Homeಮುಖಪುಟಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

- Advertisement -
- Advertisement -

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ ಸಂಬಂಧಿಸಿದ ಅಪರಾಧ ಪ್ರಕರಣಗಳಲ್ಲಿ ಗರಿಷ್ಠ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಅವಕಾಶ ಕಲ್ಪಿಸಲಾಗಿದೆ.

ತಿದ್ದುಪಡಿ ಕಾನೂನಿನ ಅನ್ವಯ ಬಲವಂತ, ಒತ್ತಡ ಅಥವಾ ವಂಚನೆಯ ಮೂಲಕ ವಿವಾಹ ಅಥವಾ ಲಿವ್‌ಇನ್ ಸಂಬಂಧಕ್ಕೆ ದಬ್ಬಾಳಿಕೆ ಮಾಡಿದರೆ, ಅಂತಹ ವ್ಯಕ್ತಿಗೆ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ವಿವಾಹಿತ ವ್ಯಕ್ತಿಯೊಬ್ಬನು ಕಾನೂನಾತ್ಮಕ ವಿಚ್ಛೇದನ ಪಡೆಯದೇ ಎರಡನೇ ವಿವಾಹ ಮಾಡಿಕೊಂಡರೆ ಅಥವಾ ಲಿವ್‌ಇನ್ ಸಂಬಂಧ ಬೆಳೆಸಿದರೆ, ಅದನ್ನು ಅಪರಾಧ ಕೃತ್ಯವೆಂದು ಪರಿಗಣಿಸಿ ಗರಿಷ್ಠ ಶಿಕ್ಷೆ ವಿಧಿಸಲಾಗುತ್ತದೆ.

ಹಾಗೆಯೇ, ಈಗಾಗಲೇ ಒಂದು ಲಿವ್‌ಇನ್ ಸಂಬಂಧ ಹೊಂದಿರುವ ವ್ಯಕ್ತಿ ಮತ್ತೊಂದು ಲಿವ್‌ಇನ್ ಸಂಬಂಧ ಹೊಂದಿರುವುದು ಸಾಬೀತಾದಲ್ಲಿ, ಅವನಿಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಅಪ್ರಾಪ್ತ ವಯಸ್ಸಿನವರೊಂದಿಗೆ ಲಿವ್‌ಇನ್ ಸಂಬಂಧ ಹೊಂದಿದರೆ, ಆರು ತಿಂಗಳ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ಅಥವಾ ಎರಡನ್ನೂ ವಿಧಿಸುವ ಅವಕಾಶವಿದೆ. ದಂಡ ಪಾವತಿಸಲು ವಿಫಲವಾದಲ್ಲಿ, ಶಿಕ್ಷೆಯನ್ನು ಇನ್ನೊಂದು ತಿಂಗಳು ವಿಸ್ತರಿಸಬಹುದು.

ವಿವಾಹ ಅಥವಾ ಲಿವ್‌ಇನ್ ಸಂಬಂಧಕ್ಕಾಗಿ ಸುಳ್ಳು ಮಾಹಿತಿ ನೀಡಿದರೆ ಅಥವಾ ವಾಸ್ತವಾಂಶಗಳನ್ನು ಮುಚ್ಚಿಟ್ಟರೆ, ಭಾರತೀಯ ನ್ಯಾಯ ಸಂಹಿತೆಯ ಅಡಿಯಲ್ಲಿ ಶಿಕ್ಷೆ ವಿಧಿಸಬಹುದಾಗಿದೆ.

ಇದಲ್ಲದೆ, ತಿದ್ದುಪಡಿ ಕಾನೂನಿನ ಪ್ರಕಾರ ಅಕ್ರಮ ವಿಧಾನದಲ್ಲಿ ವಿಚ್ಛೇದನ ಪಡೆದರೆ ಮೂರು ವರ್ಷಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸುವ ವ್ಯವಸ್ಥೆಯಿದೆ. ಬಾಲ್ಯವಿವಾಹಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಬಾಲ್ಯವಿವಾಹ ನಿರ್ಬಂಧ ಕಾಯ್ದೆ–2006ರ ಅಡಿಯಲ್ಲಿ ಪರಿಗಣಿಸಲಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...