Homeಕರ್ನಾಟಕಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌'ನಂತಹ ಸಿನಿಮಾ ಮಾಡಲು ಕೈ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

- Advertisement -
- Advertisement -

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು ‘ಲ್ಯಾಂಡ್‍ಲಾರ್ಡ್’ ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು.

ಗುರುವಾರ (ಜ.29) ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ಗೌರಿ ಮೀಡಿಯಾ ಟ್ರಸ್ಟ್ ವತಿಯಿಂದ ಗೌರಿ ಲಂಕೇಶ್ ಅವರ ಜನ್ಮದಿನದ ಪ್ರಯುಕ್ತ ಆಯೋಜಿಸಿದ್ದ ‘ನಾವೆಲ್ಲ ಗೌರಿ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹೋರಾಟವನ್ನು ಯಾರೂ ನಿಲ್ಲಿಸಲಿಕ್ಕೆ ಆಗುವುದಿಲ್ಲ, ಅದನ್ನು ನಿಲ್ಲಿಸುವುದೂ ಇಲ್ಲ. ನಾನು ಇಲ್ಲ ಎಂದರೆ ಇನ್ನೊಬ್ಬರು, ಇನ್ನೊಬ್ಬರು ಇಲ್ಲ ಎಂದರೆ ಮತ್ತೊಬ್ಬರು ಬರುತ್ತಾ ಇರುತ್ತಾರೆ ಎಂದು ವಿಜಯ್ ಹೇಳಿದರು.

ನಾನು ಜಿಮ್ ಟ್ರೈನರ್ ಆಗಿದ್ದಾಗ 1,500 ರೂ.ಸಂಬಳ. ಪ್ರತಿ ತಿಂಗಳು ಗೌರಿ ಲಂಕೇಶ್ ಅವರು ನನಗೆ 500ರೂ. ಹೆಚ್ಚು ಕೊಡುತ್ತಿದ್ದರು. ಆವಾಗ ನನಗೆ 500ರೂ. 5 ಕೋಟಿ ರೂ.ಗಳಿಗೆ ಸಮವಾಗಿತ್ತು ಎಂದು ವಿಜಯ್ ನೆನಪು ಮಾಡಿಕೊಂಡರು.

ಅಂಕಣಕಾರ ಶಿವಸುಂದರ್ ಮಾತನಾಡಿ, ಪತ್ರಕರ್ತೆ ಗೌರಿ ಲಂಕೇಶ್ ಅವರು ಶೋಷಣೆಯನ್ನು ಅನುಭವಿಸಿ ಬಂದವರಲ್ಲ. ಆದರೆ, ಚಳವಳಿಗೆ ಬಂದ ನಂತರ ಅವರು ಬಹಿರಂಗದ ಮೌಲ್ಯವನ್ನು ಅಂತರಂಗಕ್ಕೆ ಇಳಿಸಿಕೊಂಡ ವಿಧಾನ ನಮ್ಮೆಲ್ಲರಿಗೂ ಮಾದರಿ. ಅವರು ಸಮಾಜವನ್ನು ಬದಲಿಸಬೇಕು ಎಂದುಕೊಂಡವರಿಗೆ ಬಹಳ ದೊಡ್ಡ ಮಾದರಿ ಎಂದರು.

ಗೌರಿ ಲಂಕೇಶ್ ಅವರ ಬಗ್ಗೆ ಮಾತನಾಡುವಾಗ ಅತ್ಯಂತ ಬಾವುಕನಾಗುತ್ತೇನೆ. ನನ್ನಂತಹ ಸಾಮಾಜಿಕ ಹಿನ್ನೆಲೆಯಿಂದ ಬಂದ, ಯಾವುದೇ ಬಗೆಯ ವ್ಯಕ್ತಿಗತ ಶೋಷಣೆಯ ಅನುಭವ ಪಡೆಯದೇ ಇರುವುವರು ಮಾತನಾಡುವುದು ಸುಲಭ, ಆದರೆ ಅದನ್ನು ಅರಗಿಸಿಕೊಳ್ಳುವುದು ಕಷ್ಟ ಎಂದು ಅವರು ಹೇಳಿದರು.

ಬದಲಾವಣೆಯ ಪ್ರಶ್ನೆ ಬಂದಾಗ ತನ್ನ ಬಗ್ಗೆ ಹಾಗೂ ಶತ್ರು, ಮಿತ್ರರ ಬಗ್ಗೆಯೂ ಯಾವುದೇ ರೀತಿಯ ರಾಜಿ ಮಾಡಿಕೊಳ್ಳುತ್ತಿರಲಿಲ್ಲ ಎಂದು ಅವರು ತಿಳಿಸಿದರು.

ಚಲನಚಿತ್ರ ನಿರ್ದೇಶಕಿ ಹಾಗೂ ಗೌರಿ ಲಂಕೇಶ್ ಅವರ ಸಹೋದರಿ ಕವಿತಾ ಲಂಕೇಶ್ ಮಾತನಾಡಿ, ಗೌರಿ ಲಂಕೇಶ್ ಹೆಸರಿನಲ್ಲಿ ಒಂದು ಪ್ರಶಸ್ತಿ ಕೊಡುತ್ತಿದ್ದೆವು. ಸುಮಾರು ವರ್ಷದಿಂದ ಅದನ್ನು ನಿಲ್ಲಿಸಲಾಗಿತ್ತು. ಅದನ್ನು ಮತ್ತೆ ಪ್ರಾರಂಭಿಸಬೇಕು. ಸ್ವತಂತ್ರ ಪತ್ರಿಕೋದ್ಯಮದ ಉಳಿವಿಗಾಗಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕೊಡಬೇಕು ಎಂದು ಕೊಂಡಿದ್ದೇವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗೌರಿ ಅವರ ತಾಯಿ ಇಂದಿರಾ ಲಂಕೇಶ್, ಗೌರಿ ಮೀಡಿಯಾ ಟ್ರಸ್ಟ್ ಅಧ್ಯಕ್ಷ ಪ್ರೊ.ನಗರಗೆರೆ ರಮೇಶ್, ಕಾರ್ಯದರ್ಶಿ ರಾಜಲಕ್ಷ್ಮೀ ಅಂಕಲಗಿ, ಹೋರಾಟಗಾರ ನೂರ್ ಶ್ರೀಧರ್, ಗೌರಿ ಲಂಕೇಶ್ ನ್ಯಾಯಪಥ ಪತ್ರಿಕೆಯ ಸಂಪಾದಕ ಗರುಪ್ರಸಾದ್, ಗೌರಿ ಮೀಡಿಯಾ ಟ್ರಸ್ಟ್‌ನ ಅರುಣ್ ಕುಮಾರ್, ಪತ್ರಕರ್ತ ಚಂದ್ರು ತರಹುಣಸೆ ಹಾಗೂ ಅಪಾರ ಸಂಖ್ಯೆಯಲ್ಲಿ ಗೌರಿ ಒಡನಾಡಿಗಳು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...