Homeಮುಖಪುಟವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

- Advertisement -
- Advertisement -

‘ಪಕ್ಷಪಾತ’ದ ಆರೋಪ ಹೊರಿಸಿ ವಿಪಕ್ಷಗಳು ‘ಅವಿಶ್ವಾಸ ನೋಟಿಸ್’ ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್ ಮತ್ತು ಜಗದಾಂಬಿಕಾ ಪಾಲ್ ಕುಳಿತಿರುವುದು ಕಂಡು ಬಂತು.

ಬಜೆಟ್ ಅಧಿವೇಶನದ ಎರಡನೇ ಭಾಗದ ಮೊದಲ ದಿನವಾದ ಮಾರ್ಚ್ 9ರಂದು ವಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ ಮೇಲೆ ಚರ್ಚೆ ನಡೆಯಲಿದೆ. ಅಲ್ಲಿಯವರೆಗೆ ‘ನೈತಿಕ ಹೊಣೆ ಹೊತ್ತು’ ಸದನಕ್ಕೆ ಹಾಜರಾಗದಿರಲು ಸ್ಪೀಕರ್ ನಿರ್ಧರಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಅವಿಶ್ವಾಸ ನೋಟಿಸ್ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸದನದ ಪ್ರಧಾನ ಕಾರ್ಯದರ್ಶಿಗೆ ಸ್ಪೀಕರ್ ನಿರ್ದೇಶನ ನೀಡಿದ್ದಾರೆ. ನೋಟಿಸ್‌ನಲ್ಲಿ ಕೆಲವು ತಾಂತ್ರಿಕ ದೋಷಗಳಿವೆಯೆಂದು ಲೋಕಸಭಾ ಸಚಿವಾಲಯ ತಿಳಿಸಿದೆ. ಅದನ್ನು ಸರಿಪಡಿಸಿದ ನಂತರ ಮಾರ್ಚ್ 9ರಂದು ಚರ್ಚೆಗೆ ತೆಗೆದುಕೊಳ್ಳಲಾಗುತ್ತದೆ ಎಂದು ವರದಿಗಳು ಉಲ್ಲೇಖಿಸಿವೆ.

ಕಾಂಗ್ರೆಸ್‌ ನೇತೃತ್ವದ ಅವಿಶ್ವಾಸ ನಿರ್ಣಯದ ನೋಟಿಸ್‌ ಅನ್ನು ಮಂಗಳವಾರ (ಫೆ.10) ಲೋಕಸಭೆ ಸಚಿವಾಲಯಕ್ಕೆ ಸಲ್ಲಿಸಲಾಗಿದೆ. ಇದಕ್ಕೆ ವಿಪಕ್ಷಗಳ 118 ಸಂಸದರು ಸಹಿ ಹಾಕಿದ್ದಾರೆ.

ಸ್ಪೀಕರ್ ಓಂ ಬಿರ್ಲಾ ‘ಪಕ್ಷಪಾತ’ ಮಾಡುತ್ತಿದ್ದಾರೆ, ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ವಿಪಕ್ಷ ಸದಸ್ಯರಿಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ ಎನ್ನುವುದು ವಿಪಕ್ಷಗಳ ಪ್ರಮುಖ ಆರೋಪವಾಗಿದೆ.

ಲೋಕಸಭೆಯಲ್ಲಿ ರಾಹುಲ್ ಗಾಂಧಿ ಭಾಷಣ

ಗದ್ದಲದ ನಡುವೆಯೇ ಬುಧವಾರ (ಫೆ.11) ವಿಪಕ್ಷ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಮಾತನಾಡಿದರು. ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡ ಅವರು, ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಭಾರತ-ಅಮೆರಿಕ ವ್ಯಾಪಾರ ಒಪ್ಪಂದವನ್ನು “ಸಂಪೂರ್ಣ ಶರಣಾಗತಿ” ಎಂದು ಕರೆದು, ಇದರಿಂದ ಭಾರತದ ಇಂಧನ ಭದ್ರತೆ ಮತ್ತು ದತ್ತಾಂಶದ ಮೇಲೆ ಪೆಟ್ಟು ಬೀಳಲಿದೆ ಎಂದು ಹೇಳಿದರು.

ರಾಹುಲ್ ಗಾಂಧಿ ಮಾತನಾಡುವಾಗ ಸಚಿವರಾದ ಕಿರಣ್ ರಿಜಿಜು, ಪ್ರಲ್ಹಾದ್ ಜೋಶಿ ಸೇರಿದಂತೆ ಆಡಳಿತ ಪಕ್ಷದ ಸದಸ್ಯರು ಮಧ್ಯಪ್ರವೇಶಿಸಿ, ಹಲವು ವಿಷಯಗಳಿಗೆ ಆಕ್ಷೇಪ ವ್ಯಕ್ತಪಡಿಸಿದರು. ಸ್ಪೀಕರ್ ಪೀಠದಲ್ಲಿದ್ದ ಜಗದಾಂಬಿಕ ಪಾಲ್ ಕೂಡ ಕೆಲ ವಿಷಯಗಳನ್ನು ಉಲ್ಲೇಖಿಸಲು ರಾಹುಲ್ ಗಾಂಧಿಗೆ ಅವಕಾಶ ನಿರಾಕರಿಸಿದರು.

ಗದ್ದಲದ ನಡುವೆಯೇ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ ಅವರು ‘ಕೈಗಾರಿಕಾ ಸಂಬಂಧಗಳ ಸಂಹಿತೆ (ತಿದ್ದುಪಡಿ) ವಿಧೇಯಕ, 2026’ ಅನ್ನು ಸದನದಲ್ಲಿ ಮಂಡಿಸಿದರು.

8 ಸಂಸದರನ್ನು ಅಮಾನತುಗೊಳಿಸಿರುವುದನ್ನು ಖಂಡಿಸಿ ಮತ್ತು ವಿವಿಧ ವಿಷಯಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ವಿರೋಧ ಪಕ್ಷದ ಸದಸ್ಯರು ಇಂದೂ ಕೂಡ ಸದನದ ಬಾವಿಗಿಳಿದು ಪ್ರತಿಭಟಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣ: ಸ್ವಘೋಷಿತ ‘ದೇವಮಾನವ’ ಅಶೋಕ್ ಖರತ್ ಪೊಲೀಸ್ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿದ ನಾಸಿಕ್ ಕೋರ್ಟ್

ನಾಸಿಕ್: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿಯನ್ನು ನಾಸಿಕ್ ನ್ಯಾಯಾಲಯವು ಭಾನುವಾರ ಏಪ್ರಿಲ್ 1 ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ನಾಶಿಕ್ ಜಿಲ್ಲೆಯ ಮಿರ್ಗಾಂವ್‌ನಲ್ಲಿರುವ ದೇವಾಲಯ...

ಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ. ಚೆನ್ನೈ ಜಿಲ್ಲೆಯ ಪೆರಂಬೂರು ಮತ್ತು ತಿರುಚಿರಾಪಳ್ಳಿ...

ಲೈಂಗಿಕ ಪ್ರಕರಣದ ಆರೋಪಿ ಅಶೋಕ್ ಖರತ್ ಅವರನ್ನು ರಕ್ಷಣೆಯಲ್ಲಿ ಇಡಬೇಕು; ಕಸ್ಟಡಿಯಲ್ಲಿ ಕೊಲೆಯಾಗುವ ಸಾಧ್ಯತೆ ಹೆಚ್ಚಿದೆ: ಪ್ರಕಾಶ್ ಅಂಬೇಡ್ಕರ್

ಮುಂಬೈ: ಕಾಂಗ್ರೆಸ್ ನಂತರ, ವಂಚಿತ್ ಬಹುಜನ ಅಘಾಡಿ ಸ್ಥಾಪಕ-ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು, ಲೈಂಗಿಕ ದೌರ್ಜನ್ಯ ಪ್ರಕರಣಗಳ ಸರಣಿಯಲ್ಲಿ ಬಂಧಿಸಲ್ಪಟ್ಟಿರುವ ಸ್ವಯಂ ಘೋಷಿತ ದೇವಮಾನವ 'ಕ್ಯಾಪ್ಟನ್' ಅಶೋಕ್ ಖರತ್ ಅವರನ್ನು ಪೊಲೀಸ್ ಮತ್ತು...

ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ....

ಕಾಂಗ್ರೆಸ್ ಮುಸ್ಲಿಮರನ್ನು ದುರ್ಬಳಕೆ ಮಾಡಿಕೊಂಡಿದೆ: ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪ

ದಾವಣಗೆರೆ: ಕಾಂಗ್ರೆಸ್ ಪಕ್ಷವು ಇಷ್ಟು ವರ್ಷಗಳಿಂದ ಮುಸ್ಲಿಮರನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಮುಸ್ಲಿಮರು ತಮ್ಮೊಳಗೆ ಚರ್ಚಿಸುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅಭಿಪ್ರಾಯಪಟ್ಟಿದ್ದಾರೆ. ಆದ್ದರಿಂದ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ...

CNN ಪತ್ರಕರ್ತರ ಮೇಲೆ ಇಸ್ರೇಲಿ ಸೈನಿಕರಿಂದ ದಾಳಿ : ಮಾಧ್ಯಮ ಒಕ್ಕೂಟದಿಂದ ತೀವ್ರ ಖಂಡನೆ

ಆಕ್ರಮಿತ ಪಶ್ಚಿಮ ದಂಡೆಯಲ್ಲಿ ವರದಿ ಮಾಡುತ್ತಿದ್ದ ಸಿಎನ್‌ಎನ್‌ ಮಾಧ್ಯಮ ಸಂಸ್ಥೆಯ ಪತ್ರಕರ್ತರ ಮೇಲೆ ಇಸ್ರೇಲಿ ಸೈನಿಕರು ನಡೆಸಿದ ದೌರ್ಜನ್ಯವನ್ನು ಮಾಧ್ಯಮ ಒಕ್ಕೂಟ ಫಾರಿನ್ ಪ್ರೆಸ್ ಅಸೋಸಿಯೇಷನ್ (ಎಫ್‌ಪಿಎ) ತೀವ್ರವಾಗಿ ಖಂಡಿಸಿದೆ. ಪ್ಯಾಲೆಸ್ತೀನ್‌ನ ತಯಾಸಿರ್...

ಪಶ್ಚಿಮ ಏಷ್ಯಾ ಸಂಘರ್ಷ: ಮಧ್ಯಪ್ರಾಚ್ಯಕ್ಕೆ 3,500 ಅಮೆರಿಕ ಸೈನಿಕರ ನಿಯೋಜನೆ; ಇರಾನ್ ಮೇಲೆ ಭೂದಾಳಿ ನಡೆಸಲು ಪೆಂಟಗನ್ ಸಿದ್ಧತೆ

ಇರಾನ್ ಜೊತೆಗಿನ ಉದ್ವಿಗ್ನತೆ ಹೆಚ್ಚುತ್ತಿರುವಂತೆ, ಪೆಂಟಗನ್ ಸಂಭಾವ್ಯ ನೆಲದ ಕಾರ್ಯಾಚರಣೆಗಳಿಗೆ ಸಿದ್ಧತೆ ನಡೆಸುತ್ತಿದೆ ಎಂದು ವರದಿಗಳು ಸೂಚಿಸುತ್ತಿರುವಾಗಲೂ, ಅಮೆರಿಕವು ಮಧ್ಯಪ್ರಾಚ್ಯದಲ್ಲಿ ತನ್ನ ಮಿಲಿಟರಿ ಉಪಸ್ಥಿತಿಯನ್ನು ಗಮನಾರ್ಹವಾಗಿ ಹೆಚ್ಚಿಸಿದೆ, 3,500 ಕ್ಕೂ ಹೆಚ್ಚು ಸೈನಿಕರನ್ನು...

ಮುಂಬೈನಲ್ಲಿ ವಿತರಣಾ ಟೆಂಪೋದಿಂದ 27 ಎಲ್‌ಪಿಜಿ ಸಿಲಿಂಡರ್‌ಗಳು ಕಳವು; ತನಿಖೆ 

ಮುಂಬೈನಲ್ಲಿ ವಿತರಣಾ ವಾಹನದಿಂದ ಐದು ತುಂಬಿದ ಎಲ್‌ಪಿಜಿ ಸಿಲಿಂಡರ್‌ಗಳು ಸೇರಿದಂತೆ ಇಪ್ಪತ್ತೇಳು ಎಲ್‌ಪಿಜಿ ಸಿಲಿಂಡರ್‌ಗಳು ಕಳವಾಗಿದ್ದು, ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಅನಿಲ ಪೂರೈಕೆಯ...

No Kings : ಅಮೆರಿಕದಾದ್ಯಂತ ಟ್ರಂಪ್ ವಿರುದ್ಧ ಬೃಹತ್ ಪ್ರತಿಭಟನೆ; ಬೀದಿಗಿಳಿದ ಲಕ್ಷಾಂತರ ಜನರು

ಡೊನಾಲ್ಡ್ ಟ್ರಂಪ್ ಆಡಳಿತದ ವಿರುದ್ಧ ಅಮೆರಿಕದಾದ್ಯಂತ ಶನಿವಾರ (ಮಾ. 28) ದೊಡ್ಡ ಮಟ್ಟದ 'ನೋ ಕಿಂಗ್ಸ್' ಪ್ರತಿಭಟನೆಗಳು ನಡೆದಿವೆ. ಟ್ರಂಪ್ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರಿ, ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಜನರು ಲಕ್ಷಾಂತರ ಸಂಖ್ಯೆಯಲ್ಲಿ...

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನಿಸಿದ್ದೇವೆ : ಸಿಎಂ ಸಿದ್ದರಾಮಯ್ಯ

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು (ಮಾ.28) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿ ಮತ್ತು...