Homeಮುಖಪುಟಕೆಲಸದ ಸ್ಥಳದಲ್ಲಿ ಜಾತಿ ತಾರತಮ್ಯದ ಬಗ್ಗೆ ರಾಜ್ಯಸಭೆಯಲ್ಲಿ ಖರ್ಗೆ ಕಳವಳ; ಒಡಿಶಾ ಅಂಗನವಾಡಿ ಘಟನೆ ಉಲ್ಲೇಖ

ಕೆಲಸದ ಸ್ಥಳದಲ್ಲಿ ಜಾತಿ ತಾರತಮ್ಯದ ಬಗ್ಗೆ ರಾಜ್ಯಸಭೆಯಲ್ಲಿ ಖರ್ಗೆ ಕಳವಳ; ಒಡಿಶಾ ಅಂಗನವಾಡಿ ಘಟನೆ ಉಲ್ಲೇಖ

- Advertisement -
- Advertisement -

ಕೆಲಸದ ಸ್ಥಳಗಳಲ್ಲಿ ಆಗುತ್ತಿರುವ ಜಾತಿ ತಾರತಮ್ಯದ ಕುರಿತು ರಾಜ್ಯಸಭೆಯಲ್ಲಿ ಗುರುವಾರ (ಫೆ.12) ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಳವಳ ವ್ಯಕ್ತಪಡಿಸಿದರು. ಒಡಿಶಾದ ಅಂಗನವಾಡಿಯೊಂದರಲ್ಲಿ ದಲಿತ ಮಹಿಳೆ ತಯಾರಿಸಿದ ಆಹಾರವನ್ನು ತಮ್ಮ ಮಕ್ಕಳು ಸೇವಿಸದಂತೆ ಪ್ರಬಲ ಜಾತಿಯವರು ತಡೆದಿರುವ ಘಟನೆಯನ್ನು ಅವರು ಉಲ್ಲೇಖಿಸಿದರು.

ಮೇಲ್ಮನೆಯಲ್ಲಿ ಶೂನ್ಯವೇಳೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಖರ್ಗೆ, “ನಾವು 21ನೇ ಶತಮಾನದಲ್ಲಿ ಸಾಮಾಜಿಕ ಅಭಿವೃದ್ಧಿ, ಸಾಮಾಜಿಕ ಸುಧಾರಣೆ ಮತ್ತು ಹಿಂದೂಗಳ ಏಕತೆಯ ಬಗ್ಗೆ ಮಾತನಾಡುತ್ತಿದ್ದೇವೆ. ಆದರೆ, ಒಡಿಶಾದ ಅಂಗನವಾಡಿ ಕೇಂದ್ರವೊಂದರಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿರುವ ದಲಿತ ಮಹಿಳೆ ತಯಾರಿಸಿದ ಆಹಾರವನ್ನು ಸೇವಿಸಲು ಒಂದು ನಿರ್ದಿಷ್ಟ ಸಮುದಾಯದ ಜನರು ನಿರಾಕರಿಸುತ್ತಿದ್ದಾರೆ. ಈ ಕಾರಣದಿಂದಾಗಿ ಕಳೆದ ಮೂರು ತಿಂಗಳುಗಳಿಂದ ಆ ಅಂಗನವಾಡಿ ಕೇಂದ್ರವನ್ನು ಮುಚ್ಚಲಾಗಿದೆ” ಎಂದು ಹೇಳಿದರು.

ಮಕ್ಕಳ ದೈಹಿಕ ಮತ್ತು ಬೌದ್ಧಿಕ ಬೆಳವಣಿಗೆಗೆ ಅಂಗನವಾಡಿ ಕೇಂದ್ರಗಳೇ ಮೂಲಾಧಾರವಾಗಿದೆ. ಆದರೆ ಇಂತಹ ಜಾತಿ ತಾರತಮ್ಯದ ಘಟನೆಗಳು ಮಕ್ಕಳ ಬೆಳವಣಿಗೆಯ ಮೇಲೆ ಸಹಜವಾಗಿಯೇ ಕೆಟ್ಟ ಪರಿಣಾಮ ಬೀರುತ್ತವೆ. ಅಲ್ಲದೆ ಇಂತಹ ಘಟನೆಗಳು ಸಂವಿಧಾನದ 21ಎ ವಿಧಿಯಡಿಯಲ್ಲಿ ನೀಡಲಾದ ಶಿಕ್ಷಣದ ಹಕ್ಕಿನ ನೇರ ಉಲ್ಲಂಘನೆಯಾಗಿದೆ ಎಂದು ಖರ್ಗೆ ಕಳವಳ ವ್ಯಕ್ತಪಡಿಸಿದರು.

ದೇಶದ ವಿವಿಧ ಭಾಗಗಳಿಂದ ಕೆಲಸದ ಸ್ಥಳದಲ್ಲಿ ಜಾತಿ ತಾರತಮ್ಯದ ಕುರಿತು ವರದಿಯಾಗುತ್ತಿದೆ. ತನಿಖೆಗಳು ಸಕಾಲಿಕವಾಗಿ ನಡೆದಿದ್ದರೆ, ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಪ್ಪಿಸಬಹುದಿತ್ತು ಎಂದು ಹೇಳಿದರು.

ಇತರ ರಾಜ್ಯಗಳ ನಿದರ್ಶನಗಳನ್ನು ಉಲ್ಲೇಖಿಸಿದ ಖರ್ಗೆ, ಕೆಲ ವರ್ಷಗಳ ಹಿಂದೆ ಮಧ್ಯಪ್ರದೇಶದಲ್ಲಿ ಆದಿವಾಸಿ ವ್ಯಕ್ತಿಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಘಟನೆಯನ್ನು ನೆನಪಿಸಿಕೊಂಡರು. ಕಳೆದ ವರ್ಷ ಗುಜರಾತ್‌ನಲ್ಲಿ ಜಾತಿ ತಾರತಮ್ಯದಿಂದಾಗಿ ದಲಿತ ಸರ್ಕಾರಿ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡರು ಎಂದು ತಿಳಿಸಿದರು.

ಇಂತಹ ಘಟನೆಗಳು ಜಾತಿ ತಾರತಮ್ಯವು ಕೇವಲ ಸಾಮಾಜಿಕ ಮತ್ತು ರಾಜಕೀಯ ಜೀವನಕ್ಕೆ ಮಾತ್ರ ಸೀಮಿತವಾಗಿಲ್ಲ, ಬದಲಿಗೆ ಕೆಲಸದ ಸ್ಥಳಗಳಲ್ಲಿಯೂ ವ್ಯಾಪಕವಾಗಿದೆ ಎಂಬುವುದನ್ನು ತೋರಿಸುತ್ತವೆ. ಇದು ಜನರ ಘನತೆ, ವೃತ್ತಿಜೀವನದ ಪ್ರಗತಿ ಮತ್ತು ವೈಯಕ್ತಿಕ ಸುರಕ್ಷತೆಯ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ಖರ್ಗೆ ಹೇಳಿದರು.

ಯಾವುದೇ ಅಧಿಕಾರಿಯ ವಿರುದ್ಧ ಇಂತಹ ಜಾತಿ ತಾರತಮ್ಯವು ಸಂವಿಧಾನದ 14, 15 ಮತ್ತು 17 ನೇ ವಿಧಿಗಳ ಉಲ್ಲಂಘನೆಯಾಗಿದೆ ಎಂದ ಖರ್ಗೆ, ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಇಂತಹ ಘಟನೆಗಳನ್ನು ಸಕಾಲಿಕವಾಗಿ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...