Homeಕರ್ನಾಟಕ‘ಕರ್ನಾಟಕವನ್ನು ಎಲ್ಲಾ ರೀತಿಯಲ್ಲಿ ಕಡೆಗಣಿಸುತ್ತಿದ್ದ ಬಿಜೆಪಿ ಈಗ ರಾಜ್ಯಪಾಲರ ಮೂಲಕವೇ ಕನ್ನಡಿಗರನ್ನು ಅವಮಾನಿಸಿದೆ: ಪ್ರಿಯಾಂಕ್ ಖರ್ಗೆ

‘ಕರ್ನಾಟಕವನ್ನು ಎಲ್ಲಾ ರೀತಿಯಲ್ಲಿ ಕಡೆಗಣಿಸುತ್ತಿದ್ದ ಬಿಜೆಪಿ ಈಗ ರಾಜ್ಯಪಾಲರ ಮೂಲಕವೇ ಕನ್ನಡಿಗರನ್ನು ಅವಮಾನಿಸಿದೆ: ಪ್ರಿಯಾಂಕ್ ಖರ್ಗೆ

- Advertisement -
- Advertisement -

ಬೆಂಗಳೂರು: ಬಿಜೆಪಿ ಕನ್ನಡಿಗರನ್ನು ಅವಮಾನಿಸುವ ಪ್ರಕ್ರಿಯೆ ಮುಂದುವರೆದಿದೆ ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. 

2026 ಜನವರಿ 22ರ, ಗುರುವಾರ ಸದನದಲ್ಲಿ ನಡೆದ ಬೆಳವಣಿಗೆಗಳ ಕುರಿತು ತಮ್ಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಖರ್ಗೆ, ‘ಸರ್ಕಾರದ ಭಾಷಣವನ್ನು ಉಲ್ಲಂಘಿಸುವ ಮೂಲಕ ರಾಜ್ಯಪಾಲರು ಸಂವಿಧಾನಕ್ಕೆ ಅವಮಾನ ಮಾಡಿದ್ದಾರೆ’ ಎಂದು ಹೇಳಿದ್ದಾರೆ.

‘ಸಾಂಸ್ಕೃತಿಕವಾಗಿ, ಆರ್ಥಿಕವಾಗಿ ಮತ್ತು ಆಡಳಿತಾತ್ಮಕವಾಗಿ ಕನ್ನಡಿಗರನ್ನು ಮತ್ತು ಕರ್ನಾಟಕವನ್ನು ಕಡೆಗಣಿಸಿ, ಶೋಷಿಸಿದ್ದ ಬಿಜೆಪಿ ಈಗ ಮತ್ತೊಂದು ಹೆಜ್ಜೆ ಮುಂದೆ ಹೋಗಿ ರಾಜ್ಯಪಾಲರ ಮೂಲಕವೇ ಕನ್ನಡಿಗರನ್ನು ಅವಮಾನಿಸಿದೆ’ ಎಂದು ಸಚಿವ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

‘ರಾಷ್ಟ್ರಗೀತೆ ನುಡಿಸುವವರೆಗೂ ಕಾಯದೆ ಎದ್ದು ಹೊರಟ ರಾಜ್ಯಪಾಲರು ಶಿಷ್ಟಾಚಾರವನ್ನು ಬದಿಗೊತ್ತಿ ರಾಷ್ಟ್ರಗೀತೆಗೂ ಅವಮಾನಿಸಿದ್ದಾರೆ. ಈ ಮೂಲಕ ಬಿಜೆಪಿ ರಾಷ್ಟ್ರ ಗೀತೆಯ ವಿರೋಧಿ, ಸಂವಿಧಾನ ವಿರೋಧಿ, ಕನ್ನಡಿಗರ ವಿರೋಧಿ ಎನ್ನುವುದು ಜಗಜ್ಜಾಹೀರಾಗಿದೆ’ ಎಂದಿದ್ದಾರೆ.

‘ಕನ್ನಡಿಗರನ್ನು ಉದ್ದೇಶಿಸಿ ಪೂರ್ಣ ಭಾಷಣ ಮಾಡದಷ್ಟು ತೀವ್ರ ಅಸಹನೆಯನ್ನು ತೋರಿರುವ ರಾಜ್ಯಪಾಲರು ಬಿಜೆಪಿಯ ದರ್ಪ, ದ್ರಾಷ್ಟ್ಯದ ವಕ್ತಾರರಾಗಿ ನಿರೂಪಿಸಿದ್ದಾರೆ. ಅಸಡ್ಡೆಯಿಂದ ಕೂಡಿದ ನಾಲ್ಕು ಸಾಲಿನ ಮಾತು, ಸರ್ಕಾರದ ಭಾಷಣದ ತಿರಸ್ಕಾರವು ಸಂವಿಧಾನದ ಆಶಯಗಳ ಉಲ್ಲಂಘನೆ ಮಾತ್ರವಲ್ಲ, ಕನ್ನಡಿಗರಿಗೆ ಎಸಗಿದ ಘೋರ ಅವಮಾನ ಎಂದಿರುವ ಖರ್ಗೆ ರಾಜ್ಯಪಾಲರ ಮೂಲಕ ಒಕ್ಕೂಟ ವ್ಯವಸ್ಥೆಯ ಮೌಲ್ಯಗಳನ್ನು ನೆಲಕ್ಕೆ ಹಾಕಿ ಹೊಸಕುತ್ತಿರುವ ಬಿಜೆಪಿಗೆ ಕನ್ನಡಿಗರು ಪಾಠ ಕಲಿಸುವುದು ನಿಶ್ಚಿತ’ ಎಂದು ಎಚ್ಚರಿಸಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕಾಂಗ್ರೆಸ್ ಬಡವರನ್ನು ದಾರಿ ತಪ್ಪಿಸಿತು; ನನ್ನ ಸರ್ಕಾರ 50 ಕೋಟಿ ಜನರನ್ನು ಬಡತನದಿಂದ ಹೊರತಂದಿದೆ’: ಬಿಹಾರದಲ್ಲಿ ಪ್ರಧಾನಿ ಮೋದಿ ಹೇಳಿಕೆ

ಪಾಟ್ನಾ: ದಶಕಗಳ ಕಾಲ ದೇಶವನ್ನು ಆಳಿದ ಕಾಂಗ್ರೆಸ್ ಬಡತನ ನಿರ್ಮೂಲನೆ ಮಾಡುವಲ್ಲಿ ವಿಫಲವಾಗಿದೆ. ಬಡವರನ್ನು ದಾರಿ ತಪ್ಪಿಸುವ ಕೆಲಸ ಮಾಡಿದೆ. ಆದರೆ, ತಮ್ಮ ಸರ್ಕಾರದ ಉತ್ತಮ ಉದ್ದೇಶಗಳು ಮತ್ತು ಪ್ರಯತ್ನಗಳಿಂದಾಗಿ ದೇಶದ 50...

ರಿಪೋಟರ್ಸ್ ಕಲೆಕ್ಟಿವ್‌ ‘ಎಲೆಕ್ಷನ್ ಆಡಿಟ್’ ವರದಿಗೆ ಚುನಾವಣಾ ಅಧಿಕಾರಿಗಳಿಂದ ಸಮಜಾಯಿಸಿ : ವರದಿಗಾರ್ತಿ ಸುಮೇಧಾ ಮಿತ್ತಲ್ ತಿರುಗೇಟು

2024ರಲ್ಲಿ ನಡೆದ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಮಹಾರಾಷ್ಟ್ರ, ಹರಿಯಾಣ ಹಾಗೂ ಜಮ್ಮು ಮತ್ತು ಕಾಶ್ಮೀರದ ಒಟ್ಟು 200 ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯ ನಂತರ ಎಷ್ಟು ಮಂದಿ ಮತದಾನ ಮಾಡಿದ್ದಾರೆ ಎಂಬುದರ...

1.27 ಕೋಟಿ ಹಿಂದೂ ಮತದಾರರ ಹೆಸರು ಕೈಬಿಟ್ಟುಹೋಗಿದೆ ಎಂಬ ಯೋಗಿ ಆದಿತ್ಯನಾಥ್‌ ಹೇಳಿಕೆ: ಪೂರಕ ಮಾಹಿತಿ ಸಲ್ಲಿಸುವಂತೆ ಕೋರಿದ SIR ಸ್ವತಂತ್ರ ಆಯೋಗ!

ಉತ್ತರ ಪ್ರದೇಶದ ಮತದಾರರ ಪಟ್ಟಿಯಿಂದ ಸುಮಾರು 1.27 ಕೋಟಿ ಹಿಂದೂ ಮತದಾರರ ಹೆಸರುಗಳು ಕೈಬಿಟ್ಟುಹೋಗಿವೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನೀಡಿರುವ ಹೇಳಿಕೆಗೆ ಸಂಬಂಧಿಸಿದ ಪೂರಕ ದಾಖಲೆಗಳು ಮತ್ತು ದತ್ತಾಂಶಗಳನ್ನು ಸಲ್ಲಿಸುವಂತೆ...

ಬರ ಪರಿಹಾರ ಬಿಡುಗಡೆ ಮಾಡದಿದ್ದರೆ ಕೇಂದ್ರದ ವಿರುದ್ಧ ಕಾನೂನು ಹೋರಾಟ ಮುಂದುವರಿಕೆ: ಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ

ಬೆಂಗಳೂರು: ಕರ್ನಾಟಕಕ್ಕೆ ಬರ ಪರಿಹಾರವಾಗಿ ಹಣ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ ಸಲ್ಲಿಸಿರುವ ಮನವಿಯನ್ನು ಕೇಂದ್ರ ಸರ್ಕಾರ ಪರಿಗಣಿಸದಿದ್ದರೆ, ಕೇಂದ್ರದ ವಿರುದ್ಧ ಕಾನೂನು ಹೋರಾಟವನ್ನು ಮುಂದುವರಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆ...

ಸಾಂಸ್ಕೃತಿಕ ನಾಯಕ ಬಸವಣ್ಣನ ನಿಂದನೆ: ರವಿ ಹಂಜ್‌ ವಿರುದ್ದ ಕರವೇ ನಾರಾಯಣಗೌಡ ಆಕ್ರೋಶ.

ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನ ಕುರಿತು ರವಿ ಹಂಜ್‌ ಎನ್ನುವ ವ್ಯಕ್ತಿ ಆಕ್ಷೇಪಾರ್ಹ ಹಾಗೂ ನಿಂದನೆ ಮಾತುಗಳನ್ನಾಡಿದ್ದರ ಕುರಿತು ಕರವೇ ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ಕರ್ನಾಟಕ ಕಂಡ ಮಹಾ ಮಾನವತಾವಾದಿ, ದಾರ್ಶನಿಕ, ಸಾಮಾಜಿಕ ಕ್ರಾಂತಿಯ...

ಮುರಿದ ಕೈಗೆ ಚಿಕಿತ್ಸೆ ಬದಲು ಕಾರ್ಡ್‌ಬೋರ್ಡ್ ರಟ್ಟು ಕಟ್ಟಿ ಕಳಿಸಿದ ಆಸ್ಪತ್ರೆ ಸಿಬ್ಬಂದಿ: ಉತ್ತರ ಪ್ರದೇಶದ ಆರೋಗ್ಯ ವ್ಯವಸ್ಥೆ ವಿರುದ್ಧ ಕಾಂಗ್ರೆಸ್ ಕಿಡಿ!

ಉತ್ತರ ಪ್ರದೇಶದ ಕಾನ್ಪುರದ ಸರ್ಕಾರಿ ಆಸ್ಪತ್ರೆಯಲ್ಲಿ ರಸ್ತೆ ಅಪಘಾತದಲ್ಲಿ ಕೈ ಮೂಳೆ ಮುರಿದಿದ್ದ ತರಕಾರಿ ವ್ಯಾಪಾರಿಯೊಬ್ಬರಿಗೆ ಸೂಕ್ತ ಚಿಕಿತ್ಸೆ ನೀಡುವ ಬದಲು ಕಾರ್ಡ್‌ಬೋರ್ಡ್ ರಟ್ಟು ಕಟ್ಟಿ ಮನೆಗೆ ಕಳುಹಿಸಿದ ಘಟನೆ ವ್ಯಾಪಕ ಆಕ್ರೋಶಕ್ಕೆ...

ಎಸ್‌ಐಆರ್ ಅಂತಿಮ ಪಟ್ಟಿ 192 ಕ್ಷೇತ್ರಗಳಲ್ಲಿ ಗೆಲುವಿನ ಅಂತರಕ್ಕಿಂತ ಹೆಚ್ಚು ಮತಗಳು ಡಿಲೀಟ್ ಕಾಂಗ್ರೆಸ್- 115, ಬಿಜೆಪಿ-58 ಹಾಗೂ ಜೆಡಿ(ಎಸ್)ನ 19 ಕ್ಷೇತ್ರಗಳಲ್ಲಿ ಭಾರೀ ವ್ಯತ್ಯಾಸ

ಜನಪರ ಸಂಘಟನೆಗಳು ಮತ್ತು ಜಾತ್ಯತೀತ ಪಕ್ಷಗಳ ವಿರೋಧ, ಆತಂಕ ಹಾಗೂ ಆರೋಪಗಳ ಹೊರತಾಗಿಯೂ ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಗಿದಿದೆ. ದಿನಾಂಕ: 2026ರ ಅಕ್ಟೋಬರ್ 27 ರಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತರಾದ ಅನ್ಬುಕುಮಾರ್...

ಉತ್ತರ ಪ್ರದೇಶದಲ್ಲಿ 1.27 ಕೋಟಿ ಹಿಂದೂ ಮತದಾರರ ಹೆಸರು ಅಳಿಸಿದ ಆರೋಪ: ಯೋಗಿ ಆದಿತ್ಯನಾಥ್ ಅವರಿಂದ ದಾಖಲೆ, ದತ್ತಾಂಶ ಕೇಳಿದ ಸ್ವತಂತ್ರ ಆಯೋಗ

ನವದೆಹಲಿ: ಉತ್ತರ ಪ್ರದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸುಮಾರು 1.27 ಕೋಟಿ ಹಿಂದೂ ಮತದಾರರನ್ನು ಪಟ್ಟಿಯಿಂದ ಹೊರಗಿಡಲಾಗಿದೆ ಎಂಬ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ಇದೀಗ...

ಐಸಿಜೆಯ ‘ನರಮೇಧ’ ತೀರ್ಪಿಗೆ ರೋಹಿಂಗ್ಯಾ ನಿರಾಶ್ರಿತರಿಂದ ಸ್ವಾಗತ: ತಾಯ್ನಾಡು ಮ್ಯಾನ್ಮಾರ್‌ಗೆ ಮರಳುವ ಇಂಗಿತ

ನವೆಂಬರ್ 19, 2026ರಂದು, ವಿಶ್ವಸಂಸ್ಥೆಯ ಅತ್ಯುನ್ನತ ನ್ಯಾಯಾಲಯವಾದ ಇಂಟರ್‌ನ್ಯಾಷನಲ್ ಕೋರ್ಟ್ ಆಫ್ ಜಸ್ಟೀಸ್ (ಐಸಿಜೆ) ರೋಹಿಂಗ್ಯಾ ಮುಸ್ಲಿಂ ಅಲ್ಪಸಂಖ್ಯಾತರ ವಿರುದ್ಧ ಮ್ಯಾನ್ಮಾರ್ ನರಮೇಧ ನಡೆಸಿದೆ ಎಂದು ಐತಿಹಾಸಿಕ ತೀರ್ಪು ನೀಡಿದೆ. ಅಂತಾರಾಷ್ಟ್ರೀಯ...

‘ಬಸವ ಮಂಟಪ’ ವಿವಾದ: ವಿದೇಶಕ್ಕೆ ತೆರಳಲು ಯತ್ನಿಸಿದ ಲೇಖಕ ರವಿ ಹಂಜ್ ಕೊಚ್ಚಿನ್ ವಿಮಾನ ನಿಲ್ದಾಣದಲ್ಲಿ ವಶಕ್ಕೆ; ಕೃತಿ ಮುಟ್ಟುಗೋಲು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಿಎಂ ಡಿಕೆಶಿ ಆದೇಶ

ಬೆಂಗಳೂರು, ನವೆಂಬರ್ 21: 12ನೇ ಶತಮಾನದ ಸಮಾಜ ಸುಧಾರಕ, ವಚನ ಚಳವಳಿಯ ಮುಂಚೂಣಿ ನಾಯಕ ಜಗಜ್ಯೋತಿ ಬಸವಣ್ಣನವರ ಕುರಿತು ಅವಹೇಳನಕಾರಿ ಮತ್ತು ಅವಮಾನಕರ ವಿಚಾರಗಳನ್ನು ಬರೆದಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ‘ಬಸವ ಮಂಟಪ’...