Homeಮುಖಪುಟಕಾನೂನುಬಾಹಿರ ಹತ್ಯೆ ಆರೋಪ : ಸಿಆರ್‌ಪಿಎಫ್ ಅಧಿಕಾರಿಗೆ ಶೌರ್ಯ ಚಕ್ರ ನೀಡಿರುವುದನ್ನು ಖಂಡಿಸಿದ ಕುಕಿ-ಝೋ ಗುಂಪುಗಳು

ಕಾನೂನುಬಾಹಿರ ಹತ್ಯೆ ಆರೋಪ : ಸಿಆರ್‌ಪಿಎಫ್ ಅಧಿಕಾರಿಗೆ ಶೌರ್ಯ ಚಕ್ರ ನೀಡಿರುವುದನ್ನು ಖಂಡಿಸಿದ ಕುಕಿ-ಝೋ ಗುಂಪುಗಳು

- Advertisement -
- Advertisement -

ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ಅಧಿಕಾರಿಯೊಬ್ಬರು ತಮ್ಮ ಸಮುದಾಯದ ಹತ್ತು ಪುರುಷರ “ಕಾನೂನುಬಾಹಿರ ಹತ್ಯೆ”ಯಲ್ಲಿ ಭಾಗಿಯಾಗಿದ್ದಾರೆ ಎಂದು ಮಣಿಪುರದ ಕುಕಿ-ಝೋ ಸಂಘಟನೆಗಳು ಸೋಮವಾರ (ಜ.26) ಆರೋಪಿಸಿದ್ದು, ಆ ಅಧಿಕಾರಿಗೆ ಶೌರ್ಯ ಚಕ್ರ ನೀಡಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಟೀಕಿಸಿವೆ.

ಸಿಆರ್‌ಪಿಎಫ್‌ 20ನೇ ಬೆಟಾಲಿಯನ್‌ನ ಸಹಾಯಕ ಕಮಾಂಡೆಂಟ್ ವಿಪಿನ್ ವಿಲ್ಸನ್‌ ಅವರಿಗೆ ನೀಡಿರುವ ಪ್ರಶಸ್ತಿಯನ್ನು ಹಿಂತೆಗೆದುಕೊಳ್ಳಬೇಕೆಂದು ಕುಕಿ ಆರ್ಗನೈಸೇಶನ್ ಫಾರ್ ಹ್ಯೂಮನ್ ರೈಟ್ಸ್ ಟ್ರಸ್ಟ್ ಮತ್ತು ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ ಒತ್ತಾಯಿಸಿವೆ.

ಜನವರಿ 25ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಶಸ್ತ್ರ ಪಡೆಗಳ 70 ಸಿಬ್ಬಂದಿಗೆ ಶೌರ್ಯ ಪ್ರಶಸ್ತಿಗಳನ್ನು ಅನುಮೋದಿಸಿದ್ದು, ದೇಶದ ಮೂರನೇ ಅತ್ಯುನ್ನತ ಶಾಂತಿಕಾಲದ ಶೌರ್ಯ ಪ್ರಶಸ್ತಿಯಾದ ಶೌರ್ಯ ಚಕ್ರವನ್ನು ಪಡೆದ 13 ಸಿಬ್ಬಂದಿಗಳಲ್ಲಿ ವಿಲ್ಸನ್ ಕೂಡ ಒಬ್ಬರು.

ನವೆಂಬರ್ 11, 2024ರಂದು ವಿಲ್ಸನ್ ಮಣಿಪುರದಲ್ಲಿ ದಂಗೆಕೋರರ ಶಿಬಿರದ ದಾಳಿಯನ್ನು ವಿಫಲಗೊಳಿಸಲು ಮತ್ತು ಅವರಲ್ಲಿ 10 ಜನರನ್ನು ತಟಸ್ಥಗೊಳಿಸಲು ಸಿಬ್ಬಂದಿ ತಂಡವನ್ನು ಮುನ್ನಡೆಸಿದ್ದರು. ಅವರ ಅಪ್ರತಿಮ ಧೈರ್ಯಕ್ಕಾಗಿ ಈ ಗಣರಾಜ್ಯೋತ್ಸವದಂದು ಶೌರ್ಯ ಚಕ್ರವನ್ನು ಪ್ರದಾನ ಮಾಡಲಾಗುತ್ತದೆ ಎಂದು ಸಿಆರ್‌ಪಿಎಫ್‌ ಭಾನುವಾರ (ಜ.25) ರಾತ್ರಿ ತಿಳಿಸಿತ್ತು.

