Homeಅಂತರಾಷ್ಟ್ರೀಯಅದಾನಿ–ಲಿಯೊನಾರ್ಡೊ ಒಪ್ಪಂದ| ಹೊಸ ರೂಪದಲ್ಲಿ ಭಾರತಕ್ಕೆ ಮರಳಿದ ಕಪ್ಪುಪಟ್ಟಿಗೆ ಸೇರಿದ್ದ ಅಗಸ್ಟಾ ವೆಸ್ಟ್‌ಲ್ಯಾಂಡ್!

ಅದಾನಿ–ಲಿಯೊನಾರ್ಡೊ ಒಪ್ಪಂದ| ಹೊಸ ರೂಪದಲ್ಲಿ ಭಾರತಕ್ಕೆ ಮರಳಿದ ಕಪ್ಪುಪಟ್ಟಿಗೆ ಸೇರಿದ್ದ ಅಗಸ್ಟಾ ವೆಸ್ಟ್‌ಲ್ಯಾಂಡ್!

- Advertisement -
- Advertisement -

ಅದಾನಿ ಡಿಫೆನ್ಸ್ ಆಂಡ್ ಏರೋಸ್ಪೇಸ್ ಮತ್ತು ಇಟಲಿಯ ಲಿಯೊನಾರ್ಡೊ ಕಂಪನಿಗಳು ಮಂಗಳವಾರ (ಫೆ.3) ಕಾರ್ಯತಂತ್ರದ ಒಪ್ಪಂದವೊಂದಕ್ಕೆ ಸಹಿ ಹಾಕಿದ್ದು, ಭಾರತದ ಹೆಲಿಕಾಪ್ಟರ್ ಉತ್ಪಾದನಾ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಅಭಿವೃದ್ಧಿಪಡಿಸಲು ಈ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಹೇಳಿದೆ.

ಈ ಸಹಭಾಗಿತ್ವದ ಮೂಲಕ ಭಾರತದಲ್ಲಿ ಅತ್ಯಾಧುನಿಕ ಹೆಲಿಕಾಪ್ಟರ್‌ಗಳ ವಿನ್ಯಾಸ, ತಯಾರಿಕೆ ಮತ್ತು ನಿರ್ವಹಣೆಗೆ ಸಂಬಂಧಿಸಿದ ಮೂಲಸೌಕರ್ಯಗಳನ್ನು ವಿಸ್ತರಿಸುವ ಗುರಿಯನ್ನು ಹೊಂದಲಾಗಿದೆ. ಇದು ರಕ್ಷಣಾ ಕ್ಷೇತ್ರದಲ್ಲಿ ಭಾರತದ ಸ್ವಯಂ ಅವಲಂಬನೆಯನ್ನು (ಆತ್ಮನಿರ್ಭರತೆ) ಉತ್ತೇಜಿಸುವುದಲ್ಲದೆ, ಸ್ಥಳೀಯವಾಗಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಮತ್ತು ತಾಂತ್ರಿಕ ನಾವೀನ್ಯತೆಯನ್ನು ಹೆಚ್ಚಿಸಲು ಸಹಾಯ ಮಾಡಲಿದೆ ಎಂದು ಎರಡೂ ಕಂಪನಿಗಳು ದೆಹಲಿಯಲ್ಲಿ ಘೋಷಣೆ ಮಾಡಿವೆ.

