- Advertisement -
- Advertisement -
ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾ ಪ್ರದೇಶದಲ್ಲಿ 200 ಅಡಿ ಆಳದ ಕಂದಕಕ್ಕೆ ವಾಹನ ಉರುಳಿ 10 ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.
ಒಟ್ಟು 17 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಸೇನಾ ವಾಹನವು ಎತ್ತರದ ಪೋಸ್ಟ್ ಕಡೆಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭದೇರ್ವಾ-ಚಂಬಾ ಅಂತರರಾಜ್ಯ ರಸ್ತೆಯ ಖನ್ನಿ ಮೇಲ್ಭಾಗದಲ್ಲಿ ಅಪಘಾತ ಸಂಭವಿಸಿದೆ.
ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಪ್ರಸ್ತುತ ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆರಂಭದಲ್ಲಿ, ನಾಲ್ವರು ಸೈನಿಕರು ಮೃತಪಟ್ಟಿದ್ದು, ಈಗ ಸಾವಿನ ಸಂಖ್ಯೆ 11 ಕ್ಕೆ ಏರಿದೆ.
ಗಾಯಗೊಂಡವರಲ್ಲಿ ಕೆಲವರು ಗಂಭೀರ ಗಾಯಗೊಂಡಿದ್ದು, ಅವರನ್ನು ವಿಶೇಷ ಚಿಕಿತ್ಸೆಗಾಗಿ ಉಧಂಪುರ ಮಿಲಿಟರಿ ಆಸ್ಪತ್ರೆಗೆ ಏರ್‌ಲಿಫ್ಟ್ ಮಾಡಲಾಗಿದೆ.