ಮಣಿಪುರದ ಜಿರಿಬಮ್ ಜಿಲ್ಲೆಯ ಬೊರೊಬೆಕ್ರಾ ಪ್ರದೇಶದ ಸಿಆರ್‌ಪಿಎಫ್ ಪೋಸ್ಟ್‌ನಲ್ಲಿ ಗುಂಡಿನ ಚಕಮಕಿ ನಡೆದಿತ್ತು. ದಾಳಿಯ ಸಮಯದಲ್ಲಿ, ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದವರು ಶಂಕಿತ ಕುಕಿ ಉಗ್ರಗಾಮಿಗಳು ಎಂದು ಮಣಿಪುರ ಪೊಲೀಸರು ಹೇಳಿಕೊಂಡಿದ್ದರು. ಆದರೆ, ಕುಕಿ-ಝೋ ಸಂಘಟನೆಗಳು ಅವರು ಗ್ರಾಮ ಸ್ವಯಂಸೇವಕರು ಎಂದು ಹೇಳಿಕೊಂಡಿದ್ದವು.

ಮೇ 2023ರಲ್ಲಿ ಕುಕಿ-ಝೋ-ಹ್ಮಾರ್ಸ್ ಮತ್ತು ಮೈತೇಯಿ ಸಮುದಾಯಗಳ ನಡುವೆ ಜನಾಂಗೀಯ ಘರ್ಷಣೆಗಳು ಭುಗಿಲೆದ್ದಾಗಿನಿಂದ ಗ್ರಾಮಗಳನ್ನು ಕಾಯುತ್ತಿರುವ ಸಶಸ್ತ್ರ ನಾಗರಿಕರಿಗೆ “ಗ್ರಾಮ ಸ್ವಯಂಸೇವಕರು” ಎಂಬ ಪದವನ್ನು ಬಳಸಲಾಗುತ್ತಿದೆ. ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದಾಗಿ ಕನಿಷ್ಠ 260 ಜನರು ಸಾವನ್ನಪ್ಪಿದ್ದಾರೆ ಮತ್ತು 59,000ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ.

ಸೋಮವಾರ ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆಯು, ಸಹಾಯಕ ಕಮಾಂಡೆಂಟ್‌ಗೆ ಶೌರ್ಯ ಚಕ್ರವನ್ನು ನೀಡುವ ಕೇಂದ್ರ ಸರ್ಕಾರದ ನಿರ್ಧಾರದಿಂದ ದಿಗ್ಭ್ರಮೆಗೊಂಡಿರುವುದಾಗಿ ಎಂದು ಹೇಳಿದೆ. ಈ ಪ್ರಶಸ್ತಿಯು ಕುಕಿ-ಝೋ ಸಮುದಾಯಕ್ಕೆ ಮಾಡಲಾದ ‘ತಾರತಮ್ಯ ಮತ್ತು ಅನ್ಯಾಯದ ಮುಂದುವರಿಕೆ’ ಎಂದಿದೆ.

ಅಧಿಕಾರಿಗಳು ಆರೋಪಿಸಿದಂತೆ 10 ಗ್ರಾಮ ಸ್ವಯಂಸೇವಕರು ಸಿಆರ್‌ಪಿಎಫ್ ಪೋಸ್ಟ್ ಮೇಲೆ ದಾಳಿ ಮಾಡಲು ಯಾವುದೇ ಕಾರಣವಿಲ್ಲ ಎಂದು ವೇದಿಕೆ ಹೇಳಿದೆ. ಈ ಪುರುಷರು ಹೆಚ್ಚಾಗಿ ದಿನಗೂಲಿ ಕಾರ್ಮಿಕರ ಗುಂಪಾಗಿದ್ದು, ಅವರು ತಮ್ಮ ಜನರನ್ನು ರಕ್ಷಿಸಲು ಸ್ವಯಂಸೇವಕರಾಗಿದ್ದರು. ಪೊಲೀಸರು ಆರೋಪಿಸಿದಂತೆ ತರಬೇತಿ ಪಡೆದ ‘ಉಗ್ರಗಾಮಿಗಳು’ ಅಲ್ಲ ಎಂದು ತಿಳಿಸಿದೆ.

