Homeಕರ್ನಾಟಕಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ಹೈಕೋರ್ಟ್ ನೋಟಿಸ್ : ಏನಿದು ಹೊಸ ಬೆಳವಣಿಗೆ?

ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ಹೈಕೋರ್ಟ್ ನೋಟಿಸ್ : ಏನಿದು ಹೊಸ ಬೆಳವಣಿಗೆ?

- Advertisement -
- Advertisement -

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ವಿಶೇಷ ಸಿಬಿಐ ನ್ಯಾಯಾಲಯ ಹೊರಡಿಸಿದ ನಿರ್ದೇಶನಗಳನ್ನು ಜಾರಿಗೆ ತರುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ ಕೇಂದ್ರ ತನಿಖಾ ದಳ (ಸಿಬಿಐ) ಮತ್ತು ಅದರ ಚೆನ್ನೈ ಮೂಲದ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ನೋಟಿಸ್ ಜಾರಿ ಮಾಡಿದೆ ಎಂದು blrpost.com ವರದಿ ಮಾಡಿದೆ.

ಸೌಜನ್ಯಳ ತಾಯಿ ಕುಸುಮಾವತಿಯವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಅದರಲ್ಲಿ ಮುಖ್ಯವಾಗಿ ವಿಶೇಷ ಸಿಬಿಐ ನ್ಯಾಯಾಲಯವು ಜೂನ್ 16, 2023ರಂದು ನೀಡಿದ ತೀರ್ಪನ್ನು ಜಾರಿಗೊಳಿಸುವಂತೆ ಕೋರಿದ್ದಾರೆ. ಸಿಬಿಐ ನ್ಯಾಯಾಲಯವು ಸೌಜನ್ಯ ಪ್ರಕರಣದ “ದೋಷಪೂರಿತ ಮತ್ತು ಕಳಪೆ ತನಿಖೆ” ನಡೆಸಿದ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿತ್ತು. ಅಲ್ಲದೆ, ತನಿಖಾಧಿಕಾರಿಗಳು ಎಸಗಿರುವ ಲೋಪದೋಷಗಳು ಮತ್ತು ತಪ್ಪುಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಈ ವಿಷಯವನ್ನು ಖುಲಾಸೆ ಸಮಿತಿ ಮುಂದೆ ಮಂಡಿಸಬೇಕು ಎಂದು ನಿರ್ದೇಶನ ನೀಡಿತ್ತು. ಇದನ್ನು ಜಾರಿಗೆ ತರಬೇಕೆಂದು ಕುಸುಮಾವತಿ ಮನವಿ ಮಾಡಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಕುಸುಮಾವತಿ ಅವರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಂ ಶ್ಯಾಮ್ ಪ್ರಸಾದ್ ಅವರು, ರಾಜ್ಯ ಗೃಹ ಇಲಾಖೆ, ಪೊಲೀಸ್ ಮಹಾನಿರ್ದೇಶಕರು, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಅಪರಾಧ ಮತ್ತು ತಾಂತ್ರಿಕ ಸೇವೆಗಳು), ಪೊಲೀಸ್ ಮಹಾನಿರ್ದೇಶಕರು (ಪಶ್ಚಿಮ ವಲಯ), ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ದೆಹಲಿ ಮತ್ತು ಚೆನ್ನೈನಲ್ಲಿರುವ ಸಿಬಿಐ ಘಟಕಗಳು ಸೇರಿದಂತೆ ಹಲವು ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಈ ವಿಷಯವನ್ನು ಫೆಬ್ರವರಿ 23ಕ್ಕೆ ಮುಂದೂಡಲಾಗಿದೆ.

ಕುಸುಮಾವತಿ ಅವರ ಪರ ಹೈಕೋರ್ಟ್‌ಗೆ ಹಾಜರಾದ ವಕೀಲ ಎಂ.ಆರ್ ಬಾಲಕೃಷ್ಣ ಅವರು, ಸಿಬಿಐ ಚೌಕಟ್ಟಿನಡಿಯಲ್ಲಿ ಖುಲಾಸೆ ಸಮಿತಿ ಅಸ್ತಿತ್ವದಲ್ಲಿದೆಯೇ ಎಂಬುವುದು ಸ್ಪಷ್ಟವಾಗಿಲ್ಲ ಮತ್ತು ಇದನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸಿದರೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಎಂದು ಹೇಳಿರುವುದಾಗಿ blrpost.com ಉಲ್ಲೇಖಿಸಿದೆ.

ಪ್ರಕರಣದ ಹಿನ್ನೆಲೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ (ಎಸ್‌ಡಿಎಂ) ಪಿಯುಸಿ ವಿದ್ಯಾರ್ಥಿನಿ ಸೌಜನ್ಯ 2012ರ ಅಕ್ಟೋಬರ್‌ 9ರಂದು ನಾಪತ್ತೆಯಾಗಿದ್ದರು. ಮರು ದಿನ ಆಕೆಯ ಮೃತದೇಹ ಧರ್ಮಸ್ಥಳದ ಸ್ನಾನಘಟ್ಟ ಸಮೀಪದ ಮಣ್ಣಸಂಕ ಬಳಿ ಪತ್ತೆಯಾಗಿತ್ತು. ಆಕೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಬೆಳ್ತಂಗಡಿ ಠಾಣೆಯಲ್ಲಿ ಮೊದಲಿಗೆ ಸೌಜನ್ಯ ತಂದೆ ಚಂದ್ರಪ್ಪ ಗೌಡ ಅವರು ನಾಪತ್ತೆ ದೂರು ದಾಖಲಿಸಿದ್ದರು. ನಂತರ ಅದನ್ನು ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನಾಗಿ ಪರಿವರ್ತಿಸಲಾಗಿತ್ತು.

ಈ ಪ್ರಕರಣವನ್ನು 2013ರಲ್ಲಿ ಸಿಬಿಐಗೆ ವರ್ಗಾಯಿಸಲಾಗಿತ್ತು. ನಂತರ 2015ರಲ್ಲಿ ಮಂಗಳೂರಿನಿಂದ ಬೆಂಗಳೂರಿನ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಿ.ಬಿ ಸಂತೋಷ್‌ ಅವರು 2023ರಲ್ಲಿ ಆರೋಪಿ ಸಂತೋಷ ರಾವ್‌ ಅವರನ್ನು ಅತ್ಯಾಚಾರ (ಐಪಿಸಿ ಸೆಕ್ಷನ್‌ 376) ಮತ್ತು ಕೊಲೆ (ಐಪಿಸಿ ಸೆಕ್ಷನ್‌ 302) ಪ್ರಕರಣದಲ್ಲಿ ನಿರ್ದೋಷಿ ಎಂದು ಘೋಷಿಸಿದ್ದರು. ಅಲ್ಲದೇ, 11 ವರ್ಷಗಳಿಂದ ಜೈಲಿನಲ್ಲಿದ್ದ ಸಂತೋಷ್‌ ರಾವ್‌ ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ನಿರ್ದೇಶಿಸಿದ್ದರು.

ಈ ವೇಳೆ ಪ್ರಕರಣದ ತನಿಖೆಯನ್ನು ತೀವ್ರವಾಗಿ ಟೀಕಿಸಿದ್ದ ನ್ಯಾಯಾಧೀಶರು, ವೈಜ್ಞಾನಿಕ ಪುರಾವೆಗಳ ವೈಫಲ್ಯ ಮತ್ತು ಗಂಭೀರ ಕಾರ್ಯವಿಧಾನದ ಲೋಪಗಳನ್ನು ಗಮನಿಸಿ, ತಪ್ಪು ಮಾಡಿದ ಅಧಿಕಾರಿಗಳ ಮೇಲೆ ಹೊಣೆಗಾರಿಕೆಯನ್ನು ಹೊರಿಸಬೇಕೆಂದು ನಿರ್ದೇಶಿಸಿದ್ದರು.

ಸಂತೋಷ್ ರಾವ್ ಖುಲಾಸೆಯನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ನಂತರ ಹೈಕೋರ್ಟ್ ವಜಾಗೊಳಿಸಿತ್ತು. ವಿಚಾರಣಾ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿತ್ತು.

ಈಗ ಸಲ್ಲಿಸಲಾಗಿರುವ ಹೊಸ ಅರ್ಜಿಯ ಮುಖ್ಯ ಉದ್ದೇಶವೆಂದರೆ, ವಿಶೇಷ ನ್ಯಾಯಾಲಯವು ಈ ಹಿಂದೆ ನೀಡಿದ್ದ ಹೊಣೆಗಾರಿಕೆಯ ಕ್ರಮಗಳು (ತನಿಖಾ ಲೋಪವೆಸಗಿದ ಅಧಿಕಾರಿಗಳ ಮೇಲೆ ಕ್ರಮ) ಕೇವಲ ಕಾಗದದ ಮೇಲೆ ಉಳಿಯಬಾರದು ಮತ್ತು ಅವುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂಬುದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...