Homeಮುಖಪುಟಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

- Advertisement -
- Advertisement -

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ.

ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳ 6 ರಿಂದ 12 ವರೆಗಿನ ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್‌ಗಳು ಲಭ್ಯವಾಗುವಂತೆ ನೋಡಿಕೊಳ್ಳಲು ಕೋರ್ಟ್ ನಿರ್ದೇಶಿಸಿದೆ.

ನವೆಂಬರ್ 2022ರಲ್ಲಿ ಡಾ. ಜಯಾ ಠಾಕೂರ್ ಎಂಬವರು 6 ರಿಂದ 12 ವರೆಗಿನ ಬಾಲಕಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್‌ಗಳನ್ನು ವಿತರಿಸಬೇಕು, ಎಲ್ಲಾ ಶಾಲೆಗಳಲ್ಲಿ ಬಾಲಕಿಯರಿಗೆ ಪ್ರತ್ಯೇಕ ಶೌಚಾಲಯ ಸೌಲಭ್ಯ ಕಲ್ಪಿಸಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿಗಳಾದ ಜೆ. ಬಿ. ಪಾರ್ದಿವಾಲಾ ಮತ್ತು ಆರ್. ಮಹಾದೇವನ್ ಅವರ ಪೀಠ ತೀರ್ಪು ಪ್ರಕಟಿಸಿದೆ.

ಇದೇ ಅರ್ಜಿಗೆ ಸಂಬಂಧಿಸಿದಂತೆ ಈ ಹಿಂದೆ, ಅಂದರೆ 2023ರ ಏಪ್ರಿಲ್ 10ರಂದು ರಾಷ್ಟ್ರೀಯ ನೀತಿ ರೂಪಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು. ನಂತರದಲ್ಲಿ ನೀತಿಯ ಅನುಷ್ಠಾನದ ಬಗ್ಗೆ ಮಾಹಿತಿ ಕೋರಿತ್ತು. 2024ರ ನವೆಂಬರ್‌ನಲ್ಲಿ ಕೇಂದ್ರ ಸರ್ಕಾರ “Menstrual Hygiene Policy for School Going Girls”ಅನ್ನು ಅನುಮೋದಿಸಿ ಕೋರ್ಟ್‌ಗೆ ಮಾಹಿತಿ ನೀಡಿತ್ತು.

ಇಂದಿನ ಅಂತಿಮ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಈ ಕೆಳಗಿನ ನಿರ್ದೇಶನಗಳನ್ನು ನೀಡಿದೆ

1. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ (ಉಭಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ) ತರಗತಿ 6 ರಿಂದ 12 ವರೆಗಿನ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಬಯೋಡಿಗ್ರೇಡಬಲ್ (ಜೈವಿಕ ವಿಘಟನೀಯ) ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ಒದಗಿಸಬೇಕು.

2. ಈ ಪ್ಯಾಡ್‌ಗಳು ASTM D-694 ಮಾನದಂಡಗಳನ್ನು ಪಾಲಿಸಬೇಕು ಮತ್ತು ಶೌಚಾಲಯದೊಳಗೆ ಅಥವಾ ಸುಲಭವಾಗಿ ಲಭ್ಯವಿರುವ ಸ್ಥಳದಲ್ಲಿ (ವೆಂಡಿಂಗ್ ಮೆಷಿನ್‌ಗಳ ಮೂಲಕ ಅಥವಾ ನಿಯೋಜಿತ ಅಧಿಕಾರಿಯ ಬಳಿ) ಲಭ್ಯವಿರಬೇಕು.

3. ಎಲ್ಲಾ ಶಾಲೆಗಳಲ್ಲಿ ಬಾಲಕಿಯರಿಗೆ ಪ್ರತ್ಯೇಕ ಶೌಚಾಲಯಗಳು, ನೀರು ಸಂಪರ್ಕ, ಸೋಪು ಸಹಿತ ಕೈ ತೊಳೆಯುವ ವ್ಯವಸ್ಥೆ ಇರಬೇಕು.

