Homeಕರ್ನಾಟಕಮಾಲೂರು ಮರು ಮತ ಎಣಿಕೆ : ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್

ಮಾಲೂರು ಮರು ಮತ ಎಣಿಕೆ : ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್

- Advertisement -
- Advertisement -

ರಾಜ್ಯ ವಿಧಾನಸಭೆಯ 2023ರ ಚುನಾವಣೆಯಲ್ಲಿ ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಕೆ.ವೈ ನಂಜೇಗೌಡ ಗೆಲುವು ಸಾಧಿಸಿರುವುದನ್ನು ಸುಪ್ರೀಂ ಕೋರ್ಟ್ ಗುರುವಾರ (ಫೆ.5) ಎತ್ತಿ ಹಿಡಿದಿದೆ.

ಮತಗಳ ಮರುಎಣಿಕೆಯ ನಂತರವೂ, ನಂಜೇಗೌಡರು ತಮ್ಮ ಎದುರಾಳಿ ಬಿಜೆಪಿಯ ಕೆ.ಎಸ್. ಮಂಜುನಾಥ್ ಗೌಡ ಅವರಿಗಿಂತ 250ಕ್ಕೂ ಹೆಚ್ಚು ಮತಗಳನ್ನು ಪಡೆದಿರುವುದನ್ನು ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರ ಪೀಠವು ನಂಜೇಗೌಡ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ಸೆಪ್ಟೆಂಬರ್ 2025 ರ ತೀರ್ಪನ್ನು ರದ್ದುಗೊಳಿಸಿದೆ ಎಂದು ಲೈವ್‌ ಲಾ ವರದಿ ಮಾಡಿದೆ.

2023ರ ವಿಧಾನಸಭಾ ಚುನಾವಣೆಯಲ್ಲಿ, ನಂಜೇಗೌಡರು ಬಿಜೆಪಿ ಅಭ್ಯರ್ಥಿ ಕೆ.ಎಸ್. ಮಂಜುನಾಥ ಗೌಡ ಅವರ ವಿರುದ್ಧ 248 ಮತಗಳ ಅಂತರದಿಂದ ಗೆದ್ದಿದ್ದರು. ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದ ಬಿಜೆಪಿ ಅಭ್ಯರ್ಥಿ ಮಂಜುನಾಥ ಗೌಡ ಮತಗಳ ಮರುಎಣಿಕೆ ಕೋರಿ ಹೈಕೋರ್ಟ್‌ನಲ್ಲಿ ಚುನಾವಣಾ ತಕರಾರರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ನಂಜೇಗೌಡ ಅವರ ಆಯ್ಕೆಯನ್ನು ರದ್ದುಗೊಳಿಸಿತ್ತು. ಮತಗಳ ಮರುಎಣಿಕೆ ನಡೆಸಿ ಹೊಸದಾಗಿ ಫಲಿತಾಂಶ ಘೋಷಿಸಲು ಆದೇಶಿಸಿತ್ತು.

ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ನಂಜೇಗೌಡ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಮೇಲ್ಮನವಿಯನ್ನು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಮುಚ್ಚಿದ ಲಕೋಟೆಯಲ್ಲಿ ಮರು ಮತ ಎಣಿಕೆಯ ನಂತರ ಫಲಿತಾಂಶವನ್ನು ಸಲ್ಲಿಸುವಂತೆ ಚುನಾವಣಾಧಿಕಾರಿಗೆ ಸೂಚಿಸಿತ್ತು.

ಗುರುವಾರ ಸುಪ್ರೀಂ ಕೋರ್ಟ್ ಕಕ್ಷಿದಾರರ ಸಮ್ಮುಖದಲ್ಲಿ ಮುಚ್ಚಿದ ಲಕೋಟೆಯನ್ನು ತೆರೆಯಿತು. ಮರು ಮತ ಎಣಿಕೆಯ ನಂತರವೂ ನಂಜೇಗೌಡ ಅವರೇ ಗೆಲುವು ಸಾಧಿಸಿರುವುದನ್ನು ಪರಿಗಣಿಸಿತು. ನಂಜೇಗೌಡರು 50,957 ಮತಗಳನ್ನು ಮತ್ತು ಮಂಜುನಾಥ ಗೌಡ 50,707 ಮತಗಳನ್ನು ಪಡೆದಿದ್ದಾರೆ ಎಂದು ಕೋರ್ಟ್ ತಿಳಿಸಿದೆ.

“ಇದರರ್ಥ, ಹೈಕೋರ್ಟ್ ನೀಡಿದ ಮರುಎಣಿಕೆಯ ಆದೇಶವನ್ನು ಪಾಲಿಸಿದ ನಂತರವೂ ಮಾಲೂರು ಕ್ಷೇತ್ರದ ಅಭ್ಯರ್ಥಿಯ ಆಯ್ಕೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಹೈಕೋರ್ಟ್‌ನ ಹಿಂದಿನ ತೀರ್ಪನ್ನು ಬದಿಗಿಟ್ಟು, ಮೇಲ್ಮನವಿದಾರರ (ಅಭ್ಯರ್ಥಿಯ) ಚುನಾವಣಾ ಆಯ್ಕೆಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ ಮತ್ತು ಅವರ ಆಯ್ಕೆಯು ಕಾನೂನುಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದೆ,” ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ವಿಡಿಯೋ ರೆಕಾರ್ಡಿಂಗ್‌ಗಳನ್ನು ಒದಗಿಸದಿದ್ದಕ್ಕಾಗಿ ಜಿಲ್ಲಾ ಚುನಾವಣಾ ಅಧಿಕಾರಿಗೆ ಭಾರತೀಯ ಚುನಾವಣಾ ಆಯೋಗ ನೀಡಿದ್ದ ನಿರ್ದೇಶನವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಎಣಿಕೆ ಪ್ರಕ್ರಿಯೆಯ ವಿಡಿಯೋ ರೆಕಾರ್ಡಿಂಗ್ ಕಡ್ಡಾಯವೇ ಅಥವಾ ಇಲ್ಲವೇ ಎಂಬುವುದರ ಕುರಿತು ಯಾವುದೇ ಅಭಿಪ್ರಾಯ ವ್ಯಕ್ತಪಡಿಸುತ್ತಿಲ್ಲ ಎಂದು ಹೇಳಿದೆ.

ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿದಾರರ (ನಂಜೇಗೌಡ) ಪರವಾಗಿ ಹಿರಿಯ ವಕೀಲ ಡಾ. ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...