Homeಕರ್ನಾಟಕರಾಜ್ಯ ಸರ್ಕಾರ 'ವಿಬಿ–ಜಿ ರಾಮ್ ಜಿ ಕಾಯ್ದೆ' ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ...

ರಾಜ್ಯ ಸರ್ಕಾರ ‘ವಿಬಿ–ಜಿ ರಾಮ್ ಜಿ ಕಾಯ್ದೆ’ ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ ಪಂಚಾಯತ್‌ ಆಗ್ರಹ

- Advertisement -
- Advertisement -

ನರೇಗಾ ಯೋಜನೆ ಮುಂದುವರಿಸಲು ರಾಷ್ಟ್ರಪತಿ ಆದೇಶ ಹೊರಡಿಸಬೇಕು. ವಿಬಿ–ಜಿ ರಾಮ್‌ ಜಿ ಕಾಯ್ದೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸಿ ‘ಮನರೇಗಾ ರಕ್ಷಣಾ ಒಕ್ಕೂಟ’ದ ಮಹಾ ಪಂಚಾಯತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಸೋಮವಾರ (ಫೆ.2) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮನರೇಗಾ ರಕ್ಷಣಾ ಒಕ್ಕೂಟದ ವತಿಯಿಂದ ಮನರೇಗಾ ಯೋಜನೆ ಉಳಿಸಿ ಆಂದೋಲನದ ಭಾಗವಾಗಿ ನಡೆದ ‘ಮಹಾ ಪಂಚಾಯತ್‌ನಲ್ಲಿ, ಪಂಚಾಯತ್ ತೆಗೆದುಕೊಂಡಿರುವ ನಿರ್ಣಯಗಳನ್ನು ರಾಜ್ಯ ಸರ್ಕಾರ ರಾಜ್ಯಪಾಲರ ಮೂಲಕ ರಾಷ್ಟ್ರಪತಿಗೆ ಕಳುಹಿಸಿಕೊಡಬೇಕು. ನರೇಗಾವನ್ನು ಬಲಗೊಳಿಸುವ ಕ್ರಮಗಳನ್ನು ರಾಜ್ಯ ಸರ್ಕಾರ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ.

ಹೋರಾಟಗಾರ ನೂರ್ ಶ್ರೀಧರ್ ಮಾತನಾಡಿ, ಗ್ರಾಮೀಣ ಭಾಗದ ಬಡವರ ಬೆನ್ನೆಲುಬಾಗಿದ್ದ ಸಂವಿಧಾನದಬದ್ಧ ಹಕ್ಕು ನರೇಗಾ ಯೋಜನೆಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಜನರನ್ನು ಅತಂತ್ರಗೊಳಿಸುವ, ಎಲ್ಲಾ ತೀರ್ಮಾನಗಳನ್ನು ಕೈಗೊಳ್ಳುವ ಹಕ್ಕನ್ನು ಕೇಂದ್ರ ಸರ್ಕಾರವೇ ವಶಪಡಿಸಿಕೊಳ್ಳುವ ಮತ್ತು ಜವಾಬ್ದಾರಿಯನ್ನು ರಾಜ್ಯ ಸರ್ಕಾರದ ಮೇಲೆ ಹೊರಿಸುವ ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ಜಾರಿಗೆ ತಂದಿದೆ ಎಂದರು.

ವಿಕೇಂದ್ರೀಕರಣದ ಸಂಕೇತವಾಗಿದ್ದ ನರೇಗಾವನ್ನು ರದ್ದು ಮಾಡಿ ಈಗ ಕೇಂದ್ರೀಕರಣದ ಯೋಜನೆಯನ್ನು ಜಾರಿಗೆ ತರಲಾಗಿದೆ. ನರೇಗಾವನ್ನು ಮುಂದುವರಿಸಬೇಕು. ಅಲ್ಲದೇ ಕುಟುಂಬಕ್ಕೆ ನೂರು ದಿನ ಕೆಲಸ ಎಂಬುದನ್ನು ಪ್ರತಿ ವ್ಯಕ್ತಿಗೆ ನೂರು ದಿನ ಎಂದು ಪರಿವರ್ತಿಸಬೇಕು. ಪ್ರತಿ ಕುಟುಂಬಕ್ಕೆ ಸರಾಸರಿ 300 ದಿನ ಕೆಲಸ ಸಿಗುವಂತೆ ಮಾಡಬೇಕು. ಕನಿಷ್ಠ ಕೂಲಿಯನ್ನು 600 ರೂ.ಕ್ಕೆ ಏರಿಸಬೇಕು ಎಂದು ಅವರು ಒತ್ತಾಯಿಸಿದರು.

ನರೇಗಾ ಯೋಜನೆಯಲ್ಲಿ ಬೇಡಿಕೆ ಇದ್ದಷ್ಟು ದಿನ ಕೆಲಸ ಎಂದಿತ್ತು, ‘ವಿಬಿ-ಜಿ ರಾಮ್ ಜಿ’ಯಲ್ಲಿ ಅಗತ್ಯ ಇರುವಷ್ಟು ಕೆಲಸ ಎಂದು ಪರಿವರ್ತನೆ ಮಾಡಲಾಗಿದೆ. ಕೆಲಸ ಮಾಡುವ ಹಕ್ಕು ಕಿತ್ತುಕೊಳ್ಳಲಾಗಿದೆ. ಉದ್ಯೋಗ ಖಾತ್ರಿ ಇಲ್ಲದಾಗಿದೆ. ಯಾವ ಕೆಲಸ ಎಂಬುವುದನ್ನು ಗ್ರಾಮ ಪಂಚಾಯಿತಿ ತೀರ್ಮಾನ ಮಾಡುತ್ತಿತ್ತು. ಇನ್ನು ಮುಂದೆ ಕೇಂದ್ರ ಸರ್ಕಾರ ನಿರ್ಧಾರ ಮಾಡುತ್ತದೆ. ಕೃಷಿ ಕೂಲಿಯನ್ನು ಹೊರಗಿಡಲಾಗಿದೆ. ಕೇಂದ್ರ ಸರ್ಕಾರ ರಾಜ್ಯದ ಪಾಲನ್ನು ಬಿಟ್ಟು 2.3 ಲಕ್ಷ ಕೋಟಿ ರೂ. ಈ ಯೋಜನೆಗೆ ಮೀಸಲಿಡಬೇಕಿತ್ತು. ಆದರೆ, ಬಜೆಟ್‌ನಲ್ಲಿ 95 ಸಾವಿರ ಕೋಟಿ ರೂ. ಮೀಸಲಿಟ್ಟಿದೆ. ಇದು ಕೆಲಸ ಕಡಿಮೆ ಮಾಡುವ ಹುನ್ನಾರ ಎಂದು ದೂರಿದರು.

ಶೇ.40 ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಬೇಕು ಎಂಬ ಹೊರೆ ಹೊರಿಸಲಾಗಿದೆ. ಇದನ್ನು ತೆಗೆದು ಹಾಕಬೇಕು. ನರೇಗಾದಲ್ಲಿ ಮಧ್ಯವರ್ತಿಗಳಿಗೆ ಅವಕಾಶ ಇರಲಿಲ್ಲ. ‘ವಿಬಿ-ಜಿ ರಾಮ್ ಜಿ’ಯಲ್ಲಿ ಮಧ್ಯವರ್ತಿಗಳಿಗೆ ಅವಕಾಶ ನೀಡಲಾಗಿದೆ. ಹಾಗಾಗಿ ನರೇಗಾವನ್ನು ಮತ್ತೆ ಸ್ಥಾಪಿಸಬೇಕು ಎಂದು ನೂರ್ ಶ್ರೀಧರ್ ಒತ್ತಾಯಿಸಿದರು.

ಮಹಾಪಂಚಾಯತ್‌ನಲ್ಲಿ ಮನರೇಗಾ ರಕ್ಷಣಾ ಒಕ್ಕೂಟ, ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ, ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ, ಕರ್ನಾಟಕ ಜನಶಕ್ತಿ, ಸಿಪಿಐಎಂಎಲ್, ನಮ್ಮೂರ ಭೂಮಿ ನಮಗಿರಲಿ ಅನ್ಯರಿಗಲ್ಲ ಸಂಘಟನೆ, ಜಾಗೃತ ಮಹಿಳಾ ಒಕ್ಕೂಟ, ಬಳ್ಳಿ ಬಳಗ–ಸುಸ್ಥಿರ ಕೃಷಿಕರ ವೇದಿಕೆ, ಎಫ್‌ಇಎಸ್, ಭೂಶಕ್ತಿ ಕೇಂದ್ರ, ಎಐಎಆರ್‌ಎಲ್‌ಐ, ಆರ್‌ಐಎಆರ್‌ಡಬ್ಲಯೂ, ರೈತ ಸಂಘಟನೆಗಳು, ದಲಿತ ಸಂಘರ್ಷ ಸಮಿತಿಗಳು, ಎಪಿಯು, ಕಾರ್ಮಿಕ ಸಂಘಟನೆಗಳ ಮುಖಂಡರು, ಸಾಹಿತಿಗಳು, ಚಿಂತಕರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....