Homeಅಂತರಾಷ್ಟ್ರೀಯ'ನಮ್ಮ ದೇಶ ಮಾರಾಟಕ್ಕಿಲ್ಲ': ಟ್ರಂಪ್‌ ಸಂಚಿನ ವಿರುದ್ಧ ಬೀದಿಗಿಳಿದ ಗ್ರೀನ್‌ಲ್ಯಾಂಡ್‌ ಜನತೆ, ಬೃಹತ್ ಪ್ರತಿಭಟನೆ

‘ನಮ್ಮ ದೇಶ ಮಾರಾಟಕ್ಕಿಲ್ಲ’: ಟ್ರಂಪ್‌ ಸಂಚಿನ ವಿರುದ್ಧ ಬೀದಿಗಿಳಿದ ಗ್ರೀನ್‌ಲ್ಯಾಂಡ್‌ ಜನತೆ, ಬೃಹತ್ ಪ್ರತಿಭಟನೆ

- Advertisement -
- Advertisement -

ಖನಿಜ ಸಮೃದ್ದ ಗ್ರೀನ್‌ಲ್ಯಾಂಡ್‌ ಅನ್ನು ವಶಪಡಿಸಿಕೊಳ್ಳುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಂಚಿನ ವಿರುದ್ದ ಅಲ್ಲಿನ ಜನರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಶನಿವಾರ (ಜ.17) ಗ್ರೀನ್‌ಲ್ಯಾಂಡ್‌ ರಾಜಧಾನಿ ನೂಕ್‌ನಲ್ಲಿ ಭಿತ್ತಿಪತ್ರಗಳನ್ನು ಹಿಡಿದು ಬೀದಿಗಳಿದ ಸಾವಿರಾರು ಜನರು, ‘ಗ್ರೀನ್‌ಲ್ಯಾಂಡ್‌ ಮಾರಾಟಕ್ಕಿಲ್ಲ” ಎಂಬ ಘೋಷಣೆಗಳನ್ನು ಕೂಗುವ ಮೂಲಕ ಟ್ರಂಪ್‌ಗೆ ಎಚ್ಚರಿಕೆ ನೀಡಿದ್ದಾರೆ. ಇದು ಗ್ರೀನ್‌ಲ್ಯಾಂಡ್ ಇತಿಹಾಸದಲ್ಲೇ ನಡೆದ ಅತಿದೊಡ್ಡ ಪ್ರತಿಭಟನೆ ಎಂದು ಹೇಳಲಾಗುತ್ತಿದೆ.

ಗ್ರೀನ್‌ಲ್ಯಾಂಡ್‌ನ ಪ್ರಧಾನ ಮಂತ್ರಿ ಜೆನ್ಸ್-ಫ್ರೆಡೆರಿಕ್ ನೀಲ್ಸನ್ ಅವರೇ ಸ್ವತಃ ಈ ಪ್ರತಿಭಟನೆಯಲ್ಲಿ ಭಾಗವಹಿಸಿ, ತಮ್ಮ ದೇಶದ ಸ್ವಾಯತ್ತತೆಯನ್ನು ರಕ್ಷಿಸುವ ಭರವಸೆ ನೀಡಿದ್ದಾರೆ.

ಗ್ರೀನ್‌ಲ್ಯಾಂಡ್‌ನ ರಾಜಧಾನಿ ನೂಕ್ ನಗರದ ಜನಸಂಖ್ಯೆ ಸುಮಾರು 20,000 ಆಗಿದ್ದು, ಪ್ರತಿಭಟನೆಯಲ್ಲಿ ಅದರ ನಾಲ್ಕನೇ ಒಂದು ಭಾಗದಷ್ಟು ಜನರು (ಸುಮಾರು 5,000ಕ್ಕೂ ಹೆಚ್ಚು ಜನರು) ಭಾಗವಹಿಸಿದ್ದರು. ಚಳಿ ಮತ್ತು ಮಳೆಯನ್ನೂ ಲೆಕ್ಕಿಸದೆ ಜನರು ಸಾಂಪ್ರದಾಯಿಕ ಇನ್ಯೂಟ್ ಗೀತೆಗಳನ್ನು ಹಾಡುತ್ತಾ ಮೆರವಣಿಗೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಪ್ರತಿಭಟನಾಕಾರರು “Make America Go Away” (ಅಮೆರಿಕಾವನ್ನು ದೂರವಿಡಿ) ಎಂದು ಬರೆದ ಕೆಂಪು ಟೋಪಿಗಳನ್ನು ಧರಿಸಿದ್ದರು. ಅಷ್ಟೇ ಅಲ್ಲದೆ, “Yankee Go Home” ಮತ್ತು “Kalaallit Nunaat” (ಗ್ರೀನ್‌ಲ್ಯಾಂಡ್‌ನ ಸ್ಥಳೀಯ ಹೆಸರು) ಎಂಬ ಘೋಷಣೆಗಳು ಮೊಳಗಿವೆ ಎಂದು ವರದಿ ಉಲ್ಲೇಖಿಸಿದೆ.

ಗ್ರೀನ್‌ಲ್ಯಾಂಡ್‌ಗೆ ಬೆಂಬಲ ಸೂಚಿಸಿ ಡೆನ್ಮಾರ್ಕ್‌ನ ರಾಜಧಾನಿ ಕೋಪನ್‌ಹೆಗನ್‌ನಲ್ಲಿ ಮತ್ತು ಡೆನ್ಮಾರ್ಕ್‌ಗೆ ಸೇರಿದ ಇತರ ಸ್ಥಳಗಳಲ್ಲಿ ಜನರು ಮೆರವಣಿಗೆ ಮತ್ತು ರ‍್ಯಾಲಿ ನಡೆಸಿದ್ದಾರೆ. ಕೆನಡಾದಲ್ಲಿರುವ ‘ನುನಾವುಟ್’ ಎಂಬ ಇನ್ಯೂಟ್ ಜನರು (ಗ್ರೀನ್‌ಲ್ಯಾಂಡ್‌ನ ಸ್ಥಳೀಯರಂತೆಯೇ ಇರುವ ಜನಾಂಗ) ಆಡಳಿತ ನಡೆಸುವ ಪ್ರದೇಶದ ರಾಜಧಾನಿಯಲ್ಲಿಯೂ ಸಹ ಗ್ರೀನ್‌ಲ್ಯಾಂಡ್‌ ಜನರೊಂದಿಗೆ ಒಗ್ಗಟ್ಟು ಪ್ರದರ್ಶಿಸಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಯುರೋಪ್ ರಾಷ್ಟ್ರಗಳ ಬೆಂಬಲ

ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಫ್ರಾನ್ಸ್, ಜರ್ಮನಿ, ಬ್ರಿಟನ್, ಸ್ವೀಡನ್ ಮತ್ತು ನಾರ್ವೆ ಸೇರಿದಂತೆ ಹಲವು ದೇಶಗಳು ಗ್ರೀನ್‌ಲ್ಯಾಂಡ್‌ನ ಭದ್ರತೆಗಾಗಿ ‘ಆಪರೇಷನ್ ಆರ್ಕ್ಟಿಕ್ ಎಂಡ್ಯೂರೆನ್ಸ್’ ಎಂಬ ಮಿಲಿಟರಿ ಅಭ್ಯಾಸದ ಭಾಗವಾಗಿ ತಮ್ಮ ಸೈನಿಕರನ್ನು ಅಲ್ಲಿಗೆ ಕಳುಹಿಸಿವೆ.

ಪ್ರತಿಭಟನೆಗಳ ನಡುವೆಯೇ, ಗ್ರೀನ್‌ಲ್ಯಾಂಡ್ ಹಸ್ತಾಂತರಕ್ಕೆ ಒಪ್ಪದ ಯುರೋಪಿಯನ್ ರಾಷ್ಟ್ರಗಳ ಮೇಲೆ ಟ್ರಂಪ್ ಅವರು ಫೆಬ್ರವರಿ 1 ರಿಂದ ಶೇ. 10 ರಷ್ಟು ಮತ್ತು ಜೂನ್ 1 ರಿಂದ ಶೇ. 25 ರಷ್ಟು ಆಮದು ಸುಂಕ ಹೇರುವುದಾಗಿ ಘೋಷಿಸಿದ್ದಾರೆ.

ಸಮೀಕ್ಷೆಗಳ ಪ್ರಕಾರ ಗ್ರೀನ್‌ಲ್ಯಾಂಡ್‌ನ ಶೇ. 85 ರಷ್ಟು ಜನರು ಅಮೆರಿಕಾದ ಭಾಗವಾಗಲು ಇಷ್ಟಪಡುತ್ತಿಲ್ಲ. “ನಮ್ಮ ದೇಶವು ಒಂದು ಆಟಿಕೆಯಲ್ಲ, ಇದು ನಮ್ಮ ಮನೆ” ಎಂಬುದು ಅಲ್ಲಿನ ನಾಗರಿಕರ ಒಮ್ಮತದ ಅಭಿಪ್ರಾಯವಾಗಿದೆ.

