ಜನವರಿ 22 ರಿಂದ ನಡೆಯಲಿರುವ ವಿಧಾನಮಂಡಲದ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಲು ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಬುಧವಾರ ನಿರಾಕರಿಸಿದ್ದಾರೆ.
ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ನೇತೃತ್ವದ ಉನ್ನತ ಮಟ್ಟದ ನಿಯೋಗವು ಗೆಹ್ಲೋಟ್ ಅವರೊಂದಿಗೆ ಮಾತುಕತೆಗಾಗಿ ಲೋಕ ಭವನಕ್ಕೆ ಧಾವಿಸಿತ್ತು ಈ ವೇಳೆ ಅಧಿವೇಶವನ್ನುದ್ದೇಶಿಸಿ ಮಾತನಾಡಲು ಗೆಹ್ಲೋಟ್ ನಿರಾಕರಿಸಿದ್ದಾರೆ.
ಈ ಅಧಿವೇಶನದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ರದ್ದತಿಯ ಕುರಿತು ವಿಶೇಷ ಚರ್ಚೆ ನಡೆಯಬೇಕಿತ್ತು, ಇದನ್ನು ಹೊಸದಾಗಿ ಜಾರಿಗೆ ತಂದಿರುವ ವಿಕ್ಷಿತ್ ಭಾರತ್ – ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (VB-G RAM G) ಕಾಯ್ದೆ, 2025 ರಿಂದ ಬದಲಾಯಿಸಲಾಗಿದೆ.
“ನಾಳೆ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲು ರಾಜ್ಯಪಾಲರು ನಿರಾಕರಿಸಿದ ಹಿನ್ನೆಲೆಯಲ್ಲಿ, ಕಾನೂನು ಸಚಿವರ ನೇತೃತ್ವದ ಉನ್ನತ ಮಟ್ಟದ ನಿಯೋಗವು ಇಂದು ಸಂಜೆ 5.45 ಕ್ಕೆ ರಾಜಭವನಕ್ಕೆ (ಲೋಕಭವನ) ತೆರಳಲಿದೆ” ಎಂದು ಕಾನೂನು ಸಚಿವರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.
ರಾಜ್ಯಪಾಲರ ನಿರಾಕರಣೆಗೆ ಕಾರಣಗಳು ಇನ್ನೂ ಸ್ಪಷ್ಟವಾಗಿಲ್ಲ.
ಜನವರಿ 22 ರಿಂದ 31 ರವರೆಗಿನ ಅಧಿವೇಶನವು ಗುರುವಾರ ರಾಜ್ಯಪಾಲ ಗೆಹ್ಲೋಟ್ ಅವರ ಸಾಂಪ್ರದಾಯಿಕ ಭಾಷಣದೊಂದಿಗೆ ಪ್ರಾರಂಭವಾಗುವ ನಿರೀಕ್ಷೆಯಿದೆ.



The post Governer it self waste.
His lavish and royal expenses from the tax collected from poor and medium class people. Those who don’t discharge should be kicked out. This power should be given to ruling Government of the state.