Homeಕರ್ನಾಟಕರಾಜ್ಯಪಾಲರಿಂದ ಸಂವಿಧಾನದ ವಿಧಿಗಳ ಉಲ್ಲಂಘನೆ; ಜನಪ್ರತಿನಿಧಿಗಳ ಸಭೆಯನ್ನು ಅವಮಾನಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರಿಂದ ಸಂವಿಧಾನದ ವಿಧಿಗಳ ಉಲ್ಲಂಘನೆ; ಜನಪ್ರತಿನಿಧಿಗಳ ಸಭೆಯನ್ನು ಅವಮಾನಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

“ವರ್ಷದ ಮೊದಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ. ಇದನ್ನು ನಾವು ಖಂಡಿಸುತ್ತೇವೆ. ಈ ವಿಚಾರದ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಮೊಕದ್ದಮೆ ಹೂಡುವ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಗುರುವಾರ (ಜ.22) ಭಾರೀ ಹೈಡ್ರಾಮ ನಡೆದಿದ್ದು, ರಾಜ್ಯಪಾಲರು ಸರ್ಕಾರ ಬರೆದುಕೊಟ್ಟ ಭಾಷಣ ಓದದೆ, ತಮ್ಮದೇ ಆದ ಕೇವಲ ಎರಡೇ ಸಾಲಿನ ಭಾಷಣ ಓದಿ ಹೊರ ನಡೆದರು. ಇದಕ್ಕೆ ಆಡಳಿತ ಪಕ್ಷದ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಸದನದಿಂದ ರಾಜ್ಯಪಾಲರು ಹೊರನಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಪ್ರತಿ ವರ್ಷದ ಆರಂಭದಲ್ಲಿ ನಡೆಯುವ ಹಾಗೂ ಹೊಸ ಸರ್ಕಾರ ಸ್ಥಾಪನೆಗೊಂಡ ಸಂದರ್ಭದಲ್ಲಿ ನಡೆಸಲಾಗುವ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡುವುದು ಸಂವಿಧಾನದ ರೀತ್ಯಾ ರಾಜ್ಯಪಾಲರ ಕರ್ತವ್ಯವಾಗಿರುತ್ತದೆ. ಸಂವಿಧಾನ ಕಲಂ 176 ಮತ್ತು 163 ರಂತೆ ಸರ್ಕಾರದ ಸಚಿವ ಸಂಪುಟ ಸಿದ್ಧಪಡಿಸಿರುವ ಭಾಷಣವನ್ನು ಓದಲೇಬೇಕೆಂಬ ನಿಯಮವಿದ್ದು, ರಾಜ್ಯಪಾಲರು ತಾವೇ ಸಿದ್ಧಪಡಿಸಿದ ಭಾಷಣವನ್ನು ಓದುವಂತಿಲ್ಲ. ಇಂದು ವರ್ಷದ ಮೊದಲ ಜಂಟಿ ಅಧಿವೇಶನ ಮತ್ತು ವಿಶೇಷ ಅಧಿವೇಶನವನ್ನು ಕರೆಯಲಾಗಿತ್ತು. ಮನರೇಗಾ (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ) ರದ್ದುಪಡಿಸಿ, ವಿಬಿಜಿ ರಾಮ್ ಜಿ ( ವಿಕಸಿತ ಭಾರತ – ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಎಂಬ ಕಾಯ್ದೆಯನ್ನು ಕೇಂದ್ರ ಸರ್ಕಾರ ಹೊಸದಾಗಿ ರಚಿಸಿದೆ. ಇದಕ್ಕೆ ನಮ್ಮ ಸರ್ಕಾರದ ತೀವ್ರ ವಿರೋಧವಿದೆ” ಎಂದರು.

“ಮೊದಲನೆಯದಾಗಿ, ಉದ್ಯೋಗ ಖಾತ್ರಿ ಕಾಯ್ದೆಯಿಂದ ಮಹಾತ್ಮ ಗಾಂಧಿ ಅವರ ಹೆಸರನ್ನು ತೆಗೆಯಲಾಗಿದೆ. 2005 ರಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ, ಸಂವಿಧಾನ ನಿರ್ದೇಶನಗಳಂತೆ ಆಹಾರ ಭದ್ರತೆ, ಮಾಹಿತಿ ಹಕ್ಕು, ಶಿಕ್ಷಣ ಹಕ್ಕು, ಉದ್ಯೋಗದ ಹಕ್ಕು ಕಾಯ್ದೆಗಳನ್ನು ಜಾರಿಗೆ ತಂದಿದ್ದರು. ಬಡ ಕಾರ್ಮಿಕರಿಗೆ ಕನಿಷ್ಠ 100 ದಿನಗಳ ಕಾಲ ಉದ್ಯೋಗ ಒದಗಿಸುವ ಉದ್ದೇಶದಿಂದ ಜಾರಿಗೆ ತರಲಾಗಿದ್ದ ಈ ಕಾಯ್ದೆಯಿಂದ ದಲಿತರು, ಕಾರ್ಮಿಕರು ಮತ್ತು ಮಹಿಳೆಯರು ಮತ್ತು ಸಣ್ಣ ರೈತರಿಗೆ ಅನುಕೂಲವಾಗಿತ್ತು” ಎಂದು ಹೇಳಿದರು.

“ಹೊಸ ಕಾಯ್ದೆಯಲ್ಲಿ ವಿಶೇಷವಾಗಿ ಶೇ.53 ಮಹಿಳೆಯರು, ಶೇ.28 ದಲಿತರಿದ್ದು, ಇವರಿಗೆ ಉದ್ಯೋಗದ ಖಾತ್ರಿಯೇ ಇಲ್ಲ. ಅವರು ಅಪೇಕ್ಷಿಸಿದ ಸ್ಥಳದಲ್ಲಿ, ಸಣ್ಣ ರೈತರು ಅವರ ಜಮೀನುಗಳಲ್ಲಿಯೇ ಕೆಲಸ ಮಾಡುವ ಅವಕಾಶವನ್ನು ಮುಂಚಿನ ಕಾಯ್ದೆ ಕಲ್ಪಿಸಿತ್ತು. ಆದರೆ ವಿಬಿ ಜಿ ರಾಮ್ ಜಿ ಕಾಯ್ದೆಯಲ್ಲಿ ಈ ನಿರ್ಣಯವನ್ನು ಕೇಂದ್ರ ಸರ್ಕಾರ ಕೈಗೊಳ್ಳುತ್ತದೆ. ಕೇಂದ್ರ ಸರ್ಕಾರ ನಿರ್ಧರಿಸುವ ಕಡೆಗಳಲ್ಲಿ ಬಡ ಕಾರ್ಮಿಕರು ಕೆಲಸ ಮಾಡಬೇಕಾಗಿದೆ. ಹಿಂದಿನ ಕಾಯ್ದೆಯಲ್ಲಿ ವರ್ಷದ 365 ದಿನಗಳಲ್ಲಿ ಯಾವಾಗಾಲಾದರೂ ಕೆಲಸ ಕೊಡಬಹುದಾಗಿದ್ದು, ಅದು ಸರ್ಕಾರದ ಕರ್ತವ್ಯವಾಗಿತ್ತು. ಅಲ್ಲದೇ, ಈ ಬಗ್ಗೆ ಕ್ರಿಯಾಯೋಜನೆ ರಚಿಸುವ ಹಕ್ಕು ಆಯಾ ಗ್ರಾಮಸಭೆ ಮತ್ತು ಪಂಚಾಯ್ತಿಗಳಿಗೆ ಅವಕಾಶವಿತ್ತು. ಆದರೆ ಈ ಹೊಸ ಕಾಯ್ದೆಯಲ್ಲಿ ಈ ಅವಕಾಶವನ್ನು ರದ್ದು ಪಡಿಸಲಾಗಿದೆ” ಎಂದು ವಿವರಿಸಿದರು.

“ರಾಜ್ಯಪಾಲರು ಹೊಸ ಕಾಯ್ದೆಯನ್ನು ಉದ್ದೇಶಪೂರ್ವಕವಾಗಿ ಸಮರ್ಥಿಸಿಕೊಳ್ಳುತ್ತಿದ್ದಾರೆ. ಅವರಿಗೆ ಸ್ವಾತಂತ್ರ್ಯವಿಲ್ಲ ಹಾಗೂ ಕೇಂದ್ರದ ಕಾಯ್ದೆಗಳನ್ನು ಸಹಕರಿಸಲೇಬೇಕೆಂಬ ನೀತಿಯಂತೆ ನಡೆದುಕೊಳ್ಳುತ್ತಿದ್ದಾರೆ. ಆದರೆ ಆಡಳಿತ ಪಕ್ಷವಾಗಿ ನಮಗೆ ಅದರ ಬಗ್ಗೆ ವಿರೋಧವಿದ್ದು, ಈ ವಿಚಾರಗಳನ್ನು ರಾಜ್ಯಪಾಲರ ಭಾಷಣದಲ್ಲಿ ಸೇರಿಸಲಾಗಿತ್ತು. ಮನರೇಗಾ ಕಾಯ್ದೆಯನ್ನು ಮರುಸ್ಥಾಪಿಸುವುದು ಮತ್ತು ಹೊಸ ಕಾಯ್ದೆಯನ್ನು ರದ್ದುಗೊಳಿಸಬೇಕೆಂಬುದು ನಮ್ಮ ಉದ್ದೇಶ. ನಮ್ಮ ಪಕ್ಷ ಮತ್ತು ಸರ್ಕಾರದಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ. ಮನರೇಗಾ ಮರುಸ್ಥಾಪನೆ ಮಾಡುವವರೆಗೆ ನಮ್ಮ ಹೋರಾಟ ನಿರಂತರವಾಗಿರಲಿದೆ. ಈ ಹಿಂದೆ ರೈತರ ವಿರೋಧಿ ಕಾಯ್ದೆಯನ್ನು ಕೇಂದ್ರ ಸರ್ಕಾರ ವಾಪಸ್ಸು ತೆಗೆದುಕೊಂಡಂತೆ, ಈ ಹೊಸ ಕಾಯ್ದೆಯನ್ನು ವಾಪಸ್ಸು ತೆಗೆದುಕೊಳ್ಳುವವರೆಗೆ ನಮ್ಮ ಹೋರಾಟ ನಡೆಯಲಿದೆ” ಎಂದರು.

“ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೆ, ತಾವೇ ಸಿದ್ಧಪಡಿಸಿದ ಭಾಷಣವನ್ನು ಓದುವ ಮೂಲಕ ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ. ಸಂವಿಧಾನದ ಕಲಂ 176 ಮತ್ತು 163 ರಂತೆ ಸಚಿವ ಸಂಪುಟ ಭಾಷಣವನ್ನು ಓದಲೇಬೇಕಾಗಿದ್ದು ವಾಸ್ತವ ಅಂಶ. ಇದು ಸಂವಿಧಾನ ಸ್ಥಾಪನೆಯಾದಾಗಿನಿಂದ ನಡೆದುಕೊಂಡು ಬಂದಿರುವ ಪದ್ಧತಿ, ರಾಜ್ಯಪಾಲರ ಈ ನಡೆ, ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ. ಸಂವಿಧಾನಬದ್ಧವಾದ ವಿಚಾರದ ಉಲ್ಲಂಘನೆಯಾಗಿದೆ” ಎಂದು ಹೇಳಿದರು.

“ಇದನ್ನು ನಮ್ಮ ಪಕ್ಷ ಮತ್ತು ಸರ್ಕಾರ, ಶಾಸಕರು, ಎಂಎಲ್‌ಸಿ ಗಳು ಪ್ರತಿಭಟನೆ ಮೂಲಕ ವಿರೋಧಿಸುತ್ತೇವೆ. ಇಡೀ ರಾಜ್ಯದಲ್ಲಿ ಹೋರಾಟ ಹಮ್ಮಿಕೊಳ್ಳಲಾಗಿದೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ. ಕೇಂದ್ರ ಸರ್ಕಾರ ತಾವು ಮಾಡಿದ ತಪ್ಪನ್ನು ಮರೆಮಾಚಲು ರಾಜ್ಯಪಾಲರ ಕೈಯಲ್ಲಿ ಬೇರೆ ಭಾಷಣವನ್ನು ಓದಿಸಿದ್ದಾರೆ. ಇದು ಸಂವಿಧಾನ ಬಾಹಿರ ಕೃತ್ಯ. ರಾಜ್ಯಪಾಲರು ತಮ್ಮ ಕರ್ತವ್ಯವನ್ನು ಪಾಲನೆ ಮಾಡಿಲ್ಲ. ಸರ್ಕಾರ ಸಿದ್ಧಪಡಿಸಿರುವ ಭಾಷಣದ ಪ್ರತಿಯನ್ನು ಎಲ್ಲ ಶಾಸಕರು ಎಂಎಲ್ ಸಿಗಳಿಗೆ ವಿತರಿಸಲಾಗಿದೆ. ಇದರ ಬಗ್ಗೆ ಚರ್ಚಿಸಿ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್| ಚೈಬಾಸಾ ಎನ್‌ಕೌಂಟರ್‌; ಕುಖ್ಯಾತ ಮಾವೋವಾದಿ ನಾಯಕ ‘ಅನಲ್ ದಾ’ ಸೇರಿ 8 ನಕ್ಸಲರ ಹತ್ಯೆ

ಜಾರ್ಖಂಡ್ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಪ್ರಮುಖ ಯಶಸ್ಸನ್ನು ಸಾಧಿಸಿದೆ. ಚೈಬಾಸಾ ಜಿಲ್ಲೆಯಲ್ಲಿ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ, ಭದ್ರತಾ ಪಡೆಗಳು 8 ನಕ್ಸಲರನ್ನು ಕೊಂದಿವೆ....

‘ಕರ್ನಾಟಕವನ್ನು ಎಲ್ಲಾ ರೀತಿಯಲ್ಲಿ ಕಡೆಗಣಿಸುತ್ತಿದ್ದ ಬಿಜೆಪಿ ಈಗ ರಾಜ್ಯಪಾಲರ ಮೂಲಕವೇ ಕನ್ನಡಿಗರನ್ನು ಅವಮಾನಿಸಿದೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬಿಜೆಪಿ ಕನ್ನಡಿಗರನ್ನು ಅವಮಾನಿಸುವ ಪ್ರಕ್ರಿಯೆ ಮುಂದುವರೆದಿದೆ ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.  2026 ಜನವರಿ 22ರ, ಗುರುವಾರ ಸದನದಲ್ಲಿ ನಡೆದ ಬೆಳವಣಿಗೆಗಳ ಕುರಿತು ತಮ್ಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಖರ್ಗೆ, ‘ಸರ್ಕಾರದ ಭಾಷಣವನ್ನು...

ಭೋಜಶಾಲಾ-ಕಮಾಲ್ ಮೌಲಾ ಮಸೀದಿ ವಿವಾದ : ವಸಂತ ಪಂಚಮಿ ಪೂಜೆ, ಜುಮಾ ನಮಾಜ್ ಶಾಂತಿಯುತವಾಗಿ ನಡೆಸಲು ಸುಪ್ರೀಂ ಆದೇಶ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಭೋಜ ಶಾಲಾ-ಕಮಾಲ್ ಮೌಲಾ ಸಂಕೀರ್ಣದಲ್ಲಿ ವಸಂತ ಪಂಚಮಿ ಪೂಜೆ ಮತ್ತು ಶುಕ್ರವಾರದ ಜುಮಾ ನಮಾಝ್ ಎರಡನ್ನೂ ಶಾಂತಿಯುತವಾಗಿ ನಡೆಸುವಂತೆ ನೋಡಿಕೊಳ್ಳಲು ಸುಪ್ರೀಂ ಕೋರ್ಟ್ ಗುರುವಾರ (ಜ.22) ನಿರ್ದೇಶನಗಳನ್ನು ನೀಡಿದೆ. ಭೋಜ...

ಜಮ್ಮು-ಕಾಶ್ಮೀರ| 200 ಅಡಿ ಆಳದ ಕಂದಕಕ್ಕೆ ಉರುಳಿದ ವಾಹನ; 10 ಜನ ಸೇನಾ ಸಿಬ್ಬಂದಿ ಸಾವು

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾ ಪ್ರದೇಶದಲ್ಲಿ 200 ಅಡಿ ಆಳದ ಕಂದಕಕ್ಕೆ ವಾಹನ ಉರುಳಿ 10 ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಒಟ್ಟು 17 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಸೇನಾ...

ಉತ್ತರ ಪ್ರದೇಶ ಮರ್ಯಾದೆಗೇಡು ಹತ್ಯೆ; ಅಂತರ್ಧರ್ಮೀಯ ಜೋಡಿಯನ್ನು ಕೊಂದ ಯುವತಿ ಸಹೋದರರು

ಉತ್ತರ ಪ್ರದೇಶದ ಮೊರಾದಾಬಾದ್‌ನ ಕಾಡಿನಲ್ಲಿ ಅಂತರ್ಧರ್ಮೀಯ ಜೋಡಿಯ ಶವ ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಆಕೆಯ ಸಹೋದರರು ಮರ್ಯಾದೆಗೇಡು ಹತ್ಯೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವತಿಯನ್ನು 19 ವರ್ಷದ ಕಾಜಲ್ ಎಂದು ಗುರುತಿಸಲಾಗಿದ್ದು, ಮೃತ...

ತೀವ್ರ ವಿರೋಧದ ನಂತರ ಇಸ್ಲಾಮೋಫೋಬಿಕ್ ಹೇಳಿಕೆ ಹಿಂಪಡೆದು, ಕ್ಷಮೆಯಾಚಿಸಿದ ಕೇರಳದ ಸಿಪಿಐ(ಎಂ) ಸಚಿವ ಸಾಜಿ ಚೆರಿಯನ್

ಇತ್ತೀಚಿನ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮುಸ್ಲಿಂ ವಿಜೇತರ ಬಗ್ಗೆ ತಮ್ಮ ಇಸ್ಲಾಮೋಫೋಬಿಕ್ ಹೇಳಿಕೆಗಳನ್ನು ನೀಡಿದ್ದ ಸಿಪಿಐ(ಎಂ) ಹಿರಿಯ ನಾಯಕ ಮತ್ತು ಕೇರಳ ಸಚಿವ ಸಾಜಿ ಚೆರಿಯನ್ ಬುಧವಾರ ತಮ್ಮ ಹೇಳಿಕೆಯನ್ನು  ಹಿಂತೆಗೆದುಕೊಂಡಿದ್ದಾರೆ. ಪಕ್ಷ,...

ಫೇಸ್‌ಬುಕ್‌ನಲ್ಲಿ ಅಂಬೇಡ್ಕರ್‌ ಅವಹೇಳನ: ಕಠಿಣ ಕ್ರಮಕ್ಕೆ ದಲಿತ ಸೇನೆ ಮಹಿಳಾ ಘಟಕ ಆಗ್ರಹ: ಪೊಲೀಸ್ ಮಹಾ ನಿರ್ದೇಶಕರಿಗೆ ಮನವಿ ಸಲ್ಲಿಕೆ 

ಬೆಂಗಳೂರು: ಫೇಸ್‌ಬುಕ್‌ನಲ್ಲಿ 15ಕ್ಕೂ ಹೆಚ್ಚು ನಕಲಿ ಖಾತೆಗಳನ್ನು ಸೃಷ್ಟಿಸಿ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಬರಹಗಳನ್ನು ಪೋಸ್ಟ್ ಮಾಡುತ್ತಾ, ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಸಮಾಜದಲ್ಲಿ ದ್ವೇಷ ಮತ್ತು ಗಲಭೆ ಹುಟ್ಟುಹಾಕುವ ಪ್ರಯತ್ನ...

ರಾಜ್ಯಪಾಲರ ನಡೆ ಸಂಪೂರ್ಣ ಅಸಂವಿಧಾನಿಕ; ಕರ್ನಾಟಕಕ್ಕೆ ಮಸಿ ಬಳಿಯುವ ಕೆಲಸ ಮಾಡಿದ್ದಾರೆ: ಬಿ.ಕೆ. ಹರಿಪ್ರಸಾದ್

'ಜಂಟಿ ಸದನಳನ್ನು ಉದ್ದೇಶಿಸಿ ಭಾಷಣ ಓದಲು ನಿರಾಕರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ನಡೆ ಸಂಪೂರ್ಣ ಅಸಂವಿಧಾನಿಕ; ಅವರು ಕರ್ನಾಟಕದ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡಿದ್ದಾರೆ' ಎಂದು ವಿಧಾನಪರಿಷತ್ ಸದಸ್ಯ...

ವಿಶೇಷ ಅಧಿವೇಶನ : ಎರಡೇ ಸಾಲುಗಳ ಭಾಷಣ ಮಾಡಿ ಹೊರ ನಡೆದ ರಾಜ್ಯಪಾಲ; ಕಾಂಗ್ರೆಸ್ ಶಾಸಕರಿಂದ ಪ್ರತಿಭಟನೆ

ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಗುರುವಾರ (ಜ.22) ಭಾರೀ ಹೈಡ್ರಾಮ ನಡೆಯಿತು. ರಾಜ್ಯಪಾಲರು ಸರ್ಕಾರ ಬರೆದುಕೊಟ್ಟ ಭಾಷಣ ಓದದೆ, ತಮ್ಮದೇ ಆದ ಕೇವಲ ಎರಡೇ ಸಾಲಿನ ಭಾಷಣ ಓದಿ ಹೊರ ನಡೆದರು. ಇದಕ್ಕೆ ಆಡಳಿತ...

‘ಶೇ.56 ರ ಮೀಸಲಾತಿ ಅನುಸಾರ ನೇಮಕಾತಿ ಅಧಿಸೂಚನೆ ಹೊರಡಿಸಬಾರದು..’; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

"ಚಾಲ್ತಿಯಲ್ಲಿರುವ ಶೇ.50ರ ಮೀಸಲಾತಿಯ ಅನ್ವಯ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ನಡೆಸುವ ವಿಚಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ. ಆದರೆ, ಶೇ.56 ಕ್ಕೆ ಮೀಸಲಾತಿ ಹೆಚ್ಚಿಸಿರುವುದರ ಅನುಸಾರ ಹೊಸದಾಗಿ ಅಧಿಸೂಚನೆ ಹೊರಡಿಸಬಾರದು" ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌...