ, ಸ್ವಂತ ಮನೆ ಇಲ್ಲದವರಿಗೆ ಕಾಂಕ್ರೀಟ್ ಮನೆಗಳನ್ನು ನಿರ್ಮಿಸಿಕೊಡಲಿದೆ. ನಗರ ಪ್ರದೇಶಗಳಲ್ಲಿ ಸ್ವಂತ ಮನೆ ಇಲ್ಲದವರಿಗೆ ಸರ್ಕಾರವು ಭೂಮಿಯನ್ನು ಖರೀದಿಸಿ ಅಪಾರ್ಟ್‌ಮೆಂಟ್‌ ಕಟ್ಟಡಗಳನ್ನು ಕಟ್ಟಲಿದೆ. ಇದರಲ್ಲಿ ‘ಅಮ್ಮ ಇಲ್ಲಮ್ ಯೋಜನೆ’ಯಡಿಯಲ್ಲಿ ಉಚಿತವಾಗಿ ಮನೆಗಳನ್ನು ಹಂಚಿಕೆ ಮಾಡಲಾಗಿದೆ ಎಂಬ ಭರವಸೆ ನೀಡಲಾಗಿದೆ.

ಕೇಂದ್ರ ಸರ್ಕಾರವು ಉದ್ಯೋಗ ಖಾತರಿ ಯೋಜನೆಯಡಿ 100 ದಿನಗಳ ಕೆಲಸವನ್ನು 125 ದಿನಗಳಿಗೆ ಹೆಚ್ಚಿಸುವುದಾಗಿ ಘೋಷಿಸಿದೆ. ಇದರಲ್ಲಿ ಒಂದು ಹೆಜ್ಜೆ ಮುಂದೆ ಹೋಗಿರುವ ಎಐಎಡಿಎಂಕೆ, ಅಧಿಕಾರಕ್ಕೆ ಬಂದರೆ ಗ್ರಾಮೀಣಾಭಿವೃದ್ಧಿ ಯೋಜನೆಯಡಿ 150 ದಿನಗಳ ಕೆಲಸ ಒದಗಿಸುವುದಾಗಿ ಭರವಸೆ ನೀಡಿದೆ.

ಅಮ್ಮ ದ್ವಿಚಕ್ರ ವಾಹನ ಯೋಜನೆಯಡಿಯಲ್ಲಿ 5 ಲಕ್ಷ ಮಹಿಳಾ ಫಲಾನುಭವಿಗಳಿಗೆ ಪ್ರತಿಯೊಬ್ಬರಿಗೆ 25,000 ರೂ. ಸರ್ಕಾರಿ ಸಬ್ಸಿಡಿಯೊಂದಿಗೆ ದ್ವಿಚಕ್ರ ವಾಹನಗಳನ್ನು ನೀಡಲಾಗುವುದು ಎಂದು ಪ್ರಣಾಳಿಕೆಯಲ್ಲಿ ಹೇಳಲಾಗಿದೆ.

ರಾಜ್ಯದ ಮೇಲಿನ ಸಾಲದ ಹೊರೆಯನ್ನು ಮತ್ತಷ್ಟು ಹೆಚ್ಚಿಸುವ ಮೂಲಕ ಕುಟುಂಬದ ಮಹಿಳಾ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ.ಗಳನ್ನು ಹೇಗೆ ಒದಗಿಸುವುದು ಎಂದು ಕೇಳಿದಾಗ ಪಳನಿಸ್ವಾಮಿ, “ಅವರು (ಡಿಎಂಕೆ) ಅಸಮರ್ಥರು; ನಾವು ನಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿದ್ದೇವೆ” ಎಂದು ಹೇಳಿದ್ದಾರೆ.

2021ರ ವಿಧಾನಸಭಾ ಚುನಾವಣೆಯಲ್ಲಿ, ಆರ್ಥಿಕ ಸಮಾನತೆಯನ್ನು ಸೃಷ್ಟಿಸುವ ಉದ್ದೇಶದಿಂದ ಎಐಎಡಿಎಂಕೆ ಗೃಹಿಣಿಯರಿಗೆ ತಿಂಗಳಿಗೆ 1,500 ರೂ.ಗಳನ್ನು ನೀಡುವುದಾಗಿ ಭರವಸೆ ನೀಡಿತ್ತು. ಇದಲ್ಲದೆ, ವರ್ಷಕ್ಕೆ ಆರು ಗ್ಯಾಸ್ ಸಿಲಿಂಡರ್‌ಗಳನ್ನು ಉಚಿತವಾಗಿ ನೀಡುವುದಾಗಿಯೂ ಹೇಳಿತ್ತು.

ಪುರುಷರಿಗೆ ಉಚಿತ ಬಸ್ ಪ್ರಯಾಣ ಒದಗಿಸುವುದರಿಂದ ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ ಇನ್ನಷ್ಟು ಹದಗೆಡುದಿಲ್ಲವೇ? ಎಂದು ವರದಿಗಾರರು ಕೇಳಿದಾಗ, ಪಳನಿಸ್ವಾಮಿ, “ಆಡಳಿತಾತ್ಮಕ ಸಾಮರ್ಥ್ಯವಿದ್ದರೆ ಅದನ್ನು ಮಾಡಬಹುದು” ಎಂದು ಹೇಳಿದ್ದಾರೆ.

ಪ್ರಣಾಳಿಕೆ ಬಿಡುಗಡೆಗೂ ಮುನ್ನ, ಪಳನಿಸ್ವಾಮಿ ಮತ್ತು ಪಕ್ಷದ ಹಿರಿಯ ನಾಯಕರು ಚೆನ್ನೈನಲ್ಲಿರುವ ಎಐಎಡಿಎಂಕೆ ಪಕ್ಷದ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ, ಅಲ್ಲಿ ನೆರೆದಿದ್ದ ಜನರಿಗೆ ಸಿಹಿತಿಂಡಿಗಳನ್ನು ವಿತರಿಸಿದರು.

2021ರ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ಎಐಎಡಿಎಂಕೆ ನೇತೃತ್ವದಲ್ಲಿ ಎನ್‌ಡಿಎ ತಮಿಳುನಾಡಿನಲ್ಲಿ ಮತ್ತೆ ಅಧಿಕಾರಕ್ಕೇರುವ ಗುರಿಯನ್ನು ಹೊಂದಿದೆ. 2024ರ ಲೋಕಸಭಾ ಚುನಾವಣೆಯಲ್ಲಿ ಕಳಪೆ ಪ್ರದರ್ಶನದ ಹೊರತಾಗಿಯೂ, 2023ರಲ್ಲಿ ಸಂಬಂಧಗಳನ್ನು ಕಡಿದುಕೊಂಡ ನಂತರ ಎಐಎಡಿಎಂಕೆ ಬಿಜೆಪಿಯೊಂದಿಗೆ ಮತ್ತೆ ಸಖ್ಯ ಬೆಳೆಸಿದೆ.

ಈ ನಡುವೆ, ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಅಧಿಕಾರವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಮತ್ತು 2024ರ ಸಂಸತ್ ಚುನಾವಣೆಯಲ್ಲಿ ತನ್ನ ಉತ್ತಮ ಪ್ರದರ್ಶನದ ನಂತರ ವಿಶ್ವಾಸದಿಂದ ಚುನಾವಣಾ ಸ್ಪರ್ಧೆಗೆ ಪ್ರವೇಶಿಸುತ್ತಿದೆ.

ಈ ವರ್ಷದ ಮೊದಲಾರ್ಧದಲ್ಲಿ ತಮಿಳುನಾಡು ಚುನಾವಣೆ ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...