Homeಮುಖಪುಟಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

- Advertisement -
- Advertisement -

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.9) ಹಲವಾರು ನಿರ್ದೇಶನಗಳನ್ನು ನೀಡಿದೆ.

ಚುನಾವಣಾ ಆಯೋಗವು ನಿಯೋಜಿಸಿರುವ ಮೈಕ್ರೋ-ಅಬ್ಸರ್ವರ್‌ಗಳ (ಸೂಕ್ಷ್ಮ ವೀಕ್ಷಕರು) ಬದಲಿಗೆ ಗ್ರೂಪ್ ಬಿ ಅಧಿಕಾರಿಗಳನ್ನು ಒದಗಿಸುವಂತೆ ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಮತದಾರರ ಪಟ್ಟಿಗೆ ಸಂಬಂಧಿಸಿದ ಹಕ್ಕುಗಳು ಮತ್ತು ಆಕ್ಷೇಪಣೆಗಳ ಬಗ್ಗೆ ಅಂತಿಮ ಆದೇಶಗಳನ್ನು ಹೊರಡಿಸುವ ಅಧಿಕಾರ ಕೇವಲ ಚುನಾವಣಾ ನೋಂದಣಾಧಿಕಾರಿಗಳಿಗೆ ಮಾತ್ರ ಇರುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಮೈಕ್ರೋ-ಅಬ್ಸರ್ವರ್‌ಗಳು ಕೇವಲ ಇವರಿಗೆ ಸಹಾಯ ಮಾಡಬಹುದಷ್ಟೇ ಹೊರತು, ಅಂತಿಮ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಇರುವುದಿಲ್ಲ ಎಂದಿದೆ.

ಇದೇ ವೇಳೆ, ಎಸ್‌ಐಆರ್ ಅಧಿಕಾರಿಗಳ ವಿರುದ್ಧದ ಬೆದರಿಕೆ ಮತ್ತು ಹಿಂಸಾಚಾರವನ್ನು ತಡೆಯುವಲ್ಲಿ ವಿಫಲವಾಗಿರುವ ಬಗ್ಗೆ ಚುನಾವಣಾ ಆಯೋಗ ವ್ಯಕ್ತಪಡಿಸಿರುವ ಕಳವಳಗಳಿಗೆ ಪ್ರತಿಕ್ರಿಯಿಸಿ, ವೈಯಕ್ತಿಕ ಅಫಿಡವಿಟ್ ಸಲ್ಲಿಸುವಂತೆ ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ ನ್ಯಾಯಾಲಯ ನಿರ್ದೇಶಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು, ಫೆಬ್ರವರಿ 14 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲು ನಿಗದಿಯಾಗಿದ್ದ ಗಡುವನ್ನು ಕನಿಷ್ಠ ಒಂದು ವಾರಗಳ ಕಾಲ ವಿಸ್ತರಿಸಲು ನಿರ್ದೇಶಿಸಿದೆ. ದಾಖಲೆಗಳ ಪರಿಶೀಲನೆ ಮತ್ತು ಆಕ್ಷೇಪಣೆಗಳ ವಿಲೇವಾರಿಗೆ ಹೆಚ್ಚಿನ ಸಮಯ ಬೇಕಿರುವುದರಿಂದ ಈ ನಿರ್ದೇಶನ ನೀಡಿದೆ.

ಎಸ್‌ಐಆರ್ ಪ್ರಕ್ರಿಯೆಯನ್ನು ಸುಗಮಗೊಳಿಸಲು ಮತ್ತು ವಿವಿಧ ಪಕ್ಷಕಾರರಿಂದ ಉಂಟಾದ ಆತಂಕಗಳನ್ನು ಪರಿಹರಿಸುವ ಉದ್ದೇಶದಿಂದ ನ್ಯಾಯಾಲಯವು ಈ ಕೆಳಗಿನ ನಿರ್ದೇಶನಗಳನ್ನು ನೀಡಿದೆ.

