Homeಮುಖಪುಟಯಾವುದೇ ಕಾರಣಕ್ಕೂ ಕೇರಳದಲ್ಲಿ ಎನ್‌ಪಿಆರ್ ಜಾರಿಯಾಗುವುದಿಲ್ಲ : ಸಿಎಂ ಪಿಣರಾಯಿ ವಿಜಯನ್

ಯಾವುದೇ ಕಾರಣಕ್ಕೂ ಕೇರಳದಲ್ಲಿ ಎನ್‌ಪಿಆರ್ ಜಾರಿಯಾಗುವುದಿಲ್ಲ : ಸಿಎಂ ಪಿಣರಾಯಿ ವಿಜಯನ್

- Advertisement -
- Advertisement -

ಕೇರಳದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ (ಫೆ.7) ಪುನರುಚ್ಚರಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಅವರು, “ಯಾವುದೇ ಸಂದರ್ಭದಲ್ಲೂ ಕೇರಳದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್‌) ಜಾರಿಗೆ ತರಲಾಗುವುದಿಲ್ಲ ಎಂದು ಎಲ್‌ಡಿಎಫ್‌ ಸರ್ಕಾರ ಪುನರುಚ್ಚರಿಸುತ್ತದೆ. 2027ರ ರಾಷ್ಟ್ರವ್ಯಾಪಿ ಜನಗಣತಿ ಸಮೀಪಿಸುತ್ತಿದ್ದಂತೆ, ‘ಎನ್‌ಪಿಆರ್‌’ಗಾಗಿ ಯಾವುದೇ ಡೇಟಾ ಸಂಗ್ರಹಿಸದಂತೆ ನಾವು ಹೊಸ ಅಧಿಸೂಚನೆಯನ್ನು ಹೊರಡಿಸಿದ್ದೇವೆ. ಇದು 2019 ರಿಂದ ನಮ್ಮ ದೃಢವಾದ ನಿಲುವನ್ನು ಎತ್ತಿಹಿಡಿಯುತ್ತದೆ. ಸುಪ್ರೀಂ ಕೋರ್ಟ್‌ನಲ್ಲಿ ಅಸಂವಿಧಾನಿಕ ಸಿಎಎ ಪ್ರಶ್ನಿಸಿದ ಮತ್ತು ಅದರ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಿದ ಮೊದಲ ರಾಜ್ಯ ಕೇರಳ. ಸಾಂವಿಧಾನಿಕ ಮೌಲ್ಯಗಳನ್ನು ರಕ್ಷಿಸಲು ನಾವು ಬದ್ಧರಾಗಿದ್ದೇವೆ ಮತ್ತು ಎನ್‌ಪಿಆರ್/ಎನ್‌ಆರ್‌ಸಿಯಂತಹ ತಾರತಮ್ಯದ ಪ್ರಕ್ರಿಯೆಗಳು ನಮ್ಮ ಜನರಿಗೆ ಬೆದರಿಕೆ ಹಾಕಲು ನಾವು ಅನುಮತಿಸುವುದಿಲ್ಲ” ಎಂದು ಬರೆದುಕೊಂಡಿದ್ದಾರೆ.

ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್‌) ಎಂಬುವುದು ಭಾರತದಲ್ಲಿ ಸಾಮಾನ್ಯವಾಗಿ ವಾಸಿಸುವ ಎಲ್ಲಾ ನಿವಾಸಿಗಳ ಪಟ್ಟಿಯಾಗಿದೆ. ಇದನ್ನು ಮೊದಲ ಬಾರಿಗೆ 2010 ರಲ್ಲಿ ಸಿದ್ಧಪಡಿಸಲಾಯಿತು. ನಂತರ 2015ರಲ್ಲಿ ಹೆಸರು, ಲಿಂಗ, ಹುಟ್ಟಿದ ದಿನಾಂಕ ಮತ್ತು ಹುಟ್ಟಿದ ಸ್ಥಳದಂತಹ ಕೆಲವು ಪ್ರಮುಖ ವಿವರಗಳನ್ನು ನವೀಕರಿಸಲಾಯಿತು. ದೇಶದ ಪ್ರತಿಯೊಬ್ಬ ನಿವಾಸಿಯ ಸಮಗ್ರ ಗುರುತಿನ ಡೇಟಾಬೇಸ್ ಅನ್ನು ರಚಿಸುವುದು ಇದರ ಮುಖ್ಯ ಗುರಿಯಾಗಿದೆ ಎಂದು ಕೇಂದ್ರದ ಬಿಜೆಪಿ ಸರ್ಕಾರ ಹೇಳಿಕೊಂಡಿದೆ.

ಈ ಬಾರಿ ಎನ್‌ಪಿಆರ್ ಪ್ರಕ್ರಿಯೆಯಲ್ಲಿ ಕೆಲವು ಹೆಚ್ಚುವರಿ ಪ್ರಶ್ನೆಗಳನ್ನು ಕೇಳಲಾಗುತ್ತಿದೆ, ಇದು ಮುಂದೆ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರಲು ದಾರಿಯಾಗಬಹುದು ಎಂಬುವುದು ಕೇರಳ ಸರ್ಕಾರದ ಆತಂಕ. ಆದ್ದರಿಂದಲೇ ಕೇರಳ ಸರ್ಕಾರ ಜನಗಣತಿಯನ್ನು ಮಾತ್ರ ಬೆಂಬಲಿಸಿ, ಎನ್‌ಪಿಆರ್ ದತ್ತಾಂಶ ಸಂಗ್ರಹಣೆಯನ್ನು ವಿರೋಧಿಸಿದೆ.

ಫೆಬ್ರವರಿ 4, 2026 ರಂದು ಕೇರಳ ಸರ್ಕಾರವು ಹೊಸ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದ್ದು, ರಾಜ್ಯದಲ್ಲಿ ಎನ್‌ಪಿಆರ್‌ ನವೀಕರಣಕ್ಕೆ ಸಂಬಂಧಿಸಿದ ಎಲ್ಲಾ ಚಟುವಟಿಕೆಗಳನ್ನು ಸ್ಥಗಿತಗೊಳಿಸಿರುವುದನ್ನು ಪುನರುಚ್ಚರಿಸಿದೆ. ಈ ಸ್ಥಗಿತ ಆದೇಶವು ಡಿಸೆಂಬರ್ 20, 2019 ರಿಂದಲೇ ಜಾರಿಯಲ್ಲಿದ್ದು, ಈಗ ಅದನ್ನು ಮತ್ತೊಮ್ಮೆ ದೃಢೀಕರಿಸಲಾಗಿದೆ.

ಕೇಂದ್ರ ಸರ್ಕಾರ ಫೆಬ್ರವರಿ 1 ರಂದು ಮಂಡಿಸಿದ ಬಜೆಟ್‌ನಲ್ಲಿ “ಜನಗಣತಿ, ಸಮೀಕ್ಷೆ ಮತ್ತು ಅಂಕಿಅಂಶಗಳು/ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ” ಚಟುವಟಿಕೆಗಳಿಗಾಗಿ 6,000 ಕೋಟಿ ರೂಪಾಯಿ ಹಣವನ್ನು ಮೀಸಲಿಟ್ಟಿದೆ. ಈ ಘೋಷಣೆ ಹೊರಬಿದ್ದ ಕೇವಲ ಮೂರೇ ದಿನಗಳಲ್ಲಿ ಕೇರಳ ಸರ್ಕಾರ ತನ್ನ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದೆ.

ಕೇಂದ್ರ ಹಣಕಾಸು ಸಚಿವರು ಮಂಡಿಸಿದ ಬಜೆಟ್ ದಾಖಲೆಗಳಲ್ಲಿ, ಮೀಸಲಿಟ್ಟ 6,000 ಕೋಟಿ ರೂಪಾಯಿ ಹಣ ಕೇವಲ ಜನಗಣತಿಗೆ ಮಾತ್ರವಲ್ಲದೆ, ರಾಷ್ಟ್ರೀಯ ಯೋಜನೆಗೂ ಸೇರಿದೆ ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಈ ಹಣವನ್ನು ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತರ ಕಚೇರಿ, 2027ರ ಜನಗಣತಿ ವೆಚ್ಚಗಳು ಮತ್ತು ಎನ್‌ಪಿಆರ್ ಸೇರಿದಂತೆ ಆರ್‌ಜಿಐನ ವಿವಿಧ ಯೋಜನೆಗಳಿಗಾಗಿ ಬಳಸಲಾಗುವುದು ಎಂದು ತಿಳಿಸಲಾಗಿದೆ.

ಬಜೆಟ್‌ನಲ್ಲಿ ಎನ್‌ಪಿಆರ್ ಹೆಸರನ್ನು ಸೇರಿಸಿರುವುದು ಕೇರಳ ಸರ್ಕಾರದ ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ. ಜನಗಣತಿಯ ನೆಪದಲ್ಲಿ ಎನ್‌ಪಿಆರ್ ಅಂಕಿಅಂಶಗಳನ್ನು ಸಂಗ್ರಹಿಸಲು ಕೇಂದ್ರವು ಸಿದ್ಧತೆ ನಡೆಸುತ್ತಿದೆ ಎಂದು ಕೇರಳವು ತನ್ನ ಹೊಸ ಅಧಿಸೂಚನೆಯನ್ನು ಹೊರಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...