Homeಕರ್ನಾಟಕಗದಗ | ಕ್ಯಾಂಟರ್-ಕ್ರೂಸರ್ ನಡುವೆ ಅಪಘಾತ : ಮೂವರು ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಜನರಿಗೆ...

ಗದಗ | ಕ್ಯಾಂಟರ್-ಕ್ರೂಸರ್ ನಡುವೆ ಅಪಘಾತ : ಮೂವರು ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

- Advertisement -
- Advertisement -

ಗದಗ ಜಿಲ್ಲೆ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಗಜೇಂದ್ರಗಡದ ಶಿವಾಜಿ ಪೇಟೆಯ ನಿವಾಸಿಗಳಾದ ಮರಿಯಂ ಹುನಗುಂದ (55), ಅನ್ನಪೂರ್ಣ ಚಂಗಳಿ (45) ಮತ್ತು ಸುಜಾತ ಹೊಸಮನಿ (30) ಮೃತರು. ಈ ಮೂವರೂ ಕ್ರೂಸರ್ ವಾಹನದಲ್ಲಿದ್ದರು ಎಂದು ತಿಳಿದು ಬಂದಿದೆ.

ಮೃತರು ಹಾಗೂ ಗಾಯಾಳುಗಳು ಕ್ರೂಸರ್ ವಾಹನದಲ್ಲಿ ಗಜೇಂದ್ರಗಡದಿಂದ ರೋಣ ಕಡೆಗೆ ಕಡಲೆ ಕೀಳುವ ಕೆಲಸಕ್ಕೆ ಹೋಗುತ್ತಿದ್ದರು. ಈ ವೇಳೆ ರೋಣದಿಂದ ಗಜೇಂದ್ರಗಡ ಕಡೆಗೆ ವೇಗವಾಗಿ ಬರುತ್ತಿದ್ದ ಕ್ಯಾಂಟರ್ ವಾಹನವು ಜಿಗಳೂರು ಕ್ರಾಸ್ ಬಳಿ ಡಿಕ್ಕಿ ಹೊಡೆದಿದೆ.

ಗಾಯಾಳುಗಳನ್ನು ರೋಣ ತಾಲೂಕು ಆಸ್ಪತ್ರೆ ಮತ್ತು ಜಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಷಿಂಗ್ಟನ್ ಪೋಸ್ಟ್‌ನಲ್ಲಿ ಉದ್ಯೋಗ ಕಡಿತ : ಕೆಲಸ ಕಳೆದುಕೊಂಡ ಶಶಿ ತರೂರ್ ಮಗ

ಪ್ರಮುಖ ಮಾಧ್ಯಮ ಸಂಸ್ಥೆ ವಾಷಿಂಗ್ಟನ್‌ ಪೋಸ್ಟ್‌ನಲ್ಲಿ ಭಾರೀ ಉದ್ಯೋಗ ಕಡಿತ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಕೆಲಸ ಕಳೆದುಕೊಂಡಿರುವ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಸಂಸದ ಶಶಿ ತರೂರ್ ಅವರ ಮಗ...

ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ : ಲೋಕಸಭೆ ಕಲಾಪ ಮುಂದೂಡಿಕೆ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಗುರುವಾರ (ಫೆ.5) ಲೋಕಸಭೆ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಮಧ್ಯಾಹ್ನದವರೆಗೆ ಮುಂದೂಡಿದರು. ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ, ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಆರಂಭಿಸಿದರು. ವಿಶೇಷವಾಗಿ,...

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...

ಪ.ಬಂಗಾಳವನ್ನು ಗುರಿಯಾಗಿಸಲಾಗುತ್ತಿದೆ, ಅಸ್ಸಾಂನಲ್ಲಿ ಎಸ್‌ಐಆರ್‌ ಏಕಿಲ್ಲ? : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಗುರಿಯಾಗಿಸಲಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಫೆ.4) ಆರೋಪಿಸಿದ್ದು, ಬಿಜೆಪಿ ಆಡಳಿತವಿರುವ ಅಸ್ಸಾಂನಲ್ಲಿ ಏಕೆ ಎಸ್‌ಐಆರ್ ನಡೆಸುತ್ತಿಲ್ಲ ಎಂಬುವುದಾಗಿ...

