Homeಮುಖಪುಟ'ರಾಜಕೀಯ ಪ್ರೇರಿತ': ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರಿತ್ತು ಎಂಬ ಆರೋಪ ನಿರಾಕರಿಸಿದ ಸೋನಿಯಾ ಗಾಂಧಿ

‘ರಾಜಕೀಯ ಪ್ರೇರಿತ’: ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರಿತ್ತು ಎಂಬ ಆರೋಪ ನಿರಾಕರಿಸಿದ ಸೋನಿಯಾ ಗಾಂಧಿ

- Advertisement -
- Advertisement -

ಭಾರತದ ನಾಗರಿಕತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲಾಗಿತ್ತು ಎಂಬ ಆರೋಪದ ಮೇಲೆ ತನ್ನ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿರುವ ಅರ್ಜಿಯು ‘ಸಂಪೂರ್ಣ ರಾಜಕೀಯ ಪ್ರೇರಿತ, ಕಾನೂನು ಪ್ರಕ್ರಿಯೆಯ ದುರುಪಯೋಗ’ ಎಂಬುವುದಾಗಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಎಫ್‌ಐಆರ್ ದಾಖಲಿಸುವಂತೆ ಕೋರಿ ವಿಕಾಸ್ ತ್ರಿಪಾಠಿ ಎಂಬವರು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಗೆ ಸೋನಿಯಾ ಗಾಂಧಿ ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಈ ಪ್ರಕರಣ ಶನಿವಾರ (ಫೆ.7) ವಿಶೇಷ ನ್ಯಾಯಾಧೀಶ (ಪಿಸಿ ಕಾಯ್ದೆ) ವಿಶಾಲ್ ಗೋಗ್ನೆ ಅವರ ಮುಂದೆ ವಿಚಾರಣೆಗೆ ಬಂದಿತ್ತು. ಸೋನಿಯಾ ಗಾಂಧಿ ಪ್ರತಿಕ್ರಿಯೆ ಸಲ್ಲಿಸಿದ್ದಾರೆ ಎಂದು ಗಮನಿಸಿದ ನ್ಯಾಯಾಧೀಶರು. ಫೆ. 21ರಂದು ವಾದ ಮಂಡನೆಗೆ ಪ್ರಕರಣವನ್ನು ಪಟ್ಟಿ ಮಾಡಿದ್ದಾರೆ ಎಂದು ವರದಿ ತಿಳಿಸಿದೆ.

ತ್ರಿಪಾಠಿ ಸಲ್ಲಿಸಿದ್ದ ಅರ್ಜಿಯನ್ನು ಆರಂಭದಲ್ಲಿ ಸೆಪ್ಟೆಂಬರ್ 11, 2025 ರಂದು ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ವೈಭವ್ ಚೌರಾಸಿಯಾ ಅವರು ವಜಾಗೊಳಿಸಿದ್ದರು. ಇದನ್ನು ಪ್ರಶ್ನಿಸಿ ತ್ರಿಪಾಠಿ ಸೆಷನ್ಸ್ ನ್ಯಾಯಾಲಯದಲ್ಲಿ ಮರು ಪರಿಶೀಲನೆ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿ ಸಂಬಂಧ ನ್ಯಾಯಾಲಯವು ಡಿಸೆಂಬರ್ 9, 2025 ರಂದು ಸೋನಿಯಾ ಗಾಂಧಿಯವರಿಗೆ ನೋಟಿಸ್ ಜಾರಿಗೊಳಿಸಿತ್ತು.

1983ರ ಏಪ್ರಿಲ್‌ನಲ್ಲಿ ಸೋನಿಯಾ ಗಾಂಧಿಯವರು ಭಾರತದ ಪೌರತ್ವ ಪಡೆದಿದ್ದಾರೆ. ಆದರೆ, ಅದಕ್ಕೂ ಮುನ್ನ 1980ರಲ್ಲಿ ನವದೆಹಲಿ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಅವರ ಹೆಸರನ್ನು ಸೇರಿಸಲಾಗಿತ್ತು ಎಂಬುವುದು ತ್ರಿಪಾಠಿ ಅವರ ಆರೋಪವಾಗಿದೆ.

1980ರಲ್ಲಿ ಸೋನಿಯಾ ಗಾಂಧಿಯವರ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಲಾಗಿತ್ತು. ನಂತರ 1982ರಲ್ಲಿ ಅದನ್ನು ಅಳಿಸಲಾಯಿತು. ಆ ಬಳಿಕ 1983ರಲ್ಲಿ ಮತ್ತೆ ಸೇರಿಸಲಾಯಿತು ಎಂದು ತ್ರಿಪಾಠಿ ಹೇಳಿದ್ದಾರೆ.

ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ಸಲ್ಲಿಸಿರುವ ಸಂಕ್ಷಿಪ್ತ ಪ್ರತಿಕ್ರಿಯೆಯಲ್ಲಿ ಸೋನಿಯಾ ಗಾಂಧಿ ತಮ್ಮ ವಿರುದ್ಧದ ಆರೋಪವನ್ನು ಬಲವಾಗಿ ವಿರೋಧಿಸಿದ್ದಾರೆ. ಈ ದೂರು ಕೇವಲ ಊಹೆಗಳು, ಮಾಧ್ಯಮ ವರದಿಗಳು ಮತ್ತು ಕಾಲ್ಪನಿಕ ವಿಷಯಗಳನ್ನು ಆಧರಿಸಿದೆಯೇ ಹೊರತು, ಯಾವುದೇ ಮೂಲಭೂತ ದಾಖಲೆಗಳನ್ನು ಪುರಾವೆಯಾಗಿ ಒದಗಿಸಿಲ್ಲ ಎಂದು ಅವರು ವಾದಿಸಿದ್ದಾರೆ. ಅಂದರೆ, ತನ್ನ ಮೇಲಿನ ಆರೋಪಗಳಿಗೆ ಯಾವುದೇ ಭದ್ರವಾದ ಅಡಿಪಾಯ ಅಥವಾ ಅಧಿಕೃತ ದಾಖಲೆಗಳಿಲ್ಲ ಎಂದು ಸೋನಿಯಾ ಗಾಂಧಿ ಈ ಮೂಲಕ ಸ್ಪಷ್ಟಪಡಿಸಿದ್ದಾರೆ.

“ದೂರುದಾರರು ಯಾವುದೇ ಆಧಾರವಿಲ್ಲದೆ ಅತ್ಯಂತ ಗಂಭೀರವಾದ ಆರೋಪಗಳನ್ನು ಬೇಜವಾಬ್ದಾರಿಯಿಂದ ಮಾಡಿದ್ದಾರೆ. ಈ ಆರೋಪಗಳು ಕೇವಲ ಅವರ ಸ್ವಂತ ಕಲ್ಪನೆ, ವೈಯಕ್ತಿಕ ಅಭಿಪ್ರಾಯ ಅಥವಾ ಅನಗತ್ಯ ಊಹೆಗಳನ್ನು ಆಧರಿಸಿವೆ ಹೊರತು, ಅದರಲ್ಲಿ ಯಾವುದೇ ಸತ್ಯಾಂಶವಿಲ್ಲ” ಎಂದಿದ್ದಾರೆ.

“ದೂರುದಾರರು ಮತದಾರರ ನೋಂದಣಿಗೆ ಸಲ್ಲಿಸಿದ ಎನ್ನಲಾದ ಅರ್ಜಿಗಳ ಪ್ರತಿಗಳು, ಪೌರತ್ವಕ್ಕೆ ಸಂಬಂಧಿಸಿದ ದಾಖಲೆಗಳು ಅಥವಾ ಯಾವುದೇ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿಲ್ಲ. ಅಷ್ಟೇ ಅಲ್ಲದೆ, ಅಂತಹ ದಾಖಲೆಗಳನ್ನು ಕಾನೂನುಬದ್ಧವಾಗಿ ಪಡೆದುಕೊಳ್ಳಲು ಯಾವುದೇ ಪ್ರಯತ್ನವನ್ನೂ ಮಾಡಿಲ್ಲ. ಅವರು ಕೇವಲ ಗಾಳಿಯಲ್ಲಿ ಗುಂಡು ಹೊಡೆಯುವಂತೆ ಯಾವುದೇ ಆಧಾರವಿಲ್ಲದೆ ಆರೋಪ ಮಾಡಿದ್ದಾರೆಯೇ ಹೊರತು, ಅದನ್ನು ಸಾಬೀತುಪಡಿಸುವ ಒಂದು ಅಧಿಕೃತ ದಾಖಲೆಯೂ ಅವರ ಬಳಿ ಇಲ್ಲ” ಎಂದು ಹೇಳಿದ್ದಾರೆ.

ದೂರುದಾರರಾದ ವಿಕಾಸ್ ತ್ರಿಪಾಠಿ ಅವರು ತಮ್ಮ ದೂರಿನ 8ನೇ ಪ್ಯಾರಾದಲ್ಲಿ, “1982ರಲ್ಲಿ ಸಾರ್ವಜನಿಕರಿಂದ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿತ್ತು” ಎಂದು ಉಲ್ಲೇಖಿಸಿದ್ದಾರೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಸೋನಿಯಾ ಗಾಂಧಿ, “ಸಾರ್ವಜನಿಕರು ಅಥವಾ ಮಾಧ್ಯಮಗಳು ನಡೆಸಿದ್ದವು ಎನ್ನಲಾದ ಈ ಪ್ರತಿಭಟನೆಗಳು ನಡೆದು 43 ವರ್ಷಗಳ ನಂತರ, ದೂರುದಾರರು ಇದನ್ನು ‘ತಮ್ಮ ನೇರ ಜ್ಞಾನಕ್ಕೆ ಬಂದ ವಿಷಯ’ ಎಂದು ಕ್ರಿಮಿನಲ್ ದೂರಿನಲ್ಲಿ ದಾಖಲಿಸಿರುವುದು ಕುತೂಹಲಕಾರಿಯಾಗಿದೆ” ಎಂದಿದ್ದಾರೆ.

“ಈ ಆರೋಪಗಳು 1980 ರಿಂದ 1983 ರ ಅವಧಿಯಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿವೆ ಮತ್ತು ದಶಕಗಳ ಹಿಂದೆಯೇ ಚರ್ಚೆಗೆ ಬಂದು ತಣ್ಣಗಾಗಿದ್ದ ವಿವಾದಗಳನ್ನು ಆಧರಿಸಿವೆ. ಇಷ್ಟು ದೀರ್ಘಕಾಲದ ನಂತರ, ಅಂದರೆ 40 ವರ್ಷಗಳ ಬಳಿಕ ಇಂತಹ ಹಳೆಯ ವಿಷಯಗಳನ್ನು ಮತ್ತೆ ಕೆದಕುವುದರಿಂದ, ಅವುಗಳಿಗೆ ಸಂಬಂಧಿಸಿದ ನಂಬಲರ್ಹ ಪುರಾವೆಗಳನ್ನು ಒದಗಿಸುವುದು ಅಸಾಧ್ಯ” ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

“ಈ ವಿಳಂಬಿತ ದೂರು “ದುರುದ್ದೇಶಪೂರಿತ ಕಾನೂನು ಕ್ರಮ”. ಅಲ್ಲದೆ, ಇಷ್ಟು ದಶಕಗಳ ನಂತರ ವಿಚಾರಣೆ ನಡೆಸುವುದು ವ್ಯಕ್ತಿಯ ಘನತೆ ಮತ್ತು ನ್ಯಾಯಯುತ ವಿಚಾರಣೆಯ ಹಕ್ಕನ್ನು ಕಸಿದುಕೊಂಡಂತಾಗುತ್ತದೆ. ಇದು ಸಂವಿಧಾನದ 21ನೇ ವಿಧಿಯ (ಜೀವಿಸುವ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಹಕ್ಕು) ಉಲ್ಲಂಘನೆಯಾಗಿದೆ” ಎಂದು ಸೋನಿಯಾ ಗಾಂಧಿ ಪ್ರತಿಪಾದಿಸಿದ್ದಾರೆ.

“ಪೌರತ್ವಕ್ಕೆ ಸಂಬಂಧಿಸಿದ ಪ್ರಶ್ನೆಗಳು ಮತ್ತು ನಿರ್ಧಾರಗಳು ಸಂಪೂರ್ಣವಾಗಿ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತವೆ. ಅದೇ ರೀತಿ, ಮತದಾರರ ಪಟ್ಟಿಗೆ ಸಂಬಂಧಿಸಿದ ಯಾವುದೇ ವಿವಾದಗಳು ಅಥವಾ ಆಕ್ಷೇಪಣೆಗಳನ್ನು ನಿರ್ವಹಿಸುವ ಸಂಪೂರ್ಣ ಅಧಿಕಾರ ಭಾರತೀಯ ಚುನಾವಣಾ ಆಯೋಗಕ್ಕೆ ಮಾತ್ರ ಇರುತ್ತದೆ” ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

“ಭಾರತೀಯ ದಂಡ ಸಂಹಿತೆ (ಐಪಿಸಿ) ಅಥವಾ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಅಡಿಯಲ್ಲಿ ಅಪರಾಧಗಳೆಂದು ಬಿಂಬಿಸಿ, ಪೌರತ್ವ ಅಥವಾ ಮತದಾರರ ಪಟ್ಟಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಖಾಸಗಿ ದೂರುಗಳನ್ನು ವಿಚಾರಣೆಗೆ ತೆಗೆದುಕೊಳ್ಳಲು ಕ್ರಿಮಿನಲ್ ನ್ಯಾಯಾಲಯಗಳಿಗೆ ಅಧಿಕಾರವಿಲ್ಲ” ಎಂದು ಸೋನಿಯಾ ಗಾಂಧಿ ವಾದಿಸಿದ್ದಾರೆ.

“ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವಿನ ಅಧಿಕಾರ ವ್ಯಾಪ್ತಿಯನ್ನು ಇದು ಮೀರುತ್ತದೆ. ಪೌರತ್ವ ಮತ್ತು ಚುನಾವಣೆ ನಿರ್ವಹಣೆ ಆಯಾ ಸ್ವತಂತ್ರ ಸಂಸ್ಥೆಗಳ ಜವಾಬ್ದಾರಿಯಾಗಿದೆ. ಸಂವಿಧಾನದ 329ನೇ ವಿಧಿಯು ಚುನಾವಣಾ ಪ್ರಕ್ರಿಯೆಗಳಲ್ಲಿ ನ್ಯಾಯಾಂಗದ ಹಸ್ತಕ್ಷೇಪವನ್ನು ಸ್ಪಷ್ಟವಾಗಿ ನಿರ್ಬಂಧಿಸುತ್ತದೆ. ಮತದಾರರ ಪಟ್ಟಿ ತಯಾರಿಸುವುದು ಚುನಾವಣಾ ಪ್ರಕ್ರಿಯೆಯ ಭಾಗವಾಗಿರುವುದರಿಂದ, ಅದನ್ನು ಕ್ರಿಮಿನಲ್ ನ್ಯಾಯಾಲಯದಲ್ಲಿ ಪ್ರಶ್ನಿಸುವುದು ಅಸಂವಿಧಾನಿಕ ಎಂದು ಸೋನಿಯಾ ಗಾಂಧಿ ಪ್ರತಿಪಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...