Homeಮುಖಪುಟಮಣಿಪುರದಲ್ಲಿ ಹೊಸ ಸರ್ಕಾರ : ಮೈತೇಯಿ ಸಮುದಾಯದ ವೈ. ಖೇಮ್ಚಂದ್‌ ನೂತನ ಸಿಎಂ, ಕುಕಿ-ನಾಗಾ ಸಮುದಾಯಗಳಿಗೆ...

ಮಣಿಪುರದಲ್ಲಿ ಹೊಸ ಸರ್ಕಾರ : ಮೈತೇಯಿ ಸಮುದಾಯದ ವೈ. ಖೇಮ್ಚಂದ್‌ ನೂತನ ಸಿಎಂ, ಕುಕಿ-ನಾಗಾ ಸಮುದಾಯಗಳಿಗೆ ಡಿಸಿಎಂ ಹುದ್ದೆ

- Advertisement -
- Advertisement -

ಸುಮಾರು ಒಂದು ವರ್ಷದಿಂದ ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ಮಣಿಪುರದಲ್ಲಿ ಹೊಸ ಸರ್ಕಾರ ರಚನೆಗೆ ಬಿಜೆಪಿ ಸಿದ್ದತೆ ನಡೆಸಿದೆ. ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಸಚಿವ ಯುಮ್ನಮ್ ಖೇಮ್ಚಂದ್ ಸಿಂಗ್ ಅವರನ್ನು ಮಂಗಳವಾರ (ಜ.3) ಆಯ್ಕೆ ಮಾಡಿದೆ.

ಕುಕಿ ಝೋ ಮತ್ತು ಮೈತೇಯಿ ಗುಂಪುಗಳ ನಡುವಿನ ದೀರ್ಘಕಾಲ ಜನಾಂಗೀಯ ಸಂಘರ್ಷದ ಬಳಿಕ, ಫೆಬ್ರವರಿ 9,2025ರಂದು ಮಣಿಪುರದ ಮುಖ್ಯಮಂತ್ರಿ ಎನ್‌. ಬೀರೇನ್ ಸಿಂಗ್ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಫೆ.13ರಂದು ಕೇಂದ್ರ ಸರ್ಕಾರ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿತು.

ಮಂಗಳವಾರ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಖೇಮ್ಚಂದ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ. ಬಿಜೆಪಿ ಹೈಕಮಾಂಡ್ ಅವರನ್ನು ಮುಂದಿನ ಮುಖ್ಯಮಂತ್ರಿ ಎಂದು ಘೋಷಿಸಿದೆ. ಬುಧವಾರ (ಫೆ.4) ಸಂಜೆ ಅವರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಯುಮ್ನಮ್ ಖೇಮ್ಚಂದ್ ಸಿಂಗ್ ಅವರು, ಈಗ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದ ಇತರ ಎಲ್ಲಾ ಮಿತ್ರಪಕ್ಷಗಳ ಶಾಸಕರ ಬೆಂಬಲವನ್ನು ಪಡೆಯಬೇಕಾಗುತ್ತದೆ. ಈ ಒಕ್ಕೂಟದ ಎಲ್ಲಾ ಶಾಸಕರು ಒಟ್ಟಾಗಿ ಸೇರಿ ಅವರನ್ನು ತಮ್ಮ ಮೈತ್ರಿಕೂಟದ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಅಧಿಕೃತವಾಗಿ ಆಯ್ಕೆ ಮಾಡಲಿದ್ದಾರೆ. ಈ ಪ್ರಕ್ರಿಯೆಯು ಪೂರ್ಣಗೊಂಡ ನಂತರವೇ ಅವರು ರಾಜ್ಯದಲ್ಲಿ ಸರ್ಕಾರ ರಚಿಸಲು ಅರ್ಹರಾಗುತ್ತಾರೆ ಮತ್ತು ಮಣಿಪುರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗುತ್ತದೆ.

ಈ ಉದ್ದೇಶಕ್ಕಾಗಿ ಪ್ರತ್ಯೇಕ ಸಭೆ ನಡೆಯಲಿದೆ. 60 ಸದಸ್ಯ ಬಲದ ಮಣಿಪುರ ವಿಧಾನಸಭೆಯಲ್ಲಿ ಬಿಜೆಪಿಯ ಪ್ರಸ್ತುತ ಬಲ 37. ಆರಂಭದಲ್ಲಿ, 2022ರ ವಿಧಾನಸಭಾ ಚುನಾವಣೆಯಲ್ಲಿ ‘ಕೇಸರಿ ಪಕ್ಷದಿಂದ 32 ಮಂದಿ ಗೆದ್ದಿದ್ದರು. ಜೆಡಿಯು ಆರು ಸ್ಥಾನಗಳನ್ನು ಗೆದ್ದಿತ್ತು. ನಂತರ ಐವರು ಜೆಡಿಯು ಶಾಸಕರು ಬಿಜೆಪಿ ಸೇರಿದರು. ಇದಲ್ಲದೆ, ರಾಜ್ಯ ವಿಧಾನಸಭೆಯಲ್ಲಿ ಒಂದು ಸ್ಥಾನವು ಹಾಲಿ ಶಾಸಕರ ಮರಣದ ನಂತರ ಖಾಲಿಯಾಯಿತು.

