Homeಮುಖಪುಟರೋಹಿತ್ ವೇಮುಲ ಕಾಯ್ದೆ ಘೋಷಣೆಯಲ್ಲ, ಅಗತ್ಯ : ರಾಹುಲ್ ಗಾಂಧಿ

ರೋಹಿತ್ ವೇಮುಲ ಕಾಯ್ದೆ ಘೋಷಣೆಯಲ್ಲ, ಅಗತ್ಯ : ರಾಹುಲ್ ಗಾಂಧಿ

- Advertisement -
- Advertisement -

ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲ ಜಾತಿ ತಾರತಮ್ಯಕ್ಕೆ ಬಲಿಯಾಗಿ ಇಂದಿಗೆ (17 ಜನವರಿ 2026) 10 ವರ್ಷಗಳಾಗಿದ್ದು, ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ರೋಹಿತ್ ಅವರನ್ನು ಸ್ಮರಿಸಿ ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕ ಪೋಸ್ಟ್ ಹಾಕಿದ್ದಾರೆ.

ಅಲ್ಲದೆ, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ತಾರತಮ್ಯದ ಬಗ್ಗೆ ಉಲ್ಲೇಖಿಸಿರುವ ಅವರು, ಇದರ ವಿರುದ್ದ ಕಠಿಣ ಕಾನೂನು ಜಾರಿಯಾಗಬೇಕೆಂದು ಆಗ್ರಹಿಸಿದ್ದಾರೆ. ಈ ನಿಟ್ಟಿನಲ್ಲಿ ದಲಿತ ಯುವಜನರು ಧ್ವನಿ ಎತ್ತುವಂತೆ ಕರೆ ನೀಡಿದ್ದಾರೆ.

“ರೋಹಿತ್ ವೇಮುಲ ನಿಧನರಾಗಿ ಇಂದಿಗೆ 10 ವರ್ಷಗಳು. ಆದರೆ, “ಈ ದೇಶದಲ್ಲಿ ಕನಸು ಕಾಣಲು ಎಲ್ಲರಿಗೂ ಸಮಾನ ಹಕ್ಕುಗಳಿವೆಯೇ? ಎಂಬ ಅವರ ಪ್ರಶ್ನೆ ಇನ್ನೂ ನಮ್ಮ ಹೃದಯದಲ್ಲಿ ಪ್ರತಿಧ್ವನಿಸುತ್ತಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ರೋಹಿತ್ ಓದಲು, ಬರೆಯಲು ಬಯಸಿದ್ದರು. ವಿಜ್ಞಾನ, ಸಮಾಜ ಮತ್ತು ಮಾನವೀಯತೆಯನ್ನು ಅರ್ಥಮಾಡಿಕೊಳ್ಳುವ ಮೂಲಕ ಈ ದೇಶವನ್ನು ಸುಧಾರಿಸಲು ಅವರು ಬಯಸಿದ್ದರು. ಆದರೆ ಈ ವ್ಯವಸ್ಥೆಗೆ ಒಬ್ಬ ದಲಿತ ಮುಂದೆ ಬರುವುದು ಇಷ್ಟವಿರಲಿಲ್ಲ. “ಸಾಂಸ್ಥಿಕ ಜಾತಿವಾದ, ಸಾಮಾಜಿಕ ಬಹಿಷ್ಕಾರ, ದಿನನಿತ್ಯದ ಅವಮಾನ, ‘ಯೋಗ್ಯತೆ’ಯನ್ನು ಕುರಿತು ಮಾತನಾಡುವ ಭಾಷೆ ಮತ್ತು ಅಮಾನವೀಯ ವರ್ತನೆ – ಇದೇ ಆ ವಿಷವಾಗಿದ್ದು, ಒಬ್ಬ ಪ್ರತಿಭಾವಂತ ಯುವಕನನ್ನು ಅವನ ಘನತೆಯನ್ನು ಕಸಿದುಕೊಂಡು, ಅವನನ್ನು ಏಕಾಂಗಿಯನ್ನಾಗಿ ಮಾಡುವ ಹಂತಕ್ಕೆ ತಳ್ಳಿತು” ಎಂದಿದ್ದಾರೆ.

“ಮತ್ತೆ ಇಂದು? ದಲಿತ ಯುವಜನರ ವಾಸ್ತವವೇನಾದರೂ ಬದಲಾಗಿದೆಯೇ? ಕ್ಯಾಂಪಸ್‌ಗಳಲ್ಲಿ ಅದೇ ತಿರಸ್ಕಾರ, ಹಾಸ್ಟೆಲ್‌ಗಳಲ್ಲಿ ಅದೇ ಪ್ರತ್ಯೇಕತೆ, ತರಗತಿಗಳಲ್ಲಿ ಅದೇ ಕೀಳರಿಮೆ, ಮತ್ತೆ ಅದೇ ಹಿಂಸೆ – ಮತ್ತು ಕೆಲವೊಮ್ಮೆ ಅದೇ ಸಾವು. ಏಕೆಂದರೆ ಜಾತಿ ಇಂದಿಗೂ ಈ ದೇಶದ ಅತಿದೊಡ್ಡ ಪ್ರವೇಶ ಪತ್ರವಾಗಿದೆ” ಎಂದು ಹೇಳಿದ್ದಾರೆ.

“ಅದಕ್ಕಾಗಿಯೇ ರೋಹಿತ್ ವೇಮುಲ ಕಾಯ್ದೆಯು ಕೇವಲ ಒಂದು ಘೋಷಣೆಯಲ್ಲ, ಅದೊಂದು ಅಗತ್ಯವಾಗಿದೆ. ಶೈಕ್ಷಣಿಕ ಸಂಸ್ಥೆಗಳಲ್ಲಿನ ಜಾತಿ ತಾರತಮ್ಯ ಅಪರಾಧವಾಗಲು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮತ್ತು ಯಾವುದೇ ವಿದ್ಯಾರ್ಥಿಯನ್ನು ಅವರ ಜಾತಿಯ ಹೆಸರಿನಲ್ಲಿ ಕುಗ್ಗಿಸುವ, ಮೌನಗೊಳಿಸುವ ಮತ್ತು ಹೊರಗಟ್ಟುವುದನ್ನು ಕೊನೆಗಾಣಿಸಲು ಇದು ಅಗತ್ಯವಾಗಿದೆ” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

“ಈ ಹೋರಾಟ ಕೇವಲ ಸಂಸತ್ತಿನದ್ದಲ್ಲ. ಈ ಹೋರಾಟ ಕ್ಯಾಂಪಸ್‌ಗಳದ್ದು, ಯುವಜನತೆಯದ್ದು, ನಮ್ಮೆಲ್ಲರದ್ದು. ದಲಿತ ಯುವಕರೇ – ಧ್ವನಿ ಎತ್ತಿ, ಸಂಘಟಿತರಾಗಿ, ಒಬ್ಬರಿಗೊಬ್ಬರು ಬೆಂಬಲವಾಗಿ ನಿಲ್ಲಿ. ರೋಹಿತ್ ವೇಮುಲ ಕಾಯ್ದೆಯನ್ನು ಕೂಡಲೇ ಜಾರಿಗೆ ತನ್ನಿ ಮತ್ತು ತಾರತಮ್ಯ ವಿರೋಧಿ ಕಾನೂನು ಈಗಲೇ ಬೇಕು ಎಂದು ಒತ್ತಾಯಿಸಿ” ಎಂದು ಕರೆ ನೀಡಿದ್ದಾರೆ.

“ಕರ್ನಾಟಕ ಮತ್ತು ತೆಲಂಗಾಣದ ಕಾಂಗ್ರೆಸ್ ಸರ್ಕಾರಗಳು ಈ ಕಾನೂನನ್ನು ಆದಷ್ಟು ಬೇಗ ಜಾರಿಗೆ ತರುವ ಪ್ರಕ್ರಿಯೆಯಲ್ಲಿವೆ. ನ್ಯಾಯಯುತವಾದ, ಮಾನವೀಯ ಮತ್ತು ಸಮಾನತೆಯ ಭಾರತವನ್ನು ನಾವು ಬಯಸುತ್ತೇವೆ – ಅಲ್ಲಿ ಯಾವುದೇ ದಲಿತ ವಿದ್ಯಾರ್ಥಿ ತನ್ನ ಕನಸುಗಳಿಗಾಗಿ ಪ್ರಾಣ ತೆರಬೇಕಾದ ಪರಿಸ್ಥಿತಿ ಬರಬಾರದು. ರೋಹಿತ್, ನಿನ್ನ ಹೋರಾಟ ನಮ್ಮ ಜವಾಬ್ದಾರಿ” ಎಂದು ರಾಹುಲ್ ಗಾಂಧಿ ಬರೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣದಲ್ಲಿ ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸುತ್ತೇವೆ: ಭಟ್ಟಿ ವಿಕ್ರಮಾರ್ಕ ಮಲ್ಲು

ರಾಜ್ಯದಲ್ಲಿ ರೋಹಿತ್ ವೇಮುಲಾ ಕಾಯ್ದೆಯನ್ನು ಆದಷ್ಟು ಬೇಗ ಜಾರಿಗೆ ತರಲಾಗುವುದು ಎಂದು ತೆಲಂಗಾಣ ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ಮಲ್ಲು ಶನಿವಾರ ಹೇಳಿದ್ದಾರೆ. ಪ್ರಜಾ ಭವನದಲ್ಲಿ ಜಸ್ಟೀಸ್ ಫಾರ್ ರೋಹಿತ್ ವೇಮುಲಾ ಅಭಿಯಾನ ಸಮಿತಿಯ...

88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ : ಸಿಎಂ ಸಿದ್ದರಾಮಯ್ಯ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶನಿವಾರ (ಜ.17) ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಅವರು ಮಾತನಾಡಿದರು. ಪೋಲೀಸ್ ಇಲಾಖೆ ಕೆಲವು...

ಇಂದೋರ್ ಕಲುಷಿತ ನೀರು ದುರಂತ : ಸಂತ್ರಸ್ತ ಕುಟುಂಬಗಳನ್ನು ಭೇಟಿಯಾದ ರಾಹುಲ್ ಗಾಂಧಿ

ಶನಿವಾರ (ಜ.17) ಮಧ್ಯಪ್ರದೇಶದ ಇಂದೋರ್‌ಗೆ ಭೇಟಿ ನೀಡಿದ ಲೋಕಸಭೆಯ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ, ಇತ್ತೀಚೆಗೆ ಸಂಭವಿಸಿದ ಕಲುಷಿತ ನೀರು ದುರಂತದ ಸಂತ್ರಸ್ತರನ್ನು ಭೇಟಿಯಾದರು. ಕಲುಷಿತ ನೀರು ಕುಡಿದು ವಾಂತಿ ಮತ್ತು...

ಮಹಾರಾಷ್ಟ್ರದಲ್ಲಿ ಬಿಜೆಪಿ-ಎನ್‌ಡಿಎ ಜೊತೆ ಯಾವುದೇ ಮೈತ್ರಿ ಇಲ್ಲ: ಓವೈಸಿ

ಮಹಾರಾಷ್ಟ್ರದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಥವಾ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಜೊತೆ ಯಾವುದೇ ಮೈತ್ರಿ ಇರುವುದಿಲ್ಲ ಎಂದು ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಭಾರತದ ಅತ್ಯಂತ ಶ್ರೀಮಂತ ರಾಜ್ಯವಾದ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ...

ದೇವರು-ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ; ಬಿಜೆಪಿ ಕೌನ್ಸಿಲರ್‌ಗಳಿಗೆ ಕೇರಳ ಹೈಕೋರ್ಟ್ ನೋಟಿಸ್

ತಿರುವನಂತಪುರಂ ನಗರಸಭೆಯ ಬಿಜೆಪಿ ಕೌನ್ಸಿಲರ್‌ಗಳು ವಿವಿಧ ದೇವರು, ಹುತಾತ್ಮರು ಮತ್ತು ರಾಜಕೀಯ ಚಳುವಳಿಗಳ ಹೆಸರಿನಲ್ಲಿ ಮಾಡಿದ ಪ್ರಮಾಣವಚನಗಳ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯ ಕುರಿತು ಕೇರಳ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ...

ಮಧ್ಯಪ್ರದೇಶ: ಬುಡಕಟ್ಟು ವಿಶ್ವವಿದ್ಯಾಲಯ ಹಾಸ್ಟೆಲ್ ಒಳಗೆ ಅಸ್ಸಾಮಿ ವಿದ್ಯಾರ್ಥಿ ಮೇಲೆ ಗುಂಪು ಹಲ್ಲೆ

ಮಧ್ಯಪ್ರದೇಶದ ಇಂದಿರಾ ಗಾಂಧಿ ರಾಷ್ಟ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಹಾಸ್ಟೆಲ್ ಕೋಣೆಯೊಳಗೆ ಐದು ಜನ ವಿದ್ಯಾರ್ಥಿಗಳ ತಂಡವು ಅಸ್ಸಾಮಿ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಗುಂಪು ಆತನಿಗೆ ಇಲ್ಲಿಯೇ ಸಾಯಬೇಕು ಎಂದು...

ಮಹಿಳೆಯರ ಜೊತೆ ಪುರುಷರಿಗೂ ಉಚಿತ ಬಸ್‌ ಪ್ರಯಾಣ, ಗ್ರಾಮೀಣರಿಗೆ 150 ಕೂಲಿ ದಿನ : ಎಐಎಡಿಎಂಕೆ ಚುನಾವಣಾ ಭರವಸೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಶನಿವಾರ (ಜ.17) ಪಕ್ಷದ ಮೊದಲ ಹಂತದ ಪ್ರಣಾಳಿಕೆ (ಚುನಾವಣಾ ಭರವಸೆ) ಬಿಡುಗಡೆ ಮಾಡಿದ್ದಾರೆ. ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯಂತೆ ಎಲ್ಲಾ ಪಡಿತರ...

ಛತ್ತೀಸ್‌ಗಢ| ಬಿಜಾಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಸಾವು

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳೊಂದಿಗಿನ ಎನ್‌ಕೌಂಟರ್‌ನಲ್ಲಿ ಕನಿಷ್ಠ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯ ವಾಯುವ್ಯ ಪ್ರದೇಶದ ಅರಣ್ಯ ಬೆಟ್ಟಗಳಲ್ಲಿ ಶನಿವಾರ ಬೆಳಿಗ್ಗೆ ಗುಂಡಿನ ಚಕಮಕಿ ನಡೆಯಿತು. ಹಿರಿಯ...

ಮಮತಾ ಬ್ಯಾನರ್ಜಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಸುವೇಂದು ಅಧಿಕಾರಿ

ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಶುಕ್ರವಾರ (ಜ.16) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ 100 ಕೋಟಿ ರೂ.ಗಳ ಪರಿಹಾರ ಕೋರಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಮಮತಾ...

ಕೋಮುವಾದ ಕಾರಣಕ್ಕೆ ಬಾಲಿವುಡ್‌ನಲ್ಲಿ ಅವಕಾಶ ಕಡಿಮೆ; ರೆಹಮಾನ್ ಹೇಳಿಕೆ ತಳ್ಳಿಹಾಕಿದ ಜಾವೇದ್ ಅಖ್ತರ್

ಯಶಸ್ವೀ ಸಂಗೀತಗಾರನಾಗಿ ಹಲವು ಕೊಡುಗೆ ನೀಡಿದ್ದರೂ ಕೆಲವರಿಗೆ ಹೊರಗಿನವನು ಎಂಬ ಭಾವನೆ ಹೋಗಿಲ್ಲ. ಕಳೆದ ಎಂಟು ವರ್ಷಗಳಲ್ಲಿ ಬಾಲಿವುಡ್‌ನ ಕದ ಮುಚ್ಚಿದೆ ಎಂಬ ಬಗ್ಗೆ ಎ.ಆರ್. ರೆಹಮಾನ್ ಹೇಳಿಕೆಯನ್ನು ಹಿರಿಯ ಗೀತೆ ರಚನೆಕಾರ...