ಸಶಸ್ತ್ರ ಪಡೆಗಳ ಕಾರ್ಯಾಚರಣೆಯ ಅಗತ್ಯತೆಗಳನ್ನು ಕೇಂದ್ರೀಕರಿಸಿ ಮಾಡಿಕೊಂಡಿರುವ ಈ ಒಪ್ಪಂದವು, ಲಿಯೊನಾರ್ಡೊ ಸಂಸ್ಥೆಯ ಅತ್ಯಾಧುನಿಕ AW169M ಮತ್ತು AW109 TrekkerM (ಹಿಂದೆ ಅಗಸ್ಟಾ ವೆಸ್ಟ್‌ಲ್ಯಾಂಡ್ ಎಂದು ಕರೆಯಲ್ಪಡುತ್ತಿದ್ದವು) ಹೆಲಿಕಾಪ್ಟರ್‌ಗಳ ತಯಾರಿಕೆಗೆ ಬೆಂಬಲ ನೀಡಲಿದೆ. ಹಂತಹಂತವಾಗಿ ಈ ಹೆಲಿಕಾಪ್ಟರ್‌ಗಳ ಬಿಡಿಭಾಗಗಳನ್ನು ಭಾರತದಲ್ಲಿಯೇ ತಯಾರಿಸುವ ಗುರಿಯನ್ನು ಈ ಮೈತ್ರಿ ಹೊಂದಲಾಗಿದೆ. ಇದರೊಂದಿಗೆ, ಹೆಲಿಕಾಪ್ಟರ್‌ಗಳ ಸಮಗ್ರ ನಿರ್ವಹಣೆ ಮತ್ತು ರಿಪೇರಿ ಸೇವೆಗಳು ಹಾಗೂ ಪೈಲಟ್‌ಗಳಿಗೆ ತರಬೇತಿ ನೀಡುವ ಮೂಲಸೌಕರ್ಯಗಳನ್ನು ಭಾರತದಲ್ಲಿಯೇ ಅಭಿವೃದ್ಧಿಪಡಿಸಲಾಗುವುದು. ಈ ಮೂಲಕ ಭಾರತೀಯ ರಕ್ಷಣಾ ಪಡೆಗಳಿಗೆ ಅಗತ್ಯವಿರುವ ತಾಂತ್ರಿಕ ಬೆಂಬಲ ಮತ್ತು ಸಿದ್ಧತೆಯನ್ನು ಸ್ಥಳೀಯವಾಗಿಯೇ ಒದಗಿಸುವುದು ಈ ಸಹಭಾಗಿತ್ವದ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಲಾಗ್ತಿದೆ.

ಈ ಬೆಳವಣಿಗೆಯು ಸುಮಾರು ಐದು ವರ್ಷಗಳ ಹಿಂದೆ ಭಾರತ ಸರ್ಕಾರದಿಂದ ಕ್ಲೀನ್ ಚಿಟ್ ಪಡೆದ ನಂತರ, ಈಗ ಲಿಯೊನಾರ್ಡೊ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಟಲಿಯ ಅಗಸ್ಟಾ ವೆಸ್ಟ್‌ಲ್ಯಾಂಡ್ ಸಂಸ್ಥೆಯು ಭಾರತೀಯ ರಕ್ಷಣಾ ವಲಯಕ್ಕೆ ಮರಳಿ ಪ್ರವೇಶ ಪಡೆಯುತ್ತಿರುವುದನ್ನು ಸೂಚಿಸುತ್ತದೆ. ಈ ಹಿಂದಿನ ಅಗಸ್ಟಾ ವೆಸ್ಟ್‌ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಹಗರಣದ ವಿವಾದಾತ್ಮಕ ಇತಿಹಾಸದ ಹಿನ್ನೆಲೆಯಲ್ಲಿ ಈ ಪುನರಾಗಮನವು ಬಹಳ ಮಹತ್ವದ್ದಾಗಿದೆ.

