Homeಕರ್ನಾಟಕ'ಶೇ.56 ರ ಮೀಸಲಾತಿ ಅನುಸಾರ ನೇಮಕಾತಿ ಅಧಿಸೂಚನೆ ಹೊರಡಿಸಬಾರದು..'; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

‘ಶೇ.56 ರ ಮೀಸಲಾತಿ ಅನುಸಾರ ನೇಮಕಾತಿ ಅಧಿಸೂಚನೆ ಹೊರಡಿಸಬಾರದು..’; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

- Advertisement -
- Advertisement -

“ಚಾಲ್ತಿಯಲ್ಲಿರುವ ಶೇ.50ರ ಮೀಸಲಾತಿಯ ಅನ್ವಯ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ನಡೆಸುವ ವಿಚಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ. ಆದರೆ, ಶೇ.56 ಕ್ಕೆ ಮೀಸಲಾತಿ ಹೆಚ್ಚಿಸಿರುವುದರ ಅನುಸಾರ ಹೊಸದಾಗಿ ಅಧಿಸೂಚನೆ ಹೊರಡಿಸಬಾರದು” ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚಿಸಿದೆ ಎಂದು ‘ಕನ್ನಡ ಬಾರ್‌ ಅಂಡ್‌ ಬೆಂಚ್’ ವರದಿ ಮಾಡಿದೆ.

ನೇಮಕಾತಿಯಲ್ಲಿ ಮಧ್ಯಂತರ ವ್ಯವಸ್ಥೆಗೆ ಸಂಬಂಧಿಸಿದಂತೆ ಹಾಗೂ ಅಗತ್ಯಬಿದ್ದರೆ ಸೂಕ್ತ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಮಂಗಳವಾರ ಕೋರ್ಟ್‌ ಅನುಮತಿ ನೀಡಿದೆ.

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿ ಒಟ್ಟು ಮೀಸಲು ಪ್ರಮಾಣವನ್ನು ಶೇ.50ರಿಂದ 56ಕ್ಕೆ ಹೆಚ್ಚಿಸಿದ್ದ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಕಾಯಿದೆ-2022ರ ಅನ್ವಯ ಶೇ. 50ಕ್ಕೂ ಹೆಚ್ಚು ಮೀಸಲಾತಿ ನೀಡುವುದಕ್ಕೆ ಆಕ್ಷೇಪಿಸಿ ಡಾ. ಅಂಬೇಡ್ಕರ್ ಪರಿಶಿಷ್ಟ ಜಾತಿಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಮಹೇಂದ್ರ ಕುಮಾರ್ ಮಿತ್ರಾ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು, ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಪೂಣಚ್ಚ ಅವರ ವಿಭಾಗೀಯ ಪೀಠ ಮಂಗಳವಾರ ವಿಚಾರಣೆ ನಡೆಸಿತು.

“ಮೀಸಲಾತಿ ಪ್ರಮಾಣ ಹೆಚ್ಚಿಸಿರುವ ಮಧ್ಯಪ್ರದೇಶ ಸರ್ಕಾರದ ಆದೇಶ ಪ್ರಶ್ನಿಸಿರುವ ಅರ್ಜಿ ಸುಪ್ರೀಂ ಕೋರ್ಟ್‌ಗೆ ವರ್ಗಾವಣೆಯಾಗಿದೆ; ಅದರ ವಿಚಾರಣೆಯು ಈ ತಿಂಗಳು ನಡೆಯಲಿದೆ. ನಾವು ಸರ್ವೋಚ್ಚ ನ್ಯಾಯಾಲಯದ ಆದೇಶಕ್ಕಾಗಿ ಕಾಯಲಾಗುತ್ತಿದೆ ಎಂದು ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು ತಿಳಿಸಿದ್ದಾರೆ. ನೇಮಕಾತಿಯಲ್ಲಿ ಮಧ್ಯಂತರ ವ್ಯವಸ್ಥೆಗೆ ಸಂಬಂಧಿಸಿದಂತೆ ಅಡ್ವೊಕೇಟ್‌ ಜನರಲ್‌ ಅವರು ಸೂಚನೆ ಪಡೆಯಲು, ಅಗತ್ಯಬಿದ್ದರೆ ಸೂಕ್ತ ಅರ್ಜಿ ಸಲ್ಲಿಸಲು ಕಾಲಾವಕಾಶ ಕೋರಿದ್ದಾರೆ. ಇದಕ್ಕೆ ನ್ಯಾಯಾಲಯ ಅನುಮತಿ ನೀಡಿದೆ” ಎಂದು ನ್ಯಾಯಮೂರ್ತಿಗಳು ಆದೇಶಿಸಿ, ವಿಚಾರಣೆಯನ್ನು ಫೆಬ್ರವರಿ 12ಕ್ಕೆ ಮುಂದೂಡಿದರು.