4. ಅಂಗವಿಕಲರಿಗೆ ಸೂಕ್ತವಾದ ಶೌಚಾಲಯಗಳನ್ನು ಒದಗಿಸಬೇಕು.

ಖಾಸಗಿ ಶಾಲೆಗಳು ಈ ನಿಯಮಗಳನ್ನು ಪಾಲಿಸದಿದ್ದರೆ ಶಾಲೆಗಳ ಪರವಾನಗಿ ಅಥವಾ ಅಂಗೀಕಾರ ರದ್ದುಗೊಳಿಸಲಾಗುವುದು. ಸರ್ಕಾರಗಳು ಸ್ಯಾನಿಟರಿ ನ್ಯಾಪ್ಕಿನ್ ಒದಗಿಸದಿದ್ದರೆ ಅವರನ್ನು ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಕೋರ್ಟ್ ಎಚ್ಚರಿಸಿದೆ. ಕೇಂದ್ರದ ‘Menstrual Hygiene Policy for School-going Girls’ ಅನ್ನು ಪ್ಯಾನ್-ಇಂಡಿಯಾ (ದೇಶದಾದ್ಯಂತ) ಅನುಷ್ಠಾನಗೊಳಿಸುವಂತೆ ನಿರ್ದೇಶನ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR : ಭಾಲ್ಕಿ, ಬೆಳಗಾವಿ ಉತ್ತರ-ದಕ್ಷಿಣ ವಿಧಾನಸಭಾ ಕ್ಷೇತ್ರಗಳಲ್ಲಿ ಸಾವಿರಾರು ಅರ್ಹ ಮತಗಳ ಡಿಲೀಟ್‌ಗೆ ಯತ್ನ; ಅನ್ಯರು ಫಾರಂ-7 ಸಲ್ಲಿಸಿರುವುದು ಬಯಲು!

ಭಾರತೀಯ ಚುನಾವಣಾ ಆಯೋಗದಲ್ಲಿ (ಇಸಿಐ) ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ಸರ್ವಾಧಿಕಾರಿ ಧೋರಣೆ ಬಟಾಬಯಲಾಗಿ ದೇಶದಾದ್ಯಂತ ಭಾರೀ ಚರ್ಚೆಯಾಗುತ್ತಿರುವ ನಡುವೆಯೇ, ಕರ್ನಾಟಕದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌)...

‘ದಿಮಾಗಿ ನಕ್ಸಲರು ಚುನಾವಣಾ ಆಯುಕ್ತರನ್ನು ಗುರಿಯಾಗಿಸಿಕೊಂಡಿದ್ದಾರೆ..’; ಗ್ಯಾನೇಶ್‌ ಕುಮಾರ್ ಬೆಂಬಲಕ್ಕೆ ನಿಂತ ಅಸ್ಸಾಂ ಸಿಎಂ

ಮುಖ್ಯ ಚುನಾವಣಾ ಆಯುಕ್ತರು ಇತರ ಚುನಾವಣಾ ಆಯುಕ್ತರನ್ನು ಸಂಪರ್ಕಿಸದೆ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ. ಮುಖ್ಯ ಚುನಾವಣಾ ಆಯುಕ್ತರನ್ನು (ಸಿಇಸಿ) ಗುರಿಯಾಗಿಸಿಕೊಂಡು ನಡೆಸಲಾಗುತ್ತಿರುವ ದಾಳಿಯು ಇದು ರಾಜಕೀಯ ಪ್ರಚಾರ ಹಾಗೂ ವಿರೋಧ ಪಕ್ಷಗಳ...

ಚುನಾವಣಾ ಆಯೋಗದ ಆಂತರಿಕ ಭಿನ್ನಾಭಿಪ್ರಾಯ: ಸಂಕಷ್ಟದಲ್ಲಿ ಲಕ್ಷಾಂತರ ‘Gen Z’ ಯುವಕರ ಮತದಾನದ ಹಕ್ಕು!

ಭಾರತೀಯ ಚುನಾವಣಾ ಆಯೋಗದಲ್ಲಿ ಮುಖ್ಯ ಚುನಾವಣಾ ಆಯುಕ್ತರು ಹಾಗೂ ಇತರ ಇಬ್ಬರು ಆಯುಕ್ತರ ನಡುವೆ ಉಂಟಾಗಿದೆ ಎನ್ನಲಾದ ಆಂತರಿಕ ಭಿನ್ನಾಭಿಪ್ರಾಯದಿಂದಾಗಿ, ದೇಶದ ನೂತನ ಯುವ ಮತದಾರರ ಸೇರ್ಪಡೆ ಪ್ರಕ್ರಿಯೆ ಮಂದಗತಿಯಲ್ಲಿದೆ ಎಂಬ ವರದಿ...

‘ಅನ್ಯಾಯಯುತ’ ಚುನಾವಣೆಗಳಿಗೆ ಅವಕಾಶ ನೀಡಿದ್ದಕ್ಕಾಗಿ ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು: ಪ್ರಿಯಾಂಕಾ ಗಾಂಧಿ

ವಯನಾಡ್: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತ್ತು ಕೋಟ್ಯಂತರ ಮತದಾರರ ಹೆಸರುಗಳು ಪಟ್ಟಿಯಿಂದ ಹೊರಗುಳಿದಿರುವ ವಿಚಾರದ ನಡುವೆಯೇ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್‌ನ ವಾಗ್ದಾಳಿ ಮತ್ತಷ್ಟು ತೀವ್ರಗೊಂಡಿದೆ. ಮತದಾರರ...

48 ಗಂಟೆಯೊಳಗೆ ರಾಜೀನಾಮೆ ನೀಡದಿದ್ದರೆ ರಾಷ್ಟ್ರವ್ಯಾಪಿ ಪ್ರತಿಭಟನೆ; ಗ್ಯಾನೇಶ್ ಕುಮಾರ್‌ಗೆ ಸಿಜೆಪಿ ಎಚ್ಚರಿಕೆ

ದೇಶದ ಅತ್ಯಂತ ದೊಡ್ಡ ರಾಷ್ಟ್ರದ್ರೋಹಿ ಎಂದು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ), "ಮತದಾರರ ಹಕ್ಕುಗಳನ್ನು ದುರ್ಬಲಗೊಳಿಸುತ್ತಿದ್ದಾರೆ" ಎಂದು ಆರೋಪಿಸಿ ಅವರ...

11 ವರ್ಷದ ಅತ್ಯಾಚಾರ ಸಂತ್ರಸ್ತೆಗೆ ಗರ್ಭಧಾರಣೆ ಮುಂದುವರಿಸಲು ಒತ್ತಾಯಿಸಲಾಗದು: 24 ವಾರ ಮೀರಿದರೂ ಗರ್ಭಪಾತಕ್ಕೆ ಜಮ್ಮು-ಕಾಶ್ಮೀರ ಹೈಕೋರ್ಟ್ ಅನುಮತಿ

ಶ್ರೀನಗರ: ಲೈಂಗಿಕ ದೌರ್ಜನ್ಯದಿಂದ ಗರ್ಭಿಣಿಯಾಗಿರುವ 11 ವರ್ಷದ ಬಾಲಕಿಯನ್ನು ಕಾನೂನಿನಲ್ಲಿರುವ ನಿಗದಿತ ಅವಧಿಯನ್ನು ಮೀರಿದೆ ಎಂಬ ಕಾರಣಕ್ಕೆ ಗರ್ಭಧಾರಣೆಯನ್ನು ಪೂರ್ಣ ಅವಧಿಯವರೆಗೆ ಮುಂದುವರಿಸುವಂತೆ ಒತ್ತಾಯಿಸಲಾಗುವುದಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್...

6 ವರ್ಷದ ಮಲಮಗಳ ಅತ್ಯಾಚಾರ, ಹತ್ಯೆ ಪ್ರಕರಣ : ಅಪರಾಧಿಯ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಬದಲಾಯಿಸಿದ ಸುಪ್ರೀಂ ಕೋರ್ಟ್

ಮಧ್ಯಪ್ರದೇಶದಲ್ಲಿ ತನ್ನ ಆರು ವರ್ಷದ ಮಲಮಗಳನ್ನು ಅತ್ಯಾಚಾರ ಮಾಡಿ ಹತ್ಯೆಗೈದ ಪ್ರಕರಣದಲ್ಲಿ ಅಪರಾಧಿಯೆಂದು ಸಾಬೀತಾದ ವ್ಯಕ್ತಿಗೆ ವಿಧಿಸಲಾಗಿದ್ದ ಮರಣದಂಡನೆಯನ್ನು ಸುಪ್ರೀಂ ಕೋರ್ಟ್ ಇಂದು (ಸೆ.24) ಬದಲಾಯಿಸಿದೆ. livelaw.in ನ್ಯಾಯಮೂರ್ತಿ ವಿಕ್ರಮ್ ನಾಥ್, ನ್ಯಾಯಮೂರ್ತಿ ಸಂದೀಪ್...

ಬಾಂಬೆ ಐಐಟಿಯಲ್ಲಿ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ; ತನಿಖೆಗೆ ಸಮಿತಿ ರಚನೆ

ಬಿ.ಟೆಕ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ಶಂಕಿತ ಆತ್ಮಹತ್ಯೆಯ ಸುತ್ತಲಿನ ಪರಿಸ್ಥಿತಿಗಳ ಬಗ್ಗೆ ತನಿಖೆ ನಡೆಸಲು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಬಾಂಬೆ ಬುಧವಾರ (ಸೆ.23) 10 ಸದಸ್ಯರ...

ಉತ್ತರ ಪ್ರದೇಶ| ಗೋಮಾಂಸ ಸಾಗಿಸುತ್ತಿರುವ ಶಂಕೆ; ಬಿರಿಯಾನಿ ಹೋಟೆಲ್ ಮಾಲೀಕನ ಮೇಲೆ ಗುಂಪು ಹಲ್ಲೆ

ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಮೂವರು ಯುವಕರು ಮುಸ್ಲಿಂ ಬಿರಿಯಾನಿ ಹೋಟೆಲ್ ಮಾಲೀಕನೊಬ್ಬ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಶಂಕೆಯಿಂದ ಆತನ ಮೇಲೆ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿದ್ದಾರೆ. ಭಾನುವಾರ (ಸೆ. 20) ಈ...

ಟಿಎಂಸಿ ಹೆಸರು, ಚಿಹ್ನೆ ತಡೆ: ಅಂತಿಮ ನಿರ್ಧಾರದ ಕಾಲಮಿತಿ ಕೇಳಿದ ಸುಪ್ರೀಂ ಕೋರ್ಟ್; ಸೆ. 28ಕ್ಕೆ ವಿಚಾರಣೆ

ತೃಣಮೂಲ ಕಾಂಗ್ರೆಸ್‌ (TMC) ಪಕ್ಷದ ಮೂಲ ಹೆಸರು ಹಾಗೂ ‘ಜೋಡಾ ಘಾಸ್‌ಫುಲ್‌’ (Flowers & Grass) ಚುನಾವಣಾ ಚಿಹ್ನೆಯ ಬಳಕೆಯನ್ನು ತಾತ್ಕಾಲಿಕವಾಗಿ ತಡೆಹಿಡಿದಿರುವ ಚುನಾವಣಾ ಆಯೋಗದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು...