Homeಕರ್ನಾಟಕಮಂಗಳೂರು ಗುಂಪು ಹತ್ಯೆ ಪ್ರಕರಣ : ಮತ್ತೊಬ್ಬ ಆರೋಪಿಗೆ ಜಾಮೀನು

ಮಂಗಳೂರು ಗುಂಪು ಹತ್ಯೆ ಪ್ರಕರಣ : ಮತ್ತೊಬ್ಬ ಆರೋಪಿಗೆ ಜಾಮೀನು

- Advertisement -
- Advertisement -

ಮಂಗಳೂರು ಹೊರವಲಯದ ಕುಡುಪು ಬಳಿ 2025ರ ಏಪ್ರಿಲ್ 27ರಂದು ನಡೆದ ಕೇರಳ ಮೂಲದ ಮುಹಮ್ಮದ್ ಅಶ್ರಫ್ ಅವರ ಗುಂಪು ಹತ್ಯೆ ಪ್ರಕರಣದ ಆರೋಪಿ ನಟೇಶ್ ಕುಮಾರ್‌ಗೆ ಹೈಕೋರ್ಟ್ ಶುಕ್ರವಾರ (ಜ.23) ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣವರ್ ಅವರ ಏಕಸದಸ್ಯ ಪೀಠ ನಟೇಶ್ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿ ಜಾಮೀನು ನೀಡಿದೆ.

ಪ್ರಕರಣದ ತನಿಖೆ ಪೂರ್ಣಗೊಂಡು ಚಾರ್ಜ್‌ಶೀಟ್ ಸಲ್ಲಿಕೆಯಾಗಿರುವುದು, ಆರೋಪಿಯು ಈಗಾಗಲೇ ಸುದೀರ್ಘ ಕಾಲ (2025ರ ಏಪ್ರಿಲ್‌ನಿಂದ) ನ್ಯಾಯಾಂಗ ಬಂಧನದಲ್ಲಿರುವುದು ಮತ್ತು ಹೆಚ್ಚಿನ ಕಸ್ಟಡಿ ವಿಚಾರಣೆಯ ಅಗತ್ಯವಿಲ್ಲದಿರುವುದನ್ನು ಗಮನಿಸಿ ನ್ಯಾಯಾಲಯ ಜಾಮೀನು ನೀಡಿದೆ ಎಂದು ವರದಿಯಾಗಿದೆ.

ಕ್ರಿಕೆಟ್ ಪಂದ್ಯದ ವೇಳೆ ಅಶ್ರಫ್ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ್ದರು ಎಂದು ಆರೋಪಿಸಿ ಗುಂಪು ಹತ್ಯೆ ನಡೆಸಲಾಗಿತ್ತು. ಈ ವೇಳೆ ನಟೇಶ್ ಅಶ್ರಫ್ ಕಣ್ಣಿಗೆ ಮೆಣಸಿನ ಪುಡಿ ಎರಚಿ ಇತರರನ್ನು ಹಲ್ಲೆಗೆ ಪ್ರಚೋದಿಸಿದ್ದರು ಎಂದು ಪ್ರಾಸಿಕ್ಯೂಷನ್ ವಾದಿಸಿದೆ.

ನ್ಯಾಯಾಲಯವು ಆರೋಪಿಗೆ ಸಾಕ್ಷ್ಯಗಳನ್ನು ನಾಶಪಡಿಸಬಾರದು, ವಿಚಾರಣೆಗೆ ಸಹಕರಿಸಬೇಕು, ರೂ. 1,00,00 ಮೊತ್ತದ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತಕ್ಕೆ ಒಬ್ಬರ ಭದ್ರತೆ ಒದಗಿಸಬೇಕು ಎಂಬ ಷರತ್ತುಗಳನ್ನು ವಿಧಿಸಿದೆ.

ಈ ಪ್ರಕರಣದಲ್ಲಿ ಈಗಾಗಲೇ ಸಚಿನ್, ದೀಕ್ಷಿತ್, ಸಂದೀಪ್ ಸೇರಿದಂತೆ ಇತರ ಕೆಲವು ಆರೋಪಿಗಳಿಗೂ ವಿವಿಧ ಹಂತಗಳಲ್ಲಿ ಜಾಮೀನು ಲಭಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...