1.ಇಂದು ಹಸ್ತಾಂತರಿಸಲಾದ ಪಟ್ಟಿಯಲ್ಲಿರುವ ಎಲ್ಲಾ 8,550 ಗ್ರೂಪ್ ಬಿ ಅಧಿಕಾರಿಗಳು ನಾಳೆ ಸಂಜೆ 5 ಗಂಟೆಯೊಳಗೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಅಥವಾ ಚುನಾವಣಾ ನೋಂದಣಾಧಿಕಾರಿಗಳ (ಇಆರ್‌ಒ) ಮುಂದೆ ಕರ್ತವ್ಯಕ್ಕೆ ಹಾಜರಾಗುವುದನ್ನು ರಾಜ್ಯ ಸರ್ಕಾರ ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಿದೆ. ಈಗ ಒದಗಿಸಲಾದ ಈ ಅಧಿಕಾರಿಗಳ ಸೇವೆಯನ್ನು ಬಳಸಿಕೊಳ್ಳಲು ಅಥವಾ ಪ್ರಸ್ತುತ ಇರುವ ಇಆರ್‌ಒ ಮತ್ತು ಸಹಾಯಕ ಇಆರ್‌ಒಗಳನ್ನು ಅವರ ಅರ್ಹತೆಗೆ ಅನುಗುಣವಾಗಿ ಬದಲಾಯಿಸಲು ಚುನಾವಣಾ ಆಯೋಗಕ್ಕೆ ಸಂಪೂರ್ಣ ಅಧಿಕಾರ ಮತ್ತು ವಿವೇಚನೆಯನ್ನು ನೀಡಲಾಗಿದೆ.

2.ರಾಜ್ಯ ಸರ್ಕಾರ ಒದಗಿಸಿರುವ 8,500 ಅಧಿಕಾರಿಗಳ ಪಟ್ಟಿಯನ್ನು ಪರಿಶೀಲಿಸಿ, ಅವರ ಬಯೋಡೇಟಾ ಮತ್ತು ಕೆಲಸದ ಅನುಭವದ ಆಧಾರದ ಮೇಲೆ ಚುನಾವಣಾ ಆಯೋಗವು ಅಧಿಕಾರಿಗಳನ್ನು ಆಯ್ಕೆ ಮಾಡಬಹುದು. ಈ ಅಧಿಕಾರಿಗಳ ಸಂಖ್ಯೆಯು ಈಗಾಗಲೇ ನಿಯೋಜಿಸಲಾದ ಮೈಕ್ರೋ-ಅಬ್ಸರ್ವರ್‌ಗಳ ಸಂಖ್ಯೆಗೆ ಸಮನಾಗಿರಬೇಕು.

3.ಈಗಾಗಲೇ ಮೈಕ್ರೋ-ಅಬ್ಸರ್ವರ್‌ ಆಗಿ ನಿಯೋಜಿಸಲಾದವರ ಜವಾಬ್ದಾರಿಯು ಡಿಇಒ/ಇಆರ್‌ಒಗಳಿಗೆ ಸಹಾಯ ಮಾಡುವುದು ಮಾತ್ರವಾಗಿದೆ. ಅಂತಿಮ ನಿರ್ಧಾರವನ್ನು ಇಆರ್‌ಒಗಳು ಮಾತ್ರ ತೆಗೆದುಕೊಳ್ಳಬೇಕು.

4.ದಾಖಲೆಗಳ ಪರಿಶೀಲನೆಯನ್ನು ಪೂರ್ಣಗೊಳಿಸಲು ಮತ್ತು ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲು ಜಿಲ್ಲಾ ಚುನಾವಣಾಧಿಕಾರಿಗಳಿಗೆ (ಡಿಇಒ) ಮತ್ತು ಚುನಾವಣಾ ನೋಂದಣಾಧಿಕಾರಿಗಳಿಗೆ (ಇಆರ್‌ಒ), ನಿಗದಿತ ದಿನಾಂಕವಾದ ಫೆಬ್ರವರಿ 14 ರ ನಂತರ ಕನಿಷ್ಠ ಒಂದು ವಾರ ಹೆಚ್ಚುವರಿ ಕಾಲಾವಕಾಶವನ್ನು ನೀಡಬೇಕು ಎಂದು ನ್ಯಾಯಾಲಯವು ನಿರ್ದೇಶಿಸಿದೆ.

5.ಅರ್ಜಿದಾರರ ಪರವಾಗಿ ಹಾಜರಾದವರು ಕೆಲವು ದಾಖಲೆಗಳನ್ನು ಉಲ್ಲೇಖಿಸಿ, ಮೈಕ್ರೋ-ಅಬ್ಸರ್ವರ್‌ಗಳೇ (ಸೂಕ್ಷ್ಮ ವೀಕ್ಷಕರು) ಅಂತಿಮ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಹೊಂದಿದ್ದಾರೆ ಎಂದು ವಾದಿಸಿದ್ದರು. ಆದರೆ, ಈ ಬಗ್ಗೆ ಚುನಾವಣಾ ಆಯೋಗವು ಸ್ಪಷ್ಟನೆ ನೀಡಿದ್ದು, ಮೈಕ್ರೋ-ಅಬ್ಸರ್ವರ್‌ಗಳು ಕೇವಲ ನಿಗದಿತ ಶಾಸನಬದ್ಧ ಅಧಿಕಾರಿಗಳಿಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಸಹಾಯ ಮಾಡುತ್ತಾರಷ್ಟೇ ಹೊರತು, ಅವರೇ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಹೊಂದಿಲ್ಲ ಎಂದು ತಿಳಿಸಿದೆ.

6.ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಹಿಂಸಾಚಾರ ನಡೆದಿದೆ ಎಂಬ ಚುನಾವಣಾ ಆಯೋಗದ ಹೇಳಿಕೆಗಳಿಗೆ ಸಂಬಂಧಿಸಿದಂತೆ, ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ನ್ಯಾಯಾಲಯವು ಶೋಕಾಸ್ ನೋಟಿಸ್ ನೀಡಿದ್ದು, ವೈಯಕ್ತಿಕ ಅಫಿಡವಿಟ್ ಸಲ್ಲಿಸುವಂತೆ ನಿರ್ದೇಶಿಸಿದೆ. ಚುನಾವಣಾ ಆಯೋಗವು ದೂರು ನೀಡಿದ್ದರೂ ಸಹ ಯಾವುದೇ ಎಫ್‌ಐಆರ್ ದಾಖಲಿಸಿಲ್ಲ ಎಂಬ ಅಂಶವನ್ನು ನ್ಯಾಯಾಲಯವು ಗಂಭೀರವಾಗಿ ಪರಿಗಣಿಸಿದೆ. ಮತದಾರರ ಪಟ್ಟಿಗೆ ಸಂಬಂಧಿಸಿದ ‘ಫಾರ್ಮ್ 7’ ಆಕ್ಷೇಪಣೆ ಪತ್ರಗಳನ್ನು ಸಾಮೂಹಿಕವಾಗಿ ಸುಟ್ಟುಹಾಕಲಾಗಿದೆ ಎಂಬ ಗಂಭೀರ ಆರೋಪಗಳನ್ನೂ ನ್ಯಾಯಾಲಯ ಗಮನಿಸಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಂತೆ ಜನವರಿ 19 ರಂದೇ ಡಿಜಿಪಿಗೆ ನಿರ್ದಿಷ್ಟ ನಿರ್ದೇಶನ ನೀಡಿದ್ದರೂ, ಅದನ್ನು ಪಾಲಿಸದಿರುವ ಬಗ್ಗೆ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ.

8.ಶಾಸನಬದ್ಧ ನಿಯಮಗಳ ಪ್ರಕಾರ ಸಲ್ಲಿಕೆಯಾಗಿರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದು ಚುನಾವಣಾ ನೋಂದಣಾಧಿಕಾರಿಗಳ (ಇಆರ್‌ಒ) ಕರ್ತವ್ಯವಾಗಿದೆ. ಆಕ್ಷೇಪಣೆ ಸಲ್ಲಿಸಿದ ವ್ಯಕ್ತಿಗಳು ವೈಯಕ್ತಿಕ ವಿಚಾರಣೆಗೆ ಹಾಜರಾಗಲಿ ಅಥವಾ ಬಿಡಲಿ, ಅವರ ಅನುಪಸ್ಥಿತಿಯಲ್ಲೂ ಆಕ್ಷೇಪಣೆಗಳನ್ನು ಪರಿಶೀಲಿಸುವುದು ಕಡ್ಡಾಯ ಎಂದು ನ್ಯಾಯಾಲಯ ತಿಳಿಸಿದೆ. ತೊಂದರೆಗೊಳಗಾದ ವ್ಯಕ್ತಿಗಳ ದಾಖಲೆಗಳನ್ನು ಹೇಗೆ ಪರಿಶೀಲಿಸಲಾಗುತ್ತದೆಯೋ, ಹಾಗೆಯೇ ಆಕ್ಷೇಪಣೆ ಸಲ್ಲಿಸಿದವರ ದಾಖಲೆಗಳ ನೈಜತೆಯನ್ನೂ ಅಧಿಕಾರಿಗಳು ಕಡ್ಡಾಯವಾಗಿ ಪರಿಶೀಲಿಸಬೇಕು ಎಂದಿದೆ.

9.ಕರ್ತವ್ಯ ನಿರ್ವಹಿಸದ ಅಧಿಕಾರಿಗಳನ್ನು ಬದಲಿಸಲು ಚುನಾವಣಾ ಆಯೋಗಕ್ಕೆ ಸ್ವಾತಂತ್ರ್ಯವಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

    LEAVE A REPLY

    Please enter your comment!
    Please enter your name here

    - Advertisment -

    ‘168 ಮಕ್ಕಳನ್ನು ಕೊಂದವರ ನೆನಪಿಡಿ’ : ಇರಾನ್‌ನಿಂದ ಅಮೆರಿಕ ಅಧಿಕಾರಿಗಳ ಫೋಟೋ ಬಿಡುಗಡೆ

    ಬರೋಬ್ಬರಿ 168 ಕಂದಮ್ಮಗಳ ಸಾವಿಗೆ ಕಾರಣವಾದ, ಮಿನಾಬ್‌ನ ಶಾಲೆ ಮೇಲಿನ ಕ್ಷಿಪಣಿ ದಾಳಿಗೆ ಅಮೆರಿಕದ ನೌಕಾಪಡೆಯ ಅಧಿಕಾರಿಗಳಾದ ಕಮಾಂಡರ್ ಲೀ ಆರ್. ಟೇಟ್ ಮತ್ತು ಯುಎಸ್ಎಸ್ ಸ್ಪ್ರೂಯನ್ಸ್‌ನ ಎಕ್ಸಿಕ್ಯೂಟಿವ್ ಆಫೀಸರ್ ಜೆಫ್ರಿ ಇ....

    ಕೇರಳ ವಿಧಾನಸಭಾ ಚುನಾವಣೆ 2026 | ‘ಎಲ್‌ಡಿಎಫ್, ಯುಡಿಎಫ್ ದಶಕಗಳಿಂದ ರಾಜ್ಯವನ್ನು ಲೂಟಿ ಮಾಡಿವೆ’: ಪ್ರಧಾನಿ ಮೋದಿ

    ಕೇರಳ ವಿಧಾನಸಭಾ ಚುನಾವಣೆ 2026 ರ ಹಿನ್ನೆಲೆಯಲ್ಲಿ ಪಾಲಕ್ಕಾಡ್‌ನಲ್ಲಿ ಭಾನುವಾರ ಬೃಹತ್ ಚುನಾವಣಾ ರ್ಯಾಲಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಯುಡಿಎಫ್ ಮತ್ತು ಎಲ್‌ಡಿಎಫ್ ಎರಡರ ಮೇಲೂ ತೀವ್ರ ದಾಳಿ ನಡೆಸಿದ್ದಾರೆ. ಈ...

    ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

    ದಕ್ಷಿಣ ಲೆಬನಾನ್‌ನಲ್ಲಿ ಶನಿವಾರ (ಮಾ.28) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ ಮೂವರು ಪತ್ರಕರ್ತರು ಮತ್ತು ಒಂಬತ್ತು ಅರೆವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಜೆಝೈನ್ ರಸ್ತೆಯಲ್ಲಿ ಪತ್ರಕರ್ತರ...

    ಉತ್ತರ ಪ್ರದೇಶ: 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ತಲೆ ಕತ್ತರಿಸಿ, ಮನೆಗೆ ತೆಗೆದುಕೊಂಡು ಹೋಗಿದ್ದ ವ್ಯಕ್ತಿ ಬಂಧನ 

    ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶನಿವಾರ 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ಶಿರಚ್ಛೇದ ಮಾಡಲಾಗಿತ್ತು. 50 ವರ್ಷದ ಕೊಲೆಗಾರ, ಆ ವ್ಯಕ್ತಿಯ ಗಂಟಲು ಕತ್ತರಿಸಿ, ತಲೆ ಕತ್ತರಿಸಿ, ನಂತರ ಅದನ್ನು ತನ್ನ...

    ಗ್ಯಾಸ್‌ ಸಿಲಿಂಡರ್‌ಗಾಗಿ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ ವ್ಯಕ್ತಿ : ಕುಸಿದು ಬಿದ್ದು ಸ್ಥಳದಲ್ಲೇ ಸಾವು!

    ಎಲ್‌ಪಿಜಿ ಸಿಲಿಂಡರ್ ಪಡೆಯಲು 41.2 ಡಿಗ್ರಿ ಸೆಲ್ಸಿಯಸ್ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ 55 ವರ್ಷದ ವ್ಯಕ್ತಿ, ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಅಕೋಲಾ ಬಳಿ ನಡೆದಿದೆ. ಅಕೋಲಾದಿಂದ...

    ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ: ಆರ್‌ಎಸ್‌ಎಸ್ ನಾಯಕ ಸೇರಿ 30 ಮಂದಿ ಬಂಧನ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಪೊಲೀಸರು

    ಶುಕ್ರವಾರ ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ಹಿಂದೂತ್ವ ಗುಂಪುಗಳು ನಡೆಸಿದ ರಾಮನವಮಿ ಮೆರವಣಿಗೆಯಲ್ಲಿ ಮುಸ್ಲಿಂ ಅಂಗಡಿಗಳು ಮತ್ತು ಆಸ್ತಿಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಸುಮಾರು 30 ಜನರು ಗಾಯಗೊಂಡು, ಆ ಪ್ರದೇಶದಲ್ಲಿ...

    ಅತ್ಯಾಚಾರ ಪ್ರಕರಣ: ಸ್ವಘೋಷಿತ ‘ದೇವಮಾನವ’ ಅಶೋಕ್ ಖರತ್ ಪೊಲೀಸ್ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿದ ನಾಸಿಕ್ ಕೋರ್ಟ್

    ನಾಸಿಕ್: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿಯನ್ನು ನಾಸಿಕ್ ನ್ಯಾಯಾಲಯವು ಭಾನುವಾರ ಏಪ್ರಿಲ್ 1 ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ನಾಶಿಕ್ ಜಿಲ್ಲೆಯ ಮಿರ್ಗಾಂವ್‌ನಲ್ಲಿರುವ ದೇವಾಲಯ...

    ಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

    ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ. ಚೆನ್ನೈ ಜಿಲ್ಲೆಯ ಪೆರಂಬೂರು ಮತ್ತು ತಿರುಚಿರಾಪಳ್ಳಿ...

    ಲೈಂಗಿಕ ಪ್ರಕರಣದ ಆರೋಪಿ ಅಶೋಕ್ ಖರತ್ ಅವರನ್ನು ರಕ್ಷಣೆಯಲ್ಲಿ ಇಡಬೇಕು; ಕಸ್ಟಡಿಯಲ್ಲಿ ಕೊಲೆಯಾಗುವ ಸಾಧ್ಯತೆ ಹೆಚ್ಚಿದೆ: ಪ್ರಕಾಶ್ ಅಂಬೇಡ್ಕರ್

    ಮುಂಬೈ: ಕಾಂಗ್ರೆಸ್ ನಂತರ, ವಂಚಿತ್ ಬಹುಜನ ಅಘಾಡಿ ಸ್ಥಾಪಕ-ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು, ಲೈಂಗಿಕ ದೌರ್ಜನ್ಯ ಪ್ರಕರಣಗಳ ಸರಣಿಯಲ್ಲಿ ಬಂಧಿಸಲ್ಪಟ್ಟಿರುವ ಸ್ವಯಂ ಘೋಷಿತ ದೇವಮಾನವ 'ಕ್ಯಾಪ್ಟನ್' ಅಶೋಕ್ ಖರತ್ ಅವರನ್ನು ಪೊಲೀಸ್ ಮತ್ತು...

    ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

    ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ....