Homeಮುಖಪುಟಮೋದಿ ಕಾರ್ಯಕ್ರಮದಲ್ಲಿ ಸಮೋಸ ವಿತರಣೆಗೆ 2 ಕೋಟಿ ರೂ. ಖರ್ಚು : ಬಿಜೆಪಿ ವಿರುದ್ಧ ಕೇಜ್ರಿವಾಲ್...

ಮೋದಿ ಕಾರ್ಯಕ್ರಮದಲ್ಲಿ ಸಮೋಸ ವಿತರಣೆಗೆ 2 ಕೋಟಿ ರೂ. ಖರ್ಚು : ಬಿಜೆಪಿ ವಿರುದ್ಧ ಕೇಜ್ರಿವಾಲ್ ಆರೋಪ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ಗುಜರಾತ್‌ನ ಬುಡಕಟ್ಟು ಪ್ರದೇಶಕ್ಕೆ ಭೇಟಿ ನೀಡಿದ ಕಾರ್ಯಕ್ರಮಕ್ಕೆ 50 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸೋಮವಾರ (ಜ.19) ಆರೋಪಿಸಿದ್ದು, ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಆರ್‌ಟಿಐ ಮಾಹಿತಿಯನ್ನು ಉಲ್ಲೇಖಿಸಿದ ಕೇಜ್ರಿವಾಲ್, 50 ಕೋಟಿಯಲ್ಲಿ 2 ಕೋಟಿ ರೂಪಾಯಿಯನ್ನು ಸಮೋಸ ವಿತರಣೆಗೆ ಮಾತ್ರ ಖರ್ಚು ಮಾಡಲಾಗಿದೆ ಎಂದಿದ್ದಾರೆ.

“ಆದಿವಾಸಿ ಪ್ರದೇಶಗಳು ಇನ್ನೂ ಅತ್ಯಂತ ಹಿಂದುಳಿದಿವೆ? ಪ್ರತಿ ವರ್ಷ ಕೋಟ್ಯಂತರ ರೂಪಾಯಿ ಖರ್ಚು ಮಾಡುತಿದ್ದರೂ ಏಕೆ ಬದಲಾವಣೆ ಆಗುತ್ತಿಲ್ಲ? ನಾವು ಹಣವನ್ನು ಪ್ರಾಮಾಣಿಕವಾಗಿ ಖರ್ಚು ಮಾಡಿದರೆ, ಅದ್ಭುತ ಆಸ್ಪತ್ರೆಗಳನ್ನು ಕಟ್ಟಬಹುದು, ಉತ್ತಮ ಶಾಲೆಗಳನ್ನು ತೆರೆಯಬಹುದು, ಉಚಿತ ವಿದ್ಯುತ್ ಒದಗಿಸಬಹುದು, ಉತ್ತಮ ರಸ್ತೆಗಳನ್ನು ನಿರ್ಮಿಸಬಹುದು. ಆದರೆ, ಆದಿವಾಸಿಗಳಿಗೆ ಹಣ ಸರಿಯಾಗಿ ತಲುಪುತ್ತಿಲ್ಲ ಎಂದು ಕೇಜ್ರಿವಾಲ್ ತಮ್ಮ ಮೂರು ದಿನಗಳ ಗುಜರಾತ್ ಭೇಟಿಯ ಕೊನೆಯ ದಿನದಂದು ವಡೋದರಾದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ ಹೇಳಿದ್ದಾರೆ.

ಎಎಪಿಯ ದೇದಿಯಾಪಾಡಾದ ಶಾಸಕ ಚೈತರ್ ವಾಸವ ಅವರು ಆರ್‌ಟಿಐ ಮೂಲಕ ಪಡೆದ ಮಾಹಿತಿಯನ್ನು ಕೇಜ್ರಿವಾಲ್ ಉಲ್ಲೇಖಿಸಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಸಾರ್ವಜನಿಕ ಸಭೆಯನ್ನು ಆಯೋಜಿಸಲು ನರ್ಮದಾ ಜಿಲ್ಲಾಡಳಿತವು 50 ಕೋಟಿ ರೂ.ಗಳನ್ನು ಖರ್ಚು ಮಾಡಿದೆ ಎಂದು ಹೇಳಿದ್ದಾರೆ ಎಂಬುವುದಾಗಿ ವರದಿಯಾಗಿದೆ.

2025ರ ನವೆಂಬರ್ 15 ರಂದು ಬಿರ್ಸಾ ಮುಂಡಾ ಅವರ 150ನೇ ಜನ್ಮ ದಿನಾಚರಣೆ ಪ್ರಯುಕ್ತ ಗುಜರಾತ್‌ನ ನರ್ಮದಾ ಜಿಲ್ಲೆಯ ದೇದಿಯಾಪಾಡಾದಲ್ಲಿ ಆಯೋಜಿಸಿದ್ದ ‘ಜನಜಾತೀಯ ಗೌರವ್ ದಿವಸ್’ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದರು.

