Homeಮುಖಪುಟಖಾಸಗಿ ಜಾಗದಲ್ಲಿ ಪ್ರಾರ್ಥನಾ ಸಭೆ ನಡೆಸಲು ಅನುಮತಿ ಅಗತ್ಯವಿಲ್ಲ : ಅಲಹಾಬಾದ್ ಹೈಕೋರ್ಟ್

ಖಾಸಗಿ ಜಾಗದಲ್ಲಿ ಪ್ರಾರ್ಥನಾ ಸಭೆ ನಡೆಸಲು ಅನುಮತಿ ಅಗತ್ಯವಿಲ್ಲ : ಅಲಹಾಬಾದ್ ಹೈಕೋರ್ಟ್

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ತಿಯಲ್ಲಿ ಧಾರ್ಮಿಕ ಪ್ರಾರ್ಥನಾ ಸಭೆ ನಡೆಸಲು ಯಾವುದೇ ಅನುಮತಿ ಅಗತ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ.

ಆದರೆ, ಕಾರ್ಯಕ್ರಮಕ್ಕೆ ಸಾರ್ವಜನಿಕ ರಸ್ತೆ ಅಥವಾ ಸಾರ್ವಜನಿಕ ಆಸ್ತಿ ಬಳಸಿಕೊಳ್ಳುವುದಾದರೆ ಕನಿಷ್ಠ ಪೊಲೀಸರಿಗೆ ತಿಳಿಸಬೇಕು ಮತ್ತು ಕಾನೂನಿನಡಿಯಲ್ಲಿ ಅಗತ್ಯವಿರುವ ಅನುಮತಿಯನ್ನು ಪಡೆಯಬೇಕು ಎಂದು ನ್ಯಾಯಾಲಯ ಹೇಳಿದೆ.

ಕ್ರಿಶ್ಚಿಯನ್ ಸಂಸ್ಥೆಗಳಾದ ಮಾರನಾಥ ಫುಲ್ ಗಾಸ್ಪೆಲ್ ಮಿನಿಸ್ಟ್ರೀಸ್ ಮತ್ತು ಎಮ್ಯಾನುಯೆಲ್ ಗ್ರೇಸ್ ಚಾರಿಟೇಬಲ್ ಟ್ರಸ್ಟ್‌ ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿ ನ್ಯಾಯಾಲಯ ಈ ತೀರ್ಪು ಪ್ರಕಟಿಸಿದೆ.

ನಮ್ಮ ಖಾಸಗಿ ಜಾಗದಲ್ಲಿ ಧಾರ್ಮಿಕ ಸಭೆ ನಡೆಸಲು ಅನುಮತಿ ಕೋರಿ ಹಲವು ಬಾರಿ ಆಡಳಿತಕ್ಕೆ ಮನವಿ ಸಲ್ಲಿಸಿದ್ದೆವು, ಆದರೆ, ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಕ್ರಿಶ್ಚಿಯನ್ ಸಂಸ್ಥೆಗಳು ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯಲ್ಲಿ ದೂರಿತ್ತು.

ಈ ಬಗ್ಗೆ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರದಿಂದ ಪ್ರತಿಕ್ರಿಯೆ ಕೋರಿತ್ತು. ಸರ್ಕಾರದ ನೀಡಿದ ಪ್ರತಿಕ್ರಿಯೆಯಲ್ಲಿ ಯಾವುದೇ ಅನುಮತಿಯ ಅವಶ್ಯಕತೆ ಇಲ್ಲ ಎಂದು ಹೇಳಿರುವುದನ್ನು ನ್ಯಾಯಮೂರ್ತಿಗಳಾದ ಅತುಲ್ ಶ್ರೀಧರನ್ ಮತ್ತು ಸಿದ್ಧಾರ್ಥ್ ನಂದನ್ ಅವರ ವಿಭಾಗೀಯ ಪೀಠ ಗಣನೆಗೆ ತೆಗೆದುಕೊಂಡಿದೆ.

ಧಾರ್ಮಿಕ ವಿಚಾರಗಳಲ್ಲಿ ಯಾವುದೇ ತಾರತಮ್ಯ ಇಲ್ಲದೆ ಎಲ್ಲಾ ನಾಗರಿಕರಿಗೆ ಸಮಾನ ರಕ್ಷಣೆಯನ್ನು ಸರ್ಕಾರ ಒದಗಿಸಬೇಕು ಎಂದು ನ್ಯಾಯಪೀಠ ಹೇಳಿದೆ. ಸಂವಿಧಾನದ 25ನೇ ವಿಧಿಯಡಿಯಲ್ಲಿ ಖಾತರಿಪಡಿಸಲಾದ ಧಾರ್ಮಿಕ ಸ್ವಾತಂತ್ರ್ಯವನ್ನು ಅನುಸರಿಸಲು ಅಥವಾ ಅದರ ಭಾಗವಾಗಿರುವ ಆಚರಣೆಗಳನ್ನು ಮಾಡಲು ಕಾನೂನಿನಡಿಯಲ್ಲಿ ಯಾವುದೇ ಪೂರ್ವಾನುಮತಿಯನ್ನು ಪಡೆಯುವ ಅಗತ್ಯವಿಲ್ಲ. ಮೂಲಭೂತ ಹಕ್ಕುಗಳು ಪ್ರತಿಯೊಬ್ಬ ಪ್ರಜೆಯ ಸಹಜ ಹಕ್ಕುಗಳಾಗಿರುವುದರಿಂದ, ಧಾರ್ಮಿಕ ನಂಬಿಕೆಗಳಿಗೆ ಸಂಬಂಧಿಸಿದ ಚಟುವಟಿಕೆಗಳು ಸಂವಿಧಾನದ ಚೌಕಟ್ಟಿನೊಳಗೆ ಇರುವವರೆಗೆ ಅವುಗಳನ್ನು ಮುಕ್ತವಾಗಿ ನಿರ್ವಹಿಸಬಹುದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಕಾರ್ಯಕ್ರಮಕ್ಕೆ ಯಾವುದೇ ರಕ್ಷಣೆ ನೀಡಬೇಕೇ ಮತ್ತು ಅದನ್ನು ಹೇಗೆ ನೀಡಬೇಕೆಂದು ಸರ್ಕಾರ ನಿರ್ಧರಿಸಬಹುದು ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಈ ಪ್ರಕರಣದಲ್ಲಿ ಅರ್ಜಿದಾರರ ಆಸ್ತಿ, ಹಕ್ಕುಗಳು ಮತ್ತು ಜೀವವನ್ನು ಯಾವುದೇ ಬೆಲೆ ತೆತ್ತದಾರೂ ರಕ್ಷಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಅರ್ಜಿಗಳನ್ನು ವಿಲೇವಾರಿ ಮಾಡುವಾಗ ನ್ಯಾಯಪೀಠವು ಹೇಳಿದೆ. ಅದನ್ನು ಹೇಗೆ ಮಾಡಬೇಕು ಎಂಬುವುದು ಸಂಪೂರ್ಣವಾಗಿ ಪೊಲೀಸರ ವಿವೇಚನೆಗೆ ಬಿಟ್ಟ ವಿಷಯವಾಗಿದೆ ಎಂದು ಸ್ಪಷ್ಟಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....