Homeಮುಖಪುಟಸಿಎಂ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ!

ಸಿಎಂ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ!

- Advertisement -
- Advertisement -

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋವನ್ನು ಅಸ್ಸಾಂ ಬಿಜೆಪಿಯ ರಾಜ್ಯ ಘಟಕ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಶನಿವಾರ (ಫೆ.7) ಹಂಚಿಕೊಂಡಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಅದನ್ನು ಡಿಲೀಟ್ ಮಾಡಿದೆ.

ಮುಸ್ಲಿಮರ ವಿರುದ್ದ, ವಿಶೇಷವಾಗಿ ಬಂಗಾಳಿ ಭಾಷೆ ಮಾತನಾಡುವ ಮುಸ್ಲಿಮರ ವಿರುದ್ದ ದ್ವೇಷ ಕಾರುವ, ಅವರ ಹತ್ಯೆಗೆ ನೇರ ಪ್ರಚೋದನೆ ನೀಡುವ, ಭಾರತ ಸಂವಿಧಾನದ ಆಶಯಗಳಿಗೆ ವಿರುದ್ದವಾದ ಈ ವಿಡಿಯೋವನ್ನು ನೈಜ ದೃಶ್ಯ ಮತ್ತು ಕೃತಕ ಬುದ್ಧಿಮತ್ತೆ (ಎಐ) ಚಿತ್ರಗಳ ಮೂಲಕ ಸೃಷ್ಟಿಸಲಾಗಿದೆ ಎಂದು ವರದಿಗಳು ಹೇಳಿವೆ.

ವಿಡಿಯೋದಲ್ಲಿ ಸಿಎಂ ಶರ್ಮಾ ಅವರು ಬಂದೂಕು ಹಿಡಿದು ಶೂಟ್ ಮಾಡಿದ ನೈಜ ದೃಶ್ಯದೊಂದಿಗೆ, ಮುಸ್ಲಿಂ ಸಮುದಾಯದವರಂತೆ ಕಾಣುವ ವ್ಯಕ್ತಿಗಳನ್ನು ಗುರಿಯಾಗಿಸಿ ಗುಂಡು ಹಾರಿಸುವ ಸೃಷ್ಟಿತ ಎಐ ಚಿತ್ರಗಳನ್ನು ಬಳಸಲಾಗಿದೆ.

ಅಸ್ಸಾಂ ಬಿಜೆಪಿ ಮತ್ತು ಸಿಎಂ ರಾಜ್ಯದ ಮುಸ್ಲಿಮರನ್ನು (ವಿಶೇಷವಾಗಿ ಬಂಗಾಳಿ ಭಾಷೆ ಮಾತನಾಡುವ ಮುಸ್ಲಿಮರನ್ನು) ಗುರಿಯಾಗಿಸಿಕೊಂಡು ನಡೆಸುತ್ತಿರುವ ದ್ವೇಷ ಅಭಿಯಾನದ ಭಾಗವಾಗಿ ವಿಡಿಯೋ ಸೃಷ್ಟಿಸಲಾಗಿದೆ ಎಂದು ವಿರೋಧ ಪಕ್ಷಗಳು ಮತ್ತು ಮಾನವ ಹಕ್ಕು ಹೋರಾಟಗಾರರು ಆರೋಪಿಸಿದ್ದಾರೆ.

ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಬಿಜೆಪಿ ತನ್ನ ಎಕ್ಸ್ ಖಾತೆಯಿಂದ ವಿಡಿಯೋವನ್ನು ಡಿಲೀಟ್ ಮಾಡಿದೆ.

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಸಾಗರಿಕಾ ಘೋಷ್, ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಟೆ ಸೇರಿದಂತೆ ಅನೇಕರು ಇದನ್ನು ಖಂಡಿಸಿ, ವಿಡಿಯೋ ಸೃಷ್ಟಿಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

“ಇದು ನಾಚಿಕೆಗೇಡಿನ ಸಂಗತಿ, ಈ ವಿಡಿಯೋ ಸೃಷ್ಟಿಸಿದವರನ್ನು ತಕ್ಷಣ ಬಂಧಿಸಬೇಕು” ಎಂದು ಸಾಗರಿಕಾ ಘೋಷ್ ಆಗ್ರಹಿಸಿದ್ದಾರೆ.

ವಿಡಿಯೋ ಡಿಲಿಟ್ ಆದ ಬಳಿಕ ಮತ್ತೊಂದು ಪೋಸ್ಟ್ ಹಾಕಿರುವ ಸಾಗರಿಕಾ ಘೋಷ್, “ವಿಡಿಯೋ ಡಿಲಿಟ್ ಮಾಡಿದ್ದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಇದು ಯುಎಪಿಎ ಅಡಿ ದೊಡ್ಡ ಅಪರಾಧವಾಗಿದೆ. ಅಲ್ಲದೆ, ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್‌ಗಳಾದ 152, 156 ಮತ್ತು 192 ಅಡಿಯಲ್ಲೂ ಅಪರಾಧ. ಆದ್ದರಿಂದ ಈ ಪ್ರಕರಣದಲ್ಲಿ ಕಠಿಣವಾದ ಶಿಕ್ಷೆಯಾಗಬೇಕು” ಎಂದು ಬರೆದುಕೊಂಡಿದ್ದಾರೆ.

ಪತ್ರಕರ್ತೆ ರಾಣಾ ಅಯ್ಯೂಬ್ ಅವರು, “ಈ ವಿಡಿಯೋ ಆಡಳಿತ ವ್ಯವಸ್ಥೆಯ ಉನ್ನತ ಮಟ್ಟದಲ್ಲಿರುವವರ “ನೈತಿಕ ಅಧಃಪತನವನ್ನು” ಎತ್ತಿ ತೋರಿಸುತ್ತದೆ ಎಂದು ಹೇಳಿದ್ದಾರೆ.

“ಇದನ್ನು ಹಂಚಿಕೊಳ್ಳುವುದು ನನಗೆ ಇಷ್ಟವಿಲ್ಲ, ಆದರೆ ಇದು ಉನ್ನತ ಮಟ್ಟದಲ್ಲಿರುವವರ ಕೊಳಕುತನವನ್ನು ಬಹಿರಂಗಪಡಿಸುತ್ತದೆ. ಬಿಜೆಪಿ ಅಸ್ಸಾಂ ಘಟಕ ತನ್ನ ಎಕ್ಸ್ ಹ್ಯಾಂಡಲ್‌ನಲ್ಲಿ ಒಂದು ಮೀಮ್ ಅಥವಾ ವಿಡಿಯೋ ಹಂಚಿಕೊಂಡಿದೆ. ಅದರಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮುಸ್ಲಿಮರ ಮೇಲೆ ಗುಂಡು ಹಾರಿಸುವಂತೆ (ಪಾಯಿಂಟ್ ಬ್ಲ್ಯಾಂಕ್ ಶಾಟ್) ತೋರಿಸಲಾಗಿದೆ. ಇದೇ ಸಮಯದಲ್ಲಿ ಪ್ರಧಾನಮಂತ್ರಿ ಮೋದಿ ಅವರು ಮುಸ್ಲಿಂ ಬಹುಸಂಖ್ಯಾತ ದೇಶವಾದ ಮಲೇಷ್ಯಾದಲ್ಲಿ ಭವ್ಯ ಸ್ವಾಗತ ಪಡೆದುಕೊಂಡು ಮಾತನಾಡುತ್ತಿದ್ದಾರೆ. ಇದು ತುಂಬಾ ತದ್ವಿರುದ್ದ ಮತ್ತು ಕೊಳಕು ದ್ವಿಮುಖ ನಡವಳಿಕೆಯನ್ನು ತೋರಿಸುತ್ತದೆ” ಎಂದು ರಾಣಾ ಅಯ್ಯೂಬ್ ಬರೆದುಕೊಂಡಿದ್ದಾರೆ.

ಅಸ್ಸಾಂ ಬಿಜೆಪಿ ಡಿಲಿಟ್ ಮಾಡಿರುವ ವಿಡಿಯೋವನ್ನು ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಟೆ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, “ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮುಸ್ಲಿಂ ಪುರುಷರ ಮೇಲೆ ಗುಂಡು ಹಾರಿಸುವಂತೆ ತೋರಿಸುವ ಮತ್ತು ‘ಪಾಯಿಂಟ್ ಬ್ಲ್ಯಾಂಕ್ ಶಾಟ್’ ಎಂಬ ಶೀರ್ಷಿಕೆಯೊಂದಿಗೆ ಇರುವ ವಿಡಿಯೋವನ್ನು ಅಳಿಸಿಹಾಕಿದರೆ ಸಾಕಾಗುವುದಿಲ್ಲ” ಎಂದು ಬರೆದುಕೊಂಡಿದ್ದಾರೆ.

“ಇದು ನಿಜವಾಗಿಯೂ ಬಿಜೆಪಿ ಯಾರು ಎಂಬುದನ್ನು ತೋರಿಸುತ್ತದೆ: ದೊಡ್ಡ ಸಂಖ್ಯೆಯಲ್ಲಿ ಕೊಲೆಗಾರರು (ಮಾಸ್ ಮರ್ಡರರ್ಸ್). ಈ ವಿಷ, ದ್ವೇಷ ಮತ್ತು ಹಿಂಸಾಚಾರದ ಜವಾಬ್ದಾರಿ ನಿಮ್ಮ ಮೇಲಿದೆ ಮಿಸ್ಟರ್ ಮೋದಿ. ನ್ಯಾಯಾಲಯಗಳು ಮತ್ತು ಇತರ ಸಂಸ್ಥೆಗಳು ನಿದ್ರೆ ಮಾಡುತ್ತಿವೆಯೇ?” ಎಂದು ಪ್ರಶ್ನಿಸಿದ್ದಾರೆ.

ಅಸ್ಸಾಂ ಬಿಜೆಪಿ ಈ ಹಿಂದೆಯೂ ಮುಸ್ಲಿಮರ ವಿರುದ್ದ ದ್ವೇಷ ಕಾರುವ ವಿಡಿಯೋವನ್ನು ಹಂಚಿಕೊಂಡಿತ್ತು. ಈ ಕುರಿತ ಸುದ್ದಿಯನ್ನು ಕೆಳಗಡೆ ನೋಡಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...