ರಾಷ್ಟ್ರಪತಿ ಆಳ್ವಿಕೆಯ ನಿಗದಿತ ಅವಧಿ ಮುಗಿಯುವ 10 ದಿನಗಳ ಮೊದಲು ಖೇಮ್ಚಂದ್ ಸಿಂಗ್ ಅವರ ಹೆಸರನ್ನು ಮುಖ್ಯಮಂತ್ರಿ ಹುದ್ದೆಗೆ ಘೋಷಿಸಲಾಗಿದೆ.

ಖೇಮ್ಚಂದ್ ಸಿಂಗ್ ರಾಜಕೀಯ ಹಿನ್ನೆಲೆ

ಮೈತೇಯಿ ಸಮುದಾಯಕ್ಕೆ ಸೇರಿದ ಖೇಮ್ಚಂದ್ ಸಿಂಗ್ ಎರಡು ಬಾರಿ ಶಾಸಕರಾಗಿದ್ದಾರೆ. 2017ರಲ್ಲಿ ಮತ್ತು 2022ರಲ್ಲಿ ಅವರು ಸಿಂಗ್ಜಮೇಯ್ ವಿಧಾನಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ. ಮಾರ್ಚ್ 2017ರಲ್ಲಿ ಖೇಮ್ಚಂದ್ ಮಣಿಪುರ ವಿಧಾನಸಭೆಯ ಸ್ಪೀಕರ್ ಆಗಿ ಆಯ್ಕೆಯಾದರು. ನಂತರ ಐದು ವರ್ಷಗಳ ಪೂರ್ಣ ಅವಧಿಗೆ ಆ ಹುದ್ದೆಯನ್ನು ಅವರು ಅಲಂಕರಿಸಿದರು.

2022ರ ವಿಧಾನಸಭಾ ಚುನಾವಣೆಯ ಗೆಲುವು ಸಾಧಿಸಿದ ಖೇಮ್ಚಂದ್ ಅವರಿಗೆ ಎರಡನೇ ಬಿರೇನ್ ಸಿಂಗ್ ಸರ್ಕಾರದಲ್ಲಿ ಸಚಿವ ಸ್ಥಾನ ದೊರೆಯಿತು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಪುರಸಭೆ ಆಡಳಿತ, ವಸತಿ ಅಭಿವೃದ್ಧಿ ಮತ್ತು ಶಿಕ್ಷಣ ಸೇರಿದಂತೆ ಹಲವಾರು ಖಾತೆಗಳ ಜವಾಬ್ದಾರಿಗಳನ್ನು ಅವರು ನಿರ್ವಹಿಸಿದ್ದಾರೆ. ರಾಷ್ಟ್ರಪತಿ ಆಳ್ವಿಕೆ ಹೇರುವವರೆಗೂ ಸಿಂಗ್ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಕುಕಿ ಮತ್ತು ನಾಗಾ ಸಮುದಾಯಗಳಿಗೆ ಡಿಸಿಎಂ ಹುದ್ದೆ

ಮೈತೇಯಿ ಸಮುದಾಯದ ಖೇಮ್ಚಂದ್ ಮುಖ್ಯಮಂತ್ರಿಯಾಗಿ ಆಯ್ಕೆಯಾದರೆ, ಕುಕಿ ಸಮುದಾಯವನ್ನು ಪ್ರತಿನಿಧಿಸುವ ನೆಮ್ಚಾ ಕಿಪ್ಗೆನ್ ಅವರನ್ನು ಉಪ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಇವರು ಮಣಿಪುರದ ಮೊದಲ ಮಹಿಳಾ ಉಪ ಮುಖ್ಯಮಂತ್ರಿಯಾಗಲಿದ್ದಾರೆ.

ನಾಗಾ ಸಮುದಾಯವನ್ನು ಪ್ರತಿನಿಧಿಸುವ ಲೋಸಿ ದಿಖೋ ಎರಡನೇ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವ ಸಾಧ್ಯತೆಯಿದೆ. ಬಿಜೆಪಿಯ ಹಿರಿಯ ನಾಯಕ ಗೋವಿಂದದಾಸ್ ಕೊಂಥೌಜಮ್ ಅವರಿಗೆ ಗೃಹ ಇಲಾಖೆಯ ಜವಾಬ್ದಾರಿಯನ್ನು ನೀಡಲಾಗುತ್ತದೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...