ಇದಕ್ಕೂ ಮುನ್ನ ಸರ್ಕಾರದ ಪರ ವಾದ ಮಂಡಿಸಿದ ಅಡ್ವೋಕೇಟ್ ಜನರಲ್, “ಮೀಸಲಾತಿ ಹೆಚ್ಚಿಸಿರುವ ಮಧ್ಯಪ್ರದೇಶದ ರಿಟ್‌ ಅರ್ಜಿಯು ಸುಪ್ರೀಂ ಕೋರ್ಟ್‌ಗೆ ವರ್ಗಾವಣೆಯಾಗಿದೆ. ಇದರ ವಿಚಾರಣೆಯನ್ನು ಇದೇ ಜನವರಿಯಲ್ಲಿ ನಡೆಸಲಾಗುವುದು ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿದೆ. ಶೇ.50ರ ಮೀಸಲಾತಿಯಲ್ಲಿ ನೇಮಕಾತಿ ಮುಂದುವರಿಸುತ್ತೇವೆ. ನ್ಯಾಯಾಲಯ ಹಾಲಿ ಅರ್ಜಿಗಳನ್ನು ನಿರ್ಧರಿಸುವವರೆಗೆ ಹೆಚ್ಚುವರಿ ಶೇ. 6 ಮೀಸಲಾತಿ ಅನ್ವಯಿಸುವುದಿಲ್ಲ. ಆಯ್ಕೆ ಪ್ರಕ್ರಿಯೆ ಮುಂದುವರಿಸಲು ಅವಕಾಶ ನೀಡಬೇಕು. ಶೇ.56ರ ಮೀಸಲಾತಿ ಪ್ರಕಾರ ನೇಮಕಾತಿ ನಡೆಸುತ್ತೇವೆ. ಶೇ.50ಕ್ಕೆ ಮಾತ್ರ ಆದೇಶ ನೀಡಿ, ಉಳಿದ ಶೇ.6ಕ್ಕೆ ನ್ಯಾಯಾಲಯ ನಿರ್ಧಾರ ಮಾಡಿದ ಬಳಿಕ ಆದೇಶ ನೀಡಲಾಗುವುದು” ಎಂದರು.

“ಬೇಕಿದ್ದರೆ ಹಿಂದಿನ ಅಧಿಸೂಚನೆಯಡಿ ಶೇ.50ರ ಮೀಸಲಾತಿ ಅಡಿಯಲ್ಲಿ ನೇಮಕಾತಿ ನಡೆಸಬಹುದು. ಇದರಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಮೀಸಲಾತಿ ಹೆಚ್ಚಿಸಿ, ನೇಮಕಾತಿ ನಡೆಸುವುದಾದರೆ ನೇಮಕಾತಿಯನ್ನೇ ಮಾಡಲು ಸರ್ಕಾರಕ್ಕೆ ಸಾಧ್ಯವಾಗುವುದಿಲ್ಲ. ಅದು ಸರ್ಕಾರಕ್ಕೆ ಇರುವ ಆಯ್ಕೆಯಾಗಿದೆ. ಶೇ.50 ಮೀರಿದ ಹೆಚ್ಚುವರಿ ಮೀಸಲಾತಿ ಅನ್ವಯ ನೇಮಕಾತಿಗೆ ಅನುಮತಿ ಸಾಧ್ಯವಿಲ್ಲ. ಆದರೂ, ಸರ್ಕಾರ ನೇಮಕಾತಿ ನಡೆಸಲೇಬೇಕಿದೆ” ಎಂದು ಪೀಠವು ಸರ್ಕಾರಕ್ಕೆ ಪ್ರತಿಕ್ರಿಯಿಸಿದೆ.

“ಶೇ.94ರಷ್ಟು ನೇಮಕಾತಿಗೆ ಅಧಿಸೂಚನೆ ಹೊರಡಿಸುತ್ತೇವೆ. ಶೇಕಡ 6ರಷ್ಟು ನೇಮಕಾತಿ ಮಾಡುವುದಿಲ್ಲ. ಅಂತಿಮ ತೀರ್ಪಿನ ನಂತರ ಶೇ. 6% ನೇಮಕಾತಿಯನ್ನು ನ್ಯಾಯಾಲಯದ ಆದೇಶದಂತೆ ಕೈಗೊಳ್ಳುವುದಾಗಿ ಅಫಿಡವಿಟ್‌ ಸಲ್ಲಿಸಿದಲ್ಲಿ ಪರಿಶೀಲಿಸಲಾಗುವುದು” ಕೋರ್ಟ್‌ ಹೇಳಿತು.

ಅರ್ಜಿದಾರರ ಪರ ವಕೀಲ ರಂಗನಾಥ್‌ ಜೋಯಿಷ್‌ ವಾದ ಮಂಡಿಸಿ, “ಶೇ.50 ಮೀಸಲಾತಿ ಮೀರಿರುವುದಕ್ಕೆ ಈ ಹಿಂದೆ ಸುಪ್ರೀಂ ಕೋರ್ಟ್‌ ಅನುಮತಿ ನೀಡಿಲ್ಲ. ಶೇ.50 ಮೀರಿ ಮೀಸಲಾತಿ ನೀಡುತ್ತೇವೆ. ಬಳಿಕ ಅದನ್ನು ಸರಿಪಡಿಸಲಾಗುವುದು ಎಂದು ಸರ್ಕಾರ ಹೇಳುತ್ತಿದೆ. ಅಕ್ರಮ ನೇಮಕಾತಿ ಮಾಡಿ, ಆನಂತರ ಅದನ್ನು ಸರಿಪಡಿಸುವ ಯತ್ನವನ್ನು ಸರ್ಕಾರ ಮಾಡುತ್ತಿದೆ” ಎಂದರು.

“ಕಾಯಿದೆ ಸೆಕ್ಷನ್‌ 6ರ ಅಡಿ ನಿಯಮ ರೂಪಿಸಬೇಕು. ಕಾಯಿದೆಯ ಅನ್ವಯ ಮೀಸಲಾತಿ ಹೆಚ್ಚಿಸಿದರೂ ಅದನ್ನು ಜಾರಿಗೊಳಿಸಲು ನಿಯಮ ರೂಪಿಸಲೇಬೇಕು. ನಿಯಮ ರೂಪಿಸದೇ ಅಧಿಸೂಚನೆ ಹೇಗೆ ಪ್ರಕಟಿಸಲಾಗುತ್ತದೆ” ಎಂದು ಪ್ರಶ್ನಿಸಿದರು.

ಅರ್ಜಿದಾರರ ಪರ ವಾದಿಸಿದ ಮತ್ತೋರ್ವ ವಕೀಲ ನಚಿಕೇತ್‌ ಜೋಶಿ, “ಹಾಲಿ ಅರ್ಜಿ ಇತ್ಯರ್ಥವಾಗುವವರೆಗೆ ಮೀಸಲಾತಿ ಹೆಚ್ಚಿಸಿರುವುದನ್ನು ಆಧರಿಸಿ ನೇಮಕಾತಿ, ಆಯ್ಕೆ ಮಾಡುವ ಸಂಬಂಧ ಯಾವುದೇ ಅಧಿಸೂಚನೆ ಹೊರಡಿಸಕೂಡದು ಎಂದು ಹೈಕೋರ್ಟ್‌ ಈ ಹಿಂದೆಯೇ ಆದೇಶ ಮಾಡಿತ್ತು. ಇದರ ಮರುಪರಿಶೀಲನೆ, ಮಾರ್ಪಾಡು ಅಥವಾ ಪ್ರಶ್ನಿಸಲಾಗಿಲ್ಲ. ಈಗ ಮಧ್ಯಂತರ ಅರ್ಜಿಯ ಮೂಲಕ ಇದರ ಮಾರ್ಪಾಡಿಗೆ ಮನವಿ ಮಾಡಲಾಗಿದೆ. ಶೇ.50ರ ಮೀಸಲಾತಿಯ ಪ್ರಕಾರ ನೇಮಕಾತಿ ನಡೆಯಲಿ, ಉಳಿದ ಶೇ.6-7ಕ್ಕೆ ನ್ಯಾಯಾಲಯ ರಿಟ್‌ ನಿರ್ಧರಿಸಿದ ಬಳಿಕ ನೇಮಕಾತಿ ನಡೆಸಬಹುದು” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....