“ದೇಶದ ಪ್ರಧಾನಿ ಬಂದಿದ್ದು ಒಳ್ಳೆಯದೇ ಆಯ್ತು, ಅದಕ್ಕಾಗಿ ಒಂದು ದೊಡ್ಡ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಆದಿವಾಸಿ ನಿಧಿಯಿಂದ ಎಷ್ಟು ಹಣ ಖರ್ಚು ಮಾಡಲಾಗಿದೆ ಎಂದು ವಾಸವ ಅವರು ಆರ್‌ಟಿಐ ಅಡಿ ಮಾಹಿತಿ ಕೇಳಿದ್ದರು. ಜಿಲ್ಲಾಡಳಿತ 50 ಕೋಟಿ ರೂ. ಖರ್ಚು ಮಾಡಿದೆ ಎಂದು ಆರ್‌ಟಿಐ ಪ್ರತಿಕ್ರಿಯೆಯಿಂದ ತಿಳಿದುಬಂದಿದೆ. ಅದರಲ್ಲಿ 5 ಕೋಟಿ ರೂ. ಪೆಂಡಾಲ್‌ಗೆ, 7 ಕೋಟಿ ರೂ. ಬಸ್‌ಗಳಿಗೆ ಮತ್ತು 2 ಕೋಟಿ ರೂ. ಸಮೋಸಗೆ ಖರ್ಚು ಮಾಡಲಾಗಿದೆ. ಬುಡಕಟ್ಟು ನಿಧಿಯಿಂದ 2 ಕೋಟಿ ರೂ. ಮೌಲ್ಯದ ಸಮೋಸವನ್ನು ತಿಂದವರು ಯಾರು? ಕೇಂದ್ರ ಸರ್ಕಾರದ ಹಣವನ್ನು ಏಕೆ ಬಳಸಿಲ್ಲ? ಪ್ರಧಾನಿಯವರು ಸಮೋಸಗೆ 20 ಕೋಟಿ ಅಥವಾ 30 ಕೋಟಿ ರೂ. ಖರ್ಚು ಮಾಡಬಹುದಿತ್ತು. ಆದರೆ, ಕೇಂದ್ರ ನಿಧಿಯಿಂದ ಏಕೆ ಖರ್ಚು ಮಾಡಿಲ್ಲ? 2 ಕೋಟಿ ರೂ.ಗಳಲ್ಲಿ, ಬುಡಕಟ್ಟು ಪ್ರದೇಶಗಳಲ್ಲಿ ಅನೇಕ ಆಸ್ಪತ್ರೆಗಳು ಮತ್ತು ಶಾಲೆಗಳನ್ನು ನಿರ್ಮಿಸಬಹುದಿತ್ತು” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ವಡೋದರಾದ ಐವರು ಹಾಲಿ ಬಿಜೆಪಿ ಶಾಸಕರು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರಿಗೆ ಪತ್ರ ಬರೆದಿರುವುದನ್ನು ಉಲ್ಲೇಖಿಸಿದ ಕೇಜ್ರಿವಾಲ್, ಅಧಿಕಾರಶಾಹಿ ತಮ್ಮ ಕ್ಷೇತ್ರಗಳಲ್ಲಿ ಸಾರ್ವಜನಿಕ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿದೆ ಎಂದು ದೂರಿದ್ದಾರೆ.

“ವಡೋದರಾದ ಬಿಜೆಪಿ ಶಾಸಕರಾದ ಶೈಲೇಶ್ ಮೆಹ್ತಾ, ಕೇತನ್ ಇನಾಮದಾರ್, ಧರ್ಮೇಂದ್ರ ಸಿಂಗ್ ವಘೇಲಾ, ಅಕ್ಷಯ್ ಪಟೇಲ್ ಮತ್ತು ಚೈತನ್ಯ ಸಿಂಗ್ ಜಾಲಾ ಮುಖ್ಯಮಂತ್ರಿಗೆ ಪತ್ರ ಬರೆದು, ಅಧಿಕಾರಿಗಳು ತಮ್ಮ ಮನವಿಗಳನ್ನು ಕೇಳುತ್ತಿಲ್ಲ ಎಂದು ಹೇಳಿದ್ದಾರೆ. ನನಗೆ ತಿಳಿದಿರುವ ಮಾಹಿತಿ ಪ್ರಕಾರ, ಪತ್ರ ಸ್ವೀಕರಿಸಿರುವ ಮುಖ್ಯಮಂತ್ರಿ, “ಅಧಿಕಾರಿಗಳು ಸ್ವತಃ ನನ್ನ ಮಾತೇ ಕೇಳುತ್ತಿಲ್ಲ” ಎಂದಿದ್ದಾರೆ. ಶಾಸಕರ ಪತ್ರವು ಆಡಳಿತ ವ್ಯವಸ್ಥೆಯಲ್ಲಿನ ಕುಸಿತವನ್ನು ಎತ್ತಿ ತೋರಿಸಿದೆ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

“ಸಾಮಾನ್ಯ ಜನರು ಸಣ್ಣಪುಟ್ಟ ಕೆಲಸಗಳನ್ನು ಮಾಡಿಕೊಳ್ಳುವುದು ಕೂಡ ಯುದ್ದದಂತಾಗಿದೆ ಎಂದು ಸ್ವತಃ ಬಿಜೆಪಿ ಶಾಸಕರೇ ಹೇಳಿದ್ದಾರೆ. ಇದು ಕಳೆದ 30 ವರ್ಷಗಳಿಂದ ಬಿಜೆಪಿಗೆ ಮತ ಹಾಕಿದ್ದರ ಪರಿಣಾಮ” ಎಂದು ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....