Homeಮುಖಪುಟನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

- Advertisement -
- Advertisement -

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಗ್ವಾದ ಉಂಟಾಯಿತು. ಗದ್ದಲ ಹೆಚ್ಚಾದ ಹಿನ್ನೆಲೆ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಮಂಗಳವಾರದವರೆಗೆ (ನಾಳೆಗೆ) ಮುಂದೂಡಿದರು.

ಮಾಜಿ ಸೇನಾ ಮುಖ್ಯಸ್ಥರ ಬರಹಗಳ ಆಧಾರದ ಮೇಲೆ ಗಂಭೀರ ರಾಷ್ಟ್ರೀಯ ಭದ್ರತಾ ಸಮಸ್ಯೆಗಳ ಬಗ್ಗೆ ಮಾತನಾಡಲು ರಾಹುಲ್ ಗಾಂಧಿ ಪಟ್ಟು ಹಿಡಿದರು. ಆದರೆ, ಇದಕ್ಕೆ ಆಡಳಿತ ಪಕ್ಷದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಪರಸ್ಪರ ವಾಗ್ವಾದ ಉಂಟಾಯಿತು. ಅಂತಿಮವಾಗಿ ಕಲಾಪವನ್ನು ಮುಂದೂಡಲಾಯಿತು.

“ಸದನವನ್ನು ಉದ್ದೇಶಿಸಿ ನಾನು ಸಂಕ್ಷಿಪ್ತ ಹೇಳಿಕೆ ನೀಡಲು ಬಯಸಿದ್ದರೂ ಮಾತನಾಡದಂತೆ ತಡೆಯಲಾಯಿತು” ಎಂದು ಸಂಸತ್ತಿನ ಹೊರಗೆ ರಾಹುಲ್ ಗಾಂಧಿ ಹೇಳಿದರು.

“ನನಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ. ನಾನು ಕೇವಲ 2-3 ಸಾಲುಗಳನ್ನು ಮಾತನಾಡಬೇಕಾಗಿದೆ. ಇದು ರಾಷ್ಟ್ರೀಯ ಭದ್ರತೆಯ ವಿಷಯ. ಇವು ಸೇನಾ ಮುಖ್ಯಸ್ಥರ (ಮಾಜಿ) ಮಾತುಗಳು, ಅವರು ರಾಜನಾಥ್ ಸಿಂಗ್ ಮತ್ತು ಪ್ರಧಾನಿ ಮೋದಿ ಅವರೊಂದಿಗೆ ನಡೆಸಿದ ಸಂಭಾಷಣೆಯ ಮಾತುಗಳು. ಸೇನಾ ಮುಖ್ಯಸ್ಥರು (ಮಾಜಿ) ಏನು ಬರೆದಿದ್ದಾರೆ ಮತ್ತು ರಾಜನಾಥ್ ಸಿಂಗ್ ಮತ್ತು ಪ್ರಧಾನಿ ಮೋದಿ ಅವರಿಗೆ ಯಾವ ಆದೇಶಗಳನ್ನು ನೀಡಿದ್ದರು ಎಂಬುದನ್ನು ಸದನದಲ್ಲಿ ಹೇಳಲು ನಾನು ಬಯಸುತ್ತೇನೆ…” ಎಂದು ರಾಹುಲ್ ಗಾಂಧಿ ತಿಳಿಸಿದರು.

“ನನ್ನ ಮಾತಿಗೆ ಏಕೆ ಅಡ್ಡಿಪಡಿಸಲಾಗುತ್ತಿದೆ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದು, ರಾಜಕೀಯ ನಾಯಕತ್ವವು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದೆ” ಎಂದು ಆರೋಪಿಸಿದರು.

“ನಾನು ಸದನದಲ್ಲಿ ಮಾತನಾಡಲು ಬಯಸುತ್ತೇನೆ. ಅವರು ಏಕೆ ಹೆದರುತ್ತಿದ್ದಾರೆಂದು ನನಗೆ ತಿಳಿದಿಲ್ಲ. ಪ್ರಧಾನಿ ಏನು ಹೇಳಿದ್ದರು ಮತ್ತು ರಾಜನಾಥ್ ಸಿಂಗ್ ಅವರು ಏನು ಹೇಳಿದ್ದರು ಎಂಬುದು ಇಲ್ಲಿ ಮುಖ್ಯ ವಿಷಯ. ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆಯೋ ಇಲ್ಲವೋ, ಅದು ಬೇರೆ ಪ್ರಶ್ನೆ. ನಾವು ಅದಕ್ಕೆ ಮತ್ತೆ ಬರುತ್ತೇವೆ. ಅದಕ್ಕೂ ಮುನ್ನ ದೇಶದ ನಾಯಕ ಹೇಳಿಕೆ ನೀಡಬೇಕು. ದೇಶದ ನಾಯಕ ಹೇಳಿಕೆಯಿಂದ ತಪ್ಪಿಸಿಕೊಳ್ಳಬಾರದು ಅಥವಾ ಹೊಣೆಯಗಾರಿಕೆಯನ್ನು ಬೇರೆಯವರ ಹೆಗಲಿಗೆ ಹೊರಿಸಬಾರದು” ಎಂದರು.

ತಮ್ಮ ನಿಲುವನ್ನು ಪುನರುಚ್ಚರಿಸಿದ ರಾಹುಲ್ ಗಾಂಧಿ, ಈ ವಿಷಯವು ರಾಜಕೀಯವನ್ನು ಮೀರಿ ರಾಷ್ಟ್ರೀಯ ಹಿತಾಸಕ್ತಿಗೆ ಸಂಬಂಧಿಸಿದೆ ಎಂದು ಹೇಳಿದರು. ರಾಷ್ಟ್ರೀಯ ಭದ್ರತೆಯ ವಿಷಯವು ದೇಶಕ್ಕೆ ಅತ್ಯಂತ ಮುಖ್ಯವಾದ ವಿಷಯವೆಂದು ನಾನು ಪರಿಗಣಿಸುತ್ತೇನೆ. ಇದು ರಕ್ಷಣಾ ಸಚಿವರು, ಪ್ರಧಾನ ಮಂತ್ರಿಗಳಿಗೆ ಅನಾನುಕೂಲಕರವಾಗಿದೆ. ನರವಾಣೆ ಅವರ ಆತ್ಮಚರಿತ್ರೆಯನ್ನು ಉದ್ದೇಶಪೂರ್ವಕವಾಗಿ ತಡೆಹಿಡಿಯಲಾಗಿದೆ ಎಂದು ಹೇಳಿದರು. ಮಾಜಿ ಸೇನಾ ಮುಖ್ಯಸ್ಥರ ಅಭಿಪ್ರಾಯಗಳ ಬಗ್ಗೆ ಸರ್ಕಾರಕ್ಕಿರುವ ಅಸಮಾಧಾನವನ್ನು ಪ್ರಶ್ನಿಸಿದರು.

“ಇದು ನಾನು ಹೇಳುತ್ತಿರುವ ಮಾತಲ್ಲ, ಬದಲಿಗೆ ಮಾಜಿ ಸೇನಾ ಮುಖ್ಯಸ್ಥರು ತಮ್ಮ ಪುಸ್ತಕದಲ್ಲಿ ಬರೆದಿರುವ ವಿಷಯವಾಗಿದೆ. ಈ ಪುಸ್ತಕವನ್ನು ಪ್ರಕಟಿಸಲು ಸರ್ಕಾರ ಅನುಮತಿ ನೀಡುತ್ತಿಲ್ಲ, ಇದರಿಂದಾಗಿ ಅದು ಹಾಗೆಯೇ ಉಳಿದುಹೋಗಿದೆ. ಇದು ಒಬ್ಬ ಮಾಜಿ ಸೇನಾ ಮುಖ್ಯಸ್ಥರ ದೃಷ್ಟಿಕೋನವಾಗಿದ್ದು, ಅವರ ಈ ವಿಚಾರಗಳಿಗೆ ಸರ್ಕಾರವೇಕೆ ಇಷ್ಟೊಂದು ಹೆದರುತ್ತಿದೆ? ಅವರು ಹೇಳಬಯಸುವ ಸತ್ಯದ ಬಗ್ಗೆ ಭಯವೇಕೆ? ಈ ಪುಸ್ತಕದಿಂದ ನಾವು ಪ್ರಧಾನಮಂತ್ರಿಯವರ ಬಗ್ಗೆ ಮತ್ತು ರಾಜನಾಥ್ ಸಿಂಗ್ ಅವರ ಬಗ್ಗೆ ಮಾತ್ರವಲ್ಲದೆ, ದೇಶದ ರಾಜಕೀಯ ನಾಯಕತ್ವವು ಭಾರತೀಯ ಸೇನೆಯನ್ನು ಹೇಗೆ ಸಂಕಷ್ಟಕ್ಕೆ ದೂಡಿತು ಎಂಬ ಬಗ್ಗೆಯೂ ಬಹಳಷ್ಟು ಕಲಿಯಲಿದ್ದೇವೆ” ಎಂದರು.

“ನರವಾಣೆಯವರು ತಮ್ಮ ಪುಸ್ತಕದಲ್ಲಿ ಪ್ರಧಾನಮಂತ್ರಿ ಮತ್ತು ರಾಜನಾಥ್ ಸಿಂಗ್ ಅವರ ಬಗ್ಗೆ ಸ್ಪಷ್ಟವಾಗಿ ಬರೆದಿದ್ದಾರೆ. ಈ ವಿಷಯವು ಈಗಾಗಲೇ ಲೇಖನವೊಂದರಲ್ಲಿ ಪ್ರಕಟವಾಗಿದ್ದು, ನಾನು ಆ ಲೇಖನವನ್ನು ಉಲ್ಲೇಖಿಸುತ್ತಿದ್ದೇನೆ. ಆದರೆ, ಅವರು ನನ್ನನ್ನು ಮಾತನಾಡಲು ಬಿಡುತ್ತಿಲ್ಲ… ಒಂದು ವೇಳೆ ಈ ಸತ್ಯ ಹೊರಬಂದರೆ, ನರೇಂದ್ರ ಮೋದಿ ಮತ್ತು ರಾಜನಾಥ್ ಸಿಂಗ್ ಅವರ ಅಸಲಿ ಮುಖವಾಡ ಜನರಿಗೆ ತಿಳಿಯುತ್ತದೆ ಎಂಬ ಭಯ ಅವರಿಗಿದೆ. ಚೀನಾ ನಮ್ಮ ಎದುರು ನಿಂತು ಮುನ್ನುಗ್ಗುತ್ತಿದ್ದಾಗ, ಆ ’56 ಇಂಚಿನ ಎದೆ’ಗೆ ಏನಾಗಿತ್ತು ಎಂಬುದು ಆಗ ಬಯಲಾಗುತ್ತದೆ”

ಪ್ರಧಾನಿ, ಗೃಹ ಸಚಿವರು ಮತ್ತು ರಕ್ಷಣಾ ಸಚಿವರು ರಾಷ್ಟ್ರೀಯ ಭದ್ರತೆಯ ವಿಷಯದ ಬಗ್ಗೆ ಮಾತನಾಡಲು ಮುಜುಗರ ಅನುಭವಿಸುತ್ತಿರುವುದರಿಂದ, ಅವರು ನನಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದು, ಕಲಾಪ ಪುನರಾರಂಭವಾದಾಗ ಮತ್ತೆ ಈ ಬಗ್ಗೆ ಮಾತನಾಡುತ್ತೀರಾ? ಎಂಬ ಮಾಧ್ಯಮದವರ ಪ್ರಶ್ನೆಗೆ “ಹೌದು, ನಾನು ಮಾತನಾಡಲು ಪ್ರಯತ್ನಿಸುತ್ತೇನೆ” ಎಂದು ಉತ್ತರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....