ಡೆನ್ಮಾರ್ಕ್ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸೆನ್ ಅವರು ಟ್ರಂಪ್ ಅವರ ಈ ನಡೆಯನ್ನು “ಅಪಾಯಕಾರಿ ಆಟ” ಎಂದು ಕರೆದಿದ್ದು, ಇದು ನ್ಯಾಟೋ ಒಕ್ಕೂಟದ ಅಸ್ತಿತ್ವಕ್ಕೆ ಧಕ್ಕೆ ತರಬಹುದು ಎಂದು ಎಚ್ಚರಿಸಿದ್ದಾರೆ.

ಟ್ರಂಪ್‌ ಸಂಚಿನ ವಿರುದ್ದದ ಗ್ರೀನ್‌ಲ್ಯಾಂಡ್‌ ಜನರ ಪ್ರತಿಭಟನೆಯು ಕೇವಲ ಒಂದು ದೇಶದ ವಿಷಯವಾಗಿ ಉಳಿಯದೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಜಾಪ್ರಭುತ್ವ ಮತ್ತು ಸ್ವಾಯತ್ತತೆಯ ಹೋರಾಟವಾಗಿ ಬದಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ | ಜನಾಂಗೀಯ ಹಿಂಸಾಚಾರದ ವೇಳೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಕುಕಿ ಯುವತಿ ಸಾವು

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದ ವೇಳೆ, ಅಂದರೆ ಮೇ 2023ರಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ 20 ವರ್ಷದ ಕುಕಿ ಸಮುದಾಯದ ಯುವತಿ, ದೀರ್ಘಕಾಲದ ಅನಾರೋಗ್ಯದ ನಂತರ ಜನವರಿ 10ರಂದು ನಿಧನರಾದರು ಎಂದು ನ್ಯೂಸ್‌ಲಾಂಡ್ರಿ ಶನಿವಾರ (ಜ.17)...

ಖಾಲಿ ಮನೆಯಲ್ಲಿ ನಮಾಝ್ : 12 ಜನರನ್ನು ಬಂಧಿಸಿದ ಪೊಲೀಸರು

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಹಳ್ಳಿಯೊಂದರ ಖಾಲಿ ಮನೆಯಲ್ಲಿ ನಮಾಝ್ ಮಾಡಿದ 12 ಜನರನ್ನು ಪೊಲೀಸರು ಬಂಧಿಸಿದ್ದಾರೆ ವರದಿಯಾಗಿದೆ. ಅನುಮತಿ ಪಡೆಯದೆ ನಮಾಝ್ ಮಾಡಿದ್ದಾರೆ ಎಂಬ ಕಾರಣಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು theprint.in ವರದಿ ಮಾಡಿದೆ....

ಪಾದ್ರಿ ಮೇಲೆ ಹಲ್ಲೆ ನಡೆಸಿದ ಹಿಂದುತ್ವ ಗುಂಪು : ಸಗಣಿ ತಿನ್ನಿಸಿ, ಜೈ ಶ್ರೀ ರಾಮ್ ಹೇಳುವಂತೆ ಒತ್ತಾಯ; ವರದಿ

ಒಡಿಶಾದ ಧೆಂಕನಲ್‌ನಲ್ಲಿ ಪಾದ್ರಿಯೊಬ್ಬರ ಮೇಲೆ ಬಜರಂಗದಳ ಸದಸ್ಯರು ಹಲ್ಲೆ ನಡೆಸಿದ್ದು, ಸಗಣಿ ತಿನ್ನಿಸಿ, ಜೈ ಶ್ರೀರಾಮ್ ಕೂಗುವಂತೆ ಒತ್ತಾಯಿಸಿದ್ದಾರೆ ಎಂದು ಮಕ್ತೂಬ್ ಮೀಡಿಯಾ ವರದಿ ಮಾಡಿದೆ. ಜನವರಿ 4ರಂದು ಭಾನುವಾರ ಈ ಘಟನೆ ನಡೆದಿದ್ದು,...

ವಿಮಾನ ಸೇವೆಯಲ್ಲಿ ವ್ಯತ್ಯಯ : ಇಂಡಿಗೋ ಏರ್‌ಲೈನ್ಸ್‌ಗೆ 22 ಕೋಟಿ ರೂ. ದಂಡ

ಕಳೆದ ತಿಂಗಳು ವಿಮಾನಯಾನ ಸೇವೆಯಲ್ಲಿ ಉಂಟಾದ ಭಾರೀ ವ್ಯತ್ಯಯಕ್ಕೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನಗಳ ಮಹಾನಿರ್ದೇಶನಾಲಯ (ಡಿಜಿಸಿಎ) ಇಂಡಿಗೋ ವಿಮಾನಯಾನ ಸಂಸ್ಥೆಗೆ 22.2 ಕೋಟಿ ರೂಪಾಯಿ ದಂಡ ವಿಧಿಸಿದೆ. ಡಿಸೆಂಬರ್ 3 ರಿಂದ 5 ರವರೆಗಿನ...

ತೆಲಂಗಾಣದಲ್ಲಿ ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸುತ್ತೇವೆ: ಭಟ್ಟಿ ವಿಕ್ರಮಾರ್ಕ ಮಲ್ಲು

ರಾಜ್ಯದಲ್ಲಿ ರೋಹಿತ್ ವೇಮುಲಾ ಕಾಯ್ದೆಯನ್ನು ಆದಷ್ಟು ಬೇಗ ಜಾರಿಗೆ ತರಲಾಗುವುದು ಎಂದು ತೆಲಂಗಾಣ ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ಮಲ್ಲು ಶನಿವಾರ ಹೇಳಿದ್ದಾರೆ. ಪ್ರಜಾ ಭವನದಲ್ಲಿ ಜಸ್ಟೀಸ್ ಫಾರ್ ರೋಹಿತ್ ವೇಮುಲಾ ಅಭಿಯಾನ ಸಮಿತಿಯ...

88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ : ಸಿಎಂ ಸಿದ್ದರಾಮಯ್ಯ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶನಿವಾರ (ಜ.17) ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಅವರು ಮಾತನಾಡಿದರು. ಪೋಲೀಸ್ ಇಲಾಖೆ ಕೆಲವು...

ಇಂದೋರ್ ಕಲುಷಿತ ನೀರು ದುರಂತ : ಸಂತ್ರಸ್ತ ಕುಟುಂಬಗಳನ್ನು ಭೇಟಿಯಾದ ರಾಹುಲ್ ಗಾಂಧಿ

ಶನಿವಾರ (ಜ.17) ಮಧ್ಯಪ್ರದೇಶದ ಇಂದೋರ್‌ಗೆ ಭೇಟಿ ನೀಡಿದ ಲೋಕಸಭೆಯ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ, ಇತ್ತೀಚೆಗೆ ಸಂಭವಿಸಿದ ಕಲುಷಿತ ನೀರು ದುರಂತದ ಸಂತ್ರಸ್ತರನ್ನು ಭೇಟಿಯಾದರು. ಕಲುಷಿತ ನೀರು ಕುಡಿದು ವಾಂತಿ ಮತ್ತು...

ಮಹಾರಾಷ್ಟ್ರದಲ್ಲಿ ಬಿಜೆಪಿ-ಎನ್‌ಡಿಎ ಜೊತೆ ಯಾವುದೇ ಮೈತ್ರಿ ಇಲ್ಲ: ಓವೈಸಿ

ಮಹಾರಾಷ್ಟ್ರದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಥವಾ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಜೊತೆ ಯಾವುದೇ ಮೈತ್ರಿ ಇರುವುದಿಲ್ಲ ಎಂದು ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಭಾರತದ ಅತ್ಯಂತ ಶ್ರೀಮಂತ ರಾಜ್ಯವಾದ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ...

ರೋಹಿತ್ ವೇಮುಲ ಕಾಯ್ದೆ ಘೋಷಣೆಯಲ್ಲ, ಅಗತ್ಯ : ರಾಹುಲ್ ಗಾಂಧಿ

ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲ ಜಾತಿ ತಾರತಮ್ಯಕ್ಕೆ ಬಲಿಯಾಗಿ ಇಂದಿಗೆ (17 ಜನವರಿ 2026) 10 ವರ್ಷಗಳಾಗಿದ್ದು, ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ರೋಹಿತ್ ಅವರನ್ನು ಸ್ಮರಿಸಿ ಸಾಮಾಜಿಕ...

ದೇವರು-ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ; ಬಿಜೆಪಿ ಕೌನ್ಸಿಲರ್‌ಗಳಿಗೆ ಕೇರಳ ಹೈಕೋರ್ಟ್ ನೋಟಿಸ್

ತಿರುವನಂತಪುರಂ ನಗರಸಭೆಯ ಬಿಜೆಪಿ ಕೌನ್ಸಿಲರ್‌ಗಳು ವಿವಿಧ ದೇವರು, ಹುತಾತ್ಮರು ಮತ್ತು ರಾಜಕೀಯ ಚಳುವಳಿಗಳ ಹೆಸರಿನಲ್ಲಿ ಮಾಡಿದ ಪ್ರಮಾಣವಚನಗಳ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯ ಕುರಿತು ಕೇರಳ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ...