Homeಮುಖಪುಟಬಹುಮತವಿಲ್ಲದ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ಹೇಗೆ? ಕೇಸರಿ ಪಕ್ಷದ ತಂತ್ರ ತಿಳಿಸಿದ ಕಪಿಲ್ ಸಿಬಲ್

ಬಹುಮತವಿಲ್ಲದ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ಹೇಗೆ? ಕೇಸರಿ ಪಕ್ಷದ ತಂತ್ರ ತಿಳಿಸಿದ ಕಪಿಲ್ ಸಿಬಲ್

- Advertisement -
- Advertisement -

ಬಿಜೆಪಿ ಜೊತೆ ಕೈಜೋಡಿಸುವ ಪ್ರಾದೇಶಿಗಳ ಪಕ್ಷಗಳು ಅಥವಾ ಸಣ್ಣ ಪಕ್ಷಗಳಿಗೆ ರಾಜ್ಯಸಭಾ ಸಂಸದ ಮತ್ತು ಹಿರಿಯ ವಕೀಲ ಕಪಿಲ್ ಸಿಬಲ್ ಭಾನುವಾರ (ಜ.18) ಎಚ್ಚರಿಕೆ ನೀಡಿದ್ದು, ಕೇಸರಿ ಪಕ್ಷ ಆರಂಭದಲ್ಲಿ ಮೈತ್ರಿ ಮಾಡಿಕೊಂಡು ಅಧಿಕಾರ ಹಿಡಿದು, ಬಳಿಕ ಪ್ರಾದೇಶಿಕ ಪಕ್ಷಗಳನ್ನು ಮುಗಿಸಿಬಿಡುತ್ತದೆ ಎಂದಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಕಪಿಲ್ ಸಿಬಲ್, “ಬಿಜೆಪಿ ಅಧಿಕಾರದಲ್ಲಿ ಇಲ್ಲದ ಅಥವಾ ಬಹುಮತವಿಲ್ಲದ ರಾಜ್ಯಗಳಲ್ಲಿ ಇತರ ರಾಜಕೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುತ್ತದೆ. ನಂತರ ಅವರನ್ನು ದುರ್ಬಲಗೊಳಿಸುತ್ತದೆ ಅಥವಾ ಅಂಚಿಗೆ ತಳ್ಳುತ್ತದೆ. ಈ ತಂತ್ರ ಬಿಹಾರದಲ್ಲಿ ಯಶಸ್ವಿಯಾಗಿದೆ. ಮಹಾರಾಷ್ಟ್ರದಲ್ಲಿಯೂ ಬಳಸಲಾಗುತ್ತಿದೆ” ಎಂದು ಹೇಳಿದ್ದಾರೆ.

ಅಂದರೆ, ಬಿಹಾರದಲ್ಲಿ ಮೊದಲ ಅವಧಿಯಲ್ಲಿ ಜೆಡಿ(ಯು) ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡಿತ್ತು. ಎರಡನೇ ಅವಧಿಯಲ್ಲಿ ಬಿಜೆಪಿಯೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಹರಿಯಾಣದಲ್ಲೂ ಮೊದಲ ಅವಧಿಗೆ ಐಎನ್‌ಎಲ್‌ಡಿ ಜೊತೆ ಮೈತ್ರಿ ಮಾಡಿಕೊಂಡಿತ್ತು. ಎರಡನೇ ಅವಧಿಗೆ ಬಿಜೆಪಿಯೇ ದೊಡ್ಡ ಪಕ್ಷವಾಯಿತು. ಮಹಾರಾಷ್ಟ್ರದಲ್ಲಿ ಮೊದಲು ಶಿವಸೇನೆ ಜೊತೆ ಮೈತ್ರಿ ಮಾಡಿಕೊಂಡಿತ್ತು. ಈಗ ಬಿಜೆಪಿಯೇ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ ಎಂಬುವುದು ಕಪಿಲ್ ಸಿಬಲ್ ಪೋಸ್ಟ್‌ನ ಸಾರಾಂಶವಾಗಿದೆ.

ಮಹಾರಾಷ್ಟ್ರದಲ್ಲಿ ಶಿವಸೇನೆಯ ವಿಭಜನೆಯ ಹಿಂದೆ ಬಿಜೆಪಿಯೇ ಮುಖ್ಯ ಪಾತ್ರವಹಿಸಿದೆ ಎಂದು ಹೇಳಲಾಗ್ತಿದೆ. ಮೊದಲು ಶಿವಸೇನೆಯನ್ನು ಒಡೆದು ಏಕನಾಥ್ ಶಿಂದೆ ಬಣದ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡಿತ್ತು. ಈಗ ಶಿಂದೆ ಬಣಕ್ಕಿಂತ ಹೆಚ್ಚಿನ ಸ್ಥಾನಗಳನ್ನು ಬಿಜೆಪಿ ಪಡೆದುಕೊಂಡಿದೆ. ಇದು ವಿಧಾನಸಭೆ ಮತ್ತು ಇತ್ತೀಚಿಗೆ ನಡೆದ ನಗರ ಪಾಲಿಕೆ ಚುನಾವಣೆಯಲ್ಲಿ ಸ್ಪಷ್ಟವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...