ತಮಿಳುನಾಡು| ದಲಿತ ಯುವಕನನ್ನು ಪ್ರೀತಿಸುತ್ತಿದ್ದ ಯುವತಿ ಅನುಮಾನಾಸ್ಪದ ಸಾವು; ಮರ್ಯಾದೆಗೇಡು ಹತ್ಯೆ ಶಂಕೆ

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿ ಸಾವು ಮರ್ಯಾದಾ ಹತ್ಯೆಯ ಗಂಭೀರ ಆರೋಪಗಳನ್ನು ಹುಟ್ಟುಹಾಕಿದೆ. ಸಾವಿನ ಆರಂಭಿಕ ತನಿಖೆಯು ಆತ್ಮಹತ್ಯೆಯತ್ತ ಬೊಟ್ಟು ಮಾಡುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿಯ ನಂತರವೇ ಸಾವಿಗೆ ಅಂತಿಮ ಕಾರಣ...

‘ರಾಜ್ಯವನ್ನು ನಿರ್ಲಕ್ಷಿಸಲಾಗಿದೆ’ : ಕೇಂದ್ರ ಬಜೆಟ್‌ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ ವಿರುದ್ದ ಕೇರಳ ವಿಧಾನಸಭೆ ನಿರ್ಣಯ ಅಂಗೀಕರಿಸಿದ್ದು, ರಾಜ್ಯವನ್ನು 'ನಿರ್ಲಕ್ಷಿಸಲಾಗಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದೆ. ಬಜೆಟ್‌ನಲ್ಲಿ ಕೇರಳದ ದೀರ್ಘಕಾಲದ ಬೇಡಿಕೆಗಳನ್ನು ಪರಿಗಣಿಸದೆ ಇರುವುದು ಮತ್ತು ರಾಜ್ಯಕ್ಕೆ ನೀಡಬೇಕಾದ ನ್ಯಾಯಯುತ...

ದೇವಾಲಯ-ಶಾಲೆಗಳ ಬಳಿ ಇರುವ ಮಾಂಸ ಮಳಿಗೆಗಳ ಕುರಿತು ಏಕರೂಪ ನೀತಿ ರೂಪಿಸಿ: ತೆಲಂಗಾಣ ಹೈಕೋರ್ಟ್

ಸಾರ್ವಜನಿಕ ಭಾವನೆ, ನೈರ್ಮಲ್ಯ, ಸಂಚಾರ ನಿರ್ವಹಣೆ, ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಕಳವಳಗಳನ್ನು ಉಲ್ಲೇಖಿಸಿ, ದೇವಾಲಯಗಳು, ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳಿಂದ 100 ಮೀಟರ್ ಒಳಗೆ ಮಾಂಸ ಮತ್ತು ಮಾಂಸಾಹಾರಿ ಆಹಾರ ಮಾರಾಟವನ್ನು...

ಎಸ್‌ಐಆರ್ ಅರ್ಜಿ ವಿಚಾರಣೆ : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ದ ಸಲ್ಲಿಸಿರುವ ಅರ್ಜಿಯ ವಿಚಾರಣೆ ಬುಧವಾರ (ಫೆ.4) ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ ಮಾಡುತ್ತಿದ್ದಾರೆ....

ಆರ್‌ಕಾಮ್ ಬ್ಯಾಂಕ್ ವಂಚನೆ ತನಿಖೆ: ಇಡಿ, ಸಿಬಿಐಗೆ ಸುಪ್ರೀಂ ಕೋರ್ಟ್ ಛೀಮಾರಿ; ದೇಶ ಬಿಟ್ಟು ಹೋಗದಂತೆ ಅನಿಲ್ ಅಂಬಾನಿಗೆ ತಾಕೀತು 

ರಿಲಯನ್ಸ್ ಕಮ್ಯುನಿಕೇಷನ್ಸ್, ಅದರ ಸಮೂಹ ಕಂಪನಿಗಳು ಮತ್ತು ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಒಳಗೊಂಡ ಬೃಹತ್ ಪ್ರಮಾಣದ ಬ್ಯಾಂಕ್ ವಂಚನೆ ಆರೋಪಗಳ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಜಾರಿ...