Homeಮುಖಪುಟಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ಪ್ರತಿಪಕ್ಷಗಳು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ಪ್ರತಿಪಕ್ಷಗಳು

- Advertisement -
- Advertisement -

ವಿರೋಧ ಪಕ್ಷಗಳು ಪ್ರತಿಭಟನೆ ಮುಂದುವರಿಸಿದ ಹಿನ್ನೆಲೆ, ಲೋಕಸಭೆಯ ಬಜೆಟ್ ಅಧಿವೇಶನದ 10ನೇ ದಿನದ ಕಲಾಪವೂ ಸೋಮವಾರ (ಫೆ.10) ಪದೇ ಪದೇ ಮುಂದೂಡಿಕೆಯಾಯಿತು.

ಎಂದಿನಂತೆ ಬೆಳಿಗ್ಗೆ 11 ಗಂಟೆಗೆ ಕಲಾಪ ಆರಂಭವಾದಾಗ ವಿರೋಧ ಪಕ್ಷಗಳ ಸದಸ್ಯರು ಪ್ರತಿಭಟನೆ ಆರಂಭಿಸಿದರು. ಗದ್ದಲ ಹೆಚ್ಚಾದಾಗ ಸಭಾಧ್ಯಕ್ಷರ ಪೀಠದಲ್ಲಿದ್ದ ಸಂಸದ ಪಿ.ಸಿ ಮೋಹನ್ ಸದನವನ್ನು ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಿದರು.

ಮಧ್ಯಾಹ್ನ 12 ಗಂಟೆಗೆ ಸದನ ಮತ್ತೆ ಸೇರಿದಾಗ ಕೆಲವು ಸಮಿತಿಗಳ ವರದಿಗಳನ್ನು ಮಂಡಿಸಲಾಯಿತು. ವಿರೋಧ ಪಕ್ಷದ ಸದಸ್ಯರು ಮರಳಿ ಪ್ರತಿಭಟನೆ ಆರಂಭಿಸಿದ ಕಾರಣ, ಕಲಾಪವನ್ನು ತಕ್ಷಣವೇ ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು.

ಸ್ಪೀಕರ್ ವಿರುದ್ದ ಅವಿಶ್ವಾಸ ನಿರ್ಣಯ ನೋಟಿಸ್

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಇಂದು (ಫೆ.10) ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯದ ನೋಟಿಸ್ ನೀಡಿವೆ. ಲೋಕಸಭೆಯಲ್ಲಿ ಕಾಂಗ್ರೆಸ್‌ನ ಮುಖ್ಯ ಸಚೇತಕ ಕೆ. ಸುರೇಶ್ ಮತ್ತು ಸಂಸದ ಮುಹಮ್ಮದ್ ಜಾವೇದ್ ಅವರು ಲೋಕಸಭೆಯ ಕಾರ್ಯದರ್ಶಿ ಜನದಲ್ ಉತ್ಪಲ್ ಕುಮಾರ್ ಸಿಂಗ್ ಅವರಿಗೆ ಅಧಿಕೃತವಾಗಿ ಈ ನೋಟಿಸ್ ಹಸ್ತಾಂತರಿಸಿದ್ದಾರೆ.

ಈ ನೋಟಿಸ್‌ಗೆ 100ಕ್ಕೂ ಹೆಚ್ಚು ಸಂಸದರು (ಸುಮಾರು 106 ಸಂಸದರು) ಸಹಿ ಹಾಕಿದ್ದಾರೆ. ನಿಯಮದ ಪ್ರಕಾರ ಸ್ಪೀಕರ್ ವಿರುದ್ಧ ಇಂತಹ ನಿರ್ಣಯ ಮಂಡಿಸಲು ಕನಿಷ್ಠ 100 ಸಂಸದರ ಬೆಂಬಲ ಅಗತ್ಯವಿದೆ.

ಕಾಂಗ್ರೆಸ್ ನೇತೃತ್ವದ ಈ ನಿರ್ಣಯಕ್ಕೆ ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಬೆಂಬಲ ನೀಡಿವೆ. ಆದರೆ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಈ ನೋಟಿಸ್‌ಗೆ ಸಹಿ ಹಾಕಿಲ್ಲ ಎಂದು ವರದಿಯಾಗಿದೆ.

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರಿಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ ಮತ್ತು ವಿರೋಧ ಪಕ್ಷದ ದನಿಯನ್ನು ಹತ್ತಿಕ್ಕಲಾಗುತ್ತಿದೆ ಎಂಬುವುದು ವಿರೋಧ ಪಕ್ಷಗಳ ಪ್ರಮುಖ ಆರೋಪವಾಗಿದೆ. ಸಂವಿಧಾನದ ವಿಧಿ 94(ಸಿ) ಅನ್ವಯ, ಈ ನೋಟಿಸ್ ನೀಡಿದ 14 ದಿನಗಳ ನಂತರವಷ್ಟೇ ನಿರ್ಣಯದ ಮೇಲೆ ಚರ್ಚೆ ಮತ್ತು ಮತದಾನ ನಡೆಯಲು ಸಾಧ್ಯವಿದೆ.

ಕಲಾಪ ಆರಂಭವಾಗುವ ಮೊದಲು ವಿರೋಧ ಪಕ್ಷದ ‘ಇಂಡಿಯಾ’ ಮೈತ್ರಿಕೂಟದ ನಾಯಕರು ಸಭೆ ನಡೆಸಿ, ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆ ಚರ್ಚಿಸಿದ್ದರು.

ಮುಂದೂಡಿಕೆ ನೋಟಿಸ್ ಸಲ್ಲಿಸಿದ ಮನೀಶ್ ತಿವಾರಿ

ಈ ನಡುವೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಅವರು ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದದ ಬಗ್ಗೆ ಚರ್ಚೆ ಕೋರಿ ‘ವಜಾ ನಿರ್ಣಯ’ ನೋಟಿಸ್ ನೀಡಿದ್ದಾರೆ ಎಂದು ವರದಿಯಾಗಿದೆ.

ರಷ್ಯಾದಿಂದ ತೈಲ ಖರೀದಿ ನಿಲ್ಲಿಸುವ ಬಗ್ಗೆ ಮತ್ತು ಅಮೆರಿಕದ ಕೃಷಿ ಉತ್ಪನ್ನಗಳ ಮೇಲಿನ ಸುಂಕ ಕಡಿತದ ಬಗ್ಗೆ ಭಾರತವು ಅಮೆರಿಕಕ್ಕೆ ಭರವಸೆ ನೀಡಿದೆಯೇ ಎಂಬುವುದರ ಕುರಿತು ಸರ್ಕಾರ ತಕ್ಷಣವೇ ಸ್ಪಷ್ಟನೆ ನೀಡಬೇಕೆಂದು ಮನೀಶ್ ತಿವಾರಿ ಒತ್ತಾಯಿಸಿದ್ದಾರೆ. ಈ ವಿಷಯದ ಬಗ್ಗೆ ಚರ್ಚೆ ನಡೆಸುವಂತೆ ಅವರು ನೋಟಿಸ್ ನೀಡುತ್ತಿರುವುದು ಇದು ಮೂರನೇ ಬಾರಿಯಾಗಿದೆ ಎಂದು ವರದಿಗಳು ಹೇಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...