Homeಕರ್ನಾಟಕವಿಡಿಯೋ ವೈರಲ್ ಬಳಿಕ ವ್ಯಕ್ತಿ ಆತ್ಮಹತ್ಯೆ ಪ್ರಕರಣ : ಮಹಿಳೆ ವಿರುದ್ಧ ಪ್ರಕರಣ ದಾಖಲಿಸಿದ ಪೊಲೀಸರು,...

ವಿಡಿಯೋ ವೈರಲ್ ಬಳಿಕ ವ್ಯಕ್ತಿ ಆತ್ಮಹತ್ಯೆ ಪ್ರಕರಣ : ಮಹಿಳೆ ವಿರುದ್ಧ ಪ್ರಕರಣ ದಾಖಲಿಸಿದ ಪೊಲೀಸರು, ವರದಿ ಕೇಳಿದ ಮಾನವ ಹಕ್ಕುಗಳ ಆಯೋಗ

- Advertisement -
- Advertisement -

ಬಸ್‌ ಪ್ರಯಾಣದ ವೇಳೆ ಲೈಂಗಿಕ ಕಿರುಕುಳ ಆಗಿದೆ ಎಂದು ಆರೋಪಿಸಿ ವಿಡಿಯೋ ಪೋಸ್ಟ್ ಮಾಡಿದ ಬಳಿಕ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಸಂಬಂಧಿಸಿದಂತೆ ಕೇರಳದ ಮಹಿಳೆ ವಿರುದ್ದ ಪೊಲೀಸರು ‘ಆತ್ಮಹತ್ಯೆಗೆ ಪ್ರಚೋದನೆ’ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಡಿಯೋ ಹಂಚಿಕೊಂಡ ಶಿಮ್ಜಿತಾ ಮುಸ್ತಫಾ ಎಂಬ ಮಹಿಳೆ ವಿರುದ್ದ ಕೋಝಿಕ್ಕೋಡ್ ಮೆಡಿಕಲ್ ಕಾಲೇಜು ಪೊಲೀಸ್‌ ಠಾಣೆಯಲ್ಲಿ ಸೋಮವಾರ (ಜ.19) ಎಫ್‌ಐಆರ್ ದಾಖಲಾಗಿದೆ. ಈಕೆ ವಿಡಿಯೋ ಹಂಚಿಕೊಂಡ ಬಳಿಕ ಮನನೊಂದು ಕೋಝಿಕ್ಕೋಡ್ ನಿವಾಸಿ 42 ವರ್ಷದ ದೀಪಕ್ ಆತ್ಮಹತ್ಯೆ ಮಾಡಿಕೊಂಡಿದ್ದರು.

ದೂರುಗಳು ಮತ್ತು ಮೃತರಿಗೆ ತೀವ್ರ ಮಾನಸಿಕ ತೊಂದರೆ ಉಂಟುಮಾಡಿದ ಘಟನೆಗಳ ಅನುಕ್ರಮದ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತನಿಖೆಯ ಭಾಗವಾಗಿ ಪೊಲೀಸರು ಜನವರಿ 19ರಂದು ದೀಪಕ್ ಪೋಷಕರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ವಿಡಿಯೋ ವೈರಲ್ ಆದ ನಂತರ ದೀಪಕ್ ವಿರುದ್ಧ ಸಾರ್ವಜನಿಕವಾಗಿ ಅವಹೇಳನಕಾರಿ ಹೇಳಿಕೆ ನೀಡಲಾಗಿದೆ ಎಂದು ಆರೋಪಿಸಿ ಅವರ ಕುಟುಂಬಸ್ಥರು ಕೋಝಿಕ್ಕೋಡ್ ನಗರ ಪೊಲೀಸ್ ಆಯುಕ್ತರನ್ನು ಸಂಪರ್ಕಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ದೂರಿನ ಪ್ರತಿಗಳನ್ನು ಜಿಲ್ಲಾಧಿಕಾರಿ, ಮಾನವ ಹಕ್ಕುಗಳ ಆಯೋಗ ಮತ್ತು ಡಿಜಿಪಿಗೆ ಕಳುಹಿಸಲಾಗುವುದು ಎಂದು ಕುಟುಂಬಸ್ಥರು ಹೇಳಿದ್ದಾರೆ.

ಮಾನವ ಹಕ್ಕುಗಳ ಆಯೋಗವು ವಕೀಲರಾದ ವಿ ದೇವದಾಸ್ ಮತ್ತು ಅಬ್ದುಲ್ ರಹೀಮ್ ಪೂಕತ್ ಅವರು ಸಲ್ಲಿಸಿದ ದೂರುಗಳ ಮೇರೆಗೆ ಘಟನೆಯ ತನಿಖೆ ನಡೆಸುವಂತೆ ಉತ್ತರ ವಲಯ ಡಿಐಜಿಗೆ ನಿರ್ದೇಶನ ನೀಡಿದೆ. ನ್ಯಾಯಾಂಗ ಸದಸ್ಯ ಕೆ ಬೈಜುನಾಥ್ ಅವರು ಒಂದು ವಾರದೊಳಗೆ ವರದಿ ಕೋರಿದ್ದಾರೆ. ಫೆಬ್ರವರಿ 19ರಂದು ಕೋಝಿಕ್ಕೋಡ್‌ನ ಲೋಕೋಪಯೋಗಿ ಇಲಾಖೆಯ ವಿಶ್ರಾಂತಿ ಗೃಹದಲ್ಲಿ ನಡೆಯುವ ಆಯೋಗದ ಸಭೆಯಲ್ಲಿ ಈ ಪ್ರಕರಣವನ್ನು ಪರಿಗಣಿಸಲಾಗುವುದು ಎಂದಿದ್ದಾರೆ.

ಕುಟುಂಬದವರ ಪ್ರಕಾರ, ಜನವರಿ 16 ರಂದು ದೀಪಕ್ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ನಲ್ಲಿ ಕೆಲಸಕ್ಕಾಗಿ ಕೋಝಿಕ್ಕೋಡ್‌ನಿಂದ ಕಣ್ಣೂರಿಗೆ ಪ್ರಯಾಣಿಸುತ್ತಿದ್ದಾಗ, ಅದೇ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಶಿಮ್ಜಿತಾ, ದೀಪಕ್ ಅವರ ಮೊಣಕೈ ತನ್ನ ದೇಹಕ್ಕೆ ತಾಗಿದೆ. ಅವರು ದುರುದ್ದೇಶದಿಂದ ಕೃತ್ಯವೆಸಗಿದ್ದಾರೆ ಎಂದು ವಿಡಿಯೋ ರೆಕಾರ್ಡ್ ಮಾಡಿ ಹಂಚಿಕೊಂಡಿದ್ದರು.

ದೀಪಕ್ ತನ್ನ ದೇಹಕ್ಕೆ ಉದ್ಧೇಶಪೂರ್ವಕವಾಗಿ ಕೈ ತಾಗಿಸುವ ಮೂಲಕ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಶಿಮ್ಜಿತಾ ಆರೋಪಿಸಿದರೆ, ದೀಪಕ್ ಅವರ ಕುಟುಂಬಸ್ಥರು ಮತ್ತು ಸ್ನೇಹಿತರು ಅದು ಆಕಸ್ಮಿಕ ಘಟನೆ ಎಂದಿದ್ದಾರೆ. ಶಿಮ್ಜಿತಾ ಹಂಚಿಕೊಂಡ ವಿಡಿಯೋ ವೈರಲ್ ಆದ ಬಳಿಕ ದೀಪಕ್ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ವಿಚಾರ ಕೇರಳ ಮಾತ್ರವಲ್ಲದೆ ಕರ್ನಾಟಕ, ತಮಿಳುನಾಡು ಸೇರಿದಂತೆ ಸುತ್ತಮುತ್ತಲಿನ ರಾಜ್ಯಗಳಲ್ಲೂ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಶಿಮ್ಜಿತಾ ಅವರು ತನ್ನ ಸಾಮಾಜಿಕ ಮಾಧ್ಯಮ ಪ್ರೊಫೈಲ್‌ನಲ್ಲಿ ಆಕೆ ಮನಶ್ಶಾಸ್ತ್ರಜ್ಞೆ ಮತ್ತು ವಾಣಿಜ್ಯ ಉಪನ್ಯಾಸಕಿ ಎಂದು ಹೇಳಿಕೊಂಡಿದ್ದಾರೆ. ಕೆಲ ವರದಿಗಳು ಶಿಮ್ಜಿತಾ ಮುಸ್ಲಿಂ ಲೀಗ್ ಪಕ್ಷದ ಸ್ಥಳೀಯ ನಾಯಕಿ ಎಂದಿದೆ. ಎಲ್ಲಾ ಹೇಳಿಕೆಗಳು ಮತ್ತು ಸಂಬಂಧಿತ ವರದಿಗಳನ್ನು ಪರಿಶೀಲಿಸಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...