ಸಿಆರ್‌ಪಿಎಫ್ ಪೋಸ್ಟ್ ಮೇಲೆ ದಾಳಿ ಮಾಡಲಾಗಿದೆ ಎಂಬ ಅಧಿಕೃತ ನಿರೂಪಣೆಗೆ ವಿರುದ್ಧವಾಗಿ, ಶವಪರೀಕ್ಷೆ ವರದಿಗಳು ಪುರುಷರಿಗೆ ಹಿಂದಿನಿಂದ ಗುಂಡು ಹಾರಿಸಲಾಗಿದೆ ಎಂದು ಬಹಿರಂಗಪಡಿಸಿವೆ ಎಂದು ವೇದಿಕೆ ಹೇಳಿಕೆಯಲ್ಲಿ ತಿಳಿಸಿದೆ. ತಮ್ಮ ಸಮುದಾಯವನ್ನು ರಕ್ಷಿಸಲು ಪ್ರಯತ್ನಿಸಿದ ಪುರುಷರ ಮೇಲೆ ಮಾತ್ರ ಗುಂಡು ಹಾರಿಸಲು ನಿರ್ಧರಿಸಿದ್ದ ವಿಲ್ಸನ್‌ ಅವರಿಗೆ ಪ್ರಶಸ್ತಿ ನೀಡುವುದನ್ನು ಅದು ಪ್ರಶ್ನಿಸಿದೆ.

ಕುಕಿ ಆರ್ಗನೈಸೇಶನ್ ಫಾರ್ ಹ್ಯೂಮನ್ ರೈಟ್ಸ್ ಟ್ರಸ್ಟ್ ಕೂಡ ಪ್ರಶಸ್ತಿಯನ್ನು ಖಂಡಿಸಿ, ಈ ಗೌರವವು ರಾಷ್ಟ್ರೀಯ ಹೆಮ್ಮೆಯ ಕಾರ್ಯವಲ್ಲ, ಬದಲಿಗೆ ಕಾನೂನುಬಾಹಿರ ಹತ್ಯೆಗೆ ಸರ್ಕಾರದ ಅನುಮೋದನೆ ಎಂದು ಆರೋಪಿಸಿದೆ.

ವಿಧಿ ವಿಜ್ಞಾನ ವರದಿಗಳು ಮತ್ತು ಪ್ರತ್ಯಕ್ಷದರ್ಶಿಗಳ ಸಾಕ್ಷ್ಯಗಳು ಸೇರಿದಂತೆ ವಿಶ್ವಾಸಾರ್ಹ ಪುರಾವೆಗಳು, ಬಲಿಪಶುಗಳು ನಿರಾಯುಧರಾಗಿದ್ದರು ಅಥವಾ ಜನಾಂಗೀಯ ಹಿಂಸಾಚಾರದ ಅವಧಿಯಲ್ಲಿ ಸಮುದಾಯ ರಕ್ಷಣಾ ಕರ್ತವ್ಯಗಳನ್ನು ನಿರ್ವಹಿಸುತ್ತಿದ್ದರು ಎಂಬುವುದಾಗಿ ದೃಢಪಡಿಸುತ್ತದೆ ಎಂದು ಸಂಸ್ಥೆ ಹೇಳಿದೆ.

ಅವರನ್ನು ಉಗ್ರಗಾಮಿಗಳು ಎಂದು ಹಣೆಪಟ್ಟಿ ಕಟ್ಟುವ ಸರ್ಕಾರದ ನಿರೂಪಣೆಯು ಏಕಪಕ್ಷೀಯ, ಅಸಮಾನವಾದ ಮಾರಕ ಬಲಪ್ರಯೋಗವನ್ನು ಸಮರ್ಥಿಸಲು ವಿನ್ಯಾಸಗೊಳಿಸಲಾದ ಕಟ್ಟುಕಥೆಯಾಗಿದೆ. “ಇದು ಎನ್‌ಕೌಂಟರ್ ಅಲ್ಲ, ಮರಣದಂಡನೆ” ಎಂದಿದೆ.

ವಿಲ್ಸನ್‌ ಅವರಿಗೆ ಪ್ರಶಸ್ತಿ ನೀಡಿರುವುದು ಸಾಂವಿಧಾನಿಕ ಮೌಲ್ಯಗಳಿಗೆ ಮಾಡಿದ ಆಳವಾದ ದ್ರೋಹ ಮತ್ತು ಕುಕಿ-ಝೋ ಜನರ ಜೀವನದ ಬಗ್ಗೆ ತಿರಸ್ಕಾರವನ್ನು ಪ್ರದರ್ಶಿಸುತ್ತದೆ ಎಂದು ಸಂಸ್ಥೆ ಅಸಮಾಧಾನ ಹೊರಹಾಕಿದೆ.

ಪ್ರಶಸ್ತಿಯನ್ನು ರದ್ದುಗೊಳಿಸುವುದರ ಜೊತೆಗೆ, ಹತ್ಯೆಯ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ತನಿಖಾ ಸಮಿತಿಯನ್ನು ಸ್ಥಾಪಿಸಬೇಕೆಂದು ಕುಕಿ ಆರ್ಗನೈಸೇಶನ್ ಫಾರ್ ಹ್ಯೂಮನ್ ರೈಟ್ಸ್ ಟ್ರಸ್ಟ್ ಒತ್ತಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...