2010 ರಲ್ಲಿ ಭಾರತದ ಉನ್ನತ ಸಾಂವಿಧಾನಿಕ ಅಧಿಕಾರಿಗಳ (ರಾಷ್ಟ್ರಪತಿ, ಪ್ರಧಾನಿ ಇತ್ಯಾದಿ) ಪ್ರಯಾಣಕ್ಕಾಗಿ 12 AW101 ಹೆಲಿಕಾಪ್ಟರ್‌ಗಳನ್ನು ಖರೀದಿಸಲು ಒಪ್ಪಂದ ಮಾಡಿಕೊಳ್ಳಲಾಗಿತ್ತು. ಈ ಒಪ್ಪಂದದ ಅಂದಾಜು ಮೊತ್ತ ಸುಮಾರು 3,600 ಕೋಟಿ ರೂಪಾಯಿ ಆಗಿತ್ತು. ಈ ಒಪ್ಪಂದದಲ್ಲಿ ಮಧ್ಯವರ್ತಿಗಳಿಗೆ ಮತ್ತು ಭಾರತೀಯ ಅಧಿಕಾರಿಗಳಿಗೆ ಲಂಚ ನೀಡಲಾಗಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, 2014ರಲ್ಲಿ ಭಾರತ ಸರ್ಕಾರವು ಈ ಒಪ್ಪಂದವನ್ನು ರದ್ದುಗೊಳಿಸಿ ಕಂಪನಿಯನ್ನು ಕಪ್ಪುಪಟ್ಟಿಗೆ ಸೇರಿಸಿತ್ತು. ದೀರ್ಘಕಾಲದ ತನಿಖೆಯ ನಂತರ, ನವೆಂಬರ್ 2021 ರಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಭಾರತದ ರಕ್ಷಣಾ ಸಚಿವಾಲಯ ಮತ್ತು ಇಟಲಿಯ ನ್ಯಾಯಾಲಯವು ಕಂಪನಿಗೆ ಕ್ಲೀನ್ ಚಿಟ್ ನೀಡಿದ್ದವು.

ಈಗ ಈ ಕಂಪನಿಯು ಲಿಯೊನಾರ್ಡೊ ಹೆಸರಿನಲ್ಲಿ ಮರುಬ್ರಾಂಡ್ ಆಗಿದ್ದು, ಅದಾನಿ ಡಿಫೆನ್ಸ್ ಜೊತೆಗೂಡಿ ಭಾರತದಲ್ಲಿ ಹೊಸ ಉತ್ಪಾದನಾ ಕೇಂದ್ರವನ್ನು ಸ್ಥಾಪಿಸಲು ಸಜ್ಜಾಗಿದೆ.

ಅಗಸ್ಟಾ ವೆಸ್ಟ್‌ಲ್ಯಾಂಡ್ ಹಗರಣ 2013ರಲ್ಲಿ ಬೆಳಕಿಗೆ ಬಂದಿತ್ತು. ಅಗಸ್ಟಾ ವೆಸ್ಟ್‌ಲ್ಯಾಂಡ್‌ನ ಅಂದಿನ ಮಾತೃಸಂಸ್ಥೆಯಾದ ಫಿನ್‌ಮೆಕಾನಿಕಾ ಕಂಪನಿಯ ಹಿರಿಯ ಅಧಿಕಾರಿಗಳನ್ನು ಇಟಾಲಿಯನ್ ತನಿಖಾಧಿಕಾರಿಗಳು ಬಂಧಿಸಿದಾಗ ಈ ಹಗರಣ ಜಗತ್ತಿಗೆ ತಿಳಿಯಿತು. ಈ ಕಂಪನಿಯು ತನ್ನ ಹೆಲಿಕಾಪ್ಟರ್‌ಗಳಿಗೆ ಅನುಕೂಲವಾಗುವಂತೆ ತಾಂತ್ರಿಕ ಮಾನದಂಡಗಳನ್ನು ಬದಲಿಸಲು ಮತ್ತು ಒಪ್ಪಂದವನ್ನು ತನ್ನದಾಗಿಸಿಕೊಳ್ಳಲು ಮಧ್ಯವರ್ತಿಗಳಿಗೆ ಹಾಗೂ ಭಾರತೀಯ ಅಧಿಕಾರಿಗಳಿಗೆ ಲಂಚ ನೀಡಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿತ್ತು.

ಭಾರತದಲ್ಲಿ ಈ ಬಗ್ಗೆ ತನಿಖೆ ನಡೆಸಿದ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ, ಹಲವು ಪ್ರಭಾವಿ ವ್ಯಕ್ತಿಗಳು ಈ ಹಗರಣದಲ್ಲಿ ಭಾಗಿಯಾಗಿರುವುದನ್ನು ಪತ್ತೆಹಚ್ಚಿದವು. ಇದರಲ್ಲಿ ಅತ್ಯಂತ ಗಮನಾರ್ಹವಾದ ಅಂಶವೆಂದರೆ, ಭಾರತೀಯ ವಾಯುಪಡೆಯ ಮಾಜಿ ಮುಖ್ಯಸ್ಥರೊಬ್ಬರು ಈ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಅವರನ್ನು ತನಿಖೆಗೆ ಒಳಪಡಿಸಲಾಗಿತ್ತು.

ಭಾರತ ಸರ್ಕಾರ ಕಪ್ಪು ಪಟ್ಟಿಗೆ ಸೇರಿಸಿದ್ದ ಅಗಸ್ಟಾ ವೆಸ್ಟ್‌ಲ್ಯಾಂಡ್ ಕಂಪನಿಯು 2016ರಲ್ಲಿ ತನ್ನ ಮಾತೃಸಂಸ್ಥೆಯಾದ ‘ಫಿನ್‌ಮೆಕಾನಿಕಾ’ ಜೊತೆಗೆ ವಿಲೀನವಾಯಿತು. ಈ ವಿಲೀನದ ನಂತರ ಫಿನ್‌ಮೆಕಾನಿಕಾ ಸಂಸ್ಥೆಯ ಹೆಸರನ್ನು ‘ಲಿಯೋನಾರ್ಡೊ’ (Leonardo) ಎಂದು ಬದಲಾಯಿಸಲಾಯಿತು.

ಪ್ರಸ್ತುತ ಅಗಸ್ಟಾ ವೆಸ್ಟ್‌ಲ್ಯಾಂಡ್ ಸ್ವತಂತ್ರ ಕಂಪನಿಯಾಗಿ ಅಸ್ತಿತ್ವದಲ್ಲಿಲ್ಲ; ಇದು ಈಗ ಲಿಯೋನಾರ್ಡೊ ಸಂಸ್ಥೆಯ ಹೆಲಿಕಾಪ್ಟರ್ ವಿಭಾಗವಾಗಿ ಕಾರ್ಯನಿರ್ವಹಿಸುತ್ತಿದೆ.

ಲಿಯೋನಾರ್ಡೊ ಕಂಪನಿಯು 2020ರಲ್ಲಿ ತನ್ನ ಐಷಾರಾಮಿ (ವಿಐಪಿ) ಹೆಲಿಕಾಪ್ಟರ್‌ಗಳಿಗಾಗಿ ‘ಅಗಸ್ಟಾ’ (Agusta) ಎಂಬ ಹೆಸರನ್ನು ಬ್ರ್ಯಾಂಡ್ ಆಗಿ ಮರುಬಳಕೆ ಮಾಡಲು ಪ್ರಾರಂಭಿಸಿದೆ.

ಅದಾನಿ ಗ್ರೂಪ್ ಜೊತೆಗಿನ ಹೊಸ ಒಪ್ಪಂದದಲ್ಲಿ ಲಿಯೋನಾರ್ಡೊ ಕಂಪನಿಯು ಈ ಹಿಂದೆ ಅಗಸ್ಟಾ ವೆಸ್ಟ್‌ಲ್ಯಾಂಡ್ ತಯಾರಿಸುತ್ತಿದ್ದ AW169M ಮತ್ತು AW109 TrekkerM ನಂತಹ ಮಾದರಿಗಳನ್ನು ಭಾರತದಲ್ಲಿ ತಯಾರಿಸಲು ನಿರ್ಧರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...